ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ವರುಣತೀರ್ಥ ಕೆರೆ ಸಮೀಪ ಕೋಟದ ಪಂಚವರ್ಣ ಯುವಕ ಮಂಡಲದ 23ನೇ ವರ್ಷದ ಕನ್ನಡ ರಾಜ್ಯೋತ್ಸವ ಸದ್ಭಾವನಾ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕನ್ನಡದ ಶಬ್ಧಕೋಶ ಶುದ್ಧವಾಗಿ ಉಳಿಯಲು ಯಕ್ಷಗಾನವೇ ಮೂಲ ಕಾರಣ ಬೆಂಗಳೂರಿನಂತಹ ನಗರದಲ್ಲಿ ಶೇ60ರಷ್ಟು ಹೊರಭಾಷಿಗರು ಇದ್ದರೂ, ಕನ್ನಡವನ್ನು ನಮ್ಮ ಕಲೆ, ಸಂಸ್ಕೃತಿ, ಯಕ್ಷಗಾನದಂತಹ ಕಲೆಗಳು ಉಳಿಸಿವೆ ಎಂದು ಹೇಳಿದರಲ್ಲದೆ ಸ್ಥಳೀಯವಾಗಿ ಭಾಗದಲ್ಲಿ ಕನ್ನಡಪರ ಕಾರ್ಯಕ್ರಮಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಪರಿಸರ ಕಾಳಜಿ,ಸ್ವಚ್ಛತಾ ಕಾರ್ಯ,ರೈತರನ್ನು ಗುರುತಿಸುವ ವಿಭಿನ್ನ ರೀತಿಯ ಕಾರ್ಯಕ್ರಮಗಳಿಂದ ಮನೆಮಾತಾಗಿ ಬೆಳೆದ ಸಂಸ್ಥೆ ಪಂಚವರ್ಣ ಯುವಕರ ಪಡೆಯ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು ಕೆರೆಗಳ ಅಭಿವೃದ್ಧಿಗೆ ಅನುದಾನ: ಸರ್ಕಾರ ಈ ಬಾರಿ ಕೆರೆಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಹಾಕಿಕೊಂಡಿದೆ. ರೂ25ಲಕ್ಷವನ್ನು ಕೆರೆಗಳ ಸರ್ವೇ ಮಾಡಲು ಅನುದಾನ ನೀಡಿದೆ. ಸುಮಾರು 200ಕೋಟಿ ಯೋಜನೆಯಲ್ಲಿ ಬಾರ್ಕೂರಿನ ಚೌಳಿಕೆರೆ, ಕೋಟದ ವರುಣತೀರ್ಥ ಸೇರಿದಂತೆ ೨೫ಕೆರೆಗಳನ್ನು ಅಭಿವೃದ್ಧಿ ಪಡಿಸಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಂಡ್ಸೆ ಮಹಿಳೆಯರ ಮೇಲೆ ನಡೆದ ದೌರ್ಜನ್ಯಕ್ಕೆ ಈ ಸರಣಿ ಹೋರಾಟ ಸೀಮಿತವಾಗುವುದಿಲ್ಲ. ಇವರದೇ ಪಕ್ಷದ ಪ್ರಧಾನಿ ಆತ್ಮನಿರ್ಭರ ಭಾರತ ಎಂದು ಹೇಳುತ್ತಿದ್ದರೆ, ಕ್ಷೇತ್ರದ ಶಾಸಕರು ಮಾತ್ರ ಸ್ವಾವಲಂಭಿಗಳ ಬದುಕನ್ನು ಬರ್ಬರಗೊಳಿಸಲು ಹೊರಟಿದ್ದಾರೆ. ಅಧಿಕಾರಿಗಳನ್ನು ಹೆದರಿಸಿ ಅವರ ಮೂಲಕ ನಡೆಸುತ್ತಿರುವ ಎಲ್ಲ ವಿಧದ ದಬ್ಬಾಳಿಕೆ ಮತ್ತು ದೌರ್ಜನ್ಯದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಎಚ್ಚರಿಸಿದರು. ಕುಂದಾಪುರ ತಾಲ್ಲೂಕು ಪಂಚಾಯತ್ ರಾಜ್ ಒಕ್ಕೂಟ ಮತ್ತು ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೈಂದೂರಿನಲ್ಲಿ ಶುಕ್ರವಾರ ನಡೆದ ಧರಣಿಯಲ್ಲಿ ಅವರು ಮಾತನಾಡಿದರು. ವಂಡ್ಸೆ ಮಹಿಳಾ ಸ್ವಾವಲಂಬನಾ ಹೊಲಿಗೆ ವೃತ್ತಿ ಮತ್ತು ತರಬೇತಿ ಕೇಂದ್ರವನ್ನು ಕಾನೂನಿನ ಹದ್ದುಮೀರಿ ತೆರವುಗೊಳಿಸಿರುವುದರ ವಿರುದ್ಧದ ಹೋರಾಟದಲ್ಲಿ ನ್ಯಾಯಾಂಗದಿಂದ ಭಾಗಶ: ನ್ಯಾಯ ಸಿಕ್ಕಿದ ಕಾರಣ ಸರಣಿ ಧರಣಿ ಸತ್ಯಾಗ್ರಹ ಅಂತ್ಯಗೊಳ್ಳಲಿದೆ. ಆದರೆ ಸಂಪೂರ್ಣ ನ್ಯಾಯ ಸಿಗುವ ವರೆಗೆ ಹೋರಾಟ ಮುಂದುವರಿಯಲಿದ್ದು ಅಗತ್ಯವೆನಿಸಿದರೆ ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು ಎಂದು ಅವರು ಹೇಳಿದರು. ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆರೋಗ್ಯ ವಿಜ್ಞಾನಗಳ ವೈದ್ಯ ಲೇಖಕಿಯಾಗಿ ಕನ್ನಡ ಸಾಹಿತ್ಯ ಹಾಗೂ ಆರೋಗ್ಯಕ್ಷೇತ್ರಕ್ಕೆ ಕೊಡುಗೆ ನೀಡಿರುವ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಧ್ಯಾಪಕಿ ಡಾ. ವೃಂದಾ ಬೇಡೆಕರ್ ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್ ನಾಗಭರಣ ಅವರು ಡಾ. ವೃಂದಾ ಬೇಡೆಕರ್ ಅವರನ್ನು ಸನ್ಮಾನಿಸಿದರು. ವೃಂದಾ ಅವರು ಆಳ್ವಾಸ್ ಪಿಯು ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸ ಯೋಗೀಶ್ ಬೇಡೆಜರ್ ಅವರ ಪತ್ನಿ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭರತ್ ಶೆಟ್ಟಿ ಇವರು ಈಚೆಗೆ ದಾವಣಗೆರೆಯಲ್ಲಿ ನಡೆದ ಗ್ರಾಮ ಲೆಕ್ಕಿಗರ ರಾಜ್ಯ ಸಮಾವೇಶದಲ್ಲಿ ರಾಜ್ಯ ಗ್ರಾಮ ಲೆಕ್ಕಿಗರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಉಡುಪಿ ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವ ಇವರನ್ನು ಈ ಸಮಾವೇಶದಲ್ಲಿ ಗೌರವಿಸಲಾಯಿತು. ರಾಜ್ಯ ಸಂಘಟನೆಯ ಅಧ್ಯಕ್ಷ ಬಿ. ದೊಡ್ಡಬಸಪ್ಪ ರೆಡ್ಡಿ, ಗೌರವಾಧ್ಯಕ್ಷ ಚಂದ್ರಶೇಖರ ಉಟಕೂರು, ಉಪಾಧ್ಯಕ್ಷರಾದ ಗುರುಮೂರ್ತಿ ಎಸ್. ಸಿ, ಮುರಳಿಧರ್, ರಮೇಶ್, ಶೈಲಜಾ ಕೆ. ಎಸ್, ಪ್ರಧಾನ ಕಾರ್ಯದರ್ಶಿ ನಾಗೇಶ್ ಹಾಗೂ ಖಜಾಂಜಿ ಎ. ಎಂ. ಲೋಹಿತ್ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಪತಿ ಹೆಗಡೆ ಹಕ್ಲಾಡಿ ಅವರ ಹಕ್ಲಾಡಿ ಗ್ರಾಮ ಸಂತೆಗದ್ದೆ ಫ್ರೆಂಡ್ಸ್ ಮನೆಗೆ ಭೇಟಿ ನೀಡಿ ಗೌರವಿಸಿದರು. ಫ್ರೆಂಡ್ಸ್ ಗೌರವಾಧ್ಯಕ್ಷ ಲಕ್ಷ್ಮೀನಾರಾಯಣ ಹೆಬ್ಬಾರ್ ಹಾಗೂ ರತ್ತಯ್ಯ ಆಚಾರ್ಯ ಗೌರವಿಸಿದರು. ಪದಾಧಿಕಾರಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ನಾಯ್ಕ್, ಪ್ರಕಾಶ್ ಆಚಾರ್ಯ, ಲೋಕೇಶ್ ಮೂಜಾರಿ, ಚಂದ್ರ ಪೂಜಾರಿ, ನಾಗೇಂದ್ರ ಆಚಾರ್ಯ, ರವಿ ಪೂಜಾರಿ, ರಾಜು ಪೂಜಾರಿ, ಸುಭಾಷ್ ಪೂಜಾರಿ ಸಂದೀಪ ಪೂಜಾರಿ ಮುಂತಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಚಿತ್ತೂರು ಗ್ರಾಮ ಪಂಚಾಯತ್ ಸಮೀಪ ರಸ್ತೆ ಅಪಘಾತ ಸಂಭವಿಸಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ತೂರು ಶಂಕರ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಸಾರ್ವಜನಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿರುವ ಶಂಕರ ಶೆಟ್ಟಿಯವರು ಚಿತ್ತೂರು ಗಣೇಶೋತ್ಸವ ಸಮಿತಿ, ಚಿತ್ತೂರು ಪ್ರೌಢಶಾಲಾ ಮೇಲುಸ್ತುವಾರಿ ಸಮಿತಿಯಲ್ಲಿ ಈ ಹಿಂದೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ ಅತ್ಯುತ್ತಮ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮ ಸಂಸ್ಥೆಗಳಿಂದ ರಾಷ್ಟ್ರಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರಶಸ್ತಿಯನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ನೀಡಲಾಗುತ್ತಿದ್ದು, ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋ ಮತ್ತು ಆನ್ಲೈನ್ (ಇಂಟರ್ನೆಟ್)/ಸೋಷಿಯಲ್ ಮೀಡಿಯಾ ಸಂಸ್ಥೆಗಳು “National Media Award-2020” ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮಾಧ್ಯಮ ಸಂಸ್ಥೆಗಳು ಭಾರತ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಭಾರತ ಚುನಾವಣಾ ಆಯೋಗದ ವೆಬ್ಸೈಟ್ media.election.eci@gmail.com ಅಥವಾ ದೂರವಾಣಿ ಸಂಖ್ಯೆ:011-23052133 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24ವರ್ಷದ ಒಳಗಿನ ಅಭ್ಯರ್ಥಿಗಳಿಂದ ಪ್ರಸಕ್ತ ಸಾಲಿನ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಅಕಾಡೆಮಿಯಲ್ಲಿ ಹಾಗೂ ಅಕಾಡೆಮಿಯ ವೆಬ್ಸೈಟ್ https://karnatakasangeetanrityaacademy.com ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30 ರ ಒಳಗೆ ರಿಜಿಸ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸುವಂತೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎನ್ಪಿಸಿಡಿಸಿಎಸ್/ಎನ್ಪಿಹೆಚ್ಸಿಇ ಕಾರ್ಯಕ್ರಮದಡಿ ಜಿಲ್ಲಾ ಪ್ರೋಗ್ರಾಮ್ ಕೋ ಆರ್ಡಿನೇಟರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ನವೆಂಬರ್ 9 ರಂದು ಬೆಳಗ್ಗೆ 10 ಘಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ಆಥವಾ ಬಿ.ಎ.ಎಮ್.ಎಸ್ / ಬಿ.ಡಿ.ಎಸ್ ನೊಂದಿಗೆ ಮಾಸ್ಟರ್ ಇನ್ ಪಬ್ಲಿಕ್ ಹೆಲ್ತ್ ಹಾಗೂ ಕಂಪ್ಯೂಟರ್ನಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳು ಸ್ವ -ವಿವರ, ವಿದ್ಯಾರ್ಹತೆ, ಸೇವಾನುಭವದ ಮೂಲ ಮತ್ತು ನಕಲು ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಎನ್.ಸಿ.ಡಿ ಘಟಕದ ಜಿಲ್ಲಾ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸುರಭಿ ಸಂಸ್ಥೆಯಿಂದ ತೇಜಸ್ವಿಯವರ ಕೃತಿಗಳಲ್ಲಿ ’ಪರಿಸರ ಮತ್ತು ಬದುಕು’ಎಂಬ ವಿಷಯದ ಕುರಿತು ಆನ್ಲೈನ್ ಸ್ಷರ್ಧೆಯನ್ನು (ವಿಮರ್ಶಾತ್ಮಕ ಅನಿಸಿಕೆ ಪ್ರಸ್ತುತಿ ) ಎರ್ಪಡಿಸಲಾಗಿದೆ . ಸ್ಪರ್ಧೆಯಲ್ಲಿ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಸಂಕ್ಷಿಪ್ತ ಸ್ವ-ಪರಿಚಯದೊಂದಿಗೆ 5 ರಿಂದ 6 ನಿಮಿಷಗಳ ವರೆಗಿನ ವೀಡಿಯೋವನ್ನು ಕಳುಹಿಸಬಹುದಾಗಿದೆ. ವಿಚಾರ ಮಂಡನೆಯು ವಿಮರ್ಶಾತ್ಮಕ ಅಥವಾ ಅನಿಸಿಕೆ ರೂಪದಲ್ಲಿಯೂ ಇರಬಹುದು. ವೀಡಿಯೋ ಕಳುಹಿಸಲು ಕೊನೆಯ ದಿನಾಂಕ – 20 ನವೆಂಬರ್ 2020. ಸ್ಪರ್ಧೆಯ ಫಲಿತಾಂಶದ ಘೋಷಣಾ ದಿನಾಂಕ -30 ನವೆಂಬರ್ 2020. ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಡಿಸೆಂಬರ್ ಮೊದಲ ವಾರದಲ್ಲಿ ನಡೆಯಲಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳಿದ್ದು, ಪ್ರಥಮ ರೂ 5000, ದ್ವಿತೀಯ ರೂ 3000, ತೃತೀಯ ರೂ1000 ಬಹುಮಾನವಿದ್ದು ವಿಜೇತರಿಗೆ ಪ್ರಮಾಣಪತ್ರ ಹಾಗೂ ಗಿಫ್ಟ್ ಹ್ಯಾಂಪರ್ ನೀಡಲಾಗುತ್ತದೆ. ರೆಕಾರ್ಡ್ ಮಾಡಲಾದ ವೀಡಿಯೋವನ್ನು ಇ-ಮೇಲ್ (surabhibyndoorcomp@gmail.com) ಅಥವಾ ವಾಟ್ಸಪ್ (9902213959, 9740241490) ಮೂಲಕ ಕಳುಹಿಸುವುದು.…
