Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಾವಣಗೆರೆಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್-19 ಸೋಂಕಿಗೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ದಾವಣಗೆರೆಯ 70 ವರ್ಷದ ವೃದ್ದರೊಬ್ಬರು ಅನಾರೋಗ್ಯ ಕಾರಣದಿಂದ ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದರು. ಕೊನೆಗೆ ಚಿಕಿತ್ಸೆ ಫಲಾಕಾರಿಯಾಗದೇ ಶುಕ್ರವಾರ ಸಾವನ್ನಪ್ಪಿದ್ದಾರೆ. ಅವರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಕೋವಿಡ್-19 ಸೋಂಕು ತಗಲಿರುವುದು ದೃಢವಾಗಿತ್ತು. ಕೋವಿಡ್ ನಿಯಮಾವಳಿಯಂತೆ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಭಾನುವಾರದ ಲಾಕ್ಡೌನ್ ಉಡುಪಿ ಜಿಲ್ಲೆಯಲ್ಲಿಯೂ ಮುಂದುವರಿದಿದ್ದು, ಈ ವಾರ ಅಂಗಡಿ-ಹೋಟೆಲುಗಳಿಗೆ ವಿನಾಯಿತಿ ನೀಡಲಾಗಿದೆ. ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು, ಪೇಪರ್’ಗೆ ಅವಕಾಶವಿರುವಂತೆ ದಿನಸಿ ಅಂಗಡಿ, ತರಕಾರಿ ಹಾಗೂ ಮಾಂಸದ ಅಂಗಡಿ, ಹೋಟೆಲ್ ಹಾಗೂ ಬೇಕರಿಗಳಿಗೆ ವಿನಾಯಿತಿ ನೀಡಲಾಗಿದೆ. ಆನ್ಲೈನ್ ಡೆಲಿವರಿಗೆ ರಾತ್ರಿ 8 ಗಂಟೆಯ ಬಳಿಕವೂ ಅವಕಾಶ ನೀಡಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿರುವುದಾಗಿ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿಯಲ್ಲಿದ್ದು, ಅನವಶ್ಯಕವಾಗಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಈ ಹಿಂದಿನಂತೆ ರಾತ್ರಿ 8 ರಿಂದ ಬೆಳಿಗ್ಗೆ 5ರ ತನಕ ನೈಟ್ ಕರ್ಪ್ಯೂ ಇರಲಿದೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 90 ಪಾಸಿಟಿವ್ ದೃಢ – https://kundapraa.com/?p=39433 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.11ರ ಶನಿವಾರ 90 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಮಂಗಳೂರು ಹಾಗೂ ರಾಯಚೂರಿನಿಂದ ತಲಾ ಓರ್ವ ವ್ಯಕ್ತಿ, ಮುಂಬೈನಿಂದ 8 ಮಂದಿ, ಬೆಂಗಳೂರಿನಿಂದ 5 ಮಂದಿ ಬಂದಿದ್ದು, ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ. 60 ಪುರುಷರು, 30 ಮಹಿಳೆಯರಿಗೆ ಪಾಸಿಟಿವ್ ಬಂದಿದ್ದು, ಇವುಗಳಲ್ಲಿ ಉಡುಪಿ ತಾಲೂಕಿನ 66, ಕುಂದಾಪುರ ತಾಲೂಕಿನ 20 ಹಾಗೂ ಕಾರ್ಕಳ ತಾಲೂಕಿನ 4 ಮಂದಿ ಇದ್ದಾರೆ. 573 ನೆಗೆಟಿವ್: ಈ ತನಕ ಒಟ್ಟು 21,678 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 18,081ನೆಗೆಟಿವ್, 1,567 ಪಾಸಿಟಿವ್ ಬಂದಿದ್ದು, 2,030 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 573 ನೆಗೆಟಿವ್, 90 ಪಾಸಿಟಿವ್ ಬಂದಿದೆ. ಒಟ್ಟು 1,285 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 319 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,567 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,245 ಮಂದಿ ಬಿಡುಗಡೆಯಾಗಿದ್ದು, 319…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್‌ನ ಕಠಿಣ ಪರಿಸ್ಥಿತಿಯಲ್ಲಿಯೂ ಕೂಡ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ವೈದ್ಯರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ. ಪ್ರತಿಯೊಬ್ಬ ನಾಗರಿಕನು ಕೂಡ ಸ್ವಯಂ ಜಾಗೃತಿ ವಹಿಸುವ ಅಗತ್ಯತೆ ಇವತ್ತು ಇದೆ. ವಿವಿಧತೆಯಲ್ಲಿ ಏಕತೆ ಎನ್ನುವ ಧ್ಯೇಯದಡಿಯಲ್ಲಿ ವಿಭಿನ್ನ ಸಮಾಜಮುಖಿ ಕಾರ್ಯಕ್ರಮಗಳನ್ನು ಸೌಹಾರ್ದ ಸಹಕಾರಿ ಮಾಡುತ್ತಿದೆ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕ ಮಂಜುನಾಥ ಎಸ್.ಕೆ. ಹೇಳಿದರು. ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಲಿ., ಕುಂದಾಪುರ ವತಿಯಿಂದ ಕೋವಿಡ್-19 ಇದರ ಸಾಮಾಜಿಕ ಕಳಕಳಿ ಪ್ರಯುಕ್ತ ಸ್ವಯಂಚಾಲಿತ ಹ್ಯಾಂಡ್ ಸ್ಯಾನಿಟೈಜರ್ ಡಿಸ್ಪೆಂಸರ್ ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರಿನ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ವಹಿಸಿದ್ದರು. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೆಶ್ವರ್, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೊ-ಅಪರೇಟಿವ್ ಲಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋರೋನಾ ಪಾಸಿಟಿವ್ ಪ್ರಕರಣಗಳನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವರ್ತಕರು ಹಾಗೂ ಸಾರ್ವಜನಿಕರ ಹಿತ ರಕ್ಷಣೆಗಾಗಿ ಜುಲೈ.13 ರಿಂದ ಜುಲೈ.31 ತನಕ ಕುಂದಾಪುರ ಪುರಸಭಾ ವ್ಯಾಪ್ತಿಯ ಎಲ್ಲ ಅಂಗಡಿಗಳು ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆಯಲಿದ್ದು, ಆ ಬಳಿಕ ಮೆಡಿಕಲ್, ಹಾಲು, ಹೋಟೆಲ್ ಹೊರತುಪಡಿಸಿ ಉಳಿದ ಅಂಗಡಿಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಲಾಗುತ್ತಿದೆ. ಕುಂದಾಪುರದ ಶೆರೋನ್ ಹೋಟೆಲ್ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕುಂದಾಪುರದ ಸಮಾನ ಮನಸ್ಕ ವರ್ತಕರು ಈ ನಿರ್ಣಯ ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂದರ್ಭ ವ್ಯಾಪಾರಸ್ಥ ರಾಧಾಕೃಷ್ಣ ಅವರು ಮಾತನಾಡಿ ಕೊರೊನಾ ಸಮುದಾಯಿಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ಪುರಸಭೆ ವ್ಯಾಪ್ತಿಯ ಸುಮಾರು 150 ಹೆಚ್ಚು ಮಂದಿ ಸಮಾನ ಮನಸ್ಕ ವ್ಯಾಪಾರಸ್ಥರು ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದಕ್ಕೂ ಮೊದಲು ಎಲ್ಲ ಅಂಗಡಿಗಳಿಗೂ ಭೇಟಿ ಕೊಟ್ಟು ಮನವಿ ಮಾಡಿದ್ದೇವೆ. ಸ್ವಯಂ ಪ್ರೇರಿತ ಬಂದ್ಗೆ ಎಲ್ಲರ ಬೆಂಬಲ ಸಿಕ್ಕಿದೆ ಎಂದವರು ಹೇಳಿದರು. ಕುಂದಾಪ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಗ್ರೀನ್‌ವ್ಯಾಲಿ ನ್ಯಾಶನಲ್ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿನಿ ಶರ್ಮದಾ ಪೂಜಾರಿ ಐಸಿಎಸ್ಇ ಪರೀಕ್ಷೆಯಲ್ಲಿ 484 (ಶೆ. 96.8) ಅಂಕದೊಂದಿಗೆ ತೇರ್ಗಡೆ ಹೊಂದಿದ್ದು, ಶಾಲೆಗೆ ಟಾಪ‌ರ್ ಆಗಿದ್ದಾರೆ. ಶರ್ಮದಾ ಎಸ್‌ಸಿಡಿಸಿಸಿ ಬ್ಯಾಂಕ್ ಕುಂದಾಪುರ ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಹಾಗೂ ಶಾಂತಲಾ ದಂಪತಿಗಳ ಪುತ್ರಿ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಮುಂಗಾರು ಹಂಗಾಮಿಗೆ ಅಧಿಸೂಚಿತ ಬೆಳೆಯ ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜುಲೈ 31 ದಿನಾಂಕವಾಗಿದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ವಿಮಾ ಮೊತ್ತ ಪ್ರತೀ ಹೆಕ್ಟೇರ್ ಗೆ ರೂ.55000 ಗಳಾಗಿದ್ದು, ವಿಮಾ ಕಂತಿನ ದರ ಪ್ರತೀ ಹೆಕ್ಟೇರ್ ಗೆ ರೂ.1100 ಆಗಿದೆ. ಬೆಳೆ ವಿಮಾ ಯೋಜನೆಯಿಂದ ರೈತರಿಗೆ ಪ್ರಯೋಜನಗಳು ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರೀತ್ಯಗಳಾದ ಹೆಚ್ಚಿನ ಮಳೆ ಮುಳುಗಡೆ, ಧೀರ್ಘಕಾಲ ತೇವಾಂಶ ಕೊರತೆ , ತೀವ್ರ ಬರಗಾಲ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಂಗಳೂರು ಲಯನ್ಸ್ ಕ್ಲಬ್‌ನ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಸರಕು ಸಾಗಣೆ ಗುತ್ತಿಗೆದಾರರಾದ ರಮೇಶ ಕೆ. ಕುಂದರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ವಿಲ್ಫೈಡ್ ಮೆನೆಜಿಸ್ ಮತ್ತು ಖಜಾಂಜಿಯಾಗಿ ಕೆ.ರಮೆಶ್ ಶೆಟ್ಟಿ ಕಾರ್ಯನಿರ್ವಹಿಸಲಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ಮ್ಯಾಥಿವ್ ಜೋಸೆಫ್, ದ್ವಿತೀಯ ಉಪಾಧ್ಯಕ್ಷರಾಗಿ ರಜತ್ ಹೆಗ್ಡೆ ಆಯ್ಕೆಯಾಗಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಏಕಗವಾಕ್ಷಿ ಯೋಜನೆಯಡಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ 2020ನೇ ಸಾಲಿನ ಜನವರಿ 1 ರಿಂದ ಜೂನ್ 30 ರವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾದ ಸಾಹಿತ್ಯ, ಸ್ವರ್ಧಾತ್ಮಕ ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರ ಭಾಷೆಯ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿAದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಕೋವಿಡ್-19 ಹಿನ್ನೆಲೆ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು, ಇಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಬೆಂಗಳೂರಿನ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಇಲ್ಲಿ ಜುಲೈ 30 ರೊಳಗೆ ಪುಸ್ತಕಗಳನ್ನು ಕಾಪಿರೈಟ್ ಮಾಡಿಸುವುದು. ಕಾಪಿರೈಟ್ ಮಾಡಿಸಿದ ಪುಸ್ತಕದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಜುಲೈ 31 ರೊಳಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀಧಿ, 4ನೇ ಮಹಡಿ, ಬೆಂಗಳೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಸೇವೆಗಳಿಗಾಗಿ ಸೇವಾ ಸಿಂಧು ವೆಬ್ ಸೈಟ್‌ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಯುವಕ/ಯುವತಿ/ಸಂಘ/ಕ್ಲಬ್ ಗಳ ನೊಂದಣಿಗಾಗಿ ಅರ್ಜಿ,ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ, ಏಕಲವ್ಯ ಪ್ರಶಸ್ತಿ, , ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಾಗಿ ಸೇವಾ ಸಿಂಧುವೆಬ್ ಸೈಟ್ https://sevasindhu.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ಉಡುಪಿ ಜಿಲ್ಲೆ (0820-2521324, 94808-86467) ಇವರನ್ನು ಸಂಪರ್ಕಿಸಲು ಕೋರಿದೆ.

Read More