Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ 27: ಪ್ರಸ್ತುತ ಕೋವಿಡ್-19 ನಿರ್ಬಂಧಗಳ ಸಂದರ್ಭದಲ್ಲಿ, ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಬ್ಯಾಂಕುಗಳ ವ್ಯವಹಾರ ಹಾಗೂ ಕೆಲಸದ ಸಮಯವನ್ನು ಬದಲಿಸಲು ಸೂಚಿಸಲಾಗಿದೆ. ಮೇ 28 ರಿಂದ ಜೂನ್ 6ರ ವರೆಗೆ ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವೆಗೆ ಕೆಲಸದ ಸಮಯ ಎಂದು ನಿಗದಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು, ಮೇ.27: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂಒ-4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ಸುದೀರ್ಘ ಚರ್ಚೆ ನಡೆಸಿ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ಥಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಜಲಜೀವನ್ ಮಿಷನ್ ಯೋಜನೆಯಡಿ 396 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಮನೆ-ಮನೆಗೂ ಶುದ್ದ ಕುಡಿಯುವ ನೀರು ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಇದರಿಂದಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಆರ್‌ಐಡಿಎಫ್ ಅಡಿಯಲ್ಲಿ ನಬಾರ್ಡ್ ಸಾಲದ ನೆರವಿನಿಂದ ಬೈಂದೂರು ವಿಧಾನಸಭಾ ಕ್ಷೇತ್ರದ 788 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು, ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ದೊರೆಯಲಿದೆ. ಟೆಂಡರ್ ಪ್ರಕ್ರಿಯೆಯ ಬಳಿಕ ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದಿರುವ ಅವರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೂ ಹಾಗೂ ಯೋಜನೆ ರೂಪಿಸಲು ಸಹಕರಿಸಿದ್ದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಪರಿಸರದ ಅಗತ್ಯವುಳ್ಳ ಕುಟುಂಬಗಳಿಗೆ ಬುಧವಾರ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದ್ದು ಸುತ್ತಮುತ್ತಲಿನ ತೀರಾ ಅಗತ್ಯವುಳ್ಳವರನ್ನು ಗುರುತಿಸಿ ಅಕ್ಕಿ, ದಿನಸಿ ಸಾಮಾಗ್ರಿ, ತರಕಾರಿ ಹಾಗೂ ಆಯುರ್ವೇದ ಔಷಧವನ್ನೊಳಗೊಂಡ 70ಕ್ಕೂ ಹೆಚ್ಚು ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರೈತ ವಿರೋಧಿ ಕೃಷಿ ಕಾನೂನು ತಕ್ಷಣ ಹಿಂಪಡೆಯಬೇಕು ಎಂದು ರಾಷ್ಟ್ರವ್ಯಾಪಿ ಕರಾಳ ದಿನಾಚರಣೆಯನ್ನು ಪ್ರತಿಭಟನೆಯ ಮೂಲಕ ಕಿಸಾನ್ ಮೊಚಾ೯ ಹಾಗೂ ಕೇಂದ್ರೀಯ ಕಾಮಿ೯ಕ ಸಂಘಟನೆಗಳ ಕರೆಯ ಮೇರೆಗೆ ಬೈಂದೂರು ಸಿಐಟಿಯು ಕಚೆರಿಯಲ್ಲಿ ಕೇಂದ್ರ ಸರಕಾರದ ವಿರುದ್ಧ ಕರಾಳ ದಿನಾಚರಣೆ ಹಾಗೂ ಪ್ರತಿಭಟನೆ ಕಾಯ೯ಕ್ರಮ ನಡೆಯಿತು. ಈ ಸಂದರ್ಭ ಕಾಮಿ೯ಕ ಮುಖಂಡರಾದ ಗಣೇಶ ತೊಂಡೆಮಕ್ಕಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಗಣೇಶ ಮೊಗವೀರ ಹಾಗೂ ಕೋಣಿ ವೆಂಂಟೇಶ್ ನಾಯಕ್ ಮೊದಲಾದವರು ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ವಂಡ್ಸೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ, ನಿರ್ದೇಶಕರಾದ ಸಂಜೀವ ಪೂಜಾರಿ, ಜಯರಾಮ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಹಾಗೂ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3533 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಇಲಾಖೆಯ ವೆಬ್ಸೈಟ್ https://recruitment.ksp.gov.in/ಅನ್ನು ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರಕಾರದ ಆದೇಶದಲ್ಲಿ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮತ್ತು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ. ನ್ಯಾಯಾಲಯದ ಕೆಲಸದ ದಿನಗಳಲ್ಲಿ ಮಾತ್ರ ವಕೀಲರು, ಅವರ ಕಾನೂನು ಸಿಬ್ಬಂದಿ, ಗುಮಾಸ್ತರು ಹಾಗೂ ಇತರ ಸಹಾಯಕ ಸಿಬ್ಬಂದಿಯವರು ಆಯಾ ಕಚೇರಿಗಳಲ್ಲಿ ನೀಡುವ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದ್ದು, ಉಳೀದಂತೆ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ. ವಕೀಲರ ಕಛೇರಿಗಳಲ್ಲಿ ಹಾಗೂ ಕಾನೂನು ಸಂಸ್ಥೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗಳನ್ನೊಳಗೊಂಡು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಹಾಗೂ ಎಲ್ಲಾ ರೀತಿಯ ಹೋಮ್ ಡೆಲಿವರಿ ಮತ್ತು ಇ-ಕಾಮರ್ಸ್ ಸೇವೆಗಳಿಗೆ ಅನುಮತಿ ನೀಡಲಾಗಿರುತ್ತದೆ. ಈ ಮೇಲ್ಕಂಡ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ವಿಪತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಉದ್ಘವಿಸುವುದಿಲ್ಲ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಡೀ ರಾಜ್ಯವೇ ಹೆಮ್ಮೆಪಡುವಂತೆ ಕೆಲಸ ಮಾಡುತ್ತಿದ್ದು, ಕರೋನಾ ತಡೆ ನಿಟ್ಟಿನಲ್ಲಿಯೂ ಅವರು ತೆಗೆದುಕೊಂಡ ನಿರ್ಧಾರ ಯಥಾವತ್ತು ಜಾರಿಗೆ ತರುವ ಮೂಲಕ ಕರೋನಾ ನಿರ್ಮೂಲನೆಗೆ ಪ್ರಯತ್ನಿಸಲಾಗುತ್ತದೆ ಎಂದು ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಬುಧವಾರ ಬೈಂದೂರು ತಾಲೂಕು ವಿವಿಧ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕರೋನಾ ನಿಯಂತ್ರಣ ಕಾರ್ಯಪಡೆ ನಿರ್ವಾಹಣೆ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲೇ ಬಿಜೆಪಿ ಸರ್ಕಾರ ಅವಧಿ ಪೂರ್ಣ ಮಾಡಲಿದೆ ಎಂದರು. ಕರೋನಾ ನಿಯಂತ್ರಣಕ್ಕೆ ಬರಬೇಕಿದ್ದರೆ, ಗ್ರಾಮ ಪಂಚಾಯತಿ ಮುಖ್ಯಪಾತ್ರ ವಹಿಸಲಿದ್ದು, ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಾಸಿಟಿವ್ ಬಂದವರ ಹೋಮ್ ಕ್ವಾರಂಟೈನ್ ಮಾಡಿ ಹೊರಗೆ ಬಾರದಂತೆ ನಿಗಾ ಇಡಬೇಕು. ಪಾಸಿಟಿವ್ ಬಂದವರು ಕಣ್ಣುತಪ್ಪಿಸಿ ಹೊರಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಬುಧವಾರ 973 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 353, ಕುಂದಾಪುರ, ಬೈಂದೂರು ತಾಲೂಕಿನ 340, ಕಾರ್ಕಳ, ಹೆಬ್ರಿ ತಾಲೂಕಿನ 273 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 973 ಪ್ರಕರಣಗಳಲ್ಲಿ 21 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 952 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 70 ವರ್ಷದ ವೃದ್ಧೆ, 56 ವರ್ಷದ ಪುರಷ, 55 ವರ್ಷದ ಪುರುಷ, ಕುಂದಾಪುರದ ವರ್ಷದ ವೃದ್ಧ, 80 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 894 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5866 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3589 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 5213…

Read More