ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿಗಳು ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ನೈತಿಕ ಶಕ್ತಿಯನ್ನು ನೀಡುತ್ತವೆ. ಆಯ್ಕೆ ಪ್ರಕ್ರಿಯೆಯಲ್ಲಿ ಸರ್ಕಾರದಲ್ಲಿ ನೇರ ನೇಮಕಾತಿ ಹಾಗೂ ಸಂದರ್ಶನ ಎಂಬ ಎರಡು ನಿಯಮಗಳಿವೆ. ಇದರ ಜೊತೆಗೆ ಸಂದರ್ಶನ ಎನ್ನುವ ತಂತ್ರಗಾರಿಕೆಯೂ ಇದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟದ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾದ ಶಿಕ್ಷಕ ಹುದ್ದೆಗಳ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರು ಸಂದರ್ಶನದಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಯಾಗುವ ಘಟನೆಗಳೂ ನಡೆಯುತ್ತವೆ. ಆದರೆ ನ್ಯಾಯಲಯಗಳು ತಡೆಯಾಜ್ಞೆ ನೀಡದೇ ಇರುವ ಒಂದೇ ಒಂದು ನಿಯಮ ಎಂದರೆ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಹಾಗೂ ರೋಸ್ಟರ್ ಪದ್ದತಿಯಲ್ಲಿ ನೇಮಕಾತಿ ಮಾಡುವುದು. ಮೆರಿಟ್ ಇದ್ದೂ ಪರೀಕ್ಷಾ ಪೂರ್ವ ಸಿದ್ಧತೆಗಳಿಲ್ಲದಿದ್ದರೆ ಅಭ್ಯರ್ಥಿಗಳ ಆಯ್ಕೆಗೆ ತೊಡಕಾಗುತ್ತದೆ. ಆ ನಿಟ್ಟಿನಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಜರಾತ್‌ನ ಏಕ್ತಾ ನಗರದಲ್ಲಿ ಜರುಗಿದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ನಾನಿರುವುದೇ ನಿಮಗಾಗಿ ನಾಡಿರುವುದೇ ನಮಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ” ಕೃತಿಗೆ ಡಾ. ಪ್ರದೀಪ್ ಕೆಂಚನೂರು ಅವರಿಗೆ ಅತ್ಯುತ್ತಮ ಸಿನಿಮಾ ಆಧಾರಿತ ಪುಸ್ತಕ ವಿಭಾಗದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಪ್ರದೀಪ್ ಕೆಂಚನೂರು ಹಾಗೂ ಪುಸ್ತಕ ಪ್ರಕಾಶನಕ್ಕಾಗಿ ಪತ್ನಿ ಸೌಮ್ಯ ಪ್ರದೀಪ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ ► ಡಾ. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – https://kundapraa.com/?p=98971 . ಇದನ್ನೂ ಓದಿ ► ಡಾ. ಪ್ರದೀಪ್ ಕುಮಾರ ಶೆಟ್ಟಿ ಅವರಿಗೆ ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ – https://kundapraa.com/?p=100044 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವರು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಗಾಂಧಿ ಮೈದಾನದಲ್ಲಿ ನಡೆಸಿದ ಖಂಬದಕೋಣೆ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇ೦ಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರು 200 ಮೀ. ಓಟದ ಸ್ಪರ್ಧೆಯಲ್ಲಿ ಜಯಶಾಲಿಗಳಾಗಿ ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. 14ರ ವಯೋಮಾನದ ಬಾಲಕಿಯರ ವಿಭಾಗದ 200 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಶರಣ್ಯ ಪ್ರಥಮ ಸ್ಥಾನ ಪಡೆದುಕೊಂಡರೆ, 17ರ ವಯೋಮಾನದ ಬಾಲಕಿಯರ ವಿಭಾಗದ 200 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಚಾರ್ವಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡರು. ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಿಂಚು ಹರಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ ಬೋಧಕೇತರ ವೃಂದದವರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ 14ರ ವಯೋಮಾನದ ಹುಡುಗರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರತಿಭೆ ಮೆರೆದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್ ಜಿ. ಹೆಗ್ಡೆ, ಲಿಯೋನ್ ಡಿ. ಹಾಗೂ ಎಂ. ಆತ್ಮಯ್ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಾಗೂ ಸಂಘಟಿತ ಪ್ರಯತ್ನಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಉಪ್ಪುಂದ ದೇವಾಡಿಗರ ಸಂಘ ರಿ. ಮಹಿಳಾ ಘಟಕದ ನೇತೃತ್ವದಲ್ಲಿ ಕೆರ್ಗಾಲ್‌ನ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಭವನದಲ್ಲಿ ‘ಅರಿಶಿನ ಕುಂಕುಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರ’ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಮಚಂದ್ರ ದೇವಾಡಿಗ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷರಾದ ಗಿರಿಜಾ ದೇವಾಡಿಗ ಮಾತನಾಡಿ, “ಅರಿಶಿನ ಕುಂಕುಮವು ಮಹಿಳೆಯರಿಗೆ ಸೌಭಾಗ್ಯದ ಸಂಕೇತವಾಗಿದೆ. ನಮ್ಮ ಹಿಂದೂ ಸಮಾಜದಲ್ಲಿ ಯಾರಾದರೂ ಅರಿಶಿನ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಿ ಆಹ್ವಾನಿಸಿದಾಗ ಮಹಿಳೆಯರು ಪ್ರೀತಿಯಿಂದ ಭಾಗವಹಿಸುತ್ತಾರೆ. ಇಂತಹ ಕಾರ್ಯಕ್ರಮಗಳು ಮಹಿಳೆಯರ ನಡುವೆ ಆತ್ಮೀಯತೆ ಹಾಗೂ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸುತ್ತವೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಿಯದರ್ಶಿನಿ ದೇವಾಡಿಗ ಹಾಗೂ ಸಂಘದ ಗೌರವಾಧ್ಯಕ್ಷರಾದ ಶ್ರೀ ರವೀಂದ್ರ ಎಚ್. ದೇವಾಡಿಗ ಮಹಿಳಾ ಘಟಕದ ಕಾರ್ಯದರ್ಶಿ ಸೀತಾ ದೇವಾಡಿಗ ಮಹಾಬಲೇಶ್ವರ, ಉಪಾಧ್ಯಕ್ಷೆಯರಾದ ಸೀತು ದೇವಾಡಿಗ ಮೂರ್ತಿಮನೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ 2026 ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಇಂಪನಾ ಆರ್ (4ನೇ ತರಗತಿ) ಪ್ರಥಮ ಸ್ಥಾನ, ಅಧ್ವಿಕ್ ಕ್ಷತ್ರೀಯ (4ನೇ ತರಗತಿ) ಐದನೆಯ ಸ್ಥಾನ ಹಾಗೂ ಕೌಸ್ತುಭ (6ನೇ ತರಗತಿ )ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಈಚಲ ಮರದಲ್ಲಿ ಮಾವಿನ ಹಣ್ಣು ಬಿಡುವುದಿಲ್ಲ. ಮಾವಿನ ಮರದಲ್ಲಿ ಬಿಟ್ಟ ಹಣ್ಣಿಗಷ್ಟೇ ಮಾವಿನ ಹಣ್ಣು ಎನ್ನುವುದು. ಹಾಗೆಯೇ ದೇಶೀ ಗೋವಿನ ಹಾಲಿನಿಂದ ತಯಾರಾದ ತುಪ್ಪಕ್ಕಷ್ಟೇ ತುಪ್ಪ ಎಂದು ಹೇಳಬಹುದು. ಮೂಲದಲ್ಲಿ ಗೋವು ಇಲ್ಲದ ಹಾಲು, ಮೊಸರು, ಬೆಣ್ಣೆ ಮತ್ತು ತುಪ್ಪಗಳು ನಕಲಿ ಎನಿಸಿಕೊಳ್ಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ತುಪ್ಪದ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಉತ್ಕೃಷ್ಟ ಮೂಲದ್ರವ್ಯ ಹಾಗೂ ಸಮರ್ಪಕವಾದ ಸಂಸ್ಕಾರದಿಂದ ಮಾತ್ರ ಶ್ರೇಷ್ಠ ತುಪ್ಪ ಲಭ್ಯವಾಗುತ್ತದೆ. ಹಸು ಹಾಗೂ ಎಮ್ಮೆ ಹೇಗೆ ಬೇರೆಬೇರೆಯೋ, ದೇಶಿ ಗೋವು ಹಾಗೂ ಮಿಶ್ರತಳಿ ಹಸು ಕೂಡ ಅಷ್ಟೇ ವಿಭಿನ್ನ. ಅವುಗಳು ಇಂದಿನ ವೈಜ್ಞಾನಿಕ ಪದ್ಧತಿಯಲ್ಲಿಯೂ ಸಂಪೂರ್ಣ ಭಿನ್ನವಾಗಿ ಗುರುತಿಸಲ್ಪಟ್ಟಿದೆ. ಮಿಶ್ರತಳಿಯ ಹಸುಗಳು ಮಾನವನ ಹಸ್ತಕ್ಷೇಪದ ಕಾರಣದಿಂದ ಗುಣಗಳನ್ನೇ ಕಳೆದುಕೊಂಡಿದ್ದು, ಅವುಗಳಿಂದ ಪಡೆಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಳೆ ಕೈಕೊಟ್ಟ ಕಾರಣ ಬೀಕರ ಬರಗಾಲಕ್ಕೆ ತುತ್ತಾಗಿರುವ ಕುಂದಾಪುರ ತಾಲ್ಲೂಕನ್ನು ರಾಜ್ಯ ಸರ್ಕಾರ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಬೇಕಾಗಿ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಈ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಅಣೆಕಟ್ಟುಗಳಲ್ಲಿ ನೀರಿನ ಒಳ ಹರಿವು ಕಡಿಮೆಯಾಗಿರುವ ಈ ಕಾಲಘಟ್ಟದಲ್ಲಿ ಕುಂದಾಪುರ ತಾಲ್ಲೂಕಿನಲ್ಲೂ ಕೂಡ ಮಳೆ ಕೊರತೆಯಿಂದ ಬೀಕರ ಬರಗಾಲ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಬತ್ತದ ಕೃಷಿ ಸಂಪೂರ್ಣ ಹಾನಿಯಾಗಿದ್ದು, ಮಳೆ ಕೊರತೆಯಿಂದ ಇತರೆ ವಾಣಿಜ್ಯ ಬೆಳೆಗಳೂ ಕೂಡ ಮಳೆ ಕೊರತೆಯಿಂದ ಹಾನಿಗೆ ಒಳಗಾಗಿವೆ. ಇನ್ನು ಕುಂದಾಪುರ ತಾಲ್ಲೂಕಿನ ಜೀವನದಿಯಾದ ವರಾಹಿ ನದಿಗೆ ಮೂಲವಾದ ಮಾಣಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಕಡಿಮೆಯಾಗಿದ್ದು ಈ ವರ್ಷ ವರಾಹಿ ನದಿ ನೀರು ನಂಬಿರುವ ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯತುಗಳಿಗೆ ಅತೀವ ಕುಡಿಯುವ ನೀರಿನ ತೊಂದರೆ ಜನವರಿ ತಿಂಗಳಲ್ಲೇ ತಲೆದೋರುವುದು ಖಂಡಿತ. ಅದರ ಜೊತೆ ವರಾಹಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಶ್ವ ಹಿರಿಯ ನಾಗರಿಕ ದಿನಾಚರಣೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯಡಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸುವ ಸಲುವಾಗಿ ಪೂರ್ವಭಾವಿ ಸಭೆಯು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಅಕ್ಟೋಬರ್ 1 ರಂದು ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಅಂದು ಬೆಳಗ್ಗೆ 9 ರಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದರು. ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟೆಂಬರ್ 28 ರಂದು ಬೆಳಗ್ಗೆ 9 ರಿಂದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾ ವಿಭಾಗದಲ್ಲಿ ಬಿರುಸಿನ ನಡಿಗೆ, ಬಕೆಟ್‌ಗೆ ಬಾಲ್ ಎಸೆಯುವುದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಲಲಿತ ಕಲಾ ಸಂಘದ ವತಿಯಿಂದ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ ಆಯೋಜಿಸಲಾಯಿತು. ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಈ ಭೇಟಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಲ್ಲಿನ ಪಾರಂಪರಿಕ ಕಲೆ, ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ವೈಶಿಷ್ಟ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಛಾಯಾಚಿತ್ರಗಳು, ಶಿಲೆಗಳು ಹಾಗೂ ಅಲ್ಲಿನ ವಿವಿಧ ಐತಿಹಾಸಿಕ ಮತ್ತು ಕಲಾತ್ಮಕ ಅಂಶಗಳ ಮೂಲಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸಿದರು. ವಿದ್ಯಾರ್ಥಿಗಳು ಅಲ್ಲಿನ ವಿವಿಧ ಕಲಾಕೃತಿಗಳು, ಐತಿಹಾಸಿಕ ಕುರುಹುಗಳು ಹಾಗೂ ಪಾರಂಪರಿಕ ವಸ್ತುಗಳನ್ನು ವೀಕ್ಷಿಸುವ ಮೂಲಕ ನಮ್ಮ ನಾಡಿನ ಕಲೆ, ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಂಡರು. ಈ…
