ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನುಶ್ರೀ ವಾಣಿಜ್ಯ ವಿಭಾಗದಲ್ಲಿ ಶೇ.95.5 (573) ಅಂಕ ಪಡೆದಿದ್ದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಈಕೆ ಯಡ್ತರೆ ಗ್ರಾಮದ ಸೈಬ್ರಹಿತ್ಲು ರಾಮ ಪೂಜಾರಿ ಹಾಗೂ ದೇವಕಿ ದಂಪತಿಗಳ ಪುತ್ರಿ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಕ್ಷತಾ 575 (95.83%), ಕಾಮರ್ಸ್ ವಿಭಾಗದಲ್ಲಿ ಕೀರ್ತನಾ 574 (95.67) ಹಾಗೂ ಕಲಾ ವಿಭಾಗದಲ್ಲಿ ಓಂಕಾರ್ 566 (94.33) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಶೇ.99.06 ಫಲಿತಾಂಶ ದಾಖಲಿಸಿದೆ. ರಾಜ್ಯದ ಟಾಪ್ 10 ಪಟ್ಟಿಯಲ್ಲಿ ಕಾಲೇಜಿನ 22 ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ. ಕಾಲೇಜಿನಲ್ಲಿ ಪ್ರಸಕ್ತ ವರ್ಷ 2779 ಮಂದಿ ಪರೀಕ್ಷೆ ಬರೆದಿದ್ದು, 2753 ಮಂದಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2229 ವಿದ್ಯಾರ್ಥಿಗಳು ಹಾಜರಾಗಿ 2209 ಮಂದಿ ಉತ್ತೀರ್ಣರಾಗಿದ್ದು, ಶೇ.99.10 ಪಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 502 ವಿದ್ಯಾರ್ಥಿಗಳು ಪರೀಕ್ಷೆ ಬರೆದು, 496 ಮಂದಿ ಉತ್ತೀರ್ಣರಾಗಿ ಶೇ. 98.80 ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ ಪರೀಕ್ಷೆ ಬರೆದ ಎಲ್ಲ 48 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಟಾಪ್ 10ನಲ್ಲಿ 22 ವಿದ್ಯಾರ್ಥಿಗಳು: ಪಿಯುಸಿಯ ಮೂರೂ ವಿಭಾಗಗಳಲ್ಲಿ ಒಟ್ಟು 22 ಮಂದಿ ವಿದ್ಯಾರ್ಥಿಗಳು ರಾಜ್ಯದ ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಿಜ್ಣಾನ ವಿಭಾಗದಲ್ಲಿ ಅನರ್ಘ್ಯ ಕೆ.(592), ರಘುವೀರ್ ಮಠದ(592) ಲಿಶನ್ ಎಎ(592), ಅನಿಲ್ ಬಣ್ಣಿ ಶೆಟ್ಟಿ (589) ಭಗೇಶ್ ಎನ್. ಕೊಡಗನೂರು, ವಿನಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019–20ನೇ ಸಾಲಿನ ರಾಜ್ಯದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿಗೆ ಶೆ.100 ಫಲಿತಾಂಶ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಶೇ 100 ರಷ್ಟು ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಸ್ವಾತಿ ಪೈ 594 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 45ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಸೋಹನ್ ಕುಮಾರ್ ಶೆಟ್ಟಿ 589 ಅಂಕಗಳಿಸಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ಭುವನ್ 588 ಅಂಕಗಳಿಸಿ ಎಂಟನೇ ಸ್ಥಾನ ಗಳಿಸಿದ್ದಾರೆ. ಈ ಬಾರಿಯ ವಿಜ್ಞಾನ ವಿಭಾಗದಲ್ಲಿ 118 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 63 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ ಕುಂದಾಪುರದ ಸ್ವಾತಿ ಪೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 594 (99%) ಅಂಕ ಪಡೆದು ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸ್ವಾತಿ ಪೈ ಕುಂದಾಪುರ ಹೊಸ ಬಸ್ ನಿಲ್ದಾಣ ಬಳಿ ಜವಳಿ ಉದ್ಯಮಿ ನಡೆಸುತ್ತಿರುವ ಶಿವಾನಂದ ಪೈ ಮತ್ತು ಶಿಲ್ಪಾ ಪೈ ಅವರ ಪುತ್ರಿ. ರ್ಯಾಂಕ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ವಾತಿ, ರ್ಯಾಂಕ್ ಬರಲು ಕಾಲೇಜು ಹಾಗೂ ಮನೆಯವರಿಂದ ಉತ್ತಮ ಪ್ರೋತ್ಸಾಹ ಕಾರಣ. ನಿರಂತರವ ಅಭ್ಯಾಸ ಮಾಡಿದ್ದೆ. ಮುಂದೆ ನಾನು ಸಿ.ಎ ಮಾಡುವ ಹಂಬಲವಿದೆ ಎಂದಿದ್ದಾರೆ. ಇದನ್ನೂ ಓದಿ: ► ಜುಲೈ 15ರಿಂದ ಉಡುಪಿ ಜಿಲ್ಲೆಯ ಗಡಿ ಸೀಲ್ಡೌನ್: ಯಾವುದಕ್ಕೆಲ್ಲಾ ನಿರ್ಬಂಧ-ವಿನಾಯಿತಿ ನೋಡಿ – https://kundapraa.com/?p=39538 . ► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 72 ಪಾಸಿಟಿವ್ ದೃಢ – https://kundapraa.com/?p=39547 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.14ರ ಮಂಗಳವಾರ 72 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ ತಾಲೂಕಿನ 16, ಕುಂದಾಪುರ ತಾಲೂಕಿನ 41 ಹಾಗೂ ಕಾರ್ಕಳ ತಾಲೂಕಿನ 15 ಮಂದಿಗೆ ಪಾಸಿಟಿವ್ ಬಂದಿದ್ದು, ಒಟ್ಟು ಪ್ರಕರಣದಲ್ಲಿ 51 ಪುರುಷರು, 19 ಮಹಿಳೆಯರು ಹಾಗೂ 2 ಮಕ್ಕಳು ಇದ್ದಾರೆ. ಇಂದು 80 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಪೈಕಿ 7 ಮಂದಿ ಬೆಂಗಳೂರು ಪ್ರಯಾಣದ ಹಿನ್ನೆಲೆ, ಇಬ್ಬರು ಮಂಗಳೂರು ಪ್ರಯಾಣದ ಹಿನ್ನೆಲೆ ಹೊಂದಿದ್ದು, ಉಳಿದ ಪ್ರಕರಣಗಳು ಪ್ರಾಥಮಿಕ ಸಂಕರ್ಪದಿಂದ ಬಂದಿದೆ. 712 ನೆಗೆಟಿವ್: ಈ ತನಕ ಒಟ್ಟು 22,648 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 19,835 ನೆಗೆಟಿವ್, 1,733 ಪಾಸಿಟಿವ್ ಬಂದಿದ್ದು, 1,080 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 712 ನೆಗೆಟಿವ್, 72 ಪಾಸಿಟಿವ್ ಬಂದಿದೆ. ಒಟ್ಟು 1,559 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 370 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,733 ಕೊರೋನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಗಡಿಗಳನ್ನು ಜುಲೈ 15ರ ಬುಧವಾದಿಂದ 14 ದಿನಗಳ ಕಾಲ ಸೀಲ್ಡೌನ್ ಮಾಡುವ ತೀರ್ಮಾನವನ್ನು ಉಡುಪಿ ಜಿಲ್ಲಾಡಳಿಯ ಕೈಗೊಂಡಿದ್ದು , ಕೆಲವೊಂದು ನಿರ್ಬಂಧಗಳನ್ನು ವಿಧಿಸಿ ಕೆಲವೊಂದು ವಿನಾಯಿತಿ ನೀಡಿದೆ. ಸೀಲ್ಡೌನ್ ಸಂದರ್ಭದಲ್ಲಿ ಸಾರ್ವಜನಿಕ ಬಸ್ ಸಂಚಾರ ಇರುವುದಿಲ್ಲ. ಹಾಗೆಯೇ ಯಾವುದೇ ಸಂತೆಗಳು ಕೂಡಾ ಇರುವುದಿಲ್ಲ. ಯಾವುದೇ ಧಾರ್ಮಿಕ, ರಾಜಕೀಯ, ಸಾಮಾಜಿಕ ಸಭೆ, ಸಮಾರಂಭಗಳು ಕೂಡಾ ನಡೆಸಲು ಅನುಮತಿ ಇಲ್ಲ. ಸಾರ್ವಜನಿಕವಾಗಿ ಹಬ್ಬ ಆಚರಣೆಗಳಿಗೂ ಅವಕಾಶವಿಲ್ಲ. ಮೊದಲೇ ನಿರ್ಧರಿಸಲಾಗಿರುವ ವಿವಾಹ ಕಾರ್ಯಕ್ರಮಕ್ಕಾಗಿ ತಹಶೀಲ್ದಾರರಿಂದ ಕಡ್ಡಾಯವಾಗಿ ಅನುಮತಿ ಪಡೆದು 50ಕ್ಕೂ ಅಧಿಕ ಮಂದಿ ಸೇರದೆ ಕಾರ್ಯಕ್ರಮ ನಡೆಸಬಹುದಾಗಿದೆ. ಹಾಗೆಯೇ ಈಗಾಗಲೇ ಸರ್ಕಾರ ನೀಡಿರುವ ಆದೇಶದಂತೆ ಅಂತ್ಯ ಸಂಸ್ಕಾರದಲ್ಲಿ 20 ಜನರು ಮಾತ್ರ ಭಾಗವಹಿಸಬಹುದಾಗಿದೆ. ಹೊರ ರಾಜ್ಯ ಅಥವಾ ಜಿಲ್ಲೆಯಿಂದ ಬರುವವರಿಗೆ ಹಾಗೂ ಹೋಗುವವರಿಗೆ ಜುಲೈ 15ರ ಸಂಜೆ 8 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ಒಳಗೆ ಎಲ್ಲಾ ಆರ್ಥಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಕುಂದಾಪುರದ ಸಮಾನ ಮನಸ್ಕ ವರ್ತಕರು ಸ್ವಯಂಪ್ರೇರಿತವಾಗಿ ಮಧ್ಯಾಹ್ನ 2 ಗಂಟೆಯ ಬಳಿಕ ಮಾಡುತ್ತಿರುವ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ ಭಾಗದಲ್ಲಿ ಒಂದಷ್ಟು ಅಂಗಡಿಗಳು ಮುಚ್ಚಿದ್ದು, ಉಳಿದ ಅಂಗಡಿಗಳು ಎಂದಿನಂತೆಯೇ ಕಾರ್ಯಾಚರಿಸುತ್ತಿದೆ. ಜೊತೆಗೆ ಬೆಳಗಿನ ಹೊತ್ತು ಜನಸಂಚಾರ ಹೆಚ್ಚಿದ್ದು, ಸಾಮಾಜಿಕ ಅಂತರ ಗಾಳಿಗೆ ತೂರಲಾಗಿದೆ. ಜುಲೈ 13ರಿಂದ ಎಲ್ಲ ದಿನಸಿ, ತರಕಾರಿ, ಹಣ್ಣು, ಎಲೆಕ್ಟ್ರಿಕಲ್ ಶೋ ರೂಂ, ಮೊಬೈಲ್, ಬಟ್ಟೆ, ಬೇಕರಿ, ಜೂಸ್ ಪಾರ್ಲರ್, ಸೆಲೂನ್, ಬೂಟಿ ಪಾರ್ಲರ್ಗಳು, ಚಿನ್ನದ ಮಳಿಗೆಗಳು ಸೇರಿದಂತೆ ಎಲ್ಲಾ ಅಂಗಡಿಗಳು ಜುಲೈ ಅಂತ್ಯದವರೆಗೆ ಮಧ್ಯಾಹ್ನ ೨ ಗಂಟೆಯ ತನಕ ತೆರೆದಿರಲಿದೆ. ತುರ್ತು ಅಗತ್ಯತೆಯಾದ ಮೆಡಿಕಲ್, ಅಧಿಕೃತ ಹಾಲು ಮಾರಾಟ ಅಂಗಡಿ, ಎಲ್ಲ ಹೋಟೆಲ್ಗಳು ಎಂದಿನಂತೆ ತೆರೆಯಲಿದೆ ಎಂದು ವರ್ತಕರು ಈ ಮೊದಲು ತಿಳಿಸಿದ್ದರು. ಬೆಳಗಿನ ಹೊತ್ತು ಹೆಚ್ಚಿದ ಜನದಟ್ಟಣೆ: ಸೋಮವಾರದಿಂದ ಬೆಳಗಿನ ಹೊತ್ತು ಕುಂದಾಪುರ ಪೇಟೆಯಲ್ಲಿ ಜನ ದಟ್ಟಣೆ ಹೆಚ್ಚಿದ್ದು, ಅಂಗಡಿಗಳ ಮುಂಭಾಗದಲ್ಲಿ ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಟಿ ಅಮವಾಸ್ಯೆಯಂದು ಆಚರಿಸಲಾಗುತ್ತಿರುವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಕಲಾಕ್ಷೇತ್ರ – ಕುಂದಾಪುರ ಸಂಸ್ಥೆಯು ನೇತೃತ್ವದಲ್ಲಿ ಜುಲೈ 20ರಂದು ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಆಚರಿಸಲಾಗುತ್ತಿದೆ. ಅಂದು ಸಂಜೆ ನಾಲ್ಕು ಗಂಟೆಗೆ ಯಕ್ಷಗಾನದ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ, ರೊಟರಿ ಮಾಜಿ ಗವರ್ನರ್ ಎ.ಎಸ್.ಎನ್. ಹೆಬ್ಬಾರ್ ಅವರು ಕುಂದಾಪ್ರ ಕನ್ನಡದ ಇತಿಹಾಸ ಹಾಗೂ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಲಿಕ್ಕಿದ್ದಾರೆ. ಬಹಿರಂಗ ಸಭೆಗೆ ಅವಕಾಶವಿಲ್ಲದ ಕಾರಣ ಪ್ರಮುಖ ಆಹ್ವಾನಿತರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮದ ನೇರಪ್ರಸಾರವನ್ನು ಕಲಾಕ್ಷೇತ್ರ ಕುಂದಾಪುರ ಹಾಗೂ ಕುಂದಾಪ್ರ ಡಾಟ್ ಕಾಂ ಫೇಸ್ಬುಕ್ ಪೇಜ್ ಮೂಲಕ ವೀಕ್ಷಿಸಬಹುದಾಗಿದೆ. ಪ್ರಬಂಧ ಸ್ಪರ್ಧೆ: ನೆರ್ಮನಿ ಹಾಳಾರೆ ಕರಿನ ಕಟ್ಟುಕೆ ಜಾಗ ಆಯ್ತ್ ಅಂದಿನಂಬ್ರ್ ಎಂಬ ಕುಂದಾಪ್ರ ಕನ್ನಡ ಚಾಟೋಕ್ತಿಯ ಮೇಲೆ ಎ4 ಅಳತೆಯ ಹಾಳೆಯಲ್ಲಿ ಒಂದು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಕೈ ಬರಹದ ಮೂಲಕ ಬರೆದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಧ್ಯಾರ್ಥಿ ಗೋಳಿಹೊಳೆಯ ಮಹೇಶ್ ಎಂ. ಪೂಜಾರಿ ಹುಂಡಿಮಕ್ಕಿ ಶೇ 90.33% (542) ಅಂಕದೊಂದಿಗೆ ತೆರ್ಗಡೆ ಹೊಂದಿದ್ದಾರೆ. ಈತ ಮಾಧವ ಹಾಗೂ ಮೂಕಾಂಬಿಕಾ ದಂಪತಿಯವರ ಪುತ್ರ.
