Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಬಹಳ ಮುಖ್ಯವಾದುದು. ಅವರು ಸೈನಿಕರಂತೆ ಕೆಲಸ ಮಾಡಿದ್ದಾರೆ. ಅವರ ಕಾರ್ಯ ಎಲ್ಲರೂ ಮೆಚ್ಚುವಂತದ್ದು. ಅವರೆನ್ನೆಲ್ಲ ನಾವು ಗೌರವಿಸಬೇಕು. ಹಾಗೇ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಸಿಬ್ಬಂದಿಗಳು ಭಯ ತೊರೆದು ಕೆಲಸ ಮಾಡಿದ್ದಾರೆ. ಅವರೆಲ್ಲ ಅಭಿನಂದನಾರ್ಹರು ಎಂದು ಕಾವ್ರಾಡಿ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಸದಾನಂದ ಬಳ್ಕೂರು ಹೇಳಿದರು. ಅವರು ಕಂಡ್ಲೂರು ಪಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರುಗಳಿಗೆ ಗೌರವ ಸಲ್ಲಿಸಿ, ಗೌರವಧನ ವಿತರಿಸಿ, ವೈದ್ಯಾಧಿಕಾರಿ ಡಾ| ಲತಾರವರನ್ನು ಸನ್ಮಾನಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರಾಜು ಪೂಜಾರಿ, ಚಂದ್ರ ಹೆಗ್ಡೆ, ಜಿ. ಸೀತಾರಾಮ ಶೆಟ್ಟಿ, ದೇವಾನಂದ ಶೆಟ್ಟಿ, ಜ್ಯೋತಿ ಪುತ್ರನ್, ಎಂ. ಸುಧಾಕರ ಹೆಗ್ಡೆ, ಭಾಸ್ಕರ ಶೆಟ್ಟಿ, ಕೆ. ಚಂದ್ರ, ರಾಜೇಂದ್ರ ಕುಲಾಲ್, ಸುರೇಶ ಕುಮಾರ್ ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಲತಾ ನಾಯಕ್ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೋನಾ ತಡೆಗಟ್ಟಬೇಕೆಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿನ ಪ್ರತಿ ಮನೆಗೆ ಭೇಟಿ ನೀಡಿ, ಶೀತ ಜ್ವರ ಇರುವವರ ವಿವರಗಳನ್ನು , ಬಿ.ಎಲ್.ಓ ಗಳ ಮೂಲಕ ಸಂಗ್ರಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣ ಇಲ್ಲವಾಗಿದ್ದು, ಆದರೆ ಮುಂಜಾಗ್ರತೆಯಾಗಿ ಜಿಲ್ಲೆಯಾದ್ಯಂತ ಶೀತ ಜ್ವರ ಇರುವವರ ಕುರಿತು ಮನೆ ಮನೆಗಳ ವ್ಯಾಪಕ ತಪಾಸಣೆ ನಡೆಸುವಂತೆ ಸೂಚಿಸಿದ ಮಹೇಶ್ವರ ರಾವ್, ಈ ಕುರಿತಂತೆ ಜಿಲ್ಲೆಯ ಎಲ್ಲಾ ಬಿಎಲ್ ಓ ಗಳನ್ನು ಬಳಸಿಕೊಳ್ಳುವಂತೆ ಹಾಗೂ ತಪಾಸಣೆ ನಡೆಸುವ ಕುರಿತಂತೆ ಅವರಿಗೆ ಅಗತ್ಯ ತರಬೇತಿ ನೀಡುವಂತೆ ಹಾಗೂ ಮಾಹಿತಿ ದಾಖಲಿಸಲು ಅಗತ್ಯ ನಮೂನೆಯನ್ನು ಸಿದ್ದಪಡಿಸಿ ನೀಡಿ, ಮುಂದಿನ ೩ ದಿನದಲ್ಲಿ ಎಲ್ಲಾ ಬಿ.ಎಲ್.ಓ ಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಮುಗಿಸುವವಂತೆ ಸೂಚಿಸಿದರು. ಜಿಲ್ಲೆಯ ಜನತೆ ತಮಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಜಟ್ಟಿಗೇಶ್ವರ ಮತ್ತು ಸಹಪರಿವಾರ ದೈವಗಳ ಸೇವಾಸಮಿತಿ (ರಿ) ಮತ್ತು ಶ್ರೀ ಜಟ್ಟಿಗೇಶ್ವರ ಯುವಕ ಮಂಡಳಿ  ಬಪ್ಪನಬೈಲು ಇವರ ಜಂಟಿ ಸಹಯೋಗದಲ್ಲಿ ಬಪ್ಪನಬೈಲಿನ ಜಟ್ಟಿಗೇಶ್ವರ ದೇವರನ್ನು ನಂಬಿಕೊಂಡು ಬಂದಿರುವ ಸುಮಾರು ೯೩ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ತಾನದ ಆಡಳಿತ ಮಂಡಳಿಯ ಗೌರವಾದ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಏರಡೂ ಮಂಡಳಿಯ ಸರ್ವಸದಸ್ಯರು ಮತ್ತು ಊರಿನ ನಾಗರಿಕರು ಹಾಜರಿದ್ದರು. ಆಹಾರ ಸಾಮಾಗ್ರಿ ವಿತರಿಸಲು ಧನ ಸಹಾಯ ಮಾಡಿದ ಊರಿನ ಮಹನೀಯರನ್ನು ಅಭಿನಂದಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ಒಂದು ತಿಂಗಳಿನಿಂದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನ ಮನೆಯಲ್ಲಿದ್ದರೆ, ಆಶಾ ಕಾರ್ಯಕರ್ತರು ಬೀದಿಯಲ್ಲಿದ್ದಾರೆ. ಕೋವಿಡ್-19 ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಸಮಗ್ರವಾಗಿ ತೊಡಗಿಸಿಕೊಂಡಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಸುಡುಬಿಸಿಲಿನಲ್ಲಿಯೂ ಜಾಗೃತಿಯಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರ ಕಾರ್ಯವೈಖರಿ ಶ್ಲಾಘನೀಯವಾದುದು. ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರ ಆಶಯದಂತೆ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ಅವರನ್ನು ಗೌರವಿಸಲಾಗುತ್ತಿದೆ ಎಂದು ಎಸ್.ಸಿ.ಡಿ.ಸಿಸಿ ಬ್ಯಾಂಕಿನ ನಿರ್ದೇಶಕ ಎಸ್. ರಾಜು ಪೂಜಾರಿ ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು. ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಜು ದೇವಾಡಿಗ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಂಗೊಳ್ಳಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಾಕ್‌ಡೌನ್ ಸಂದರ್ಭ ಅಗತ್ಯ ನೆರವು ನೀಡುವ ಸಲುವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಆರಂಭಿಸಿದ ಮೊಬೈಲ್ ಹೆಲ್ಪ್ ಡೆಸ್ಕ್ ಸೇವೆ ಸಂಕಷ್ಟದಲ್ಲಿರುವವರಿಗೆ ವಿವಿಧ ಹಂತದಲ್ಲಿ ಉಪಯೋಗವಾಗುತ್ತಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಮುದೂರು ಗ್ರಾಮದಲ್ಲಿ ವಾಸವಿದ್ದ ಕುಟುಂಬದ ಮಗುವಿಗೆ ಪೀಡ್ಸ್ ಕಾಯಿಲೆಯಿದ್ದು, ಶಿವಮೊಗ್ಗ ಮಾನಸಾ ಆಸ್ಪತ್ರೆಯಿಂದ ತುರ್ತಾಗಿ ತರಬೇಕಾಗಿದ್ದ ಔಷಧಿಗಾಗಿ ಮುದೂರು ವಿ.ಎ ವೀರೇಶ್ ಅವರ ಮೂಲಕ ಬೇಡಿಕೆ ಇಟ್ಟಿದ್ದು, ತಕ್ಷಣ ಸ್ಪಂದಿಸಿದ ಹೆಲ್ಪ್‌ಡೆಸ್ಕ್ ತಂಡ ಶಿವಮೊಗ್ಗ ಆಸ್ಪತ್ರೆಯಿಂದ ಸ್ಥಳೀಯ ಸರ್ವೆಯರ್ ಪ್ರವೀಣ್ ಕುಮಾರ್ ಅವರ ಮೂಲಕ ನಿಟ್ಟೂರು ತನಕ ಹಾಗೂ ನಿಟ್ಟೂರಿನಿಂದ ಯಡ್ತರೆ ವಿ.ಎ ಮಂಜು ಹಾಗೂ ಸಂಸದರ ಆಪ್ತ ಸಹಾಯಕ ಶಿವಕುಮಾರ್ ಅವರು ಮುದೂರಿಗೆ ತಂದು ವ್ಯಕ್ತಿಯ ಮನೆಗೆ ತೆರಳಿ ಉಚಿತವಾಗಿ ಔಷಧಿಯನ್ನು ತಲುಪಿಸಿದರು. ಹೆಲ್ಪ್ ಡೆಸ್ಕ್‌ಗೆ ಆಹಾರ ಸಾಮಾಗ್ರಿ, ಔಷಧಿ ಸೇರಿದಂತೆ ವಿವಿಧ ಸಹಾಯಕ್ಕಾಗಿ ಕರೆ ಬರುತ್ತಿದ್ದು, ಆದ್ಯತೆಯಂತೆ ಸ್ಪಂದಿಸಲಾಗುತ್ತಿದೆ ಎಂದು ಸಂಸದ ಮೊಬೈಲ್ ಹೆಲ್ಪ್‌ಡೆಸ್ಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಯುಬಿಎಸ್ ಚಾರಿಟೇಬಲ್ ಟ್ರಸ್ಟ್ ಧಾರವಾಡ ಇವರ ವತಿಯಿಂದ ಆಶಾ ಕಾರ್ಯಕರ್ತರು ಹಾಗೂ ಬೈಂದೂರು ಸುತ್ತಲಿನ ಗ್ರಾಮಗಳ ಫಲಾನುಭವಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಬೈಂದೂರು ಪೊಲೀಸ್ ಠಾಣಾಧಿಕಾರಿ ಸಂಗೀತಾ ಅವರು ಬೈಂದೂರು ಭಾಗದ ಆಶಾ ಕಾರ್ಯಕರ್ತರಿಗೆ ಕಿಟ್ ಹಾಗೂ ಸ್ಯಾನಿಟೈಸರ್ ವಿತರಿಸಿ ಮಾತನಾಡಿ ದಾನಿಗಳ ಉದಾರ ಸಹಕಾರದಿಂದ ಇಂತಹ ಸಂದಿಗ್ಧ ಸಂದರ್ಭದಲ್ಲಿ ಜನರಿಗೆ ಸಹಕಾರ ದೊರೆಯುವಂತಾಗಿದೆ. ಲೌಕ್‌ಡೌನ್‌ನಂತಹ ಸಂದರ್ಭದಲ್ಲಿ ಜನರ ಅಗತ್ಯ ಅರಿತು ನೆರವು ನೀಡುವುದು ಮೆಚ್ಚುವಂತಹ ಕಾರ್ಯ ಎಂದರು. ಈ ಸಂದರ್ಭ ಯುಬಿಎಸ್ ಚಾರಿಟೇಬಲ್ ಟ್ರಸ್ಟ್ ಧಾರವಾಡ ಇದರ ಟ್ರಸ್ಟೀ ಪ್ರಶಾಂತ್ ಶೆಟ್ಟಿ, ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ, ಕರ್ನಾಟಕ ಬ್ಯಾಂಕ್ ಬೈಂದೂರು ಶಾಖಾ ಪ್ರಬಂಧಕ ಪರಮೇಶ್ವರ ಪೂಜಾರಿ, ಬಾಡಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಾಲಯ್ಯ ಶೇರುಗಾರ್, ಹಳೆ ವಿದ್ಯಾರ್ಥಿ ಸಂಘದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲು ಜಾರಿ ವಾರಾಹಿ ಕಾಲುವೆಗೆ ಬಿದ್ದ ಪರಿಣಾಮ ಎಂಟು ವರ್ಷದ ಬಾಲಕಿ ಸಾವನ್ನಪ್ಪಿಗ್ಪಿದ ಘಟನೆ ತಾಲೂಕಿನ ಹುಣ್ಸೆಮಕ್ಕಿ ಸಮೀಪದ ತಲಮಕ್ಕಿ ಬ್ರಹ್ಮನಗರ ಎಂಬಲ್ಲಿನ ಜನತಾ ಕಾಲೋನಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಬಾಲಕಿಯನ್ನು ಜನತಾ ಕಾಲೋನಿ ನಿವಾಸಿ ಭಾಸ್ಕರ ಕುಲಾಲ್ ಹಾಗೂ ಲಕ್ಷ್ಮೀ ಕುಲಾಲ್ ಎಂಬುವರ ಪುತ್ರಿ ಮೇಘನಾ ಕುಲಾಲ್(8) ಎಂದು ಗುರುತಿಸಲಾಗಿದೆ. ಮೇಘನಾ ಕುಲಾಲ್ ತನ್ನ ದೊಡ್ಡಮ್ಮನ ಮಗ ಸಚಿನ್ ಕುಲಾಲ್ (9) ಜೊತೆಗೆ ಆಟವಾಡುತ್ತಿದ್ದು ವಾಪಾಸ್ಸು ಮನೆಗೆ ವಾರಾಹಿ ಕಾಲುವೆಯ ದಂಡೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಕಾಲು ಜಾರಿ ಇಬ್ಬರೂ ಬಿದ್ದಿದ್ದಾರೆ. ಕಾಲುವೆಗೆ ಬೀಳುವ ಸಂದರ್ಭ ಸಚಿನ್ ಗಿಡವೊಂದನ್ನು ಹಿಡಿದುಕೊಂಡಿದ್ದು ಬೊಬ್ಬೆ ಹೊಡೆದಿದ್ದಾನೆ. ಬೊಬ್ಬೆ ಕೇಳಿದ ಸ್ಥಳೀಯರು ಓಡಿ ಬಂದಿದ್ದು ಸಚಿನ್ನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಕಾಲುವೆಗೆ ಬಿದ್ದ ಮೇಘನಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾಳೆ. ಬಹಳ ದೂರದಲ್ಲಿ ಆಕೆಯ ದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮೇಘನಾ ಬಿದ್ಕಲ್ಕಟ್ಟೆಯ ಸರಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋರೋನಾ ಸೊಂಕಿನಿಂದ ಸಂಪೂರ್ಣ ಗುಣಮುಖರಾಗಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಿಂದ ಶುಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಮೂಲದ ಆರು ತಿಂಗಳ ಗರ್ಭಿಣಿ ಮಹಿಳೆಯನ್ನು ಉಡುಪಿ ಜಿಲ್ಲಾಡಳಿತ ಮಡಿಲು ತುಂಬಿ ಬೀಳ್ಕೊಟ್ಟು ಭಾವುಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ಭಟ್ಕಳಕ್ಕೆ ಹೊರಟು ನಿಂತಿದ್ದ ಗರ್ಭಿಣಿಗೆ ಜಿಲ್ಲಾಡಳಿತದ ಪರವಾಗಿ ಉಡುಪಿ ಸಿಇಓ ಪ್ರೀತಿ ಗೆಹ್ಲೋಟ್ ಅವರು ಮಲ್ಲಿಗೆ ಹೂವು, ಸಿಹಿ ತಿಂಡಿ, ಹಣ್ಣುಗಳಿದ್ದ ತಟ್ಟೆಯನ್ನು ನೀಡಿ ಬೀಳ್ಕೊಟ್ಟರು. ಈ ಸಂದರ್ಭ ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್,  ಡಿಹೆಚ್‌ಓ ಡಾ. ಸುದೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಡಾ. ಪ್ರೇಮಾನಂದ್ , ಕೆಎಂಸಿ ಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಕೋವಿಡ್ ಆಸ್ಪತ್ರೆಯ ಡಾ. ಶಶಿ ಕಿರಣ್ ಹಾಗೂ ಕೋವಿಡ್ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು. ಎ.9ರಂದು ಭಟ್ಕಳ ಮೂಲದ 26 ವರ್ಷದ ಗರ್ಭಿಣಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಕೊವೀಡ್ 19 ಪರೀಕ್ಷೆಗಾಗಿ ಸ್ಯಾಂಪಲ್‌ಗಳು ಬೇರೆ ಜಿಲ್ಲೆಗೆ ಹೋಗುತ್ತಿದ್ದು, ಎಸ್.ಡಿ.ಆರ್.ಎಫ್ ಫಂಡ್‌ನಲ್ಲಿ ಟೆಸ್ಟ್ ಲ್ಯಾಬ್ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಎಪ್ರಿಲ್ ತಿಂಗಳ ಅಂತ್ಯದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಲ್ಯಾಬ್ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಅವರು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನು ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಈಗಾಗಲೆ 17 ಟೆಸ್ಟ್ ಲ್ಯಾಬ್ ಆರಂಭಿಸಿದ್ದೇವೆ. ಕೋವಿಡ್ ಆರಂಭದಲ್ಲಿ ಕೇವಲ 2 ಟೆಸ್ಟ್ ಲ್ಯಾಬ್ ಇತ್ತು. ಎಪ್ರಿಲ್ ಅಂತ್ಯದಲ್ಲಿ ಮತ್ತೆ 10ಲ್ಯಾಬ್‌ಗಳು ಆರಂಭವಾಗಲಿದ್ದು ಈ ಸಂದರ್ಭ ಉಡುಪಿ ಜಿಲ್ಲೆಯಲ್ಲೂ ಲ್ಯಾಬ್ ಆರಂಭಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದ ಮೂರು ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 110ಮಂದಿಯ ಟೆಸ್ಟ್ ರಿಪೋರ್ಟ್ ಬರಲು ಬಾಕಿ ಇದೆ. ಒಟ್ಟು 3300 ಜನ ಕ್ವಾರಂಟೈನ್‌ನಲ್ಲಿದ್ದು 993 ಜನ ಟೆಸ್ಟ್ ಮಾಡಿಕೊಂಡಿದ್ದಾರೆ. ಅದರಲ್ಲಿ 990 ನೆಗಟಿವ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಹಳಗೇರಿ ತೆಂಕಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಲ್ಲಿನ ಶ್ರೀ ಕಾಲಬೈರವ ಸೇವಾ ಸಂಘ, ಶ್ರೀ ಕಾಲಬೈರವ ಸೇವಾ ಸಮಿತಿ, ಶ್ರೀ ಬಸವೇಶ್ವರ ಭಜನಾ ಮಂದಿರ, ಅಲ್ ವಫಾ ವೆಲ್ಫೇರ್ ಸೊಸೈಟಿ ನೇತೃತ್ವದಲ್ಲಿ ಬ್ಲಡ್ ಹೆಲ್ತ್‌ಕೇರ್ ಕರ್ನಾಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಬೈಂದೂರು ತಾಲ್ಲೂಕು ಘಟಕ ಮತ್ತು ಇಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರುಗಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮೊದಲಿಗರಾಗಿ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿ ರಕ್ತನಿಧಿಗಳಲ್ಲಿ ರಕ್ತದ ಕೊರತೆ ಎದುರಾಗಿರುವ ಇಂದಿನ ಸನ್ನಿವೇಶದಲ್ಲಿ ರಕ್ತದಾನಕ್ಕೆ ಅತ್ಯಂತ ಹೆಚ್ಚು ಮಹತ್ವ ಇದೆ. ಗ್ರಾಮೀಣ ಪ್ರದೇಶವಾಗಿರುವ ಹಳಗೇರಿಯ ಸುತ್ತಲಿನ ಯುವಜನರು ಆಯೋಜಿಸಿರುವ ರಕ್ತದಾನ ಶಿಬಿರ ಇಲ್ಲಿ ಹೊಸ ಎಚ್ಚರ ಮೂಡಿಸುತ್ತದೆ. ರಕ್ತದಾನದಿಂದ ಜೀವನ್ಮರಣ ಸ್ಥಿತಿಯಲ್ಲಿರುವವರ ಜೀವ ಉಳಿಸಿದ…

Read More