Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನಗಳ್ಳಿ ಗ್ರಾಮದ ನಿವಾಸಿ ಡಾ. ಸಂಗೀತಾ ಹೊಳ್ಳ ತಾಜ್ ಮಿಸ್ ಯುನಿವರ್ಸ್ 2022 ಸ್ವರ್ಧೆಯಲ್ಲಿ ವಿಜೇತರಾಗಿದ್ದಾರೆ. ಎನ್ಎಂಸಿ ಕಂಪನಿಯಲ್ಲಿ ಡಾಟಾ ಸೈಂಟಿಸ್ಟ್ ಆಗಿರುವ ಡಾ. ಸಂಗೀತಾ ಹೊಳ್ಳ, ಉತ್ತರಪ್ರದೇಶದ ಆಗ್ರಾ ಕ್ರಿಸ್ಟಲ್ ಸರೋವರ್ ಪ್ರೀಮಿಯರ್ ಹೋಟೆಲ್ನಲ್ಲಿ ಕಳೆದ ತಿಂಗಳು ನಡೆದ ತಾಜ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಶ್ವ ಸುಂದರಿ ವಿಭಾಗದಲ್ಲಿ 25 ಮಂದಿ ಭಾಗವಹಿಸಿದ್ದು, ಸಂಗೀತಾ ಅಂತಿಮ ಸುತ್ತುಗೆ ಆಯ್ಕೆಯಾಗಿದ್ದರು. ಅವರು ಮಿಸ್ ಯುನಿವರ್ಸ್ 2022 ಮತ್ತು ಮಿಸ್ ಯುನಿವರ್ಸ್ ಬ್ಯೂಟಿ ವಿತ್ ಬ್ರೈನ್ ಎಂಬ 2 ಪ್ರಶಸ್ತಿ ಗೆದ್ದಿದ್ದರು. ಈಕೆ ಕುಂದಾಪುರ ಆನಗಳ್ಳಿಯ ಕರ್ಣಾಟಕ ಬ್ಯಾಂಕ್ ಬೆಂಗಳೂರು ಉದ್ಯೋಗಿ ಲಕ್ಷ್ಮೀನಾರಾಯಣ ಹೊಳ್ಳ ಮತ್ತು ದಿ. ನಿರ್ಮಲಾ ಹೊಳ್ಳ ಅವರ ಪುತ್ರಿ. ಆಹಾರ, ವಸತಿ ಮತ್ತು ಮುಖ್ಯವಾಗಿ ಶಿಕ್ಷಣವಿಲ್ಲದೆ ಭಿಕ್ಷೆ ಬೇಡುವ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುವ ಬಯಕೆ ಇದೆ. ರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಬೇಕು. ಮೂಲಭೂತ ಶಿಕ್ಷಣ ಮುಖ್ಯವಾಗಿದ್ದು, ಅಜ್ಞಾನದ ಗೋಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ಎನ್.ಹೆಚ್-66ರ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು, ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.ಆಂಧ್ರಪ್ರದೇಶ ಮೂಲದ ಆದಿತ್ಯ ರೆಡ್ಡಿ (18) ಹಾಗೂ ಕಲ್ಲೂರು ತರುಣ್ ಕುಮಾರ ರೆಡ್ಡಿ (19) ಮೃತ ದುರ್ದೈವಿಗಳು. ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಾದ ಇವರು, ಮಣಿಪಾಲದಲ್ಲಿ ರೆಂಟ್ ಬೈಕ್ ಪಡೆದು ಮುರುಡೇಶ್ವರಕ್ಕೆ ತೆರಳುತ್ತಿದ್ದ ಸಂದರ್ಭ ಕಂಬದಕೋಣೆಯಲ್ಲಿ ಈ ಘಟನೆ ನಡೆದಿದೆ. ಗಂಗೊಳ್ಳಿಯ 24×7 ಆಪತ್ಭಾಂಧವ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ನೆರವಾದರು. ಇವರಿಗೆ ಪ್ರದೀಪ್ ಖಾರ್ವಿ ಉಪ್ಪುಂದ, ಚಾಲಕ ಕೃಷ್ಣ, ನದಿಮ್ ಸಹಕರಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆರೆಹಾವಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ಕಂಡಿಕೇರೆ, ನಾಡ ಗ್ರಾಮದ ಚಿಕ್ಕಳ್ಳಿ ಭಾಗಗಳಿಗೆ ಉದ್ಯಮಿ ಹಾಗೂ ಸಮಾಜ ಸೇವಕ ನಿತಿನ್ ನಾರಾಯಣ್ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಅವರು ದೂಣಿಯ ಮೂಲಕ ತೆರಳಿ 100ಕ್ಕೂ ಅಧಿಕ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ಹಾಗೂ ನೆರೆಯ ಸಂದರ್ಭ ಸೇವೆಯಲ್ಲಿ ತೊಡಗಿಕೊಳ್ಳುವ ಸ್ಥಳೀಯ ಯುವಕರಿಗೆ ಸೇಫ್ ಜಾಕೆಟ್‌ಗಳನ್ನು ವಿತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಕ್ಕಿಂತ ಶ್ರೇಷ್ಠವಾದುದು ನಿಸ್ಚಾರ್ಥ ಸೇವೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಮಕ್ಷತ್ರಿಯ ಸಮುದಾಯದ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶ್ರೀ ರಾಮ ವಿವಿಧೋದ್ಧೇಶ ಟ್ರಸ್ಟ್ ಜುಲೈ.24ರ ಭಾನುವಾರ ಹತ್ತನೇ ವರ್ಷದ ಟ್ರಸ್ಟ್ ದಿನಾಚರಣೆ ಆಚರಿಸಲಿದೆ ಎಂದು ಆಡಳಿತ ಟ್ರಸ್ಟೀ ಬಿಜೂರು ರಾಮಕೃಷ್ಣ ಶೇರುಗಾರ್ ಹೇಳಿದರು. ಬೈಂದೂರಿನಲ್ಲಿ ಶನಿವಾರ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಬೈಂದೂರು ಪರಿಸರದ ರಾಮಕ್ಷತ್ರಿಯ ಸಮುದಾಯದ ವಿದ್ಯಾರ್ಥಿಗಳು, ವಿಧವೆಯರು, ವಸತಿ ರಹಿತರು, ಅಶಕ್ತರು, ಅನಾಥರು, ರೋಗಿಗಳ ಹಾಗೂ ಬಡವರ ಸಹಾಯಕ್ಕಾಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅಗತ್ಯ ಸಹಕಾರ ನೀಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶದಿಂದ ಕಳೆದ ಹತ್ತು ವರ್ಷಗಳಿಂದ ಟ್ರಸ್ಟ್ ಕಾರ್ಯಪ್ರವೃತ್ತವಾಗಿದೆ ಎಂದರು. 2012 ರಿಂದ ಈ ವರೆಗೆ 20 ಮಂದಿ ಟ್ರಸ್ಟಿಗಳನ್ನು ಒಳಗೊಂಡು ಕಾರ್ಯಾಚರಿಸುತ್ತಿರುವ ಸಂಸ್ಥೆಯು ವಿವಿಧ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಶ್ರೀ ರಾಮ ಪ್ರತಿಭಾ ಪುರಸ್ಕಾರ ಯೋಜನೆಯ ಮೂಲಕ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಹಾಗೂ ಪದವಿ ತರಗತಿಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ವತಿಯಿಂದ ತನ್ನ ಸಾಮಾಜಿಕ ಜವಾಬ್ದಾರಿ ಚಟುವಟಿಕೆಯಡಿ ಹಾರಾಡಿಯ ಡಯಾಲಿಸಿಸ್ ಕೇಂದ್ರಕ್ಕೆ ಎರಡು ಐಸಿಯು ಬೆಡ್ಗಳನ್ನು ಕೊಡುಗೆಯಾಗಿ ನೀಡಿತು. ಹಾರಾಡಿಯಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ರೋಟರಿ ಕ್ಲಬ್ ಬ್ರಹ್ಮಾವರ ಅವರ ಸುವರ್ಣ ಮಹೋತ್ಸವ ಯೋಜನೆಯ ಸಂದರ್ಭದಲ್ಲಿ ಕೊಡುಗೆಯಾಗಿ ನೀಡಲಾಗಿದ್ದು ಇದನ್ನು ಡಾ. ಎ.ವಿ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ನಿರ್ವಹಿಸುತ್ತದೆ. ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ಸ್ ಸಂಸ್ಥೆಗಳ ಫಿಸಿಯೋಕೇರ್, ಫಿಸಿಯೋಥೆರಪಿ ಮತ್ತು ಪುನರ್ವಸತಿ ಕೇಂದ್ರದ ಉದ್ಘಾಟನೆಯ ಸಂದರ್ಭದಲ್ಲಿ ಎರಡು ಐಸಿಯು ಹಾಸಿಗೆಗಳನ್ನು ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕ ಶಶಿಧರ ಶೆಟ್ಟಿ ಹಸ್ತಾಂತರಿಸಲಾಯಿತು. ಡಾ. ಪಿ. ವಿ. ಭಂಡಾರಿ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಸದಸ್ಯರು, ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ಸ್ ಸಂಸ್ಥೆಯ ಪಾಲುದಾರ ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಘಟನೆ ಶನಿವಾರ ನಡೆದಿದೆ. ಮಳೆಯಿಂದಾಗಿ ಕುಂಭಾಸಿ ಕೊರಡಿ ಕ್ರಾಸ್ ಬಳಿ ಸುಮಾರು 2 ಅಡಿ ಆಳದ ಹೊಂಡ ನಿರ್ಮಾಣವಾಗಿದ್ದು ಮಳೆ ನಿಂತಿದ್ದರಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಅದೇ ಹೊಂಡಕ್ಕೆ ಇಳಿದಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರ 300 ಮೀಟರ್ ದೂರದ ತನಕ ಡಿವೈಡರ್ ಮೇಲೆ ಬಸ್ ಚಲಿಸಿದೆ. ಬಸ್ ಕನ್ನುಕೆರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು ಚಾಲಕನ ಸಮಯಪ್ರಜ್ಞೆಯಿಂದ ಪಲ್ಟಿಯಾಗುವುದು ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ’ಮೌಲ್ಯಾಧಾರಿತ ಶಿಕ್ಷಣ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು. ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಧ್ಯಾಪಕ ಚೇತನ್ ಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಕಾಲದ ಬದಲಾವಣೆಗಳ ಜೊತೆಗೆ ಹೆಜ್ಜೆ ಹಾಕುವಾಗ ಸಮಯಪ್ರಜ್ಞೆ ಅತಿಮುಖ್ಯ. ನಿರ್ಧಿಷ್ಟ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಪ್ರಯತ್ನ ಪಡಬೇಕು. ಹಾಗೇ ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ. ಏಕೆಂದರೆ ಎಷ್ಟೋ ವಿದ್ಯಾರ್ಥಿಗಳು ತನ್ನ ಶೈಕ್ಷಣಿಕ ಹಂತದಲ್ಲಿ ಶಿಕ್ಷಕರು ಹಾಕಿಕೊಟ್ಟ ಉತ್ತಮ ಮಾರ್ಗದಲ್ಲಿಯೇ ನಡೆದು ಯಶಸ್ಸನ್ನು ಪಡೆಯುತ್ತಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ. ಲಲಿತಾದೇವಿ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಮೈತ್ರಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸೌಮ್ಯ ಕಾರ್ಯಕ್ರಮ ನಿರ್ವಹಿಸಿ, ಚಂದ್ರಿಕಾ ಪರಿಚಯಿಸಿ ಪ್ರಿಯಾಂಕಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ ದೇಶದ ಜ್ಞಾನದ ಪರಂಪರೆಯನ್ನು ಕಂಡು ವಿಶ್ವವೇ ನಮಗೆ ಸೋತಿತು. ಭಾರತೀಯರ ಇತರರ ಮೇಲೆ ಆಕ್ರಮಣಗೈದು ವಿಶ್ವಗುರುವಾಗಲಿಲ್ಲ. ಇಲ್ಲಿನ ಜ್ಞಾನ ಪರಂಪರೆಯಿಂದಷ್ಟೇ ಅದು ಸಾಧ್ಯವಾಯಿತು ಎಂದು ಉಡುಪಿ ಜಿಲ್ಲಾ ಶಾರೀರಿಕ್ ಪ್ರಮುಖ್ ಪ್ರಶಾಂತ್ ಅರೆಶಿರೂರು ಹೇಳಿದರು. ಶನಿವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೈಂದೂರು ಮಂಡಲದ ವತಿಯಿಂದ ಇಲ್ಲಿನ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಗುರುಪೂಜಾ ಉತ್ಸವದಲ್ಲಿ ಬೌದ್ಧಿಕ್ನಲ್ಲಿ ಮಾತನಾಡಿ ಮಹರ್ಷಿ ವ್ಯಾಸರನ್ನು ಎಲ್ಲರೂ ಆದಿಗುರು ಎನ್ನುತ್ತಾರೆ. ಅವರ ಜನ್ಮಜಯಂತಿಯಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗುರುಪೂರ್ಣಿಮೆ ಉತ್ಸವ ಆಚರಿಸುತ್ತೇವೆ. ಸ್ವಾವಲಂಬಿಯಾಗಿ ಬದುಕು ಎಂಬ ನಮ್ಮ ಪರಂಪರೆಯಲ್ಲಿ ಗುರಿವಿಗೆ ಮಾತ್ರವೇ ಗುಲಾಮನಾಗು ಎಂಬ ಸಂದೇಶ ನೀಡಲಾಗಿದೆ. ನಮ್ಮ ಸಂಸ್ಕೃತಿಯಲ್ಲಿ ಅದಕ್ಕೆ ಪ್ರಮುಖ್ಯತೆ ಇದೆ ಎಂದರು. ಸಮಾಜದ ಮೇಲೆ ಆಕ್ರಮಣಗಳಾದಾಗ ಅದನ್ನು ಬಡಿದೆಬ್ಬಿಸುವ ಕಾರ್ಯವನ್ನು ಗುರು ಮಾಡಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ. ನಾಗರಾಜ ಖಾರ್ವಿ ಮಾತನಾಡಿ ಇಂದಿನ ಯುವ ಜನಾಂಗ ಸಾಮಾಜಿಕ ಸ್ಥಿತ್ಯಂತರಗಳ ಕಾರಣದಿಂದ ಮುಖ್ಯಭೂಮಿಕೆಯಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಜು.16: ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ಸರಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆದಿದೆ. ರಾಜ್ಯ ಸರಕಾರದ ಈ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ಜುಲೈ 15ರ ರಾತ್ರಿಯೇ ಪೋಟೋ ಕ್ಲಿಕ್ಕಿಸುವುದು ಹಾಗೂ ವಿಡಿಯೋ ಚಿತ್ರಿಕರಣ ನಿಷೇಧದ ಆದೇಶವನ್ನು ಹಿಂಪಡೆದಿದೆ. ಈ ವಿಚಾರದಲ್ಲಿ ಇನ್ನು ಯಥಾಸ್ಥಿತಿ ಮುಂದುವರಿಯಲಿದೆ. ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧಿಸುವ ಬಗ್ಗೆ ಜುಲೈ 15ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದರು. ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಸಂದರ್ಭದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಗಳು ಅಂದರೆ ಗ್ರಾಮ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಎಲ್ಲಾ…

Read More