ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಅಧ್ಯಕ್ಷರ ಮನೆಗಳಲ್ಲಿಯೂ ಬಿಜೆಪಿ ಬಾವುಟ ಧ್ವಜಾರೋಹಣ ಮಾಡಲಾಯಿತು. ವಿವಿಧ ಬೂತ್ ಅಧ್ಯಕ್ಷರ ಮನೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸೇರಿದಂತೆ ಬಿಜೆಪಿಯ ವಿವಿಧ ನಾಯಕರು ಭಾಗವಹಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರಾವಳಿ ವಾರಿಯರ್ಸ್ ಬೇಲಿಕೇರಿ ಬಂದರ್ ಗಂಗೊಳ್ಳಿ ಇದರ 7ನೇ ವಾರ್ಷಿಕೋತ್ಸವದ ಅಂಗವಾಗಿ ಬಡ ಮಕ್ಕಳ ವಿದ್ಯಾಭ್ಯಾಸದ ಸಹಾಯಾರ್ಥವಾಗಿ ಗಂಗೊಳ್ಳಿಯ ಕೆಎಫ್ಡಿಸಿ ವಠಾರದಲ್ಲಿ ಜರಗಿದ ಬೈಂದೂರು ವಲಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ನ್ಯೂ ಫ್ರೆಂಡ್ಸ್ ಗಂಗೊಳ್ಳಿ ತಂಡ ಪ್ರಥಮ ಸ್ಥಾನಿಯಾಗಿ ಕರಾವಳಿ ವಾರಿಯರ್ಸ್ ಟ್ರೋಫಿ-2021ಮತ್ತು 15 ಸಾವಿರ ರೂ. ನಗದನ್ನು ತನ್ನದಾಗಿಸಿಕೊಂಡಿತು. ಬೆಳಗಿನ ಜಾವ ನಡೆದ ಅಂತಿಮ ಹಣಾಹಣಿಯಲ್ಲಿ ನ್ಯೂ ಫ್ರೆಂಡ್ಸ್ ಗಂಗೊಳ್ಳಿ ತಂಡ ಕೋಸ್ಟಲ್ ಸ್ಟ್ರೈಕರ್ ಗಂಗೊಳ್ಳಿ ತಂಡವನ್ನು ಸೋಲಿಸಿತು. ಬಿ.ಕೆ.ಬಾಯ್ಸ್ ಗಂಗೊಳ್ಳಿ ತಂಡ ತೃತೀಯ ಸ್ಥಾನಿಯಾಯಿತು. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದ ಅತಿಥಿಗಳಾಗಿದ್ದ ಗಂಗೊಳ್ಳಿಯ ಮತ್ಸ್ಯೋದ್ಯಮಿ ಹರೀಶ ಕುಮಾರ್, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕ ಗುರುರಾಜ್ ಖಾರ್ವಿ ಮತ್ತು ಗಣೇಶ ಪೂಜಾರಿ ಬೇಲಿಕೇರಿ ಬಹುಮಾನ ವಿತರಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸುಮಂತ ಖಾರ್ವಿ ಉಪಸ್ಥಿತರಿದ್ದರು. ಇದೇ ಸಂದರ್ಭ ಐದು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ವಿತರಿಸಲಾಯಿತು. ಉದ್ಘಾಟನೆ: ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಆಶ್ರಯದಲ್ಲಿ ಗುರಿಕಾರರ ಸಮಾವೇಶ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾದ ಹೋಬಳಿ ವ್ಯಾಪ್ತಿಯ ಮೊಗವೀರ ಸಮಾಜದ ಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಇಲ್ಲಿನ ಶ್ರೀಮಹಿಷಾಸುರಮರ್ದಿನಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಉದ್ಘಾಟಿಸಿ, ಮೊಗವೀರರೆಲ್ಲರೂ ಒಂದಾಗಬೇಕು. ಉಪ್ಪಳದಿಂದ ಶಿರೂರು ತನಕದ ಎಲ್ಲ ಮೊಗವೀರರನ್ನು ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ ಸಮಾಜ ಇನ್ನೂ ಮುಂದೆ ಬರಬೇಕು. ಆ ಹಿನ್ನೆಲೆಯಲ್ಲಿ ಸಮಾಜದ ಧಾರ್ಮಿಕ ಸ್ಥಳಗಳ ಜೀರ್ಣೋದ್ದಾರದ ಬಳಿಕ ಎಲ್ಲ ಸಮಾಜದವರು ನಮ್ಮ ಸಮಾಜವನ್ನು ನೋಡುವಂತಾಗಿದೆ. ಗುರಿಕಾರರು ಕೂಡಾ ಅಷ್ಟೆ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ, ಶುಭ ಅಶುಭ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಪ್ರದಾಯವನ್ನು ಮುಂದುವರಿಸುವುದು, ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕಾರ್ಯ ಮಾಡಬೇಕಿದೆ ಎಂದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷ ಕೆ.ಕೆ ಕಾಂಚನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸ್ನೇಹ, ಪ್ರೀತಿ, ವಿಶ್ವಾಸ, ಬಾಂಧವ್ಯ ಬೆಳೆಯುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಎರಡನ್ನು ಸಮವಾಗಿ ಸ್ವೀಕರಿಸಬೇಕು. ವ್ಯವಸ್ಥಿತವಾಗಿ ಕ್ರೀಡಾ ಸ್ಪರ್ಧೆಯನ್ನು ಸಂಘಟಿಸಿದ ಕೋಟೇಶ್ವರ ಗಾಣಿಗ ಯುವ ಸಂಘಟನೆಗೆ ಅಭಿನಂದನೆಗಳು ಎಂದು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ಹೇಳಿದರು. ಅವರು ಕೋಟೇಶ್ವರ ಗಾಣಿಗ ಯುವ ಸಂಘಟನೆ ದಶಮಾನೋತ್ಸವದ ಪ್ರಯುಕ್ತ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಗಾಣಿಗ ಸಮಾಜ ಬಾಂಧವರಿಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾದ ವಿವಿಧ ಕ್ರೀಡಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೋಟೇಶ್ವರ ಗಾಣಿಗ ಯುವ ಸಂಘಟನೆಯ ಅಧ್ಯಕ್ಷ ಅಭಿಲಾಷ್ ಬಿ.ಎ ವಹಿಸಿದ್ದರು. ಕ್ರೀಡಾ ಸ್ಪರ್ಧೆಗಳಾದ ಕಪ್ಪೆ ಜಿಗಿತ, ಚೆಂಡೆಸೆತ, ಬಕೆಟ್ ಬಾಲ್, ಓಟ, ಗುಂಡೆಸೆತ, ಮಡಿಕೆ ಒಡೆಯುವುದು, ಹಗ್ಗಜಗ್ಗಾಟ, ಥೋಬಾಲ್, ವಾಲಿಬಾಲ್, ಕ್ರಿಕೆಟ್ ಪಂದ್ಯಾಟ ನಡೆಯಿತು. ಕ್ರೀಡಾಕೂಟದ ಯಶಸ್ವಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ರತ್ನಾಕರ ಶೆಟ್ಟಿ, ಸುನೀಲ್, ಕೇಶುಬಾಯಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶಿಕ್ಷಣ ಸಂಸ್ಥೆಗಳು ಬುದ್ಧಿವಂತರನ್ನು ತಯಾರು ಮಾಡಬಹುದು. ಪ್ರಪಂಚದಲ್ಲಿ ಬುದ್ದಿವಂತರು ಅನೇಕರಿರಬಹುದು. ಆದರೆ ನಮಗೆ ಹೃದಯವಂತರು ಬೇಕು. ರಂಗ ಚಟುವಟಿಕೆಯಿಂದ ಹೃದಯ ಅರಳುತ್ತದೆ ಎಂದು ಕನ್ನಡ ಪ್ರಾಧ್ಯಾಪಕ ಸುಜಯೀಂದ್ರ ಹಂದೆ ಹೇಳಿದರು. ಅವರು ಸೋಮವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾದರು. ಚಿತ್ರಕಲಾವಿದ ಎಂ. ಎಲ್. ಸೋಮವಾರದ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ. ಬಾಬು ಶೆಟ್ಟಿ, ಸುರೇಶ್ ಬಟವಾಡಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀಧರ್ ಭಟ್, ಶ್ರೀ ಸಿದ್ದೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಮಹಾಲಿಂಗ ನಾಯ್ಕ್, ವಲಯ ಅರಣ್ಯಾಧಿಕಾರಿ ಶ್ರೀಧರ್ ಪಿ., ಬೈಂದೂರು ಜೆಸಿಐ ಅಧ್ಯಕ್ಷ ಶ್ರೀಧರ ಆಚಾರ್, ಬೈಂದೂರು ಡಾ| ಬಿ. ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಲಕ್ಷ್ಮಣ ಯಡ್ತರೆ, ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು. ಸುರಭಿ ರಿ. ಬೈಂದೂರು ಅಧ್ಯಕ್ಷ ನಾಗರಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜರಗಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಬಾಲಕರ ತಂಡ ಟೆನ್ನಿಕಾಯ್ಟ್ ಮತ್ತು ಬಾಲ್ ಬ್ಯಾಡ್ಮಿಂಟನ್ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಬಾಲಕಿಯರು ಟೆನ್ನಿಕಾಯ್ಟ್ ನಲ್ಲಿ ಪ್ರಥಮ ಸ್ಥಾನ ಗಳಿಸುವ ಮುಖೇನ ಸರಸ್ವತಿ ವಿದ್ಯಾಲಯ ಅಗ್ರ ಸ್ಥಾನವನ್ನು ಪಡೆದಿದೆ. ಬಾಲಕರ ಮತ್ತು ಬಾಲಕಿಯರ ಟೆನಿಕಾಯ್ಟ್ ನಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ಬಾಲ್ ಬ್ಯಾಡ್ಮಿಂಟನಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನಗಳಿಸಿದರು. ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದರೆ ಕೊಲ್ಲೂರಿನ ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕುಂದಾಪುರ ವಲಯದಿಂದ ಹೆಂಗವಳ್ಳಿಯ ಕೊಡಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ, ಗ್ರಾಮ ಪಂಚಾಯತ್ನ ಅಧ್ಯಕ್ಷ ರಘುರಾಮ ಶೆಟ್ಟಿ, ಸ್ಥಳಿಯ ದಾನಿಗಳಾದ ವಿಜಯ್ ಕುಮಾರ್ ಶೆಟ್ಟಿ, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಾಜಾ ಮಠದ ಬೆಟ್ಟು, ಎಸ್.ಕೆ.ಪಿ.ಎ ದಕ್ಷಿಣ ಕನ್ನಡ ಉಡುಪಿ ಇದರ ಉಪಾಧ್ಯಕ್ಷ ನಾಗರಾಜ್ ರಾಯಪ್ಪನ ಮಠ, ಸಂಸ್ಥೆಯ ಉಪಾಧ್ಯಕ್ಷ ಸುರೇಶ್ ಜಮದಗ್ನಿ, ಕಾರ್ಯದರ್ಶಿ ಅಮೃತ್ ಬೀಜಾಡಿ, ಸಲಹಾ ಸಮಿತಿಯ ಅಧ್ಯಕ್ಷ ಗಿರೀಶ್ ಜಿ ಕೆ, ಮಾಜಿ ಅಧ್ಯಕ್ಷ ಪ್ರಮೋದ್ ಚಂದನ್, ಮಾಜಿ ಉಪಾಧ್ಯಕ್ಷ ಸುಧೀರ್ ಬಿದ್ಕಲ್ ಕಟ್ಟೆ, ಜೊತೆ ಕಾರ್ಯದರ್ಶಿ ಸುರೇಶ್ ಮೊಳಹಳ್ಳಿ, ಸದಸ್ಯರಾದ ರಮೇಶ್ ಹೆಂಗವಳ್ಳಿ, ಮಧುಕರ, ರಮೇಶ್ ಶಂಕರನಾರಾಯಣ, ಪ್ರಕಾಶ್ ಹೆಗ್ಡೆ, ಸಂತೋಷ್, ಕಿರಣ್ ಮೆಂಡನ್ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕಿ ರಮಿತಾ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಲು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಚಿಸಲಾಗಿರುವ ಕೋವಿಡ್ ನಿಯಂತ್ರಣ ಕುರಿತ ಕಾರ್ಯಪಡೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಕಾರ್ಯಪಡೆಗಳು ಶೀಘ್ರದಲ್ಲಿ ಸಭೆಗಳನ್ನು ನಡೆಸಿ ತಮ್ಮ ವ್ಯಾಪ್ತಿಯಲ್ಲಿನ 45 ವರ್ಷ ಮೇಲ್ಪಟ್ಟ ನಾಗರೀಕರನ್ನು ಗುರುತಿಸಿ ಅವರು ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಸೂಚಿಸಿದರು. ಶಿಕ್ಷಣ ಇಲಾಖೆಯಲ್ಲಿ 45 ವರ್ಷ ಮೇಲ್ಪಟ್ಟ ಹಲವು ಶಿಕ್ಷಕರಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳು ಸೇರಿದಂತೆ ಎಲ್ಲಾ ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾರ್ಚ್ 31ರಿಂದ ಎಪ್ರಿಲ್ 4ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಸಂಸ್ಥೆ ಆಯೋಜಿಸಿದ ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್ನ ವಿದ್ಯಾರ್ಥಿ ಗಳಾದ ನಿಶಾಂತ್ ಡಿಸೋಜಾ ಹಂಗಳೂರು, ಮನನ್ ಶೆಟ್ಟಿ ಕೋಟೇಶ್ವರ, ಸನಾ ಶೆಟ್ಟಿ ಕೋಟೇಶ್ವರ, ಧನ್ವಿ ಪೈ ಕುಂದಾಪುರ ಹಾಗೂ ದಾವಣಗೆರೆಯ ನಿಶ್ಚಲ್.ಜಿ.ಎಸ್ ಭಾಗವಹಿಸಿದ್ದರು. ನಿಶಾಂತ್ ಡಿಸೋಜಾ ತಮ್ಮ ರೇಟಿಂಗ್ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆದು ಇದರೊಂದಿಗೆ ಫಿಡೆ ರೇಟಿಂಗ್ ಅನ್ನು 30.8 ಹೆಚ್ಚಿಸಿಕೊಂಡರು, ಸನಾ ಶೆಟ್ಟಿ ವಯೋಮಾನದ(U 9)ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು. ಇತರ ಆಟಗಾರರು ಶ್ರೇಯಾಂಕಿತ ಆಟಗಾರರನ್ನು ಮಣಿಸುವುದರ ಮೂಲಕ ಉತ್ತಮ ಪ್ರದರ್ಶನ ನೀಡಿದರು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಶ್ವಿ ಚೆಸ್ ಸ್ಕೂಲ್ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆರೋಗ್ಯ ಇಲಾಖೆಯ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಕೊಡಮಾಡಿದ ರಾಜ್ಯಮಟ್ಟದ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಗೆ ಕುಂದಾಪುರ ಉಪ ವಿಭಾಗೀಯ ಮಟ್ಟದ ತಾಲೂಕು ಆಸ್ಪತ್ರೆಯ ಪ್ರಯೋಗಶಾಲಾ ತಂತ್ರಜ್ಞೆ ಸ್ವರ್ಣಲತಾ ಅವರು ಪಡೆದುಕೊಂಡಿದ್ದಾರೆ.
