Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸರ್ಕಾರಿ ಸಂಸ್ಥೆ ಎಂದು ಅದನ್ನು ಕಡೆಗಣಿಸದೆ ಪರಿಸರದ ಎಲ್ಲ ವರ್ಗಗಳ ಮಕ್ಕಳು ಇಲ್ಲಿ ಸೇರಿ ಶಿಕ್ಷಣ ಪಡೆಯಬೇಕು ಎಂದು ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಹೇಳಿದರು. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಥಮ ವರ್ಷದ 148 ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಒದಗಿಸಿದ ಲ್ಯಾಪ್‌ಟಾಪ್ ವಿತರಿಸಿ ಅವರು ಮಾತನಾಡಿದರು. ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಾಲ್ಕು ದಶಕಗಳಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಪದವಿ ಶಿಕ್ಷಣ ನೀಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಸರ್ಕಾರ ಶಿಷ್ಯವೇತನ ನೀಡುವುದರ ಜೊತೆಗೆ ಕಲಿಕೆಗೆ ಪೂರಕವಾಗುವ ಲ್ಯಾಪ್‌ಟಾಪ್ ಕೊಡುತ್ತಿದೆ. ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು. ಈ ಕಾಲೇಜಿನಲ್ಲಿ ಕಲಾ ವಿಭಾಗ, ವಾಣಿಜ್ಯ ವಿಭಾಗ ಮತ್ತು ವಿಜ್ಞಾನ ವಿಭಾಗಗಳು ಇವೆ. ಎಲ್ಲ ವಿಷಯಗಳ ಬೋಧನೆಗೂ ಶಿಕ್ಷಕರಿದ್ದಾರೆ. ಅಗತ್ಯ ಮೂಲಸೌಲಭ್ಯಗಳು ಇವೆ. ಕೊಠಡಿ ಕೊರತೆ ಆಗಬಾರದೆಂದು ನೂತನ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ನ್ಯಾಕ್ ಬಿ ವರ್ಗೀಕರಣ ಪಡೆದಿರುವ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಇಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬದುಕಿನಲ್ಲಿ ಯಶಸ್ಸು ಸಾಧಿಸಲು ಕ್ರೀಡೆ ಪ್ರಮುಖಪಾತ್ರ ವಹಿಸುತ್ತದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ಮುನ್ನೆಡೆಯುತ್ತಿರುವ ಯುವ ಸಮುದಾಯ ಅರ್ಥಪೂರ್ಣವಾದ ಬದುಕನ್ನು ಕಟ್ಟಿಕೊಳ್ಳುವುದರ ಜೊತೆಯಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾದ ಅಗತ್ಯ ಇದೆ ಎಂದು ಕುಂದಾಪುರ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಹರೀಶ್ ಆರ್‌ ನಾಯ್ಕ್‌ ಹೇಳಿದರು. ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಳ್ಳುವ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ವಿಷಯಗಳ ಜೊತೆ ಜೊತೆಯಲ್ಲೇ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಜವಾಬ್ದಾರಿಗಳ ಕುರಿತು ವಿದ್ಯಾರ್ಥಿಗಳಿಗೆ ಆಸಕ್ತಿ ಬೆಳೆಸಿ, ಬೋಧನೆ ನೀಡುವುದರಿಂದ ನಮ್ಮ ಸಮಾಜದ ಭವಿಷ್ಯದ ಪ್ರಜೆಗಳ ಬಾಳು ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಅಂತರರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಗಿರೀಶ್ ಗೌಡ, ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಿದರು. ಪ್ರಾಂಶುಪಾಲ ಡಾ.ರಾಜೇಂದ್ರ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿಗೆ ಸಮೀಪದ ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12‌ನೇ ಪದವಿ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿ.ಟಿ.ಯು. ವಿಶ್ವವಿದ್ಯಾಲಯದ ಮಂಗಳೂರು ವಿಭಾಗದ ವಿಶೇಷ ಅಧಿಕಾರಿ ಡಾ.ಶಿವಕುಮಾರ ಅವರು, ಪದವೀಧರರಿಗೆ ಇರಬೇಕಾದ ಜವಾಬ್ದಾರಿ ಮತ್ತು ಉದ್ಯೋಗ ಅವಕಾಶಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ಧಾರ್ಥ ಜೆ.ಶೆಟ್ಟಿ, ಪದವೀಧರರಿಗೆ ಅಭಿನಂದನೆ ಸಲ್ಲಿಸಿದರಲ್ಲದೆ, ವಿದ್ಯಾರ್ಥಿಗಳು ತಾವು ಕಲಿತ ಸಂಸ್ಥೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಹಾರೈಸಿದರು. ಪ್ರಾಂಶುಪಾಲ ಡಾ.ಜಿ.ಎಸ್.ಕಾಟಯ್ಯ, ಅಕಾಡೆಮಿಕ್ ನಿರ್ದೇಶಕ ಡಾ.ಚಂದ್ರ ರಾವ್ ಮದನೆ, ಕಾರ್ಯಕ್ರಮ ಸಂಯೋಜಕ ಪ್ರೊ.ಸತೀಶ್ ಅಂಸಾಡಿ ಇದ್ದರು. ಉನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡುವ ವಿದ್ಯಾರ್ಥಿ ವೇತನ ಪಡೆದ ಪಡೆದ ಸಿವಿಲ್ ವಿಭಾಗದ ವಿದ್ಯಾರ್ಥಿನಿ ಛಾಯಾ ಅಭಿಪ್ರಾಯ ಹಂಚಿಕೊಂಡರು. ವಿದ್ಯಾರ್ಥಿಗಳಾದ ಹೇಮಂತ ಸ್ವಾಗತಿಸಿದರು, ವರ್ಷ ಹಾಗೂ ಡಿಯೋನಾ ನಿರೂಪಿಸಿದರು, ಲಕ್ಷ್ಮಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ 75ನೇ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಆಹ್ವಾನಿತ ಶಾಲಾ ಬಾಲಕ-ಬಾಲಕಿಯರ ತಂಡಗಳ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭ ಗಂಗೊಳ್ಳಿ ಎಸ್.ವಿ.ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿದ್ದ ಬಸ್ರೂರು ಕರ್ಣಾಟಕ ಬ್ಯಾಂಕ್‌ನ ಮ್ಯಾನೇಜರ್ ಮಹಾಬಲ ಕೆ. ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸದ್ದರು. ನಿವೃತ್ತ ಶಿಕ್ಷಕ ಮುಡೂರ ಅಂಬಾಗಿಲು, ಗುಜ್ಜಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಯುತ್ ಕ್ಲಬ್ ಅಧ್ಯಕ್ಷ ಶ್ರೀಧರ ಮೇಸ್ತ, ರಾಧಿಕಾ ಮೇಸ್ತ, ದೀಪಾ ಮೇಸ್ತ, ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಜಗದೀಶ ನಾಯಕವಾಡಿ, ದೇವಸ್ಥಾನದ ಉಪಾಧ್ಯಕ್ಷ ಸುರೇಶ ಜಿ., ಅರುಣ್ ಕುಮಾರ್, ಗುರುರಾಜ್ ಜಿ., ಮಂಜುನಾಥ ಜಿ.ಟಿ., ನಾಗಿಣಿ, ಸುಶೀಲ, ಗಂಗಾ, ಸುಮಿತ್ರಾ, ಜಯಂತಿ, ವಿಘ್ನೇಶ ಜಿ.ಕೆ., ಗೌರಿ, ನರಸಿಂಹ, ಶಿವ ಜಿ.ಟಿ., ಮಮತಾ, ತೀರ್ಪುಗಾರರಾದ ಜಗದೀಶ ಎಂ.ಜಿ., ಸಂದೀಪ ಎಂ.ಜಿ. ಮತ್ತಿತರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಬ್ರಹ್ಮಾವರ ರುಡ್‌ಸೆಟ್ ಇವರ ಆಶ್ರಯದಲ್ಲಿ ಗಂಗೊಳ್ಳಿ ಇಗರ್ಜಿಯ ವ್ಯಾಪ್ತಿಯ ಮಹಿಳೆಯರಿಗೆ ಗಂಗೊಳ್ಳಿ ಇಗರ್ಜಿಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ 10 ದಿನದ ಸ್ವ ಉದ್ಯೋಗ ತರಬೇತಿ ಕಾರ್ಯಾಗಾರವನ್ನು ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಇಗರ್ಜಿಯ ಧರ್ಮಗುರು ರೆ.ಫಾ. ಅಲ್ಬರ್ಟ್ ಕ್ರಾಸ್ತಾ ಬುಧವಾರ ಉದ್ಘಾಟಿಸಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಪಾಪಾ ನಾಯಕ್, ಉಪನ್ಯಾಸಕ ಕರುಣಾಕರ ಜೈನ್, ತರಬೇತಿ ಶಿಕ್ಷಕಿ ಅಶ್ವಿನಿ ದೇಸಾಯಿ, ಸಂಪದ ಸಂಸ್ಥೆಯ ಸಂಯೋಜಕಿ ಜುಡಿತ್ ಡಿಸೋಜ, ಸುಗಮ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಡೆಸಾ, ಅಮೃತಾ ಮಹಾ ಸಂಘದ ಅಧ್ಯಕ್ಷೆ ಆಶಾ ರೆಬೆರೊ, ಕಾರ್ಯದರ್ಶಿ ಪ್ಲೊಸಿ ಬ್ರಗಾಂಜ, ಸ್ತ್ರೀ ಸಚೇತಕಿ ಜ್ಯೋತಿ ಎ.ಸಿ., 18 ಆಯೋಗದ ಸಂಯೋಜಕಿ ಪ್ರೀತಿ ಫೆರ್ನಾಂಡಿಸ್ ಮತ್ತಿತರರು ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷೆ ಆಶಾ ರೆಬೆರೊ ಸ್ವಾಗತಿಸಿದರು. ಪ್ರೀತಿ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಪ್ಲೊಸಿ ಬ್ರಗಾಂಜ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು:  ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವಾಲಯದ ಅಧಿಸೂಚನೆಯಂತೆ ಉಡುಪಿ ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸುತ್ತೋಲೆಯಂತೆ ಪ್ಲಾಸ್ಟಿಕ್ ಮುಕ್ತ ಉಡುಪಿ ಜಿಲ್ಲೆ ಮಾಡುವ ಉದ್ಧೇಶದಿಂದ ಮೊದಲ ಹಂತದಲ್ಲಿ ಉಡುಪಿ ಜಿಲ್ಲೆಯ ಆರು ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡುಕೊಂಡು ನಿಷೇಧಿತ ಪ್ಲಾಸ್ಟಿಕ್‌ನ್ನು ಕಡ್ಡಾಯವಾಗಿ ನಿರ್ಬಂಧಿಸಿ, ಪರಿಣಾಮಕಾರಿ ಅನುಷ್ಟಾನಕ್ಕೆ ಯೋಜನೆ ರೂಪಿಸಿದ್ದು, ಆಯ್ದ ಆರು ಪಂಚಾಯತ್‌ಗಳಲ್ಲಿ ಒಂದಾದ ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜ.26ರಂದು ಪ್ಲಾಸ್ಟಿಕ್ ಮುಕ್ತಗ್ರಾಮ ಘೋಷಣೆ ಮಾಡಲಾಗಿದ್ದು, ನೋಡೆಲ್ ಅಧಿಕಾರಿಗಳಿಂದ ಅಂಗಡಿ-ಮುಂಗಟ್ಟುಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಫೆ.6ರಂದು ವಂಡ್ಸೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿರುವ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ|ನಾಗಭೂಷಣ ಉಡುಪ ಅವರ ನೇತೃತ್ವದಲ್ಲಿ ಜನತೆಯಲ್ಲಿ ಅರಿವು ಮೂಡಿಸಲಾಯಿತು. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ, ಬಳಕೆ ಮತ್ತು ವಿತರಣೆ ಮಾಡಿದರೆ ಗ್ರಾಮ ಪಂಚಾಯತ್ ಬೈಲಾದಂತೆ…

Read More

ಕುಂದಾಪ್ರ ಡಾಟ್ ಕಾಂ ಲೇಖನ ಸ್ವಸ್ಥ ಜಗತ್ತನ್ನು ನಿರ್ಮಿಸುವಲ್ಲಿ ಭಾರತ ನೀಡಿದ ಅತ್ಯುತ್ತಮ ಕೊಡುಗೆ ಯೋಗ. ಇತ್ತೀಚಿನ ವರ್ಷಗಳಲ್ಲಿ ಇದು ಎಷ್ಟೊಂದು ಪ್ರಚಾರ ಪಡೆದಿದೆಯೆಂದರೆ ವಿದೇಶಿ ಪ್ರವಾಸಿಗರ ತಂಡ ಈ ವಿಜ್ಞಾನವನ್ನು ಅಭ್ಯಸಿಸಲಿಕ್ಕಾಗಿ ಭಾರತಕ್ಕೆ ಬರುತ್ತಿದ್ದಾರೆ. ಅಂತಹ ಒಂದು ಗುಂಪು- ಶಿವರಾಮ ಅನ್ನುವ ಫ್ರಾನ್ಸ್‌ನಲ್ಲಿ ಜನಿಸಿ ಕೆನಡಾದಲ್ಲಿ ಬೆಳೆದ ಒಬ್ಬ ಆಧ್ಯಾತ್ಮಿಕ ವ್ಯಕ್ತಿಯ ನೇತೃತ್ವದಲ್ಲಿ ಈಗ ಕುಂದಾಪುರದಲ್ಲಿ ಇದೆ. ಸುಮಾರು 24 ಮಂದಿ ಇರುವ (ಫ್ರಾನ್ಸ್, ಕೆನಡಾ, ಅಮೇರಿಕಾ, ಜಪಾನ್, ಟ್ಯುನೇಷಿಯಾ, ಬೆಲ್ಜಿಯಂ……) ಈ ಯೋಗ ರಿಟ್ರೀಟ್ ತಂಡಕ್ಕೆ ಭಾರತೀಯ ಶಾಸ್ತ್ರೀಯ ಕಲೆಗಳಲ್ಲಿ ಅತೀವ ಆಸಕ್ತಿ. ಭಾರತೀಯ ಪರಂಪರೆಯನ್ನು ಉದ್ದೀಪನಗೊಳಿಸಲು ಸ್ಥಾಪಿಸಲ್ಪಟ್ಟ ಕುಂದಾಪುರದ ಸಾಧನಾ ಕಲಾ ಸಂಗಮ ನಾರಾಯಣ ಐತಾಳರ ನೇತೃತ್ವದಲ್ಲಿ, ಶಾಸ್ತ್ರೀಯ ಕಲೆಗಳನ್ನು ಮುಂದುವರೆಸುವ ಪ್ರಯತ್ನದಲ್ಲಿ ಒಳ್ಳೆಯ ಹೆಸರು ಮಾಡಿದೆ. ಶಾಸ್ತ್ರೀಯ ಗಾಯನ, ವಾದನ, ನರ್ತನಗಳಲ್ಲಿ ಪ್ರತಿಭೆಯನ್ನು ಹೊಂದಿರುವ ಶಿಕ್ಷಕರು/ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿದ್ದಾರೆ. ಇವರ ಆಶ್ರಯದಲ್ಲಿ ಇತ್ತೀಚೆಗೆ ಮೇಲೆ ತಿಳಿಸಿದ ಯೋಗ ರಿಟ್ರೀಟ್ ತಂಡಕ್ಕೆ ಒಂದು ಭರತನಾಟ್ಯ ಕಾರ‍್ಯಕ್ರಮ ಸಂಸ್ಥೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ ಮತ್ತು ಬೈಂದೂರು ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಯಕರ ಶೆಟ್ಟಿ, ಅಧ್ಯಕ್ಷರು, ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ ಇವರು ರೆಡ್‌ಕ್ರಾಸ್ ಸಂಸ್ಥೆಯ ಮೂಲಭೂತ ತತ್ವಗಳಾದ ಮಾನವೀಯತೆ, ಪಕ್ಷಪಾತರಾಹಿತ್ಯ, ತಾಟಸ್ಥ್ಯ, ಸ್ವಾತಂತ್ರ್ಯ, ಸ್ವಯಂಸೇವೆ, ಏಕತೆ ಮತ್ತು ವಿಶ್ವವ್ಯಾಪಕತೆ ಮತ್ತು ಸೇವಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಡಾ. ಸೋನಿ ಡಿಕೋಸ್ಟಾ, ಅಮೃತೇಶ್ವರಿ ಆಯುರ್ವೇದಿಕ್ ಕಾಲೇಜು, ಕುಂದಾಪುರ ಇವರು ಬೆಂಕಿ ಅನಾಹುತ, ರಕ್ತಸ್ರಾವ, ನೀರಿನ ಅವಘಡ ತುರ್ತಾಗಿ ಮಾಡಬೇಕಾದ ಪ್ರಥಮ ಚಿಕಿತ್ಸೆಯ ವಿಧಾನಗಳನ್ನು ಮತ್ತು ಹಾಗೂ ಬಹುಮುಖ್ಯವಾಗಿ ಹೃದಯಾಘಾತದ ಸಂದರ್ಭದಲ್ಲಿ ಮಾಡಬೇಕಾದ ಸಿ.ಪಿ.ಆರ್. ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ಡಾ. ಕೀರ್ತಿ ಪಾಲನ್ ಪ್ರಥಮ ಚಿಕಿತ್ಸೆ ತರಬೇತುದಾರರು, ರೆಡ್‌ಕ್ರಾಸ್ ಸಂಸ್ಥೆ, ಉಡುಪಿ. ಇವರು, ಮೂಳೆ ಮುರಿತದ ನಿರ್ವಹಣೆ ಮತ್ತು ಬ್ಯಾಂಡೇಜ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 20 ಪ್ರಕರಣ ದಾಖಲಿಸಿ ರೂ. 2400 ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು. ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಉಡುಪಿ ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್.ಸಿ.ಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪ ನಿರೀಕ್ಷಕರಾಗಿ ಸಂಗೀತಾ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಗುಲ್ಬರ್ಗದವರಾದ ಸಂಗೀತಾ ಅವರು ಬಿಎ ಶಿಕ್ಷಣ ಮುಗಿಸಿ ಪೊಲೀಸ್ ವೃತ್ತಿಗೆ ಸೇರ್ಪಡೆಯಾಗಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಹಾಗೂ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ತಲಾ ನಾಲ್ಕು ತಿಂಗಳು ಪ್ರೋಬೇಷನರಿ ಅವಧಿ ಪೂರ್ಣಗೊಳಿಸಿ ಇದೀಗ ಬೈಂದೂರಿನ ನೂತನ ಠಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಇಲ್ಲಿನ ಠಾಣಾಧಿಕಾರಿಯಾಗಿದ್ದ ತಿಮ್ಮೇಶ್ ಬಿ.ಎನ್. ಅವರು ಮಲ್ಪೆ ಠಾಣೆಗೆ ವರ್ಗಾವಣೆಗೊಂಡ ಬಳಿಕ, ಇಲ್ಲಿ ಠಾಣಾಧಿಕಾರಿ ಹುದ್ದೆ ಖಾಲಿಯಿದ್ದು, ಎಎಸ್‌ಎ ಮಹಾಬಲ ಅವರು ತಾತ್ಕಾಲಿಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Read More