Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 735 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 277, ಕುಂದಾಪುರ, ಬೈಂದೂರು ತಾಲೂಕಿನ 201, ಕಾರ್ಕಳ, ಹೆಬ್ರಿ ತಾಲೂಕಿನ 252 ಮಂದಿಗೆ ಹಾಗೂ ಹೊರ ಜಿಲ್ಲೆಯ 5 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 735 ಪ್ರಕರಣಗಳಲ್ಲಿ 27 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 708 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 62 ವರ್ಷದ ವೃದ್ಧೆ, ಕುಂದಾಪುರದ 69 ವರ್ಷದ ವೃದ್ಧ, 55 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 619 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5205 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3426 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 3025 ಮಂದಿಗೆ ಮೊದಲನೇ ಡೋಸ್, 126 ಮಂದಿಗೆ…

Read More

ಮಕ್ಕಳು ಸಣ್ಣ ವಯಸ್ಸಿನಿಂದ ನಿಧಾನವಾಗಿ ಹದಿಹರೆಯದ ವಯಸ್ಸಿಗೆ ಕಾಲಿಡುವ ಸಂದರ್ಭದಲ್ಲಿ ಅವರ ಮನಸ್ಥಿತಿ ಬದಲಾಗುತ್ತಾ ಹೋಗುತ್ತದೆ. ದಿನ ಕಳೆದಂತೆ ಬುದ್ಧಿ ಬೆಳವಣಿಗೆಯಾದಂತೆ ತಂದೆ – ತಾಯಿಯ ಹಿಡಿತದಿಂದ ಸ್ವಲ್ಪ ಸ್ವಲ್ಪವಾಗಿ ಮಕ್ಕಳು ದೂರಾಗಿ ತಮ್ಮದೇ ಹಾದಿ ಹಿಡಿಯಲು ಮುಂದಾಗುತ್ತಾರೆ. ಆ ಸಂದರ್ಭದಲ್ಲಿ ಪೋಷಕರ ಕೋಪತಾಪಕ್ಕಿಂತ ಬುದ್ಧಿವಂತಿಕೆ ಕೆಲಸಕ್ಕೆ ಬರುತ್ತದೆ. ಹದಿಹರೆಯದ ಮಕ್ಕಳ ವಿಷಯದಲ್ಲಿ ಪೋಷಕರ ಜವಾಬ್ದಾರಿಗಳು ಏನು ಮತ್ತು ಅವುಗಳನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ. ನಿಮ್ಮ ಮಗುವಿಗೆ ತನ್ನ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬಿಡಿ: ಪೋಷಕರು ಎಂದ ಮೇಲೆ ಮಕ್ಕಳ ಜವಾಬ್ದಾರಿ ಅತಿ ಮುಖ್ಯ. ಮಕ್ಕಳ ಬೆಳವಣಿಗೆಯಲ್ಲಿ ಅವರ ಸಂಪೂರ್ಣ ಕಾರ್ಯ ಚಟುವಟಿಕೆಗಳ ಮೇಲೆ ಗಮನ ವಹಿಸಿ ಅವರು ಹಾದಿ ತಪ್ಪದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ತಂದೆ ತಾಯಿಯ ಆದ್ಯ ಕರ್ತವ್ಯ. ಪುಟ್ಟ ಮಗುವಾಗಿದ್ದಾಗ ಮಕ್ಕಳಿಗೆ ಜಗತ್ತಿನ ಅರಿವಿರುವುದಿಲ್ಲ. ಆ ಸಮಯದಲ್ಲಿ ತಂದೆ – ತಾಯಿ ಆದವರು ಮಕ್ಕಳ ಬೆನ್ನಿಗೆ ನಿಂತು ಪ್ರತಿಯೊಂದು ವಿಷಯದಲ್ಲೂ ಅವರಿಗೆ ಸಹಾಯ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಮಂಗಳವಾರ ತಾಲೂಕು ಆಡಳಿತಕ್ಕೆ ಕೋವಿಡ್‍ ಕೇರ್‍ ಸೆಂಟರ್ಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ.ಅವರಿಗೆ ಕೋವಿಡ್‍ ಕೇರ್ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಬೈಂದೂರು ತಹಶೀಲ್ದಾರ ಶೋಭಾಲಕ್ಷ್ಮೀ ಎಚ್‍. ಎಸ್., ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ, ಮ್ಯಾನೇಜರ್ ಚಂದ್ರಯ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಅಭಿವೃದ್ಧಿಗೊಂಡರೆ ದೇಶವು ಅಭಿವೃದ್ಧಿಗೊಂಡಂತೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಕರೋನಾ ವೈರಸ್ ಜನರ ಬದುಕನ್ನು ನಾಶ ಮಾಡಿದೆ ಅಲ್ಲದೆ ಹಳ್ಳಿ ಹಳ್ಳಿಗೂ ಕಾಲಿಟ್ಟು ಗ್ರಾಮೀಣ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕರೋನಾ ನಿರ್ವಹಣೆಯಲ್ಲಿ ಗ್ರಾಮ ಪಂಚಾಯತಿಗಳ ಪಾತ್ರ ಮಹತ್ವದಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಗ್ರಾಮ ಪಂಚಾಯತಿಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವೈರಸ್ ಹರಡದಂತೆ ತಡೆಯುವಲ್ಲಿ ಹಾಗೂ ಜನರಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ಸು ಸಾಧಿಸುತ್ತಿದೆ. ಗ್ರಾಮ ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಮನೆ ಮನೆ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಕರೋನಾ ವೈರಸ್ ಬಗ್ಗೆ ಗ್ರಾಮದ ಜನರಲ್ಲಿ ಅರಿವು ಮೂಡಿಸುತ್ತಿದೆ. ಕೋವಿಡ್-೧೯ ವೈರಸ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಕೋವಿಡ್ ಲಸಿಕೆ ಮಹತ್ವದ ಬಗ್ಗೆ ತಿಳಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಅನಗತ್ಯವಾಗಿ ಯಾರೂ ಹೊರಗಡೆ ತಿರುಗಾಡದಂತೆ ಮನವಿ ಮಾಡಿಕೊಳ್ಳಲಾಗುತ್ತಿದ್ದುಜನರ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿರುವ ಟಾಸ್ಕ್‌ಪೋರ್ಸ್ ಸಮಿತಿ ಕೋವಿಡ್ ಕಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 50ಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಇರುವ ಗ್ರಾಮಗಳ ಸಂಪೂರ್ಣ ಲಾಕ್‌ಡೌನ್ ಮಾಡಲು ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಜೂನ್ 2 ರಿಂದ7ರ ತನಕ ಹೆಚ್ಚಿನ ಕೋವಿಡ್ ಪಾಸಿಟಿವ್ ಇರುವ ಗ್ರಾಮಗಳು ಸಂಪೂರ್ಣ ಲಾಕ್‌ಡೌನ್ ಆಗಲಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಅವರು ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂಗೆ ಈ ಬಗ್ಗೆ ಮಾಹಿತಿ ನೀಡಿದ ಅವರು ಮೆಡಿಕಲ್ ಹಾಗೂ ತುರ್ತು ಅಗತ್ಯಗಳಿದ್ದರೆ ಮಾತ್ರ ಈ ಗ್ರಾಮಗಳ ಜನರು ಹೊರಬರಲು ಅವಕಾಶವಿದ್ದು ಅದನ್ನು ಹೊರತುಪಡಿಸಿ ಬೇರಾವುದೇ ಕಾರಣಕ್ಕೆ ಹೊರಕ್ಕೆ ಬರುವಂತಿಲ್ಲ. ಹಾಲನ್ನು ಕೂಡ ಮನೆಗಳಿಗೆ ನೇರವಾಗಿ ವಿತರಿಸಲು ಸೂಚಿಸಲಾಗಿದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಜನರು ಉತ್ತಮ ಸಹಕಾರ ನೀಡುತ್ತಿದ್ದು, ಕೋವಿಡ್ ಪಾಸಿಟಿವ್ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗುತ್ತಿದೆ. ಇನ್ನು ಸ್ಪಲ್ವ ದಿನ ಹೀಗೆಯೇ ಸಹಕಾರ ನೀಡಿದರೆ ಕೋವಿಡ್ ಮುಕ್ತವಾಗಿ ಮಾಡಬಹುದು ಎಂದರು. ಬೈಂದೂರು ತಾಲೂಕಿನ ಶಿರೂರು, ಜಡ್ಕಲ್, ಕಂಬದಕೋಣೆ, ನಾಡ ಗ್ರಾಮಗಳು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗದಿರುವ ಹಿನ್ನೆಲೆಯಲ್ಲಿ 50ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳಿರುವ ಗ್ರಾಮಗಳನ್ನು ಜೂನ್ 2 ರಿಂದ 7ರ ತನಕ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳನ್ನು ಗ್ರಾಮದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸೋಮವಾರ ಆದೇಶ ಹೊರಡಿಸಿದ್ದು ಅದರಂತೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ 11 ಗ್ರಾಮಗಳು, ಹೆಬ್ರಿ ತಾಲೂಕನ ಬೆಳ್ವೆ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು 33 ಗ್ರಾಮಗಳು ಸಂಪೂರ್ಣ ಲಾಕ್ ಆಗಲಿದೆ. ಜಿಲ್ಲಾಡಳಿತ ಲಾಕ್ಡೌನ್’ಗೆ ಆದೇಶಿಸಿದರು ಗ್ರಾಮಗಳು: ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ಇನ್ನು 2 ರಿಂದ 3 ದಿನದಲ್ಲಿ ಮುಂಗಾರು ಪ್ರವೇಶವಾಗುವ ಸಂಭವವಿದ್ದು, ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಮಳೆಯ ಸಮಯದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಅಗತ್ಯ ಸೂಚನೆ, ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಕುರಿತು ಮತ್ತೊಮ್ಮೆ ಪರಿಶೀಲಿಸಿ, ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿರುವ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಿ. ಚರಂಡಿ ಮತ್ತು ರಾಜ ಕಾಲುವೆಗಳಿಂದ ಮೇಲೆತ್ತಿದ್ದ ಮಣ್ಣನ್ನು ಸೂಕ್ತ ರೀತಿಯಲ್ಲಿ ಬೇರೆಡೆಯಲ್ಲಿ ವಿಲೇವಾರಿ ಮಾಡಿ ಎಂದು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ 24*7 ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಸಿದ್ಧವಾಗಿಟ್ಟುಕೊಳ್ಳಿ. ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ , ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಗಳ ನಿರ್ಮಾಣ , ಅಗತ್ಯ ಬೆಡ್ಗಳ ವ್ಯವಸ್ಥೆ ಮತ್ತು ಚೈಲ್ಡ್ ವೆಂಟಿಲೇಟರ್ ಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ 50 ಕ್ಕೂ ಸಕ್ರಿಯ ಪ್ರಕರಣಗಳಿರುವ ಗ್ರಾಮ ಪಂಚಾಯತ್ ಗಳನ್ನು ಬುಧವಾರದಿಂದ ಭಾನುವಾರದವರೆಗೆ 5 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಮಾಡುವ ಕುರಿತಂತೆ ಕ್ರಮ ಕೈಗೊಳ್ಳಿ, ಸಂಬಂಧಪಟ್ಟ ಗ್ರಾಮಗಳ ಜನತೆಗೆ ಅಗತ್ಯ ವಸ್ತುಗಳ ಖರೀದಿಗೆ ಒಂದು ದಿನ ಕಾಲಾವಕಾಶ ನೀಡಿ, ನಂತರದ ದಿನದಿಂದ ಕಂಪ್ಲೀಟ್ ಲಾಕ್ ಡೌನ್ ಮಾಡುವಂತೆ ಸಚಿವ ಬೊಮ್ಮಾಯಿ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಪ್ರಸ್ತುತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 519 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 231, ಕುಂದಾಪುರ, ಬೈಂದೂರು ತಾಲೂಕಿನ 174, ಕಾರ್ಕಳ, ಹೆಬ್ರಿ ತಾಲೂಕಿನ 113 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 519 ಪ್ರಕರಣಗಳಲ್ಲಿ 9 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 510 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 78 ವರ್ಷದ ವೃದ್ಧೆ, 72 ವರ್ಷದ ವೃದ್ಧೆ, 49 ವರ್ಷದ ಪುರುಷ, ಕಾರ್ಕಳದ 89 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 765 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5092 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2879 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5294 ಮಂದಿಗೆ ಮೊದಲನೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಇಂಡಿಯನ್ ಸೀನಿಯರ್ ಛೇಂಬರ್ ಲೀಜನ್‌ನಿಂದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಕೋವಿಡ್ ಮುಂಜಾಗ್ರತಾ ಕ್ರಮಕ್ಕಾಗಿ ಸುರಕ್ಷತಾ ಕೋವಿಡ್ ಕಿಟ್‌ಗಳನ್ನು ವಿತರಿಸಲಾಯಿತು. ಲೀಜನ್‌ನ ಅಧ್ಯಕ್ಷ ಸೀನಿಯರ್ ಎನ್. ಕೆ. ಬಿಲ್ಲವ ಮತ್ತು ರಾಷ್ಟ್ರೀಯ ಸಂಯೋಜಕ ಸೀನಿಯರ್ ಗಿರೀಶ್ ಶ್ಯಾನುಭಾಗ್ ಸುರಕ್ಷತಾ ಕಿಟ್‌ಗಳನ್ನು  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ. ಎಂ. ಮುಂದಿನಮನಿ  ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಲೀಜನ್‌ನ ನಿಕಟಪೂರ್ವ ಕಾರ್ಯದರ್ಶಿ ಸೀನಿಯರ್ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ಸಿಇಒ ಕರುಣಾಕರ ಶೆಟ್ಟಿ, ಲೀಜನ್ನ ನಿಕಟಪೂರ್ವ ಅಧ್ಯಕ್ಷರಾದ ಉದಯ ಡಿ. ಆರ್., ಕಛೇರಿಯ ಸಿಬ್ಬಂದಿಗಳಾದ ಗೋವಿಂದ ಗಾಣಿಗ, ಮೋಹನ್ ಉಪಸ್ಥಿತರಿದ್ದರು.

Read More