Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಜೀವನದಲ್ಲಿ ಕ್ರೀಡಾ ಮನೋಭಾವವನ್ನು ಮೈಗೂಡಿಸಿಕೊಂಡರೆ ವಿದ್ಯಾರ್ಥಿಗಳ ಮನಸ್ಸು ಗಟ್ಟಿ ಆಗುವುದರ ಜೊತೆಗೆ ಎಂತಹ ಕಠಿಣ ಪರಿಶ್ರಮವನ್ನು ಎದುರಿಸಲು ಕೂಡ ಸಜ್ಜಾಗುತ್ತದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್‍ ನಿರಂಜನ್ ಗೌಡ ಹೇಳಿದರು. ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿ.ಎ/ಸಿ.ಎಸ್ ಸಂಸ್ಥೆ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಕೂಡ ಸ್ವಲ್ಪ ಸಮಯ ಮೀಸಲಿಡಬೇಕು ಎಂದು ಕರೆ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸುಜ್ಞಾನ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಅವರು ಮಾತನಾಡಿ, ಕುಂದಾಪುರದಲ್ಲಿ ಸಿ.ಎ/ಸಿ.ಎಸ್ ನಂತಹ ಕಠಿಣ ಪರೀಕ್ಷೆಗೆ ಗುಣಮಟ್ಟದ ತರಬೇತಿ ನೀಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಕ್ರೀಡಾಕೂಟವನ್ನು ಆಯೋಜಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿಯ ಕಾರ್ಯ ಮೆಚ್ಚುವಂತದ್ದು ಎಂದರು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿರುವ ಸಚಿನ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 110/33/11 ಕೆ.ವಿ ಹಿರಿಯಡ್ಕದಲ್ಲಿ 110ಕೆ.ವಿ ಮಧುವನಮಾರ್ಗದ ಬೇದಲ್ಲಿನ ಸುಟ್ಟುಹೋದ ಸಿಟಿ ಕ್ಲಾಂಪ್‌ಗಳನ್ನು ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 110ಕೆವಿ ಸೇನಾಪುರ ರೈಲ್ವೆ ಉಪಕೇಂದ್ರ , 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ 33/11ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಗಂಗೊಳ್ಳಿ ಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಕುಂದಾಪುರ ಪೇಟೆ, ಹಂಗೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲೆಂ, ಕೋಣಿ, ಕಂದಾವರ, ಬಳ್ಳೂರು, ಹಳ್ಳಾಡು, ಅಂಪಾರು, ಕಾವಾಡಿ, ಜಪ್ತಿ, ಹೊಂಬಾಡಿ-ಮಡಾಡಿ, ಕಾಳಾವರ, ಅಸೋಡು, ಬಸೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸ್, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಆರ್ಜಿ, ಕೆರಾಡಿ, ತಲ್ಲೂರು, ಬೈಂದೂರು, ಗೋಳಿಹೊಳ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು. ದೇವಲ್ಕುಂದ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲ್ಲೂಕು ಇದರ ವತಿಯಿಂದ ಜ್ಞಾನದೀಪ ಶಿಕ್ಷಕರ ಸಂದರ್ಶನ ಕಾರ್ಯಕ್ರಮ ತ್ರಾಸಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್ ಬಿ., ಉಡುಪಿ ಜಿಲ್ಲೆಯಲ್ಲಿ ಅನುದಾನಿತ ಹಾಗೂ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕ ಕೊರತೆ ಇರುವ 40 ಆಯ್ದ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಜ್ಞಾನದೀಪ” ಕಾರ್ಯಕ್ರಮದಡಿಯಲ್ಲಿ ಶಿಕ್ಷಕರನ್ನು ಒದಗಿಸಲಾಗುತ್ತಿದೆ. ಕುಂದಾಪುರ ಮತ್ತು ಬೈಂದೂರು ತಾಲ್ಲೂಕಿನಲ್ಲಿ ಸಂದರ್ಶನಕ್ಕೆ ಹಾಜರದವರಲ್ಲಿ 14 ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ ಹಾಗೂ ಶ್ರೀ ಕ್ಷೇತ್ರದಿಂದಲೇ ಪ್ರತಿ ತಿಂಗಳು ಗೌರವಧನ ಪಾವತಿಸಲಾಗುತ್ತದೆ. ಆಯ್ಕೆಯಾದ ಶಿಕ್ಷಕರು ನಿರ್ದಿಷ್ಟ ಪೂರ್ವ ತಯಾರಿಯೊಂದಿಗೆ ಸರ್ಕಾರದ ಶಿಕ್ಷಣ ನೀತಿ, ನಿಯಮ ಪಾಲನೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡುವಂತೆ ಹಾಗೂ ಪ್ರತಿ ತಿಂಗಳು ಕಚೇರಿಗೆ ಬಂದು ವರದಿ ಮಾಡಿಕೊಳ್ಳುವಂತೆ ಮಾಹಿತಿ ನೀಡಿದರು. ಕಚೇರಿ ಪ್ರಬಂಧಕ ಸತೀಶ್ ಸಹಾಯಕ ಆಡಳಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಮಾತನಾಡಿ ವಿದ್ಯಾರ್ಥಿಗಳಾದ ನೀವೆಲ್ಲರೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು‌ ಎಂದರು. ಸಮಾರಂಭದಲ್ಲಿ ಉಪಸ್ಥಿತರಿರುವ ಟ್ರೈನಿಂಗ್ ಆಫೀಸರ್ ಅಭಿಲಾಷ್ ಕ್ಷತ್ರೀಯ ಮಾತನಾಡಿ ಎಲ್ಲರೂ ಒಗ್ಗಟ್ಟಿನಿಂದ ಹಾಗೂ ಆಸಕ್ತಿಯಿಂದ ಕೂಡಿ ಕೆಲಸಮಾಡಬೇಕು ಎಂದು ನುಡಿದರು. ಉಪಸಂಯೋಜಕರಾದ ಮಮತಾ ರೈ ಮಾತನಾಡುತ್ತಾ ಬದುಕು ಎನ್ನುವ ಯುದ್ಧದಲ್ಲಿ ತೇಜಸ್ಸು,ಧೈರ್ಯ,ಸ್ಥೈರ್ಯ,ಸ್ವಾಭಿಮಾನ ಅತ್ಯವಶ್ಯಕ ರಾಷ್ಟ್ರದ ಉನ್ನತಿಗೆ ಈ ದಿನದ ನಿಮ್ಮ ನಿರ್ಧಾರವೇ ಮುನ್ನುಡಿಯಾಗಲಿ ಎಂದು ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕನಾಗಿ ಪವನ್ ಕುಮಾರ್ ಶೆಟ್ಟಿ, ಉಪನಾಯಕಿ-ಕುಮಾರಿ ಚೈತಾಲಿ ಉಪ್ಪೂರು, ಕಾರ್ಯದರ್ಶಿ-ಕುಮಾರಿ ವನಶ್ರೀ, ಶೈಕ್ಷಣಿಕ ಕಾರ್ಯದರ್ಶಿ ಪ್ರಣವ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಕುಮಾರಿ ಶ್ರಾವ್ಯ, ಕ್ರೀಡಾ ಕಾರ್ಯದರ್ಶಿಯಾಗಿ ದಿಶಾನ್ ಕುಮಾರ್ ಶೆಟ್ಟಿ, ಸಮಾಜ ಸೇವಾ ಕಾರ್ಯದರ್ಶಿಯಾಗಿ ಕುಮಾರಿ ರಿಯಾ ಪ್ರಮಾಣ ವಚನ ಸ್ವೀಕರಿಸಿದರು. ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು ಸಂಸದರ ನಿಧಿ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೇಶಕ್ಕೆ ಎರಡನೇ ಸ್ಥಾನದಲ್ಲಿದ್ದಾರೆ. 2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ. ಅನುದಾನ ಹಾಗೂ 10ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೆ ಇದ್ದ 4.40 ಕೋಟಿ ರೂ. ಅನುದಾನವೂ ಸೇರಿದಂತೆ 9,40 ಕೋಟಿ ರೂ.ದಲ್ಲಿ ಈಗಾಗಲೇ 9 ಕೋಟಿ ರೂ. ಬಳಕೆ ಮಾಡಿದ್ದಾರೆ. ಸಾರ್ವಜನಿಕ ಬಸ್ ಶೆಲ್ಟರ್, ಹೈಮಾಸ್ಟ್ ಲೈಟ್, ಶಾಲಾ ಕೊಠಡಿ ಮತ್ತು ಸಾರ್ವಜನಿಕ ಸಮುದಾಯ ಭವನಕ್ಕೆ 4.70 ಕೋಟಿ ರೂ., ರಸ್ತೆ ನಿರ್ಮಾಣಕ್ಕೆ 2.93 ಕೋಟಿ ರೂ., ಕರೊನಾ ನಿರ್ವಹಣೆಗೆ ಆರೋಗ್ಯ ಇಲಾಖೆಗೆ ಆಂಬುಲೆನ್ಸ್ ಮತ್ತು ಡಯಾಲಿಸಿಸ್ ಯಂತ್ರ ಅಳವಡಿಕೆಗೆ 82.50 ಲಕ್ಷ ರೂ., ಕುಡಿಯುವ ನೀರಿನ ಘಟಕಕ್ಕೆ 42 ಲಕ್ಷ ರೂ. ಹಾಗೂ ಅಂಗವಿಕಲರಿಗೆ ತ್ರಿಚಕ್ರ ವಾಹನ, ಇತ್ಯಾದಿ ಅನೇಕ ಉಪಯುಕ್ತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಉಳಿದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಉಳಿದ ಅನುದಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕಛೇರಿ ಜವಾನರ ಹುದ್ದೆಯನ್ನು ಮಾಸಿಕ ಗೌರವಧನ ಆಧಾರದಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರುವ, ಕಛೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವ ಮತ್ತು ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು, ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘದ ಅಧ್ಯಕ್ಷರ ಹೆಸರಿಗೆ ಅರ್ಜಿ ಬರೆದು, ಸದರಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ನವೆಂಬರ್ 25 ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಮರಳು ವಿತರಿಸಲಾಗುತ್ತಿದೆ. ಮರಳು ಅವಶ್ಯಕತೆ ಇರುವವರು ಅಂತರ್ಜಾಲ https://udupiesand.com/ ಸಂದರ್ಶಿಸಿ, ಹೆಸರು ಹಾಗೂ ವಿಳಾಸ ದಾಖಲಿಸಿ ಬೇಕಾಗಿರುವ ಮರಳಿನ ಪ್ರಮಾಣವನ್ನು ನಮೂದಿಸಿ, ಆನ್ಲೈನ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ಇದೊಂದು ಸರಳ ಹಾಗೂ ಪಾರದರ್ಶಕ ಪ್ರಕ್ರಿಯೆಯಾಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2572333 ಅಥವಾ ಸ್ಯಾಂಡ್ ಆಪ್ ಕಾಂಟ್ಯಾಕ್ಟ್ ನಂ: 6366745888, 6364024555, 6366871888 ಅನ್ನು ಸಂಪರ್ಕಿಸುವತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನದಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಕಳೆದ ಮಂಗಳವಾರ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಶರತ್ ಕುಮಾರ್ ಶೆಟ್ಟಿ ಮಾತನಾಡಿ, ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಕಾನೂನಿನ ಬಗೆಗಿನ ವಿವಿಧ ವಿಚಾರಗಳ ಪ್ರಾಥಮಿಕ ಅರಿವು ಪ್ರತಿಯೊಬ್ಬ ನಾಗರಿಕನಲ್ಲಿಯೂ ಇರಬೇಕು. ಇಂತಹ ಅರಿವಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಕೂಡ ನಮ್ಮದಾಗಿಸಿಕೊಳ್ಳುವ ಮೂಲಕ ಅಪರಾಧ ಮುಕ್ತ ಸಮಾಜದ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಯು.ವೆಂಕಟೇಶ ಮೂರ್ತಿ, ನರೇಂದ್ರ ಎಸ್ ಗಂಗೊಳ್ಳಿ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರೆ: ಇಂದಿನ ಸ್ಪರ್ಧಾತ್ಮಕ ಯುಗದ ಉದ್ಯೋಗ ಮಾರುಕಟ್ಟೆಯಲ್ಲಿ ತಮ್ಮ ಅಸ್ಥಿತ್ವವನ್ನು ಛಾಪಿಸಬೇಕಾದರೆ ಪ್ರತಿಯೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯೂ ಸೂಪರ್ ಮೆಂಟಾಲಿಟಿಯ (ಉತ್ಕೃಷ್ಟ ಮನೋಭಾವ) ಇಂಜಿನಿಯರ್ ಆಗಬೇಕೆ ಹೊರತು ನಾರ್ಮಲ್ ಮೆಟಾಲಿಟಿಯ ಇಂಜಿನಿಯರ್ನಿಂದ (ಸಾಧಾರಣ ಮನೋಭಾವ) ಸಾಧ್ಯವಿಲ್ಲ ಎಂದು ಬೆಂಗಳೂರಿನ ಡಿಫೆನ್ಸ್ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್( ಡಿಆರ್ಡಿಒ)ನ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್ಮೆಂಟ್ನ ತಾಂತ್ರಿಕ ನಿರ್ದೇಶಕ ಡಾ ಎಸ್ ರಾಮಚಂದ್ರ ತಿಳಿಸಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶಾತಿ ಕಾರ್ಯಕ್ರಮ- ‘ಆಳ್ವಾಸ್ ಆಗಮನ 2021-22’ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಆರಂಭದಲ್ಲೆ ತನ್ನ ಗುರಿಯನ್ನು ನಿಗದಿಪಡಿಸಿಕೊಂಡು, ಆ ಗುರಿಯನ್ನು ಸಾಧಿಸಲು ತನ್ನ ಬಳಿಯಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾಗಬೇಕು. ಮಾಡುವ ಎಲ್ಲಾ ಕೆಲಸವೂ ಉತ್ಕೃಷ್ಟ ಮಟ್ಟದ ಫಲಿತಾಂಶವನ್ನೆ ನೀಡುವಂತಿರಬೇಕು. ೨೦೨೫ರ ಹೊತ್ತಿಗೆ ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ವಿಫುಲ ಅವಕಾಶಗಳು ಲಭಿಸುವ ಸಾಧ್ಯತೆ ಇರುವುದರಿಂದ ಆ ನಿಟ್ಟಿನಲ್ಲಿ ಕರ್ಯಪ್ರವೃತ್ತರಾಗಬೇಕು ಎಂದರು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಬ್ಯಾಂಕ್‌ವೊಂದರ ಸಿಬ್ಬಂದಿ ಇಲ್ಲಿನ ಗ್ರಾಹಕರೊಂದಿಗೆ ತೋರುತ್ತಿರುವ ಅಸಹಕಾರ ವರ್ತನೆಯ ವಿರುದ್ದ ಸಾರ್ವಜನಿಕರಿಂದ ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಯು. ಸತ್ಯನಾರಾಯಣ್ ರಾವ್ ಅವರಿಗೆ ಮನವಿ ಸಲ್ಲಿಸಲಾಯಿತು. ರಾಷ್ಟ್ರೀಕೃತ ಬ್ಯಾಂಕ್ ಹೆಮ್ಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಾರಣದಿಂದಾಗಿ ಸಾರ್ವಜನಿಕ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶ ಗ್ರಾ.ಪಂ.ಗೆ ಇರುವುದರಿಂದ ಈ ಎಲ್ಲ ಸಮಸ್ಯೆಗಳನ್ನು ಶಾಖಾಧಿಕಾರಿಗಳ ಗಮನಕ್ಕೆ ತಂದು ನಾಗರಿಕರಿಗೆ ಸಿಗಬೇಕಾದ ಗೌರವಗಳನ್ನು ನೀಡುವಲ್ಲಿ ಕ್ರಮವಹಿಸಿ ಗ್ರಾಹಕರ ಸಮಸ್ಯೆಯನ್ನು ಬಗೆಹರಿಸಬೇಕಾಗಿ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಗ್ರಾ.ಪಂ. ಅಧ್ಯಕ್ಷರು ತತ್ಕ್ಷಣವೇ ಗ್ರಾಮಸ್ಥರೊಂದಿಗೆ ಬ್ಯಾಂಕಿಗೆ ತೆರಳಿ ಸಿಬ್ಬಂದಿಯಿಂದ ಗ್ರಾಹಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಪರಿಹರಿಸುವಂತೆ ಲಿಖಿತವಾಗಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷ ಸುಕುಮಾರ್ ಪೂಜಾರಿ, ಕಾರ್ಯದರ್ಶಿ ಅರುಣ್ ಮೊಗವೀರ, ಸ್ಥಳೀಯರಾದ ಶ್ರೀಕಾಂತ ಹೆಮ್ಮಾಡಿ, ರವಿ ಕೆ. ಹೆಮ್ಮಾಡಿ, ನಾಗರಾಜ್ ಗಾಣಿಗ ಹರೆಗೋಡು, ಹರ್ಷ…

Read More