ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಸಂದೇಶ್ ಪ್ರಭು, ಅಭಿಷೇಕ್ ಎಸ್ ಹಾಗೂ ವಿನಯ್ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿನಯ್ ಕಂಚಿನ ಪದಕ ಪಡೆದಿರುತ್ತಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಕೃಷ್ಣ ಮೊಗವೀರ ತರಬೇತಿಯನ್ನು ನೀಡಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಕ್ತಕ್ಕೆ ಪರ‍್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಿ ಆಗಾದ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಚೇರ್‌ಮೆನ್ ಎಸ್.ಜಯಕರ ಶೆಟ್ಟಿ ಹೇಳಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು. ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಆಗುತ್ತದೆ. ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಧಾರವಾಡ: ವೇಳಾಪಟ್ಟಿ ಇಲ್ಲದ ಬದುಕು ಹಳಿ ತಪ್ಪಿದ ರೈಲಿನಂತೆ ಇರುತ್ತದೆ. ಯುವಜನರು ನಿರ್ದಿಷ್ಟ ಗುರಿ ಇಟ್ಟುಕೊಳ್ಳುವುದಲ್ಲದೇ ಸಾಧನೆಗಾಗಿ ಸೂಕ್ತ ದಾರಿಯನ್ನು ಆಯ್ದುಕೊಳ್ಳುವುದು ಅತ್ಯಗತ್ಯ ಎಂದು ಧಾರವಾಡ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಾಹುಲ್ ಡೋಂಗ್ರೆ ಹೇಳಿದರು. ಅವರು ಶನಿವಾರ ನೆಹರು ಯುವ ಕೇಂದ್ರ ಸಂಘಟನಾ ಬೆಂಗಳೂರು ಹಾಗೂ ನೆಹರು ಯುವ ಕೇಂದ್ರ ಧಾರವಾಡ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸಿಡಾಕ್‌ನಲ್ಲಿ ಆಯೋಜಿಸಲಾದ ಕ್ರಾಂತಿವೀರ ಭಗತ್‌ಸಿಂಗ್ ಅವರ ೧೧೨ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಗತ್‌ಸಿಂಗ್ ಅವರ ಭಾವಚಿತ್ರಕ್ಕೆ ಪುಪ್ಪಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ದೇಶಕ್ಕಾಗಿ ಸಾವಿರಾರು ಜನರು ಪ್ರಾಣತ್ಯಾಗ ಮಾಡಿದ್ದಾರೆ. ಆದರೆ ಕೆಲವರು ಇಂದಿಗೂ ಅಜರಾಮರಾಗಿ ಉಳಿದು ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಭಗತ್‌ಸಿಂಗ್ ಅವರಂತಹ ಕ್ರಾಂತಿವೀರರು ಭಾರತ ದೇಶದ ಯುವಕರಿಗೆ ನಿಜಕ್ಕೂ ಸ್ಥೂತಿಯಾಗಿದ್ದಾರೆ ಎಂದರು. ಈ ಸಂದರ್ಭ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಲಿಂಗರಾಜ್ ನಿಡುವಾನಿ, ನೆಹರು ಯುವ ಕೇಂದ್ರ ಧಾರವಾಡದ ಲೆಕ್ಕಾಧಿಕಾರಿಗಳಾದ ಎ. ಜಿ. ಪುರಾಣಿಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ನೆರೆ ಪರಿಹಾರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ, ಜಿಲ್ಲಾ ಪಂಚಾಯತ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ ಉಸ್ತುವಾರಿ ಕಾರ್ಯದರ್ಶಿಗಳು ದುರಸ್ತಿ ಕಾರ್ಯಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಕುರಿತು ಜಿಲ್ಲಾಧಿಕರಿಗಳಿಗೆ ಪ್ರಸ್ತಾವನೆ ನೀಡುವಂತೆ ಸೂಚಿಸಿ, ಪಿ.ಡಬ್ಲ್ಯುಡಿ ರಸ್ತೆಗಳಲ್ಲಿ ಸಹ ಗುಂಡಿಗಳನ್ನು ಮುಚ್ಚುವಂತೆ ಸೂಚಿಸಿದರು. ಪಿ.ಡಬ್ಲ್ಯುಡಿ ಇಲಾಖೆಗೆ ಈಗಾಗಲೇ ೧೦.೮೫ ಕೋಟಿ ಅನುದಾನ ಬಿಡುಗಡೆಯಾಗಿದ್ದು, ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮರಳು ಸಮಸ್ಯೆಗೆ ಸಂಬಂದಿಸಿದಂತೆ, ಕೋಡಿ ಯಲ್ಲಿ ದಾಸ್ತಾನು ಮಾಡಿರುವ ಮರಳನ್ನು ಶೀಘ್ರದಲ್ಲಿ ವಿತರಿಸುವ ಕುರಿತು ಸಂಬಂದಪಟ್ಟ ಅಧಿಕಾರಿಗಳು ೨ ದಿನಗಳಲ್ಲಿ ಸ್ಥಳವನ್ನು ಪರಿಶೀಲಿಸಿ , ವರದಿ ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ತ್ರಾಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ತ್ರಾಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇವರ ಸಂಯುಕ್ತ ಆಶ್ರಯದಲ್ಲಿ ತ್ರಾಸಿ ಗ್ರಾಮ ಮಟ್ಟದ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ತ್ರಾಸಿ ಅಂಬೇಡ್ಕರ್ ಸಭಾ ಭವನದಲ್ಲಿ ಶುಕ್ರವಾರ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ನಮ್ಮ ಹಿಂದಿನ ಸಾಂಪ್ರದಾಯಿಕ ಅಡುಗೆ ಪದ್ಧತಿಯಿಂದ ನಾವೆಲ್ಲರೂ ಹಿಂದೆ ಸರಿಯುತ್ತಿದ್ದೇವೆ. ಇಂದಿನ ದಿನಗಳಲ್ಲಿ ಕೃತಕ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಅನೇಕ ರೀತಿಯ ಸಮಸ್ಯೆಗಳು ನಮ್ಮಲ್ಲಿ ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ನಮ್ಮ ಪೂರ್ವಜರು ಅಳವಡಿಸಿಕೊಂಡು ಬಂದಿರುವ ಅಹಾರ ಪದ್ಧತಿಯ ಬಳಕೆಗೆ ಎಲ್ಲರೂ ಮುಂದಾಗಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಗರ್ಭಿಣಿಯರಲ್ಲಿ ಪೌಷ್ಠಿಕಾಂಶದ ಕೊರತೆಯಿಂದ ಹುಟ್ಟುವ ಮಕ್ಕಳಲ್ಲಿ ನ್ಯೂನತೆ ಕಂಡು ಬರುತ್ತದೆ. ಹೀಗಾಗಿ ಗರ್ಭಿಣಿಯರು ಸದಾ ಪೌಷ್ಠಿಕ ಆಹಾರ ಸೇವಿಸುತ್ತಿರಬೇಕು. ಎಲ್ಲರೂ ಪೌಷ್ಠಿಕಾಂಶದ ಆಹಾರವನ್ನು ಸೇವಿಸುವುದನ್ನು ರೂಢಿಮಾಡಿಕೊಳ್ಳಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ. ವಿದ್ಯಾಗಿರಿ: ಭಾರತದಲ್ಲಿ ಆರಾಧಿಸಬಹುದಾದ ಶ್ರೇಷ್ಠ ಗ್ರಂಥ ಸಂವಿಧಾನ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನದ ಅಡಿಪಾಯ ಎಂದು ಖ್ಯಾತ ವಕೀಲರು ಹಾಗೂ ವಾಗ್ಮಿ ಸುಧೀರ್‌ಕುಮಾರ್ ಮುರೋಳಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲಾದ ಮಾಧ್ಯಮ ಮತ್ತು ಕಾನೂನು ಎಂಬ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ಪತ್ರಕರ್ತರು ಯಾವಾಗಲೂ ಮಾಧ್ಯಮ ಕಾನೂನು ಮತ್ತು ಕಾಯ್ದೆಗಳ ಬಗ್ಗೆ ತಿಳಿದುಕೊಂಡಿರಬೇಕು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳ ನೈಜತೆಯನ್ನು ಅರಿತು ಪ್ರಸಾರ ಮಾಡಬೇಕು. ಕೆಲವೊಮ್ಮೆ ಸುದ್ದಿಗಳನ್ನು ಕೊಡುವುದರಿಂದ ಆಗುವ ಅಪಾರ್ಥಕ್ಕೆ ಇಡೀ ಸಮಾಜ ಬೆಲೆ ತೆರಬೇಕಾಗುತ್ತದೆ. ಏಕಾಧಿಪತ್ಯದಲ್ಲಿ ಜನರಿಗೆ ಪ್ರಶ್ನಿಸುವಂತಹ ಅವಕಾಶಗಳಿರುವುದಿಲ್ಲ. ನಮ್ಮಲ್ಲಿನ ಅಂತರಂಗದ ಸಿದ್ಧಾಂತಗಳು ಬದಲಾಗಬೇಕಿದೆ ಎಂದರು. ಅನುವಾದಕರಾದವರು ಪ್ರತಿಯೊಂದು ವಿಷಯವನ್ನು ಅರಿತು ಅನುವಾದಿಸಬೇಕು. ಎರಡನೇ ಮಹಾಯುದ್ಧದ ಸಂಧರ್ಭದಲ್ಲಿ ಜಪಾನ್‌ನ ವಿರುದ್ದ ದೇಶಗಳು ಜಪಾನ್ ಯುದ್ದ ಮಾಡುತ್ತದೋ ಅಥವಾ ಶರಣಾಗುತ್ತದೋ ಎಂದು ಕೇಳಿದಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಂii ಇಲಾಖೆ ಬೆಂಗಳೂರು ಮತ್ತು ಸಿಡಾಕ್ ಧಾರವಾಡ ಇವರ ಜಂಟಿ ಆಶ್ರಯದಲ್ಲಿ ಸ್ವಉದ್ಯೋಗಾಂಕ್ಷಿಗಳಿಗೆ ಉಚಿತ ಉದ್ಯೋಗ ಅಭಿವೃದ್ಧಿ ತರಬೇತಿ ಶಿಬಿರವನ್ನು ಸೆಪ್ಟಂಬರ್ 27 ಮತ್ತು 28 ರಂದು ಉಡುಪಿಯಲ್ಲಿ ಏರ್ಪಡಿಸಲಾಗಿದೆ. ಸರಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯವಿದ್ದು, ಸ್ವಉದ್ಯೋಗಾಂಕ್ಷಿಗಳಿಗೆ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ. ಈ ಶಿಬಿರದಲ್ಲಿ ಸ್ವಂತ ಉದ್ಯೋಗಕ್ಕೆ ಬೇಕಾಗುವ ನಾಯಕತ್ವದ ಗುಣಗಳು, ಸರಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ವಿವಿಧ ಯೋಜನೆಗಳು, ಸಣ್ಣ ಮತ್ತು ಮದ್ಯಮ ಉದ್ದಿಮೆಗಳಿಗೆ ವಿವಿಧ ಕ್ಷೇತ್ರಗಳಲ್ಲಿರುವ ಅವಕಾಶಗಳು, ಜಿ.ಎಸ್.ಟಿ., ಯೋಜನಾ ವರದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ ಇತ್ಯಾದಿ ವಿಚಾರಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಮಗ್ರ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಕೈಗಾರಿಕಾ ವಸಾಹತು, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9483120937 / 8217530146 ನ್ನು ಸಂಪರ್ಕಿಸುವಂತೆ ಪ್ರಕಟಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಗಳಲ್ಲಿ ಸೋಲು ಗೆಲುವು ಸಮಾನ್ಯ. ಆದರೆ ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ನಿರಂತರವಾಗಿ ಮುನ್ನುಗ್ಗುವ ಛಲವನ್ನು ಆಳವಡಿಸಿಕೊಂಡಾಗ ಜೀವನದಲ್ಲಿ ಸತತ ಯಶಸ್ಸು ಪಡೆಯಲು ಸಾಧ್ಯ ಎಂದು ಜಿ.ಎಸ್.ವಿ.ಎಸ್ ಅಸೋಷಿಯೇಷನ್ನಿನ ಕಾರ‍್ಯದರ್ಶಿ ಹೆಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಭಾ ಕಾರ‍್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಎಲ್ಲಾ ಕ್ರೀಡೆಗಳನ್ನು ಸಮಾನ ದೃಷ್ಟಿಯಿಂದ ನೋಡುವ ಪ್ರೋತ್ಸಾಹಿಸುವ ಮನೋಭಾವ ನಮ್ಮದಾಗಬೇಕು ಎಂದು ಹೇಳಿದರು. ಬೈಂದೂರು ತಾಲೂಕಿನ ಕ್ರೀಡಾ ಸಂಯೋಜನಾಧಿಕಾರಿ ಜೀವನ್‌ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಉಪಸ್ಥಿತರಿದ್ದರು. ಸರಸ್ವತಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಥಾಮಸ್ ಪಿ ಎ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ‍್ಯಕ್ರಮ ನಿರ್ವಹಿಸಿದರು. ಇತಿಹಾಸ ಉಪನ್ಯಾಸಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಸೆ.20: ಜಿಲ್ಲೆಯಲ್ಲಿ ಸೆಪ್ಟಂಬರ್ ೨೫ ರಂದು ನಡೆಯುವ ಜಂತುಹುಳು ನಿವಾರಣಾ ದಿನದಂದು 1 ರಿಂದ 19 ವರ್ಷದೊಳಗಿನ 2,67450 ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣಾ ಅಲ್ಬೇಂಡಾಝೋಲ್ ಮಾತ್ರೆ ವಿತರಿಸುವ ಗುರಿ ಹೊಂದಿದ್ದು, ಸಂಬಂದಪಟ್ಟ ಎಲ್ಲಾ ಇಲಾಖೆಗಳು 100% ಗುರಿ ಸಾಧನೆಗೆ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ೬೩೯೧೦ ಅಂಗನವಾಡಿ ಮಕ್ಕಳು, ೧ ರಿಂದ ೧೦ ನೇ ತರಗತಿವರೆಗಿನ ೧೫೯೫೨೧ , ಪಿಯುಸಿಯ ೨೯೦೪೦, ಶಾಲೆಯಿಂಧ ಹೊರಗುಳಿದಿರುವ ೧೮೨೯ , ಡಿಪ್ಲಮೋದ ೨೨೧೦, ಐಟಿಐ ಕಾಲೇಜಿನ ೧೮೭೦, ನರ್ಸಿಂಗ್ ಕಾಲೇಜಿನ ೧೧೩೫ ಹಾಗೂ ೭೭೪೫ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಡಿಸಿ ಹೇಳಿದರು. ಜಂತುಹುಳು ಸಮಸ್ಯೆಯಿಂದ ಮಕ್ಕಳಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಅಪೌಷ್ಠಿಕತೆ, ಓದಿನಲ್ಲಿ ಏಕಾಗ್ರತೆ ಕಡಿಮೆ, ಅನಾರೋಗ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರರಾಗಿ ಗಾಂಧೀಜಿಯವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನದ ಕೊನೆಯ ಕ್ಷಣದವರೆಗೂ ಸಂತನಂತೆ ಬದುಕಿದ್ದ ಡಾ.ಸಂಜೀವನಾಥ ಈಕಳರ ಬದುಕು ಅನುಕರಣೀಯ ಎಂದು ಶಿಕ್ಷಣ ತಜ್ಞ ಹಿರಿಯ ಸಮಾಜ ಶಾಸ್ತ್ರಜ್ಞ ಪ್ರೊ.ಶ್ರೀಪತಿ ತಂತ್ರಿಯವರು ಹೇಳಿದರು. ಅವರು ಮೂಲ್ಕಿ ರೋಟರಿಭವನದಲ್ಲಿ ಕಾರ್ನಾಡ್ ಸದಾಶಿವರಾವ್ ಸ್ಮಾರಕ ಸೇವಾಶ್ರಮ ಟ್ರಸ್ಟ್ ಆಶ್ರಯದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಾಜಿ ಶಾಸಕ, ಅಕ್ಷರ ಸಂತ ಡಾ.ಸಂಜೀವನಾಥ ಐಕಳ ಕುರಿತಾಗಿ ಡಾ. ರೇಖಾ ವಿ. ಬನ್ನಾಡಿ ರಚಿಸಿರುವ ಖಾದಿಯಲ್ಲಿ ಅರಳಿರುವ ಸಂತ ಸಂಜೀವನಾಥ ಐಕಳ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. ಡಾ.ಸಂಜೀವನಾಥ ಈಕಳ ಸ್ವಾತಂತ್ರ್ಯ ಹೋರಾಟಕ್ಕಾಗಿ ತನ್ನ್ ವೈದ್ಯವೃತ್ತಿಯನ್ನು ತ್ಯಜಿಸಿ ಜನಸೇವೆ ಮಾಡುತ್ತಾ ರಾಜಕೀಯ ಪ್ರವೇಶಿಸಿ ಶಾಸಕರಾಗಿ ಗ್ರಾಮೀಣ ಕೃಷಿಗಾಗಿ ನೀಡಿದ ಕೊಡುಗೆ ಅವಿಸ್ಮರಣೀಯವಾದುದು. ಗ್ರಾಮೀಣ ಬಡವರ್ಗದ ಮಕ್ಕಳ ಶಿಕ್ಷಣಕ್ಕಾಗಿ ಶಾಲೆಯೊಂದನ್ನು ಆರಂಭಿಸಿ ಅವರ ಅಭಿವೃದ್ಧಿಗಾಗಿ ತನ್ನ ಸರ್ವಸ್ವವನ್ನು ವ್ಯ ಮಾಡಿರುವ ಮಹಾನ್ ತ್ಯಾಗಿ ಅಪ್ಪಟ ಗಾಂಧಿವಾದಿ ಅವರು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ…
