Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂದಿಸಿದಂತೆ ಜಿಲ್ಲಾಧಿಕಾರಿಗಳಿಗೆ ರೂ. 1 ಕೋಟಿ ವರೆಗೆ ಮಂಜೂರಾತಿ ಅಧಿಕಾರ ನೀಡುವ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇದೆ ಎಂದು ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ನಡೆದ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ಪ್ರಸಕ್ತ ರೂ. 50 ಲಕ್ಷದವರೆಗಿನ ಯೋಜನೆಗಳಿಗೆ ಮಂಜೂರಾತಿ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ಇದೆ. ಇದನ್ನು ಒಂದು ಕೋಟಿ ರೂಪಾಯಿಗೆ ಏರಿಕೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಸಚಿವ ಸಂಪುಟದ ಮುಂದೆ ಇದು ಬರಲಿದೆ. ಇದರಿಂದ ಪ್ರಮುಖ ದೇವಸ್ಥಾನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು. ಕೊಲ್ಲೂರಿನಲ್ಲಿ ಒಳಚರಂಡಿ ಹಾಗೂ ಕಿಂಡಿ ಅಣೆಕಟ್ಟು ನಿರ್ಮಾಣ ಸಂಬಂಧ ಶೀಘ್ರವೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಳೆದ ಎಂಟು ವರ್ಷಗಳಿಂದ ಕ್ರೀಡಾ ಸೇವೆಯನ್ನು ಮಾಡುತ್ತಾ ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಾ ಬಂದಿರುವ ಪ್ರದೀಪ್ ಕುಮಾರ್ ಶೆಟ್ಟಿಯ ಅವರನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಈ ಸಾಲಿನಿಂದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ಸಲಹೆಗಾರರಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಸರಕಾರ, ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಅಂಬೇಡ್ಕರ್ ಕಾರ್ಮಿಕ ಹಸ್ತ ಯೋಜನೆಯಡಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ರೋಟರಿ ಕ್ಲಬ್ ಬೈಂದೂರು ಹಾಗೂ ಸಿಐಟಿಯು ಬೈಂದೂರು ತಾಲೂಕು ಇವರ ಸಹಯೋಗದಲ್ಲಿ ಶನಿವಾರ ಬೈಂದೂರು ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಬೈಂದೂರು ಆಟೋರಿಕ್ಷಾ ಮತ್ತು ವಾಹನ ಚಾಲಕರಿಗೆ ಅಪಘಾತ ಜೀವ ರಕ್ಷಕ ಯೋಜನೆಯಡಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು. ಸಮಾರಂಭವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್. ಜಯಕರ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಆಟೋರಿಕ್ಷಾ ಮತ್ತು ಖಾಸಗಿ ವಾಣಿಜ್ಯ ವಾಹನ ಚಾಲಕರು ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿ ಮಂಡಳಿಯು ಜಾರಿಗೊಳಿಸುತ್ತಿರುವ ಅಪಘಾತ ಪರಿಹಾರದ ವಿವಿಧ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಸಂಘಟಿತ ಪ್ರಯತ್ನ ಮಾಡಬೇಕು. ರಸ್ತೆ ಸಂಚಾರದಲ್ಲಿ ವಾಹನ ಅಪಘಾತವಾದ ಸಂದರ್ಭ ಆಟೋರಿಕ್ಷಾ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ರಾಮಕ್ಷತ್ರಿಯ ಗಣೇಶೋತ್ಸವ ಸಮಿತಿ ಗಂಗೊಳ್ಳಿ ಇದರ 26ನೇ ವರ್ಷದ ಗಣೇಶೋತ್ಸವದ ಸಂದರ್ಭ ಭಕ್ತರಿಗೆ ಗಿಡಗಳನ್ನು ವಿತರಿಸಲಾಯಿತು. ಗಣೇಶೋತ್ಸವದಲ್ಲಿ ಆಯೋಜಿಸಲಾದ ಮನೆಗೊಂದು ಮರ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಗಿರೀಶ್ ದೇವರುಮನೆ, ಕಾರ್ಯದರ್ಶಿ ರಾಮಪ್ರಸಾದ್ ಸಸಿಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಉಸ್ತುವಾರಿಯನ್ನು ಸಕಲಾತಿ ನಾಗರಾಜ್, ಬಟ್ವಾಡಿ ಸಂದೀಪ್, ವಿಶ್ವನಾಥ್, ಉಗ್ರಾಣಿ ಲಕ್ಷ್ಮೀನಾರಾಯಣ, ಮಹೇಶ್, ಮಾಪಾರಿ ಸುರೇಶ್ ನೋಡಿಕೊಂಡರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಬಿಜೆಪಿ ಮುಖಂಡರ ನಿಯೋಗ ರಾಜ್ಯದ ಬಂದರು, ಮೀನುಗಾರಿಕೆ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಭೇಟಿ ಮಾಡಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಮತ್ತು ಗಂಗೊಳ್ಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮನವಿ ಸಲ್ಲಿಸಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಸ್ಲ್ಯಾಬ್ ಕುಸಿತ, ಬಂದರು ಅಭಿವೃದ್ಧಿ ಹಾಗೂ ಗಂಗೊಳ್ಳಿಯಲ್ಲಿ ಕೈಗೆತ್ತಿಕೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರ ಗಮನ ಸೆಳೆದ ಗಂಗೊಳ್ಳಿ ಬಿಜೆಪಿ ಮುಖಂಡರ ನಿಯೋಗ, ಆದಷ್ಟು ಶೀಘ್ರ ಬಂದರಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಮನವಿ ಮಾಡಿ, ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು. ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಈಗಾಗಲೇ ಚರ್ಚಿಸಲಾಗಿದ್ದು, ಅಧಿಕಾರಿಗಳೊಂದಿಗೆ ಗಂಗೊಳ್ಳಿ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಶಾಸಕರ ಜೊತೆಗೂಡಿ ಮಾಡಲಾಗುವುದು ಅಲ್ಲದೆ ಗಂಗೊಳ್ಳಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶರೀರ ಹಾಗೂ ಮನಸ್ಸಿಗೆ ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಹಾಗೂ ಚೈತನ್ಯವು ಕ್ರೀಡೆ ಹಾಗೂ ವ್ಯಾಯಾಮದಲ್ಲಿದ್ದು, ನಿಯಮಿತ ಅಭ್ಯಾಸದಿಂದ ಆರೋಗ್ಯವೂ ಸಧೃಡವಾಗಿರಲಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ವಾಸು ಗಾಣಿಗ ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ ಹಾಗೂ ನವಶಕ್ತಿ ಮಹಿಳಾ ವೇದಿಕೆ ರಿ. ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಕೊಲ್ಲೂರು ಸ.ಹಿ.ಪ್ರಾ ಶಾಲೆಯಲ್ಲಿ ಆಯೋಜಿಸಲಾದ ಆಯೋಜಿಸಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶ ಕಂಡ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದೆ. ದೇಶದ ಪ್ರಧಾನಿ ಮಂತ್ರಿಗಳು ಕ್ರೀಡಾ ದಿನದಂದೇ ಫಿಟ್ ಇಂಡಿಯಾ ಕ್ಯಾಂಪೆನ್ ಆರಂಭಿಸಿರುವುದರ ಹಿಂದ ಸದೃಢ ಸಮಾಜ ನಿರ್ಮಾಣದ ಕಲ್ಪನೆ ಅಡಗಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಕುಮಾರ್ ಮಾತನಾಡಿ ಕ್ರೀಡೆ ಬದುಕಿನ ಒಂದು ಅಂಗವೇ ಆಗಿದ್ದು, ಓದಿನಷ್ಟೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಭಾ ಕಾರಂಜಿ ವಿದ್ಯಾರ್ಥಿಳಲ್ಲಿನ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯಾಗಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿಯಿಂದ ಭಾಗವಹಿಸಲು ನೆರವಾಗುತ್ತದೆ. ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಶಿಕ್ಷಕರ ಪಾತ್ರವೂ ದೊಡ್ಡದಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕಛೇರಿ ಸಂಯುಕ್ತಾಶ್ರಯದಲ್ಲಿ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಮಂಗಳವಾರ ಆಯೋಜಿಸಲಾದ ಬೈಂದೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ವರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಬೈಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾಗೀರಥಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಹೆಗ್ಡೆ, ಶಾರದಾ, ವಾಸು ಮರಾಠಿ, ಕಾರ್ಯಕ್ರಮದ ಪ್ರೋತ್ಸಾಹಕರಾದ ವೆಂಕಟರಮಣ ದಾಸ್, ದಿವಾಕರ ಶೆಟ್ಟಿ ನೆಲ್ಯಾಡಿ, ಹನುಮಂತ ಶೇರುಗಾರ್, ಪ್ರತಿಭಾ ಕಾರಂಜಿ ನೋಡೆಲ್ ಆಫಿಸರ್ ಸುಧಾಕರ ದೇವಾಡಿಗ, ಬಿಆರ್‌ಪಿ ಕರುಣಾಕರ ಶೆಟ್ಟಿ, ಸಿಆರ್‌ಪಿ ದಿನಕರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಹಾಗೂ ಶ್ರೀ ರಾಮಕ್ಷತ್ರಿಯ ಮಾತೃ ಮಂಡಳಿ ನೇತೃತ್ವದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶ್ರೀಮದ್ಭಗವದ್ಗೀತಾ ಭೋದನಾ ಕಾರ್ಯಕ್ರಮದಲ್ಲಿ ಗೀತೆಯ ಬಗ್ಗೆ ಪ್ರವಚನ ನೀಡಿದ ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭ ನಿವೃತ್ತ ಉಪನ್ಯಾಸಕ ಶೇಷಪ್ಪಯ್ಯ ಮಾಸ್ಟರ್ ಅವರು ಮಾತನಾಡಿದರು. ಬೈಂದೂರು ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಪರಮೇಶ್ವರ ಹೋಬಳಿದಾರ್, ಯುವಕ ಮಂಡಲದ ಅಧ್ಯಕ್ಷ ಗುರುರಾಜ್, ಶ್ರೀಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಸಂಚಾಲಕ ರಾಮಕೃಷ್ಣ ಶೇರುಗಾರ್ ಬಿಜೂರು, ರಾಮಕ್ಷತ್ರಿಯ ಮಾತೃಮಂಡಳಿ ಗೌರವಾಧ್ಯಕ್ಷೆ ಸುಂದರಿ ಗಣಪತಿ, ಅಧ್ಯಕ್ಷೆ ವನಜಾ ಭಾಸ್ಕರ್ ಇದ್ದರು. ಪ್ರತಿ ಶನಿವಾರ ಒಂದೊಂದು ಅಧ್ಯಾಯವನ್ನು ಭೋದಿಸಲಾಗುತ್ತಿದ್ದು, ೧೮ನೇ ಅಧ್ಯಾಯ ಮುಗಿದ ಬಳಿಕ ಗುರುವಂದನೆ ಸಲ್ಲಿಸಲಾಯಿತು. ಶಿಕ್ಷಕ ಮಂಜುನಾಥ ಸ್ವಾಗತಿಸಿ, ಶಿಕ್ಷಕಿ ಶ್ರೀದೇವಿ ಮಹಾಬಲೇಶ್ವರ್ ವಂದಿಸಿದರು. ಉಪನ್ಯಾಸಕ ಕೇಶವ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಸಪ್ಟೆಂಬರ್ 7 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಕುಂದಾಪುರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಲಿರುವರು. ಕುಂದಾಪುರ ತಾಲೂಕಿನ ಇಲಾಖೆಯ ಅಧಿಕಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದಲ್ಲಿ, ಕುಂದಾಪುರ ತಾಲೂಕು ಕಚೇರಿಗೆ ಆಗಮಿಸಿ, ದೂರನ್ನು ಸಲ್ಲಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗಲಿದ್ದು, ಸ್ಥಳದಲ್ಲಿಯೇ ಇತ್ಯರ್ಥಪಡಿಸಬಹುದಾದ ದೂರುಗಳನ್ನು ಅಲ್ಲಿಯೇ ಇತ್ಯರ್ಥಪಡಿಸಲಾಗುವುದು. ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿಯ ನಮೂನೆ 1 ಮತ್ತು 2 ನ್ನು ಸ್ಥಳದಲ್ಲಿ ವಿತರಿಸಲಾಗುವುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೆಕ್ಕಟ್ಟೆಯ ಸೇವಾ ಸಂಗಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ನಡೆದ ಕುಂದಾಪುರ ವಲಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Read More