ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ಬಿಡುಗಡೆ ಮಾಡುತ್ತಿರುವುದನ್ನು ತಡೆಹಿಡಿಯುವಂತೆ ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಯುಕ್ತರಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 34,500 ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೆಲವು ವರ್ಷಗಳಿಂದ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪುತ್ತಿದೆ. ಅದನ್ನು ತಡೆಹಿಡಿಯಲು ಸೂಚಿಸಲಾಗಿದೆ. ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾಯ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.9: ಎಂಡೋಸಲ್ಫಾನ್ ಸಂತ್ರಸ್ಥರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಕಳುಹಿಸಲು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲಾ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎಸ್ ಅವರು ಇಂದು ಕಿರಿಮಂಜೇಶ್ವರ ಗ್ರಾಮಕ್ಕೆ ಭೇಟಿ ನೀಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಎಂಡೋಸಲ್ಫಾನ್ ಸಂತ್ರಸ್ಥರಾದ ಮಣಿಕಂಠ (8 ವರ್ಷ) ಹೆರಿಂಜಾಲು, ರೋಶನಿ (4 ವರ್ಷ), ನಾಗಮ್ಮ (25 ವರ್ಷ), ಮಹಮ್ಮದ್ ಐಯಾನ್ ಕಂಬದಕೋಣೆ (8 ವರ್ಷ), ರಂಜಿತ (21 ವರ್ಷ), ತರಣ್ (5 ವರ್ಷ), ತನ್ಮಯಿ (14 ವರ್ಷ) ಹೆರೂರು ಅವರನ್ನು ಭೇಟಿ ಮಾಡಿ ಅವರ ಕುಟುಂಬಿಕರಿಂದ ಪ್ರಸ್ತುತ ಸ್ಥಿತಿಗತಿಗಳ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಬೈಂದೂರು ತಹಸೀಲ್ದಾರ್ ಶೋಭಾ ಲಕ್ಷ್ಮಿ, ಎಸ್ಐ ಸಂಗೀತ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬುಧವಾರ 409 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 175, ಕುಂದಾಪುರ, ಬೈಂದೂರು ತಾಲೂಕಿನ 123, ಕಾರ್ಕಳ, ಹೆಬ್ರಿ ತಾಲೂಕಿನ 107 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 409 ಪ್ರಕರಣಗಳಲ್ಲಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 390 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 56 ವರ್ಷದ ಮಹಿಳೆ, 75 ವರ್ಷದ ಪುರುಷ, 67 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 423 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3766 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3448 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 4207 ಮಂದಿಗೆ ಮೊದಲನೇ ಡೋಸ್, 384 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಇಂಡಿಯನ್ ಸೀನಿಯರ್ ಛೇಂಬರ್ ಇವರ ವತಿಯಿಂದ ಇಲ್ಲಿನ ಬಾಯಂಹಿತ್ಲು ಪ್ರದೇಶದಲ್ಲಿ ‘ಬೀದಿ ಸ್ವಚ್ಛತಾ’ ಕಾರ್ಯಕ್ರಮ ನಡೆಯಿತು. ಈ ಕಾರ್ಯದಲ್ಲಿ ಇಂಡಿಯನ್ ಸೀನಿಯರ್ ಛೇಂಬರ್ ರಾಷ್ಟ್ರೀಯ ಸಂಯೋಜಕರಾದ ಸೀನಿಯರ್ ಗಿರೀಶ್ ಶ್ಯಾನುಭಾಗ್, ಇಂಡಿಯನ್ ಸೀನಿಯರ್ ಛೇಂಬರ್ ಅಧ್ಯಕ್ಷ ಎನ್. ಕೆ .ಬಿಲ್ಲವ, ಛೇಂಬರ್ ನ ಖಜಾಂಚಿ ಹಾಗೂ ಉಪ್ಪುಂದ ಪಂಚಾಯತ್ ಉಪಾಧ್ಯಕ್ಷರಾದ ಸೀನಿಯರ್ ದಿವಾಕರ್ ಶೆಟ್ಟಿ, ಕಾರ್ಯದರ್ಶಿ ಸೀನಿಯರ್ ಶ್ರೀಕಾಂತ್ ಕಾಮತ್, ನಿಕಟಪೂರ್ವ ಅಧ್ಯಕ್ಷ ಸೀನಿಯರ್ ಉದಯ್ ಡಿ ಆರ್, ನಿಕಟಪೂರ್ವ ಕಾರ್ಯದರ್ಶಿ ಸೀನಿಯರ್ ರಾಮಕೃಷ್ಣ ದೇವಾಡಿಗ, ಸದಸ್ಯರಾದ ಸೀನಿಯರ್ ಪ್ರಭಾಕರ್ ಶೆಟ್ಟಿ, ಸೀನಿಯರ್ ರವಿರಾಜ ಶೆಟ್ಟಿ, ಉಪ್ಪುಂದ ಜೇಸಿ ಸುಪ್ರೀಂನ ಅಧ್ಯಕ್ಷ ಜೇಸಿ ಮಂಜುನಾಥ ದೇವಾಡಿಗ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳಿರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಜೂ.10ರಿಂದ ಜೂನ್ 14ರವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡಲಾಗುತ್ತಿದೆ. ಜನರು ಲಾಕ್‌ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕರೊನಾ ನಿಯಂತ್ರಿಸಲು ಮತ್ತು ಗಂಗೊಳ್ಳಿಯನ್ನು ಕರೋನಾ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಕರೋನಾ ಸೋಂಕು ನಿಯಂತ್ರಿಸಲು ಜನರು ಸಹಕಾರ ನೀಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬುಧವಾರ ಜರಗಿದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್ ಮಾತನಾಡಿ, ಅಗತ್ಯ ತುರ್ತು ವೈದ್ಯಕೀಯ ಸೇವೆ ವಾಹನ ಹೊರತುಪಡಿಸಿ ಇನ್ಯಾವುದೇ ವಾಹನಗಳು ಸಂಚರಿಸುವಂತಿಲ್ಲ. ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಸಂಚರಿಸುವ ವಾಹನಗಳನ್ನು ಮುಟ್ಟುಗೋಲು ಹಾಕಿ ಪ್ರಕರಣ ದಾಖಲಿಸಲಾಗುವುದು. ಗಂಗೊಳ್ಳಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿಂತೆ, ಜಿಲ್ಲಾ ನೋಂದಣಾಧಿಕಾರಿ ಮತ್ತು ಉಪ-ನೋಂದಣಾಧಿಕಾರಿ ಕಚೇರಿಗಳು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವುದರ ಜೊತೆಗೆ ಕೋವಿಡ್ನ ಮೂರನೇ ಅಲೆಯ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ. ಗ್ರಾಮೀಣ ಭಾಗದಲ್ಲಿ 50 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಗ್ರಾಮ ಪಂಚಾಯತ್ಗಳನ್ನು ಸಂಪೂರ್ಣವಾಗಿ ಲಾಕ್ಡೌನ್ ಮುಂದುವರೆಸಬೇಕು ಎಂದರು. ಕಳೆದ ಐದು ದಿನಗಳಿಂದ 50 ಕ್ಕೂ ಹೆಚ್ಚು ಪ್ರಕರಣಗಳು ಇರುವ ಗ್ರಾಮಪಂಚಾಯತ್ಗಳನ್ನು ಪೂರ್ಣ ಪ್ರಮಾಣದ ಲಾಕ್ಡೌನ್ ಮಾಡಿದ ಹಿನ್ನೆಲೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿವೆ. ಈ ಹಿನ್ನೆಲೆ ಪ್ರಸಕ್ತ 50 ಕ್ಕೂ ಪ್ರಕರಣಗಳಿರುವ ಬೈಂದೂರು ತಾಲೂಕಿನ ಜಡ್ಕಲ್, ಶಿರೂರು, ನಾಡ ಗ್ರಾಮ ಪಂಚಾಯತಿ, ಕಾರ್ಕಳದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಶ್ವ ಪರಿಸರ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಇವರ ವತಿಯಿಂದ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಉರ್ದು ಶಾಲೆ ಬಸ್ರೂರು, ಗಂಗೊಳ್ಳಿ ಮತ್ತು ಶಿರೂರಿನಲ್ಲಿ ಸಸ್ಯಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ಆರೋಗ್ಯ ಅಧಿಕಾರಿ ಡಾ. ವಿದ್ಯಾ , ಡಾ. ರಮೇಶ್ ಶೆಟ್ಟಿ ಮತ್ತು ಇತರ ಸಿಬ್ಬಂದಿಗಳು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಇಮ್ತಿಯಾಜ್ ಬಸ್ರೂರ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಕುಂದಾಪುರ ಜಿಲ್ಲಾ ಸಮಿತಿ ಸದಸ್ಯ ಫಯೀಜ್ ಬಸ್ರೂರ್, ಸಹಾದ್ ಬಸ್ರೂರ್ ಮತ್ತು ಸದಸ್ಯರಾದ ಸಮೀರ್, ಅಫ್ನಾನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶುದ್ದ ಕುಡಿಯುವ ನೀರಿನ ಯೋಜನೆಗೆ 346.39ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ಹೆಮ್ಮಾಡಿ ಜಯಶ್ರೀ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬೈಂದೂರು ಕ್ಷೇತ್ರದ ಅಭಿವೃದ್ದಿಗೆ ಮಾಡುವಂತದ್ದು ನಮ್ಮ ಕರ್ತವ್ಯ ಅದೇ ರೀತಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಬಜೆಟ್ನಲ್ಲಿ ಅನುಮೋದನೆಯಾಗಿದ್ದು ತಿಂಗಳೊಳಗೆ ಟೆಂಡರ್ ಕರೆದು 788 ಗ್ರಾಮೀಣ ಜನವಸತಿಗಳಿಗೆ 2.42ಲಕ್ಷ ಜನಗಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆ ಇದಾಗಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಡುವರಿ, ಯಡ್ತರೆ, ಬೈಂದೂರು ಪಟ್ಟಣಗಳನ್ನು ಸಹ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಯೋಜನೆ ಒಟ್ಟು 346.39 ಕೋಟಿ ರೂ. ಆಗಿದ್ದು ಇದರಲ್ಲಿ 139 ಕೋಟಿ ಕೇಂದ್ರ ಸರಕಾರದ್ದಾಗಿದ್ದು ರಾಜ್ಯ ಸರಕಾರದ ಪಾಲು 80 ಕೋಟಿ, ನಬಾರ್ಡ್ನಲ್ಲಿ 176 ಕೋಟಿ ಒಟ್ಟು ಈ ಯೋಜನೆ ಸಂಪೂರ್ಣವಾಗಲೂ ಸುಮಾರು 500 ಕೋಟಿ ಬೇಕಾಗುತ್ತದೆ ಮುಂದಿನ 2 ವರ್ಷದಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಇದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ 16 ಗ್ರಾಮ ಪಂಚಾಯತ್ ಸಂಪೂರ್ಣ ಲಾಕ್ಡೌನ್ ಅವಧಿ ಜೂ.14ರ ತನಕ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. 50ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಗ್ರಾಮ ಪಂಚಾಯತ್, ಬೈಂದೂರು ತಾಲೂಕಿನ ಶಿರೂರು, ಜಡ್ಕಲ್ ಹಾಗೂ ನಾಡ ಗ್ರಾಮ ಪಂಚಾಯತ್, ಹೆಬ್ರಿ ತಾಲೂಕಿನ ಬೆಳ್ವೆ, ವರಂಗ ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ, ಆವರ್ಸೆ ಗ್ರಾಮ ಪಂಚಾಯತ್, ಕಾಪು ತಾಲೂಕಿನ ಶಿರ್ವ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ತಾಲೂಕನ ಬೆಳ್ಮಣ್ಣು, ಮಿಯಾರು, ಪಳ್ಳಿ, ಕಕ್ಕಂದೂರು, ನಲ್ಲೂರು, ಮರ್ಣೆ ಗ್ರಾಮ ಪಂಚಾಯತ್ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ವಿಸ್ತರಿಸಲಾದ ಗ್ರಾಮ ಪಂಚಾಯತಿಗಳಿಗೆ ಅಗತ್ಯ ವಸ್ತುಗಳ ಖರೀದಿಗೆ ಜೂ.9ರ ಬುಧವಾತ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬಳಿಕ ಜೂ.10 ರಿಂದ 14ರ ವರೆಗೆ ಸಂಪೂರ್ಣ ಲಾಕ್ ಡೌನ್ ಮುಂದುವರೆಯಲಿದೆ. ಗ್ರಾಮ ಪಂಚಾಯತಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ…
