ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ,ಅ10 : ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜೀವ ಹಾನಿ ಮತ್ತು ಆಸ್ತಿ ಪಾಸ್ತಿ ನಷ್ಟಕ್ಕೊಳಗಾದವರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಿ, ಪರಿಹಾರ ವಿತರಣೆ ಸಂದರ್ಭದಲ್ಲಿ ಸಂತ್ರಸ್ಥರಿಗೆ ಗರಿಷ್ಠ ಪರಿಹಾರ ಒದಗಿಸುವಂತೆ ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಸಂಸದೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯ ಸಂಸದರ ಸಭಾಂಗಣದಲ್ಲಿ ನಡೆದ ನೆರೆ ಹಾವಳಿ ಮತ್ತು ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಳೆಯಿಂದ ಉಂಟಾಗಿರುವ ಹಾನಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಅಧಿಕಾರಿಗಳೂ ದಿನದ ಇಪ್ಪತ್ತನಾಲ್ಕು ಘಂಟೆಯೂ ಸಾರ್ವಜನಿಕರ ಜೊತೆ ಸಂಪರ್ಕದಲ್ಲಿರಬೇಕು ಮತ್ತು ತುರ್ತು ಸಂಧರ್ಭದಲ್ಲಿ ಜನರ ನೆರವಿಗೆ ಧಾವಿಸಲು ಜಿಲ್ಲಾಧಿಕಾರಿ ಸಹಿತ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆ, ಅಗ್ನಿಶಾಮಕ ದಳದವರು ಮತ್ತು ಸಂಬಂಧಪಟ್ಟ ಎಲ್ಲಾ ಇಲಾಖೆಗಳೂ ಸರ್ವ ಸನ್ನದ್ಧರಾಗಿರಬೇಕು ಎಂದರು. ಜಿಲ್ಲೆಯಲ್ಲಿ ಮಳೆ ಮತ್ತು ನೆರೆಯಿಂದ ಹಾನಿಗೊಳಗಾದವರಿಗೆ ಮಾನವೀಯ ನೆಲೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾ ಕಾಂ ಸುದ್ದಿ. ಕುಂದಾಪುರ: ಪ್ರಗತಿಪರ ವೈರುದ್ಯಗಳ ನಡುವಿನಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ ರಾಜ್ಯಕ್ಕೆ ಪ್ರಥಮ ಹಾಗೂ ರಾಷ್ಟ್ರದಲ್ಲಿ ೨ನೇ ಸ್ಥಾನದಲ್ಲಿದ್ದೇವೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ಕೊಡವೂರು ರವಿರಾಜ ಹೆಗ್ಡೆಯವರು ತಿಳಿಸಿದರು. ಕುಂದಾಪುರ ರಾಮ ಮಂದಿರದ ಸಭಾ ಭವನದಲ್ಲಿ ನಡೆದ ಕುಂದಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿ ಈ ಹಿಂದಿನಂತೆ ವಿವಿಧ ತಾಂತ್ರಿಕ ಸೌಲಭ್ಯಗಳಿಗೆ ಅನುದಾನ ಮುಂದುವರಿಸಿದ್ದು ಇದಲ್ಲದೆ ರೈತ ಕಲ್ಯಾಣ ಟ್ರಸ್ಟ್ ಮೂಲಕ ಜಾನುವಾರು ಹಾಗೂ ಉತ್ಪಾದಕ ಸದಸ್ಯರು ಮರಣ ಹೊಂದಿದಾಗ, ಉತ್ಪಾದಕ ಸದಸ್ಯರು ಆಸ್ಪತ್ರೆಗೆ ದಾಖಲಾಗಿ ಆದ ವೆಚ್ಚದ ಬಾಬ್ತು ಆರ್ಥಿಕ ಸಹಾಯ ನೀಡುತ್ತಿದೆ ಅಲ್ಲದೆ ೧೦೦೦೦ ಜಾನುವಾರುಗಳನ್ನು ವಿಮೆಗೊಳಪಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷರು ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ವ್ಯವಸ್ಥಾಪನ ನಿರ್ದೇಶಕರಾದ ಡಾ. ಜಿ.ವಿ ಹೆಗ್ಡೆಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕರುಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಶ್ರೀ ಸಾಯಿ ಗ್ರಾಮೀಣಾಭಿವೃಧ್ಧಿ ಟ್ರಸ್ಟ್ (ರಿ) ಮುಳ್ಳಿಕಟ್ಟೆ ಇವರ ವತಿಯಿಂದ ಸಮಾಜದಲ್ಲಿ ಅಬಾಲರು ಮತ್ತು ವೃದ್ದರು ಯೋಗಕ್ಷೇಮ ಕಾರ್ಯಕ್ರಮದಡಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹೊಲಿಕ್ರಾಸ್ ಕಾನ್ವೆಂಟ್ ವೃದ್ದಾಶ್ರಮ ತ್ರಾಸಿ ಇಲ್ಲಿನ ವಯೋವೃದ್ದರ ಜೊತೆಗೆ ಕೇಕ್ ತಿನ್ನಿಸಿ ಅವರ ಜೊತೆ ಸಣ್ಣ ಸಣ್ಣ ಆಟೋಟಗಳನ್ನು ಏರ್ಪಡಿಸಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ನ ಚೆರ್ಮನ್ ಭಾಸ್ಕರ ಬಿಲ್ಲವ ಕೇಕ್ ತಿನ್ನಿಸಿ ಉದ್ಘಾಟಿಸಿದರು. ಮುಖ್ಯ ಅಥಿತಿಯಾಗಿ ಬೇಬಿ ಕೊಠಾರಿ ಕೆರ್ಗಾಲ್, ಹರೀಶ ಖಾರ್ವಿ ಉಪ್ಪುಂದ, ಕಾನ್ವೆಂಟ್ನ ಸಿಸ್ಟರ್ಸ್ ಮತ್ತು ವಿವಿಧ ಸ್ವ.ಸಹಾಯ ಸಂಘದ ಪದಾಧಿಕಾರಿಗಳಾದ ನಾಗರತ್ನ ಹೆಮ್ಮಾಡಿ, ಲಕ್ಷ್ಮಿ ಕಟ್ಬೇಲ್ತೂರು, ಪವಿತ್ರಾ, ಶೋಭಾ, ಸುಷನ್ಯ, ಸುವೀಷ ಕುಮಾರ, ಧನ್ಯ, ಮತ್ತು ಶ್ರೀ ಸಾಯಿ ಮಹಿಳಾ ಆರ್ಥಿಕ ಸೇವಾ ಸಹಕಾರ ಸಂಘದ ಸಿಬ್ಬಂದಿಗಳಾದ ರೇಖಾ, ಸಂತೋಷ ಮತ್ತು ಪ್ರತಿಭಾ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.09: ಜಿಲ್ಲಾದ್ಯಂತ ವಿಪರಿತ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಅಗಸ್ಟ್ 10ರ ಶನಿವಾರವೂ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ. ಒಟ್ಟು ಮೂರು ದಿನಗಳ ಕಾಲ ನಿರಂತರ ರಜೆ ನೀಡಿದಂತಾಗಿದೆ. ವಿಪರೀತ ಮಳೆ ಹಾಗೂ ಗಾಳಿಯ ಮುನ್ಸೂಚನೆ ಇರುವುದರಿಂದ ಮುಂದಿನ ಎರಡು ದಿನ ಸುಮಾರು 205ಮಿ.ಮಿ ಮಳೆಯಾಗುವ ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯೊಳಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ಭಕ್ತರು ನೀರಲ್ಲಿ ನಿಂತು ಪೂಜೆ ಸಲ್ಲಿಸಿದರು. ವರ್ಷಂಪ್ರತಿಯೂ ನೈಸರ್ಗಿಕ ನದಿ ನೀರಿನ ಅಭಿಷೇಕ ಇಲ್ಲಿ ಸಾಮಾನ್ಯಾವಾಗಿದ್ದು ಸುತ್ತಲೂ ಜಲಾವೃತವಾಗಿ ನೀರಿನ ಮಧ್ಯೆ ಕುಳಿತಿರುವ ದೇವಿಯನ್ನು ಕಣ್ತುಂಬಿಸಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವಳದ ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ದೇವಿಗೆ ಅರ್ಚಕರು ಆರತಿ ಬೆಳಗಿದರು. ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ಅಭಿಷೇಕವಾಗುತ್ತದೆ. ನೀರು ಬಂದ ಹಿನ್ನಲೆ ಭಕ್ತರು ನೀರಿನಲ್ಲೇ ತೆರಳಿ ದೇವಿಯ ದರ್ಶನ ಪಡೆದರು. ಬಳಿಕ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ತೆಪ್ಪೋತ್ಸವನ್ನು ನಡೆಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ. ವಾಡಿಕೆಯಂತೆ ಗರ್ಭಗುಡಿಗೆ ಬಂದ ನೀರು ಹರಿದು ಬಂದಿದ್ದು, ಇಲ್ಲಿ ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ನದಿ ನೀರಿನ ಅಭಿಷೇಕ ಸಾಮಾನ್ಯ. ನದಿ ನೀರು ಬಂದ ಹಿನ್ನಲೆಯಲ್ಲಿ ಭಕ್ತರು ಪುಳಕಗೊಂಡಿದ್ದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಚ್ಚಹಸಿರಿನ ಕಾಡಿನ ಮಧ್ಯಭಾಗದಲ್ಲಿರುವ ಕಮಲಶಿಲೆ ಇದೆ. ಅರಣ್ಯದ ತಪ್ಪಲಿನಲ್ಲಿ ಪವಿತ್ರವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.06: ಜಿಲ್ಲಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 7ರ ಬುಧವಾರ ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಅಗಸ್ಟ್ 7 ರಿಂದ 9ರ ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 72 ಗಂಟೆಗಳಲ್ಲಿ ಸುಮಾರು 205ಮಿ.ಮಿ ಮಳೆಯಾಗುವ ಹಾಗೂ ಭಾರಿ ಗಾಳಿ ಬೀಸುವ ಸಂಭವ ಇರುವ ಬಗ್ಗೆ ಮನ್ಸೂಚನೆಯನ್ನು ಹವಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅವರು ರಜೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ ಶಾಲೆ, ಪೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ, ಹಾಗೂ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನಾಗನಿಗೆ ಹಾಲು, ಏಳನೀರು, ಕೇದಿಗೆ ಹೂವನ್ನು ಸಮರ್ಪಿಸಿ ಪುನೀತರಾದರು. ತಾಲೂಕಿನ ಪ್ರಸಿದ್ಧ ದೇವಾಲಯವಾದ ಗುಡ್ಡಮ್ಮಾಡಿ, ಕಾಳಾವರ, ಉಳ್ಳೂರು ಕಾರ್ತಿಕೇಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾವಿಧಿಗಳು ನೆರವೇರಿದರು. ಸೇನಾಪುರ ಗ್ರಾಮದ ಗುಡ್ಡಾಮ್ಮಾಡಿಯಲ್ಲಿ ಹಾಲುಹಿಟ್ಟು ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಿತು. ಭಟ್ಕಳ, ಬೈಂದೂರು, ಕುಂದಾಪುರದಿಂದ ನೂರಾರು ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಭಕ್ತಾದಿಗಳಿಗೆ ನೈವೇದ್ಯದ ಪ್ರಸಾದ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಕುಂದಾಪ್ರ ಡಾಟ್ ಕಾಂ. ಬೈಂದೂರಿನ ಸೋಮೇಶ್ವರದಲ್ಲಿನ ದೇವಸ್ಥಾನದಲ್ಲಿನ ನಾಗಬನ, ಕುಂದಾಪುರದ ಭಟ್ರಹಾಡಿಯ ನಾಗಬನ, ರೋಯಲ್ ಸಭಾಭವನದ ಬಳಿಯ ನಾಗಬನ ಸೇರಿದಂತೆ ಎಲ್ಲಾ ನಾಗಬನದಲ್ಲಿಯೂ ನಾಗನಿಗೆ ವಿಶೇಷಪೂಜೆ ಸಲ್ಲಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ, ಬೈಂದೂರು ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೆರವೇರಿತು. ವಿವಿಧ ಭಾಗಗಳಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ನಸುಕಿನಲ್ಲಿಯೇ ದೇಗುಲಕ್ಕೆ ಬಂದು ಸಮುದ್ರ ಹಾಗೂ ಸೌರ್ಪಣಿಕಾ ನದಿಯಲ್ಲಿ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಹರಕೆಗಳನ್ನು ಸಲ್ಲಿಸಿದರು. ಭೂಮಾತೆಯನ್ನು ದುಷ್ಟ ರಕ್ಕಸರಿಂದ ರಕ್ಷಿಸಿದ ಶ್ರೀ ವರಾಹ ಸ್ವಾಮಿಯು ಲೋಕಕ್ಕೆ ಕಲ್ಯಾಣ ವನ್ನು ಉಂಟುಮಾಡಿ ಸಕಲ ಜೀವರಾಶಿಗಳನ್ನು ಕಾಯುವವನು. ಆದರಿಂದ ಸಂಪ್ರದಾಯದಂತೆ ವಿವಾಹಿತ ನವಜೋಡಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು. ಶ್ರೀ ದೇವರು ಪ್ರಕೃತಿ ವಿಕೋಪದಿಂದ ಹಾಗೂ ಕಷ್ಟಕಾರ್ಪಣಗಳಿಂದ ರಕ್ಷಿಸಿ ಪೊರೆಯುವ ಮಹಿಮಾ ನ್ವಿತನೂ, ಅಭಯದಾತನೂ ಆಗಿ ಭಕ್ತ ಕೋಟಿ ಜನರನ್ನು ಕಾಯುತ್ತಿರುವ ದೇವರಲ್ಲಿ ಕರಾವಳಿಯ ಭಾಗದ ಮೀನುಗಾರರು ಮೀನುಗಾರಿಕೆಯಲ್ಲಿ ಸಮೃದ್ಧಿಯನ್ನು ಕರುಣಿಸು ಎಂದು ಪ್ರಾರ್ಥನೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿಯ ಚುರುಕುತನ ಹಾಗೂ ಪಶ್ಚಿಮ ಘಟ್ಟ ಭಾಗದ ನಯವಂತಿಕೆ ಕುಂದಾಪ್ರ ಕನ್ನಡಿಗರಲ್ಲಿ ಬೆರೆತಿದ್ದು ವಿಶ್ವದಾದ್ಯಂತ ಉದ್ಯಮ ಹಾಗೂ ಕಲಾ ಜಗತ್ತಿನ ಮೂಲಕ ಹೆಸರು ಮಾಡಲು ಸಾಧ್ಯವಾಗಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇಲ್ಲಿನ ಹೋಟೆಲ್ ಅಂಬಿಕಾ ಇಂಟರ್ನ್ಯಾಶನಲ್ನ ಶಾರದಾ ಕನ್ವೆನ್ಷನ್ ಹಾಲ್ನಲ್ಲಿ ಗುರುವಾರ ಜರುಗಿದ ಹ್ವಾಯ್ ಬನಿ ಕೂಕಣಿ ಸ್ನೇಹ ಸಮ್ಮಿಲನ – 2019ನ್ನು ಉದ್ಘಾಟಿಸಿ ಮಾತನಾಡಿದರು. ಭಾಷೆಯ ಕಾರಣದಿಂದಾಗಿ ವಿಶ್ವದ ಎಲ್ಲಿಗೇ ಹೋದರು ಅವಿಭಜಿತ ಕುಂದಾಪುರದವರನ್ನು ಗುರುತಿಸುತ್ತಾರೆ. ಇಲ್ಲಿನ ಹತ್ತಾರು ಸಾಧಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ. ಕುಂದಾಪುರ ಕ್ಷೇತ್ರದಂತೆಯೇ ಬೈಂದೂರು ಕ್ಷೇತ್ರವೂ ಮೂಲಭೂತ ಸೌಕರ್ಯಗಳನ್ನು ಹೊಂದುವುದಲ್ಲದೇ ಎಲ್ಲಾ ಆಯಾಮಗಳಲ್ಲಿಯೂ ಪ್ರಗತಿ ಸಾಧಿಸಬೇಕಿದೆ. ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದವರು ಭರವಸೆಯಿತ್ತರು. ಗಲ್ಫ್ ನಮ್ಮ ಕುಂದಾಪ್ರ ಕನ್ನಡ ಬಳಗದ ಅಧ್ಯಕ್ಷ ಸಾದನ್ ದಾಸ್ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದನಾಡಿನ ಜೀವನ ಸಂಸ್ಕೃತಿಯ ಪ್ರತೀಕವಾಗಿಹ ನೆಲಪರ – ಜೀವಪರವಾದ ಕುಂದಾಪ್ರ ಕನ್ನಡದ ಭಾಷಾ ಪರಂಪರೆಯು, ಆಧುನಿಕತೆಯ ನಾಗಾಲೋಟದಲ್ಲಿ ತನ್ನ ಮೂಲ ಸೊಗಡನ್ನು ಕಳಚಿಕೊಳ್ಳುತ್ತಿರುವುದು ದುರಂತ. ಯಥೇಚ್ಚ ಬಳಕೆಯೊಂದಿಗೆ ಪದಗುಚ್ಚಗಳ ಸಂಗ್ರಹಕಾರ್ಯ ನಡೆದಾಗಲೇ ಕುಂದಾಪ್ರ ಕನ್ನಡ ಬರಡಾಗದೇ ಸದಾ ಫಲವತ್ತಾಗಿರಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿ ಎ. ಎಸ್. ಎನ್ ಹೆಬ್ಬಾರ್ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ನಡೆದ ’ವಿಶ್ವ ಕುಂದಾಪ್ರ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಮ್. ಸುಕುಮಾರ ಶೆಟ್ಟಿ ಮಾತನಾಡಿ .ಪ್ರಕೃತಿ ಸಹಜವಾಗಿಯೇ ಗಡಸುತನ – ಚುರುಕುತನವನ್ನು ತನ್ನೊಳಗೆ ಆಲಂಗಿಸಿಕೊಂಡಿರುವ ಕುಂದಾಪ್ರ ಕನ್ನಡವು ಆಡಂಬರರಹಿತವಾದ ಹೃದಯಾಂತರಾಳದ ಭಾಷೆ ಎಂದರು. ಕಾಲೇಜು ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಶುಭಶಂಸನೆ ಗೈದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ…
