Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಮಾವಿನಕಾರು ಗ್ರಾಮದ ಭರತ್‌ಕುಮಾರ್ ಶೆಟ್ಟಿ ಅವರಿಗೆ ಅವರ ಸಮಾಜಸೇವೆ ಗುರುತಿಸಿ ಬೀದರ್‌ನಲ್ಲಿ ಪ್ರತಿಷ್ಠಿತ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಹಾಗೂ ಮಂದಾರ ಕಲಾ ವೇದಿಕೆಯಿಂದ ನಡೆದ ಸಮಾರಂಭದಲ್ಲಿ ಕಾಯಕ ಚೂಡಾಮಣಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ, ಸಾಹಿತಿ ಡಾ.ಎಂ.ಜಿ.ದೇಶಪಾಂಡೆ, ಮಕ್ಕಳತಜ್ಞ ಡಾ.ಸಿ.ಆನಂದ ರಾವ್, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿದೇರ್ಶಕ ಡಾ.ಸತೀಶ್ ಕುಮಾರ್ ಹೊಸಮನಿ ಬೆಂಗಳೂರು, ಡಾ.ಜಯಪ್ಪ ಹೊನ್ನಾಳಿ(ಜಯಕವಿ) ಮೈಸೂರು, ಲೇಖಕಿ ಪಾರ್ವತಿ ಸೋನಾಲೆ ಬೀದರ್, ಸಾಹಿತಿ ಗೋಪಾಲಕೃಷ್ಣ ವಂಡ್ಸೆ, ಸಂಘಟಕ ಡಾ. ನಿತೇಶ್‌ಕುಮಾರ್ ಬೀದರ್, ಕವಿ ವಿಶ್ವೇಶ್ವರ ಮೇಟಿ ಮುಂಬೈ ಮೊದಲಾದವರು ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಹಾಗೂ ನ್ಯಾಚುರೋಪಥಿ ವಿದ್ಯಾರ್ಥಿಗಳಿಗೆ ‘ಬರ್ಡ್ ಫೀಡರ್ ಇನ್‌ಸ್ಟಾಲೇಶನ್’ ಕುರಿತು ಒರಿಯೆಂಟೇಶನ್ ಹಮ್ಮಿಕೊಳ್ಳಲಾಯಿತು. ಪ್ರಥಮ ಎಂಎಸ್ಸಿ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ವಿನುತಾ ಹಕ್ಕಿಗಳ ಸ್ವಭಾವ ಹಾಗೂ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿನಿ ಜೆನಿಫರ್ ಪಿಂಟೋ, ಅನುಪಯುಕ್ತ ವಸ್ತುಗಳನ್ನು ಬಳಸಿಕೊಂಡು ಬರ್ಡ್ ಫೀಡರ್‌ಗಳನ್ನು ತಯಾರಿಸುವ ವಿಧಾನವನ್ನು ವಿವರಿಸಿದರು. ಜೊತೆಗೆ ಈ ಬರ್ಡ್ ಫೀಡರ್‌ಗಳ ಅಳವಡಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಆಳ್ವಾಸ್ ಇಂಜಿಯನಿಯರಿಂಗ್ ಹಾಗೂ ನ್ಯಾಚುರೋಪತಿ ಕಾಲೇಜಿನ 400ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಸಂಯೋಜಕಿ ಡಾ. ರಶ್ಮಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ತ್ರಾಸಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ತ್ರಾಸಿ ಮಹಾಶಕ್ತಿ ಕೇಂದ್ರದ ಸಭೆ ತ್ರಾಸಿಯ ಅಣ್ಣಪ್ಪಯ್ಯ ಸಬಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಬೂತ್ ಪ್ರಮುಖರನ್ನು, ಶಕ್ತಿ ಕೇಂದ್ರದ ಪ್ರಮುಖರನ್ನು ನೇಮಿಸಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಸೂಚನೆಯಂತೆ ಬೈಂದೂರು ಮಂಡಲದಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವ ಕಾರ್ಯ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ವಿವಿಧ ಮೋರ್ಚಾ ಹಾಗೂ ಪ್ರಮುಖರ ಸಮಾವೇಶಗಳನ್ನು ನಡೆಸಿ ಮುಂಬರುವ ತಾಪಂ., ಜಿಪಂ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಮಾತನಾಡಿ, ಬಿಜೆಪಿ ಕಾರ್ಯಕರ್ತರು ಪಕ್ಷಕ್ಕಾಗಿ ಸ್ವಲ್ಪ ಸಮಯವನ್ನು ನೀಡಿ ಪಕ್ಷದ ಬೆಳವಣಿಗೆಗೆ ಮುಂದಾಗಬೇಕು. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಬಲವರ್ಧನೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ಕೊಂಕಣಿ ಜಾನಪದ ಸಂಗ್ರಹ ಶಿಶುಗೀತೆ, ಶೋಭಾನೆ, ಕೊಂಕಣಿ ಗೀತರಚನಾ, ನಾಟಕ, ಕೊಂಕಣಿ ಕವ್ವಾಲಿ, ಕೊಂಕಣಿ ಪಟ್ಟಾಂಗ, ಕೊಂಕಣಿ ಭಜನಾ ರಚನೆ,ಸ್ವತಃ ನಟನೆ ಹಾಗೂ ಖ್ಯಾತ ಉದ್ಯಮಿಯಾಗಿರುವ ಹಾಲಾಡಿ ಲಕ್ಷ್ಮೀದೇವಿ ಕಾಮತ್ ಅವರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯಿಂದ ಕೊಂಕಣಿ ಸಾಹಿತ್ಯ ಸಮ್ಮೆಳನದಲ್ಲಿ ಮಣಿಪಾಲದ ಆರ್ ಎಸ್ ಬಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಾಡದೋಣಿ ಮೀನುಗಾರರ ಸೀಮೆ ಎಣ್ಣೆಯ ಸಮಸ್ಯೆ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹೊಸ ಜೆಟ್ಟಿಯಲ್ಲಿ ಹೊಳು ತುಂಬಿಕೊಂಡು ಆಗುತ್ತಿರುವ ಸಮಸ್ಯೆಯ ಬಗ್ಗೆ ಮತ್ತು ಮತ್ಸ್ಯಾಶ್ರಯ ಯೋಜನೆಯ ವಿಳಂಬದ ಕುರಿತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಹಾಗೂ ಉಪಾಧ್ಯಕ್ಷ ಸೂರಜ್ ಖಾರ್ವಿ ಅವರು ರಾಜ್ಯದ ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್.ಅಂಗಾರ ಮತ್ತು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಮೀನುಗಾರರಿಗೆ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು. ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವ ಎಸ್.ಅಂಗಾರ ಮತ್ತು ಶಾಸಕ ಸುಕುಮಾರ ಶೆಟ್ಟಿ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್ ವ್ಯಾಪ್ತಿ, ನಗರಸಭೆ ವ್ಯಾಪ್ತಿ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ  ಸಹಾಯಕಿ ಹುದ್ದೆಗೆ 18 ರಿಂದ 35 ವರ್ಷಗೊಳಗಿನ ಕಾರ್ಯಕರ್ತೆ ಹುದ್ದೆಗೆ ಗರಿಷ್ಠ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರುವ ಮತ್ತು ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://udupi.nic.in/ ಅನ್ನು ಸಂಪರ್ಕಿಸುವಂತೆ ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಲಾವಣ್ಯ ರಿ. ಬೈಂದೂರು ಸಹಯೋಗದಲ್ಲಿ ವಿಶ್ವರಂಗಭೂಮಿ ದಿನಾಚರಣೆ 2021 ಮಾ.27ರ ಶನಿವಾರ ಸಂಜೆ5.30ಕ್ಕೆ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾರ್ಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಉದಯ್ ಆಚಾರ್ ತಿಳಿಸಿದರು. ಬೈಂದೂರು ಪ್ರೆಸ್ ಕ್ಲಬ್‌ನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಲಿದ್ದು, ರಂಗಭೂಮಿ ದಿನಾಚರಣೆ ಕುರಿತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ರಘು ನಾಯ್ಕ್ ಉಪನ್ಯಾಸಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಬೈಂದೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ., ಜಿಲ್ಲಾ ಪಂಚಯತ್ ಸದಸ್ಯರಾದ ಶಂಕರ್ ಪೂಜಾರಿ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಎಂ. ಕೆ. ಮಠ ಉಪ್ಪಿನಂಗಡಿ, ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ಮುಖ್ಯೋಪಾಧ್ಯರಾದ ರಾಜು ಎಸ್. ಇವರು ಉಪಸ್ಥಿತರಿರಲಿದ್ದಾರೆ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ರಂಗ ನಿರ್ದೇಶಕರಾದ ಕೋ. ಶಿವಾನಂದ ಕಾರಂತ್ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಾರ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರ ಯುವಮೋರ್ಚಾ ವತಿಯಿಂದ ಅಪ್ರತಿಮ ದೇಶಭಕ್ತರು, ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ರವರ ಬಲಿದಾನದ ಸ್ಮರಣೆಯಲ್ಲಿ ‘ಶಹಿದ್ ದಿವಸ್’ ಪಂಜಿನ ಮೆರವಣಿಗೆ ಬೈಂದೂರು ಸರ್ಕಲ್ ನಿಂದ ಬಲಿದಾನಗೈದ ದೇಶಭಕ್ತರ ಘೋಷಣೆ ಕೂಗುತ್ತ ಜೈಕಾರ ಹಾಕುತ್ತ ಸಾಗಿ ಸೇನೇಶ್ವರ ದೇವಸ್ಥಾನದಲ್ಲಿ ಮೆರವಣಿಗೆ ಅಂತ್ಯಗೊಳಿಸಲಾಯಿತು ಪಂಜಿನ ಮೆರವಣಿಗೆಗೆ ಮಂಡಲದ ಅಧ್ಯಕ್ಷರಾದ ದೀಪಕ್ ಶೆಟ್ಟಿ ನೆಲ್ಯಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ವಲ್ ಶೆಟ್ಟಿ ಕಾಲ್ತೊಡ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಜೇಡ್ಡು,ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಂತೋಷ ಎಮ್, ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಉಪಾಧ್ಯಕ್ಷರಾದ ಲೋಹಿತ್ ಶೆಟ್ಟಿ ಗಂಟಿಹೊಳೆ , ಕಾರ್ಯದರ್ಶಿ ನಿಧಿತ್ ಶೆಟ್ಟಿ ಬೈಂದೂರ್ ಹಾಗೂ ಮಂಡಲದ, ಮಹಾಶಕ್ತಿ ಕೇಂದ್ರದ ಶಕ್ತಿಕೇಂದ್ರದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು ಎಪ್ರಿಲ್ 22ರಿಂದ 29 ತನಕ ನಡೆಯಲಿರುವ ಪೂರ್ವಭಾವಿಯಾಗಿ, ಚಪ್ಪರ ಮುಹೂರ್ತ ಕಾರ್ಯಕ್ರಮ ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ಜರುಗಿತು. ಕಾರ್ಯಕ್ರಮದಲ್ಲಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಸಸಿಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮಂಜಯ್ಯ ಪೂಜಾರಿ ಏಳಜಿತ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಮುತ್ತಯ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ .ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು. ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ…

Read More