Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಶಕ್ತರಿಗೆ ಹಾಗೂ ಅನಾರೋಗ್ಯ ಪೀಡಿತರ ನೆರವಿಗಾಗಿ ಯಕ್ಷಗಾನ ಆಯೋಜಿಸಿ ಅದರಲ್ಲಿನ ಮಿಗತೆಯ ಹಣವನ್ನು ನೆರವು ನೀಡುವ ಕಾರ್ಯ ಅತ್ಯಂತ ಪ್ರಶಂಸನಾರ್ಹ ಕಾರ್ಯವಾಗಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಹೇಳಿದರು. ಅವರು ಶನಿವಾರ ಪಾರಂಪಳ್ಳಿ ಪಡುಕರೆ ಇಲ್ಲಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇವರ ಆರನೇ ವರ್ಷದ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯವರಿಂದ ಯಕ್ಷಗನಾ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ನೆರವು ಕಾರ್ಯವಲ್ಲದೆ ಕಲಾರಾಧನೆಗೆ ಪ್ರೋತ್ಸಾಹಿಸುವ ಈ ಸಂಘಟನೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಇವರನ್ನು ಅಭಿನಂದನಾ ಕಾರ್ಯಕ್ರಮ ಅರ್ಥಪೂರ್ಣ ಎಂದರಲ್ಲದೆ ಸಂಘಟನೆ ಹುಟ್ಟಿಕೊಳ್ಳುವುದು ಸುಲಭ ಆದರೆ ಅದರ ನಿರಂತರತೆ ಬಹುಮುಖ್ಯವಾಗಿದೆ, ಆದರೆ ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ವಿನ್ ಲೈಟ್ ಮನೆ ಮಾತಾಗಿ ಬೆಳೆದಿದೆ ಎಂದರು. ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಅವರನ್ನು ಅಭಿನಂದಿಸಿ ಗೌರವಿಸಿತು. ಇದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ಧಾಪುರ ಏತ ನೀರಾವರಿ ಯೋಜನೆಯೂ ಸೇರಿ ಜನರಿಗೆ ಅನುಕೂಲವಾಗುವ ಹಾಗೂ ಅಗತ್ಯವಾಗಿರುವ ಯಾವುದೇ ಯೋಜನೆಗಳಿಗೂ ನಾನು ವಿರೋಧಿಯಲ್ಲ. ಆದರೆ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೊದಲು ಅದರಿಂದ ಆಗುವ ಉಪಯೋಗ ಹಾಗೂ ಭವಿಷ್ಯದ ತೊಂದರೆ ಬಗ್ಗೆ ತಜ್ಞರಿಂದ ತಾಂತ್ರಿಕ ಸಲಹೆ ಪಡೆದುಕೊಳ್ಳುವುದು ಒಳಿತು. ಆ ನೆಲೆಯಲ್ಲಿ ನನ್ನ ಜವಾಬ್ದಾರಿ ಅರಿತು ನಾನು ಪತ್ರ ಬರೆದಿದ್ದೆ. ಇದರಲ್ಲೂ ಅನಗತ್ಯವಾಗಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಕುಂದಾಪುರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ವಿವಿಧ ಗ್ರಾಮಗಳಿಗೆ ನೀರು ನೀಡುವ ಸಿದ್ದಾಪುರ ಏತ ನೀರಾವರಿ ಯೋಜನೆಯ ಮೂಲ ಉದ್ದೇಶ ಯಾವುದೇ ಕಾರಣಕ್ಕೂ ಬದಲಾಗಬಾರದು. ಆದರೆ ಯೋಜನೆಯ ಪ್ರಾರಂಭವನ್ನು ಅಣೆಕಟ್ಟಿನ ಮೇಲ್ಭಾಗದ ಬದಲು, ಕನಿಷ್ಠ 500-600ಮೀಟರ್ ಕೆಳಭಾಗದಲ್ಲಿ ನಿರ್ಮಾಣ ಮಾಡಬೇಕು ಎನ್ನುವುದು ಮಾತ್ರ ನಮ್ಮ ಆಗ್ರಹ. ಈ ಬೇಡಿಕೆಯ ಆಗು ಹೋಗುಗಳ ಕುರಿತು ಪರಿಶೀಲನೆ ಮಾಡಲು ಸರ್ಕಾರ ತಜ್ಞರಿಂದ ಅಭಿಪ್ರಾಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಮಾಚಿ ಮನೆಯ ನಿವಾಸಿ ಮಂಜುನಾಥ ಪೂಜಾರಿ (57) ಅವರು ಶನಿವಾರದಂದು ರಾತ್ರಿ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ಅವರನ್ನು ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂಳಗೆ ಸಾವನ್ನಪ್ಪಿದ್ದರು. ಅವರು ಮೆಸ್ಕಾಂ ಲೈನ್‌ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ತಲ್ಲೂರು – ಉಪ್ಪಿನಕುದ್ರು ಗಣೇಶೋತ್ಸವ ಸಮಿತಿ ಸದಸ್ಯರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲ ಇದರ ವತಿಯಿಂದ ಯಕ್ಷಗುರು ಗುರುವಂದನಾ ಕಾರ್ಯಕ್ರಮ ಶನಿವಾರ ಸಂಘದ ಕಛೇರಿಯಲ್ಲಿ ಜರಗಿತು. ಪಂಚವರ್ಣ ರಾಜ್ಯೋತ್ಸವ ಅಂಗವಾಗಿ ಯಕ್ಷಗುರು ಕೊಯ್ಕೂರು ಸೀತಾರಾಮ ಶೆಟ್ಟಿ ಯಕ್ಷಹೆಜ್ಜೆಯ ಮೂಲಕ ಯಕ್ಷಗಾನ ನೃತ್ಯಕ್ಕೆ ಕಾಲಿರಿಸಿದ ಪಂಚವರ್ಣ ಮಹಿಳಾ ಮಂಡಲ ಈ ನಿಮಿತ್ತ ಗುರುವಂದನೆ ಸಲ್ಲಿಸಿಕೊಂಡಿತು. ಈ ಸಂದರ್ಭದಲ್ಲಿ ಯಕ್ಷಗುರು ಕೊಯ್ಕೂರು ಸೀತಾರಾಮ ಶೆಟ್ಟಿ ಗುರುವಂದನೆ ಸ್ವೀಕರಿಸಿ ಶಿಷ್ಯೆ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದರು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಾತೃಸಂಸ್ಥೆ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಭಜನಾ ಮಂಡಳಿಯ ಸಂಚಾಲಕಿ ಗೀತಾ ಶಿವರಾಂ, ಸಾಂಸ್ಕೃತಿಕ ಕಾರ್ಯದರ್ಶಿ ಶ್ಯಾಮಲ ಸಿ. ಪುತ್ರನ್ ಇತರರು ಇದ್ದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಮುಖ್ಯರಸ್ತೆಯ ರಥಬೀದಿಯಲ್ಲಿ ಸೋಮವಾರ ನಸುಕಿನ ಜಾವ ಭೀಕರ ಅಗ್ನಿ ಅವಘಡ ನಡೆದಿದ್ದು, ಕೋಟ್ಯಂತರ ರೂ.ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅಗ್ನಿ ದುರಂತದಲ್ಲಿ ಪಟಾಕಿ, ಪುಸ್ತಕದಂಗಡಿ, ಪೂಜಾ ಸಾಮಾಗ್ರಿಗಳ ಅಂಗಡಿ, ಆಯುರ್ವೇದ ವಸ್ತುಗಳ ಅಂಗಡಿ, ಎಲೆಕ್ಟ್ರಾನಿಕ್ಸ್ ಅಂಗಡಿ ಮೂರು ಅಂಗಡಿಗಳು ಸಂಪೂರ್ಣ ಧ್ವಂಸವಾದರೆ, ಮತ್ತೊಂದು ಪೂಜಾ ಸಾಮಗ್ರಿ ಅಂಗಡಿ ಅರ್ಧ ಧ್ವಂಸಗೊಂಡಿದೆ. ಕುಂದಾಪುರದ ಪೇಟೆ ಶ್ರೀ ವೇಂಕಟರಮಣ ದೇವಸ್ಥಾನದ ಮುಂಭಾಗದಲ್ಲಿರುವ ರಥಬೀದಿಯಲ್ಲಿ ಪ್ರಸಿದ್ದ ಪುಸ್ತಕದಂಗಡಿ, ಆಯುರ್ವೇದ ವಸ್ತುಗಳ ಅಂಗಡಿ, ಪಟಾಕಿ ಅಂಗಡಿ, ಪೂಜಾ ಸಾಮಾಗ್ರಿಗಳ ಅಂಗಡಿ ಬೆಂಕಿಗಾಹುತಿಯಾಗಿದೆ. ಒಂದು ಅಂಗಡಿಯ ಮೇಲ್ಬಾಗದಲ್ಲಿ ಸೋಮವಾರ ನಸುಕಿನ ಜಾವ ಸುಮಾರ 3.30 ಗಂಟೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಇದನ್ನು ಗಮನಿಸಿದ ರಾತ್ರಿ ಕಾವಲುಗಾರ ಸ್ಥಳೀಯರೊಬ್ಬರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳ ಹಾಗೂ ಅಂಗಡಿ ಮಾಲಿಕರಿಗೆ ಮಾಹಿತಿ ನೀಡಲಾಗಿತ್ತು. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವ ಅರ್ಧ ಘಂಟೆ ಸಮಯದಲ್ಲಿ ಅಂಗಡಿಗಳು ಬಹುತೇಕ ಹೊತ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋದಾಗ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕೊರ್ಗಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಸಂದೀಪ (30) ಮೃತಪಟ್ಟವರು. ಅವರು ಡಿ. 27ರ ಸಂಜೆ ತೋಟವೊಂದಕ್ಕೆ ತೆಂಗಿನ ಕಾಯಿ ಕೊಯ್ಯುವ ಕೆಲಸಕ್ಕೆ ಹೋದವರು ನಿಂತಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಬಿದ್ದಿರುವ ಅವರು ಉಸಿರಾಡಲು ಕಷ್ಟಪಡುತ್ತಿರುವುದನ್ನು ಗಮನಿಸಿದ ಜತೆಗಿದ್ದವರು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಷಷ್ಟಿ ಎ. ಭಟ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟತಟ್ಟು ಗ್ರಾಮ ಪಂಚಾಯತ್ ಸಂಯೋಜನೆಯೊಂದಿಗೆ 285ನೇ ಭಾನುವಾರದ ಪರಿಸರಸ್ನೇಹಿ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಕೋಟತಟ್ಟು ಪಡುಕರೆ ಶಿರಸಿಮಾರಿಯಮ್ಮ ಕಡುವಿನ ಬಾಗಿಲು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮಪಂಚಾಯತ್ ಮಾಜಿ ಸದಸ್ಯೆ ಸುಜಾತ ಉದಯ್ ತಿಂಗಳಾಯ ಚಾಲನೆ ನೀಡಿದರು. ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಶ್ಯಾಮಲ ಸಿ. ಪುತ್ರನ್ ಮತ್ತಿತರರು ಇದ್ದರು. ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಅಭಿನಯ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಡೂರು ಎಲ್ಲೂರು ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ರಚಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಹೊಲಾರ್‌ ಗೊಳಿಹೊಳೆಯ ಭಾರತಿ ಮತ್ತು ಚಂದ್ರ ಶೆಟ್ಟಿ ಅವರ ದಂಪತಿಯ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕೇಂದ್ರದ ಅಭಿವೃದ್ಧಿಯ ದೂರದೃಷ್ಟಿಯಲ್ಲಿ ಸುಸಜ್ಜಿತ ಬಸ್ ನಿಲ್ದಾಣ ಉದ್ಘಾಟನೆಯಾಗಿದ್ದು ಜನರ ಬೇಡಿಕೆಯಂತೆ ಶೀಘ್ರ ಸುಸಜ್ಜಿತ ಬಸ್ ಡಿಪೋ ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಅವರು ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ನೂತನ ಬಸ್ ನಿಲ್ದಾಣಕ್ಕೆ ಕೊಲ್ಲೂರು ಮೂಕಾಂಬಿಕಾ ಎಂದು ನಾಮಕರಣ ಮಾಡಲು ಪ್ರಯತ್ನಿಸಲಾಗುವುದು ಎಂದರು. ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ವಿ. ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಅಶೋಕ್ ಕುಮಾರ್ ಕೊಡವೂರು, ಮೋಹನ್ ಪೂಜಾರಿ, ಬಾಬು ಶೆಟ್ಟಿ ಗಿರೀಶ್ ಬೈಂದೂರು, ರಾಜುಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Read More