Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮವು  ಕಾಲೇಜು ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸುಕೇಶ್ ಚಂದ್ರಶೇಖರ ಅವರು ಮಾತನಾಡಿ, ವಾಣಿಜ್ಯ ವಿಭಾಗವು ಕೇವಲ ಲೆಕ್ಕಪತ್ರಕ್ಕೆ ಸೀಮಿತವಾಗಿಲ್ಲ. ಬ್ಯಾಂಕಿಂಗ್, ಹಣಕಾಸು, ತೆರಿಗೆ, ವಿಮೆ, ಉದ್ಯಮಶೀಲತೆ ನಿರ್ವಹಣೆ, ಡಿಜಿಟಲ್ ವಾಣಿಜ್ಯ & ಸರಕಾರಿ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶ ಒದಗಿಸುತ್ತದೆ. ಆದ್ದರಿಂದ ಸರಿಯಾದ ಶಿಕ್ಷಣ, ವೃತ್ತಿಪರ ಕೌಶಲ್ಯ, ಕಂಪ್ಯೂಟರ್ ಜ್ಞಾನ, ಸಂವಹನ ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವ ಹೊಂದಿರುವ ವಾಣಿಜ್ಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಬಹುದು ಎಂದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂ ಎಸಿ ಘಟಕ ಸಂಯೋಜಕ ಸಂದೀಪ ಕೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಳೆದ ಹತ್ತು ವರ್ಷಗಳಿಂದ ನಿರಂತರ ಲಾಭಾಂಶದೊAದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಿರುವ ಆಳ್ವಾಸ್ ಸಹಕಾರ ಸಂಘವು ತನ್ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ಗೆ ನಾಲ್ಕು ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲಾಗಿದ್ದು, ಇದರ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸುವ ಮೂಲಕ ಡಯಾಲಿಸಿಸ್ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯ ಸೇವೆಯ ಅಗತ್ಯವಿರುವ ಜನರಿಗೆ ಗುಣಮಟ್ಟದ ಹಾಗೂ ಕೈಗೆಟಕುವ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಇಂತಹ ಕೊಡುಗೆಗಳು ಮಹತ್ವದ್ದಾಗಿವೆ. ಆಳ್ವಾಸ್ ಸಹಕಾರ ಸಂಘವು ಕಳೆದ ಒಂದು ದಶಕದಿಂದ ತನ್ನ ಕಾರ್ಯಚಟುವಟಿಕೆಗಳ ಮೂಲಕ ಉತ್ತಮ ಆರ್ಥಿಕ ಫಲಿತಾಂಶ ದಾಖಲಿಸುವುದರ ಜೊತೆಗೆ, ಸಂಘದ ಉದ್ದೇಶಕ್ಕೆ ಅನುಗುಣವಾಗಿ ಲಾಭಾಂಶದ ಒಂದು ಭಾಗವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ. ವಿಶೇಷವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಶಾರದೋತ್ಸವ ಕಾರ್ಯಕ್ರಮಗಳು ಧಾರ್ಮಿಕ ಕಾರ್ಯಕ್ಕೆ ಸೀಮಿತಗೊಳ್ಳದೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳ ಮೂಲಕ ವೇದಿಕೆ ಕಲ್ಪಿಸುತ್ತಿದೆ ಇದು ಪಾಂಡೇಶ್ವರ ಶಾರದೋತ್ಸವ ವೇದಿಕೆ ಸಾಕ್ಷಿ ಎಂದು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು. ಅವರು ಶುಕ್ರವಾರ ಕೋಟ ಅಮೃತೇಶ್ವರೀ ದೇಗುಲದಲ್ಲಿ ಪಾಂಡೇಶ್ವರ ಶಾರದೋತ್ಸವ ಸಮಿತಿ 33ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಹಬ್ಬ ಹರಿದಿನಗಳು ಗ್ರಾಮದ ಒಗ್ಗೂಟ್ಟಿನ ಪ್ರದರ್ಶನದ ಜೊತೆಗೆ ಜನಸಮುದಾಯವನ್ನು ಧಾರ್ಮಿಕವಾಗಿ ಗಟ್ಟಿಗೊಳಿಸಲಿದೆ ಈ ದಿಸೆಯಲ್ಲಿ ಶಾರದೋತ್ಸವ ಸಂಭ್ರಮದ ತೊರಣವಾಗಿ ಭಕ್ತಾದಿಗಳ ಸಮ್ಮಿಲನಕ್ಕೆ ಸಾಕ್ಷಿಯಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಶಾರದೋತ್ಸವ ಸಮಿತಿ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ, ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ಜೀರ್ಣೋದ್ಧಾರ ಸಮಿತಿಯ ಭುಜಂಗ ಗುರಿಕಾರ, ಸಮಿತಿಯ ಗೌರವಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ, ಉಪಾಧ್ಯಕ್ಷೆ ಲೀಲಾವತಿ ಗಂಗಾಧರ್,ಕಾರ್ಯದರ್ಶಿ ದಿನಕರ್ ಪಾಂಡೇಶ್ವರ,ಕೋಶಾಧಿಕಾರಿ ವಿಶ್ವನಾಥ ಆಚಾರ್, ಸಮಿತಿಯ ಪ್ರಮುಖರಾದ ನಾರಾಯಣ ಆಚಾರ್, ಸುಮಿತ್ರಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಕ್ಸಿಂಗ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅನ್ವಿತ್ ಪೂಜಾರಿ ಬಾಕ್ಸಿಂಗ್ ಅಖಾಡದಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ದಿತೀಜ್ ಬೆಳ್ಳಿ ಪದಕದ ಸಾಧನೆಯೊಂದಿಗೆ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಂಡ್ಸೆ ಭಾಗದ ಪ್ರಮುಖ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿರುವ ಹಾಗೂ ನಾಲ್ಕು ಬಾರಿ ವಂಡ್ಸೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಉದಯ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಉದಯ್ ಕುಮಾರ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಉದಯ್ ಕುಮಾರ್ ಶೆಟ್ಟಿ ಅವರ ಸೇರ್ಪಡೆಯಿಂದ ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು. ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ ಎಂಬುದಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ವಚ್ಛತೆ ನಮ್ಮ ಮನೆಯಲ್ಲಿ ಪ್ರಾರಂಭಗೊಳ್ಳಬೇಕು, ಪರಿಸರವನ್ನು ಮಲಿನಗೊಳಿಸುವ ಮನಸ್ಥಿತಿ ಬಿಟ್ಟು ಪ್ರತಿಯೊರ್ವರು ಸ್ವಚ್ಛತೆಯಡೆ ಮುಖ ಮಾಡಬೇಕು‌ ಎಂದು ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಹೇಳಿದರು. ಅವರು ಭಾನುವಾರ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ 319ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಗೀತಾನಂದ ಫೌಂಡೇಶನ್ ಮಣೂರು, ತೆಕ್ಕಟ್ಟೆ ಗ್ರಾಮಪಂಚಾಯತ್ , ಎಸ್ ಎಲ್ ಆರ್ ಎಂ ಘಟಕ ತೆಕ್ಕಟ್ಟೆ, ರೋಟರಿ ಸಮುದಾಯ ದಳ ಕೋಟೇಶ್ವರ ಇವರ ಸಹಯೋಗದೊಂದಿಗೆ ಸ್ವಚ್ಛತಾ ಹೀ ಸೇವಾ ಅಂಗವಾಗಿ ತೆಕ್ಕಟ್ಟೆ ಕೊಮೆ ಬೀಚ್ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿದರು. ಪಂಚವರ್ಣದಂತಹ ಸಂಘಟನೆಗಳು‌ ಗ್ರಾಮ ಗ್ರಾಮದಲ್ಲಿದ್ದರೆ ಆ ಗ್ರಾಮಗಳು ಸುಂದರ ಸ್ವಚ್ಛ ಗ್ರಾಮಗಳಾಗಿ ಮೂಡಿಬರಲು ಸಾಧ್ಯ,ಸಂಘಸಂಸ್ಥೆಗಳು ಸದಾ ಕ್ರಿಯಾಶೀಲತೆಯಿಂದಿದ್ದರೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದರು. ಜಿಲ್ಲಾಡಳಿತ ಕರೆ ಕೊಟ್ಟ ಸ್ವಚ್ಛತಾ ಹೀ ಸೇವಾ ಅಂಗವಾಗಿ ಪ್ರತಿಜ್ಞಾವಿಧಿಯನ್ನು ತೆಕ್ಕಟ್ಟೆ ಎಸ್ ಎಲ್ ಆರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಗಣಕ ವಿಭಾಗ ಮತ್ತು ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ವಿಭಾಗದ ಜಂಟಿ ಆಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೈಂಡ್, ಕ್ಯಾಲೆಂಡರ್ ಮತ್ತು ನಂಬರ್ಸ್” ಕುರಿತು ಸಂವಾದಾತ್ಮಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಗಣಿತದ ಲೆಕ್ಕಾಚಾರಗಳಲ್ಲಿ ವೇಗ ಮತ್ತು ನಿಖರತೆಯನ್ನು ಬೆಳೆಸುವ ಉದ್ದೇಶದಿಂದ ಸರಳ ವಿಧಾನಗಳು, ಶಾರ್ಟ್‌ಕಟ್‌ಗಳು ಮತ್ತು ಉಪಯುಕ್ತ ಸೂತ್ರಗಳನ್ನು ಈ ಸಂದರ್ಭದಲ್ಲಿ ಪರಿಚಯಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಆಪ್ಟಿಟ್ಯೂಡ್ ಆಧಾರಿತ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ತಂತ್ರಗಳು ಉಪಯುಕ್ತವಾಗಲಿವೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕುಂದಾಪುರದ ಕ್ಯಾಲೆಂಡರ್ ತಜ್ಞರಾದ ಎಂ. ಲಕ್ಷ್ಮಣ ಶೆಟ್ಟಿ ಅವರು ವಿವಿಧ ಲೆಕ್ಕಾಚಾರ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟು, ಸುಲಭವಾಗಿ ಅರ್ಥವಾಗುವ ತಂತ್ರಗಳೊಂದಿಗೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡರು. ಕಾರ್ಯಕ್ರಮವನ್ನು ಗಣಕ ವಿಭಾಗದ ಮುಖ್ಯಸ್ಥರಾದ ಸ್ವರ್ಣರಾಣಿ ಯು.ಪಿ. ಮತ್ತು ವಾಣಿಜ್ಯ ಹಾಗೂ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಅವರು ಸಂಯೋಜಿಸಿದ್ದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ–ತೆಕ್ಕಟ್ಟೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುರೇಶ್ ಬೆಟ್ಟಿನ್ ಅವರು ಸನ್ಮಾನಿಸಿ ಅಭಿನಂದಿಸಿದರು. ಪ್ರಗತಿಪರ ಸೇವಾ ಸಂಸ್ಥೆ ರಿ., ಮಂಡ್ಯ ಇವರು ಆಯೋಜಿಸಿದ್ದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ 2026–27ರಲ್ಲಿ ಭಾಗವಹಿಸಿದ 7ನೇ ತರಗತಿಯ ಅಪರ್ಣ ಪ್ರಭು, 6ನೇ ತರಗತಿಯ ಅದ್ವಿತ್ ಯು.ಜಿ., 5ನೇ ತರಗತಿಯ ಮನ್ವಿತ್ ಕಾರಂತ್, 4ನೇ ತರಗತಿಯ ರೋಷನ್ ಜೆ., 3ನೇ ತರಗತಿಯ ಧೃತಿಶ್ರೀ, 2ನೇ ತರಗತಿಯ ರಿಷಾ, 1ನೇ ತರಗತಿಯ ರಿಧಿ ಎನ್. ಹಾಗೂ ಯುಕೆಜಿಯ ಚಿನ್ಮಯಿ ಎಸ್. ಐತಾಳ್ ಅವರನ್ನು ಅಭಿನಂದಿಸಲಾಯಿತು. ಅದೇ ರೀತಿ, ವಿದ್ಯಾ ಭಾರತಿ ಶಿಕ್ಷಾ ಸಂಸ್ಥಾನ, ಕರ್ನಾಟಕ ಆಯೋಜಿಸಿದ್ದ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ 7ನೇ ತರಗತಿಯ ಯಷಿ ಹಾಗೂ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ 6ನೇ ತರಗತಿಯ ಭವಿಷ್ ಎಸ್. ಪೂಜಾರಿ, ಸಮುದ್ಯತಾ ವೈ.ಪಿ. ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಹುಡುಗರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕ ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕದೊಂದಿಗೆ ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು. ಹುಡುಗರ ವಿಭಾಗದಲ್ಲಿ: 60 ಕೆಜಿ – ಸಂತೋಷ್ (ದ್ವಿತೀಯ), 71 ಕೆಜಿ – ಪ್ರಫುಲ್ (ಪ್ರಥಮ), 79 ಕೆಜಿ – ಪ್ರಜ್ವಲ್ (ಪ್ರಥಮ), 88 ಕೆಜಿ – ಶ್ರೇಯಸ್ (ಪ್ರಥಮ), 110 ಕೆಜಿ – ಜೇಷ್ಠ (ಪ್ರಥಮ). ಹುಡುಗಿಯರ ವಿಭಾಗದಲ್ಲಿ: 48 ಕೆಜಿ – ಸಂಜನಾ (ದ್ವಿತೀಯ), 53 ಕೆಜಿ – ಸೌಮ್ಯ (ಪ್ರಥಮ), 58 ಕೆಜಿ – ಮೈತ್ರಿ (ಪ್ರಥಮ), 63…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲುವಿನಲ್ಲಿ ನಡೆದ 14 ವರ್ಷ ವಯೋಮಾನದೊಳಗಿನವರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಗೈದಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಖ್ಯಾತ್‌ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಚಕ್ರಎಸೆತ (ಡಿಸ್ಕಸ್ ಥ್ರೋ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಹಾಗೇ ಅಂಕಿತ್‌ 100 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಲಿಯೋನ್‌ ಡಿ.ಎಸ್‌. ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಅಪೂರ್ವ ಪ್ರತಿಭೆ ಪ್ರದರ್ಶಿಸಿ ವಿಜೇತರಾದ ಪ್ರಖ್ಯಾತ್‌ ಹಾಗೂ ಅಂಕಿತ್‌ ಅವರು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ…

Read More