Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.01ರ ಶನಿವಾರ 136 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.  ಈ ಪೈಕಿ ಕುಂದಾಪುರ ತಾಲೂಕಿನ 37, ಉಡುಪಿ ತಾಲೂಕಿನ 65 ಹಾಗೂ ಕಾರ್ಕಳ ತಾಲೂಕಿನ 33 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 70 ಪುರುಷರು, 66 ಮಹಿಳೆಯರು ಸೇರಿದ್ದಾರೆ. 716 ನೆಗೆಟಿವ್: ಈ ತನಕ ಒಟ್ಟು 32,401 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 27,463 ನೆಗೆಟಿವ್, 4,492 ಪಾಸಿಟಿವ್ ಬಂದಿದ್ದು, 446 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 716 ನೆಗೆಟಿವ್, 136 ಪಾಸಿಟಿವ್ ಬಂದಿದೆ. ಒಟ್ಟು 1,316 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.  ಇಂದು 100 ಮಂದಿ ಬಿಡುಗಡೆಗೊಂಡಿದ್ದಾರೆ. 1,811 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 4,492 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,646 ಮಂದಿ ಬಿಡುಗಡೆಯಾಗಿದ್ದು, 1,811 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಒಂದು ವ? ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳ ನೆನಪಿಗಾಗಿ ಹಾಗೂ ಪರಿಸರ ಜಾಗೃತಿಗಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಬಿಜೆಪಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಸಸಿ ನೆಡುವ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಪಕ್ಷದ ಪ್ರಮುಖರಾದ ಬಿ. ಸದಾನಂದ ಶೆಣೈ, ಉಮಾನಾಥ ದೇವಾಡಿಗ, ರಾಮಪ್ಪ ಖಾರ್ವಿ, ಹರೀಶ್ ಮೇಸ್ತ, ವಾಸುದೇವ ದೇವಾಡಿಗ, ಚಂದ್ರ ಖಾರ್ವಿ, ಅಶೋಕ ಪೂಜಾರಿ, ಸತೀಶ ಖಾರ್ವಿ, ಬೈಂದೂರು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಅಶೋಕ್, ಜ್ಯೋತಿ ಆರ್., ಗ್ರಾಪಂ ಸದಸ್ಯರಾದ ಬಿ.ರಾಘವೇಂದ್ರ ಪೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಬಿ.ಗಣೇಶ ಶೆಣೈ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಆ.1: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಎಚ್ಚರಿಸಿ, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಜುಲೈ 31ರ ಮಧ್ಯಾಹ್ನದ ವರದಿಯಂತೆ ಉಡುಪಿ ಜಿಲ್ಲೆಗೆ ಮುಂದಿನ 5 ದಿನಗಳ ಸುಮಾರು ಕಾಲ 115mm ಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಿದೆ. ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ನಾನದಲ್ಲಿ ಇರತಕ್ಕದ್ದು. ಸಾರ್ವಜನಿಕರು ನದಿ/ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಇಂತಹ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ/ಕಟ್ಟಡ/ಮರಗಳ ಕೆಳಗೆ ನಿಲ್ಲದ ಸುರಕ್ಷಿತ ಸಾಲಗಳನ್ನು ತಲುಪುವದು. ತುರ್ತು ಸೇವೆಗೆ: 1077 ದೂರವಾಣಿ: 0820-2574802

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೋಡಿ ಗ್ರಾಮದ ಮಧ್ಯಕೋಡಿ ವ್ಯಾಪ್ತಿಯಲ್ಲಿ ಕಡಲ್ಕೊರೆತದ ತೀವ್ರತೆಗೆ ಹಳೆಯ ತಡೆಗೋಡೆ ಪೂರ್ಣ ಕುಸಿತ ಕಂಡಿದೆ. ಸುಮಾರು 200 ಮೀಟರ್ ಅಂತರದಲ್ಲಿಎರಡು ಕಡೆ ತೀವ್ರ ಕೊರೆತ ಸಂಭವಿಸಿದೆ. ಅಲೆಗಳ ಹೊಡೆತಕ್ಕೆ ಕಲ್ಲುಗಳು ಸಮುದ್ರ ಪಾಲಾಗಿದೆ. ಭಾರಿ ಅಲೆಗಳು ಅಪ್ಪಳಿಸುತ್ತಿದ್ದು ನೀರು ರಸ್ತೆಗೆ ಚಿಮ್ಮುತ್ತಿದೆ. ಕಳೆದ ಕೆಲವು ದಿನಗಳಿಂದ ಕಡಲು ಅಬ್ಬರಿಸುತ್ತಿದ್ದು ಕಳೆದೆರಡು ದಿನಗಳಿಂದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ. ತಡೆಗೋಡೆಗೆ ಹೊಂದಿಕೊಂಡಿರುವ ವಿದ್ಯುತ್ ಮಾರ್ಗದ ಕಂಬಗಳು ಅಪಾಯಕ್ಕೆ ಸಿಲುಕಿವೆ. ರಸ್ತೆ ಕೊಚ್ಚಿಹೋಗುವ ಆತಂಕ ಎದುರಾಗಿದೆ. ಸಂಬಂಧಿತ ಇಲಾಖೆ ಕೂಡಲೆ ಕ್ರಮ ವಹಿಸಿ ರಕ್ಷಣೆ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ಗ್ರಾಮದ ಹಳಗೇರಿ ಕೇಳಾಮನೆ ನಿವಾಸಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತೇಜಪ್ಪ ಶೆಟ್ಟಿ (೮೧) ಶನಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಬೆಳ್ತಂಗಡಿ, ನಾವುಂದ, ಕಂಬದಕೋಣೆ ಮೊದಲಾದ ಸರಕಾರಿ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ೩೬ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕೃಷಿ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧುಗಳು ಹಾಗೂ ಶಿಷ್ಯವರ್ಗವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದಲ್ಲಿ ಅತ್ಯಂತ ಸರಳವಾಗಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭ ದೇವಳದ ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತಿರಿದ್ದರು. ದೇವಸ್ಥಾನ ಪ್ರವೇಶಕ್ಕೆ ಪೂರ್ವದಲ್ಲಿ ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಮಾಡಿಕೊಂಡೆ ಒಳ ಪ್ರವೇಶಿಸುವಂತೆ ನೋಡಿಕೊಳ್ಳಲಾಯಿತು. ಸಾಮಾಜಿಕ ಅಂತರವನ್ನು ಭಕ್ತಾಧಿಗಳು ಕಾಪಾಡಿಕೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.31ರ ಶುಕ್ರವಾರ 213 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 455 ನೆಗೆಟಿವ್: ಈ ತನಕ ಒಟ್ಟು 31,665 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 26,747 ನೆಗೆಟಿವ್, 4,356 ಪಾಸಿಟಿವ್ ಬಂದಿದ್ದು, 562 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 455 ನೆಗೆಟಿವ್, 213 ಪಾಸಿಟಿವ್ ಬಂದಿದೆ. ಒಟ್ಟು 1,419 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1,805 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 4,356 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,552ಮಂದಿ ಬಿಡುಗಡೆಯಾಗಿದ್ದು, 1,805 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 29 ಮಂದಿ ಮೃತಪಟ್ಟಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.30ರ ಗುರುವಾರ 248 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 762 ನೆಗೆಟಿವ್: ಈ ತನಕ ಒಟ್ಟು 31,044 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 26,292 ನೆಗೆಟಿವ್, 4,143 ಪಾಸಿಟಿವ್ ಬಂದಿದ್ದು, 609 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 762 ನೆಗೆಟಿವ್, 248 ಪಾಸಿಟಿವ್ ಬಂದಿದೆ. ಒಟ್ಟು 1,403 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1,669 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 4,143 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,445 ಮಂದಿ ಬಿಡುಗಡೆಯಾಗಿದ್ದು, 1,669 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 29 ಮಂದಿ ಮೃತಪಟ್ಟಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 44ರನ್ವಯ ಮಕ್ಕಳ ಪಾಲನೆ ಹಾಗೂ ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಮಗುವಿಗೆ ಸಂಬಂಧವಿಲ್ಲದ ಕುಟುಂಬಕ್ಕೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಮೀರದಂತೆ ಮಗುವನ್ನು ಪೋಷಕತ್ವ ಯೋಜನೆಯಡಿಯಲ್ಲಿ ನಿಯೋಜನೆ ಮಾಡಬಹುದಾಗಿದೆ. ಮಗು ಹಾಗೂ ಕುಟುಂಬದ ಹೊಂದಾಣಿಕೆಯ ಆಧಾರದ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಮಗುವನ್ನು 18 ವರ್ಷದ ವಯಸ್ಸಿನವರೆಗೂ ಪೋಷಕತ್ವ ಮುಂದುವರೆಸಲು ಅವಕಾಶ ಕಲ್ಪಿಸಬಹುದಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು, ಉಡುಪಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳನ್ನು ಪೋಷಕತ್ವ ಯೋಜನೆಯಡಿಯಲ್ಲಿ ಪೋಷಿಸಲು ಆಸಕ್ತಿ ಇರುವ ಪೋಷಕರು ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.0820-2574964, ಮೊ: 94490 54062 ಅಥವಾ ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಉಡುಪಿ, ದೂ: 0820-2580220, ಮೊ:94488 35228 ಸಂಪರ್ಕಿಸಬಹುದು ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್-19ರ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ , 26 ಫಾರ್ಮಸಿಸ್ಟ್ ಹುದ್ದೆಗಳಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ , ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾಸಿಕ ವೇತನ 20000 ಇರುತ್ತದೆ. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ, ಡಿಪ್ಲಮೊ ಇನ್ ಫಾರ್ಮಸಿ ಮತ್ತು ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ಕಡ್ಡಾಯ ನೊಂದಣಿ ಮಾಡಿರುವ ಅಭ್ಯರ್ಥಿಗಳು , ತಮ್ಮ ಅರ್ಜಿಯನ್ನು ಆಗಸ್ಟ್ 3ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ ಅಜ್ಜರಕಾಡು, ಉಡುಪಿ ಜಿಲ್ಲಾಸ್ಪತ್ರೆಗೆ ಸಲ್ಲಿಸುವಂತೆ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More