Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೊಯಿಸರ ಕ್ಲಾಂಪೆಕ್ಸ್‌ನಲ್ಲಿ ಬೆಳಕು ಎಂಟರ್‌ಪ್ರೈಸಸ್‌ನ ಸ್ಥಳಾಂತರಿತ ಕಛೇರಿ ಗುರುವಾರ ಶುಭಾರಂಭಗೊಂಡಿತು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಸ್ಥಳಾಂತರಿತ ಕಛೇರಿ ಉದ್ಘಾಟಿಸಿದರು. ಈ ಸಂದರ್ಭ ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಕಟ್ಟದ ಮಾಲಿಕರಾದ ಚಂದ್ರ ಜೋಯಿಸ್, ಉದ್ಯಮಿ ನೌಷದ್, ಬೆಳಕು ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಹಾಗೂ ಅವರ ತಂದೆತಾಯಿಗಳಾದ ಯಶೋಧ ಹಾಗೂ ನಾರಾಯಣ ದಂಪತಿಗಳು ಸೇರಿದಂತೆ ಇತರರರು ಉಪಸ್ಥಿತರಿದ್ದರು. ಕಳೆದ ಮೂರು ವರ್ಷಗಳಿಂದ ಬೆಳಕು ಎಂಟರ್‌ಪ್ರೈಸಸ್ – ಕಾಮನ್ ಸರ್ವಿಸ್ ಸೆಂಟರ್ ಹಾಗೂ ಸೇವಾ ಸಿಂಧು ಮೂಲಕ ಸರಕಾರಿ ಸೇವೆಗಳು, ಸ್ಕಾಲರ್‌ಶಿಪ್ ಸಲ್ಲಿಕೆ, ಉದ್ಯೋಗದ ಅರ್ಜಿ ಸಲ್ಲಿಕೆ ಸೇರಿದಂತೆ ಹತ್ತು ಹಲವು ಸೇವೆಗಳನ್ನು ಯಶಸ್ವಿಯಾಗಿ ನೀಡಲಾಗುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಗ್ರಾಮವನ್ನು ಈ ಭಾಗದ ಸಾರ್ವಜನಿಕರನ್ನು ಮತ್ತು ರೈತರಿಗೆ ಯಾವುದೇ ಮಾಹಿತಿ ನೀಡದೇ ಏಕಾಏಕಿ ಬೈಂದೂರು ಪಟ್ಟಣ ಪಂಚಾಯತ್‌ಗೆ ಸೇರಿಸಿರುವುದನ್ನು ವಿರೋಧಿಸಿ ಗುರುವಾರ ತಗ್ಗರ್ಸೆ ಗ್ರಾಮದ ಸಮಸ್ತ ರೈತರು ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕೃಷಿಕ ವೀರಭದ್ರ ಗಾಣಿಗ, ಈ ಹಿಂದೆ ಸರ್ಕಾರದ ಎಲ್ಲಾ ಸವಲತ್ತುಗಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಫಲಾನುಭವಿಗಳಿಗೆ ಸಿಗುತ್ತಿತ್ತು. ಆದರೆ ಕಳೆದ ಒಂದು ವರ್ಷದಿಂದ ಈ ಭಾಗದ ರೈತಾಪಿ ಜನರಿಗೆ ಯಾವುದೇ ಸವಲತ್ತುಗಳು ದೊರಕುತ್ತಿಲ್ಲ. ಬಡವರ್ಗದವರಿಗೆ ಆಶ್ರಯ ಯೋಜನೆಯಿಂದ ಸಿಗುವ ಮನೆಗಳಿಗೆ ಬಿಲ್ ಪಾವತಿಯಾಗುವುದಿಲ್ಲ. ಇತ್ತೀಚಿಗೆ ಮಳೆಯಿಂದ ಅಪಾರ ಹಾನಿಯಾಗಿದ್ದು, ಈ ಬಗ್ಗೆ ಸರ್ಕಾರದಿಂದ ಒಂದು ಚಿಕ್ಕಾಸು ಕೂಡ ಪರಿಹಾರ ದೊರೆಯಲಿಲ್ಲ. ತೋಟಗಾರಿಗೆ, ಕೃಷಿ ಸಂಬಂಧಿತ ಯಾವುದೇ ಪರಿಹಾರ ಸಿಗುತ್ತಿಲ್ಲ. ಎಂದು ಅವರು ಆರೋಪಿಸಿದರು. ಸ್ಥಳೀಯ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳಲ್ಲಿ ಈ ವಿಚಾರ ತಿಳಿಸಿದ್ದು, ಯಾರೊಬ್ಬರೂ ರೈತರ ಸಹಾಯಕ್ಕೆ ಬಂದಿಲ್ಲ. ಹೀಗಾಗಿ ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‌ಸೈಟ್ https://udupi.nic.in/ ನಲ್ಲಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆಗಸ್ಟ್ 28 ಮತ್ತು 29ರಂದು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಉಡುಪಿ 5, ಕುಂದಾಪುರದ 3 ಮತ್ತು ಕಾರ್ಕಳ 2 ಸೇರಿದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಕೋವಿಡ್ ನಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಆವರಣ, ಉಡುಪಿ ಯಲ್ಲಿ ಪ್ರತ್ಯೇಕ ಕೇಂದ್ರ ತೆರೆದಿದ್ದು, ಕೋವಿಡ್ ಬಾಧಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಾಗೂ ಪರೀಕ್ಷಾ ಕೇಂದ್ರಕ್ಕೆ ಬರಲು ಸೂಕ್ತ ವಾಹನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ವಿವರಗಳನ್ನು ಪದವಿ ಪೂರ್ವಶಿಕ್ಷಣ ಇಲಾಖೆಯ ಅಧಿಕಾರಿಗಳ ದೂ.ಸಂ: 9845953978 (ಗಿರೀಶ್ ಕುಲಕರ್ಣಿ) 9448416987 (ಮಂಜುನಾಥ ಭಟ್) ಇವರ ಬಳಿ ಮುಂಚಿತವಾಗಿ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ತ್ರಾಸಿ ಬೀಚ್ ಸಮೀಪದ ಪಾರ್ಕ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೋಲಿಸ್ ತಂಡ ದಾಳಿ ನಡೆಸಿ ರವಿರಾಜ್ (46)ನನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ತಾಲೂಕು ದಂಡಾಧಿಕಾರಿ ಅವರ ಅನುಮತಿ ಮೇರೆಗೆ ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆತನ ವಶದಲ್ಲಿದ್ದ 3000ರೂ. ಮೌಲ್ಯದ 100 ಗ್ರಾಂ ತೂಕದ ಗಾಂಜಾ, ನಗದು 380 ರೂ. ಸ್ವಾಧೀನಪಡಿಸಿಕೊಳ್ಳಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತೆರೆಯಲ್ಲಿ ಸುಮಾರು 3 ವರ್ಷದ ಹಿಂದೆ ಆರಂಭವಾದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮಂಜುರು ಮಾಡಿ ಶಂಕುಸ್ಥಾಪನೆ ಮಾಡಿದ್ದರು. ನಂತರ ಹಾಲಿ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಅವರು ಕೂಡ ಶಂಕುಸ್ಥಾಪನೆ ಮಾಡಿ ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ಕಳೆದ ಮೂರು ವರ್ಷಗಳಿಂದ ಈ ಬಸ್ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಶೀಘ್ರವೇ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಹಾಗೂ ತಾಲೂಕು ಕೇಂದ್ರವಾದ ಬೈಂದೂರಿಗೆ ಕೆ.ಎಸ್. ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸುವಂತೆ ಕ್ರಮ ಕೈಗೊಳ್ಳಲು ನಾಗರಿಕರು ಶಾಸಕರು ಹಾಗೂ ಸಂಸದರನ್ನು ಒತ್ತಾಯಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಅಂತರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಸಂತೋಷ್ ಕುಂದೇಶ್ವರ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಸಂತೋಷ ಕುಂದೇಶ್ವರ ಅವರನ್ನು ರೋಟರಿ ಕ್ಲಬ್ ಪರವಾಗಿ ಗೌರವಿಸಿದರು. ರೋಟರಿ ವಲಯ ಸೇನಾನಿ ಕೆ. ರಾಮನಾಥ ನಾಯಕ್, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ರೋಟರಿ ಸದಸ್ಯ ಕೃ? ಪೂಜಾರಿ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ನಾರಾಯಣ ನಾಯ್ಕ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಫ್ರೆಂಡ್ಸ್ ಬೀಜಾಡಿ ಎಂಬ ಹೆಸರಿನ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಸಮಯದಲ್ಲಿ ಕೋಡಿ ಸಿವಾಕ್ ಸಮೀಪದಲ್ಲಿ ಅಬ್ಬರದ ಅಲೆಗಳ ಹೊಡೆತಕ್ಕೆ ನಾಡದೋಣಿಯ ಬಲೆ ಸಂಪೂರ್ಣ ಛಿದ್ರಗೊಂಡು ಲಕ್ಷಂತಾರ ರೂ. ಹಾನಿಗೀಡಾಗಿದೆ. ಮೀನುಗಾರಿಕೆಯ ಬಲೆಗಳು ಸೇರಿದಂತೆ ಹಲವು ಉಪಕರಣಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಬೀಜಾಡಿ ಹಮೀದ್ ಸಾಹೇಬ್ ಎಂಬುವರ ಮಾಲಿಕತ್ವದ ದೋಣಿಯಲ್ಲಿ ಸುಮಾರು20 ಕ್ಕೂ ಹೆಚ್ಚು ಮಂದಿ ಕೈರಂಪಣಿ ಮೀನುಗಾರಿಕೆ ನಡೆಸುತ್ತಿದ್ದು ಮೀನುಗಾರಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದು, ಎಲ್ಲಾ ಮೀನುಗಾರರು ಸೇರಿ ಬಲೆಯನ್ನು ರಕ್ಷಣೆ ಮಾಡುವಲ್ಲಿ ಶ್ರಮ ವಹಿಸಿದರೂ ಅಲೆಗಳ ನೀರಿನ ಸೆಳತಕ್ಕೆ ಯಾವುದೇ ಪ್ರಯೋಜನವಾಗದೇ ಸಂಪೂರ್ಣ ಬಲೆ ತುಂಡು ತುಂಡಾಗಿ ಸೀವಾಕ್‌ನ ತಡೆಗೋಡೆಯ ಟೆಟ್ರಾಪೋಡ್ ಬ್ಲಾಕ್‌ಗಳಿಗೆ ಸಿಲುಕಿ ಹಿಡಿದ ಮೀನುಗಳು ಪುನಃ ಕಡಲು ಸೇರಿದೆ. ಹಿಡಿದ ಮೀನು ಉಳಿಸಿಕೊಳ್ಳಲು ಪ್ರಯತ್ನ: ದಿನವಿಡೀ ಹಿಡಿದ ಮೀನುಗಳನ್ನು ಉಳಿಸಿಕೊಳ್ಳಲು ಎಷ್ಟು ಪ್ರಯತ್ನ ಪಟ್ಟರೂ ಯಾವುದೇ ಫಲ ಸಿಗಲಿಲ್ಲ. ಸೀವಾಕ್‌ನ ತಡೆಗೋಡೆಗಳ ಸಮೀಪವೇ ಈ ಘಟನೆ ಆಗಿರುವುದರಿಂದ ಅಬ್ಬರದ ಅಲೆಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಚಿತ್ರ ನಟ ನಿರ್ದೇಶಕ ರಕ್ಷಿತ್ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಾವು ಹೊಸದಾಗಿ ಖರೀದಿಸಿದ ಆಡಿ ಕ್ಯೂ8 ಕಾರಿಗೆ ದೇವರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಒಂದು ಮುಡಿ ಅಕ್ಕಿ ಕಡುಬಿನ ಹರಕೆಯನ್ನು ದೇವರಿಗೆ ಸಮರ್ಪಿಸಿದರು. ಈ ಸಂದರ್ಭ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಅವರು ನಟ ರಕ್ಷಿತ್ ಶೆಟ್ಟಿಯನ್ನು ದೇವಳದ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸುವ ಗುರಿ ಇರಿಸಿಕೊಂಡಿದ್ದೇವೆ. ಕಳೆದ ವರ್ಷ ಹಾಗೂ ಈ ವರ್ಷ ಸೇರಿ ಈಗಾಗಲೆ 10 ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭಿಸಲಾಗಿದೆ. ಕೋವಿಡ್ ಕಳೆದ ಒಂದೂವರೆ ವರ್ಷಗಳಿಂದ ಮಕ್ಕಳ ಶಿಕ್ಷಣವನ್ನು ಹಾಳು ಮಾಡಿದೆ. ಕೋವಿಡ್‌ನಿಂದ ಹೋಟೆಲ್ ಉದ್ಯಮಕ್ಕೆ, ಬಸ್ ಉದ್ಯಮಕ್ಕೆ ಹಾಗೂ ಶಾಲೆಗಳಿಗೆ ತುಂಬಲಾರದ ನಷ್ಟವಾಗಿದೆ. ಹೋಟೆಲ್ ಹಾಗೂ ಬಸ್ ಉದ್ಯಮ ಸರಿಪಡಿಸಿಕೊಳ್ಳಬಹುದು. ಆದರೆ ಮಕ್ಕಳ ಶಿಕ್ಷಣದಲ್ಲಾದ ನಷ್ಟ ಸರಿಪಡಿಸಿಕೊಳ್ಳುವುದೇ ಕಷ್ಟ ಎಂಬಂತಾಗಿದೆ. ಈ ನಷ್ಟವನ್ನು ಶಿಕ್ಷಕರು ವಿಶೇಷ ಕಾಳಜಿ ಇಟ್ಟು ಸರಿಪಡಿಸಬೇಕು. ಎಲ್ಲಾ ಶಿಕ್ಷಕರು ಮುಂದಿನ ಎರಡು ವರ್ಷಗಳಲ್ಲಿ ಮಕ್ಕಳನ್ನು ಪುನರ್ ಸಿದ್ದಪಡಿಸಬೇಕು. ಸಮಾಜದ ಕಟ್ಟಕಡೆಯ ಮಗು ಕೂಡ ಯೋಗ್ಯ ಶಿಕ್ಷಣ ಪಡೆದಲ್ಲಿ ದೇಶ ಬದಲಾಗಲಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ನುಡಿದರು. ಅವರು ಚಿತ್ತೂರು ಸರಕಾರಿ ಹಿರಿಯ ಪ್ರಥಮಿಕ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ, ಸುಸಜ್ಜಿತ ಶೌಚಾಲಯ, ಆಂಗ್ಲ…

Read More