Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗೋಳಿಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಕನ್ನಡ) ಮಂಗಳವಾರ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ, ಸಮವಸ್ತ್ರ, ಲೇಖನಿ ಸಾಮಗ್ರಿಗಳು, ಟೈ. ಬೆಲ್ಟ್ ವಿತರಣಾ ಕಾರ್ಯಕ್ರಮ ಜರುಗಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರಗೌಡ ಅಧ್ಯಕ್ಷತೆ ವಹಿಸಿದ್ದರು. ದಿವಂಗತ ರಾಮ ಪೂಜಾರಿ ಯಾಲಕ್ಕಿ ಇವರ ಸ್ಮರಣಾರ್ಥ ಪತ್ನಿ ಲಕ್ಷ್ಮೀ ಹಾಗೂ ಅಳಿಯ ನರೇಂದ್ರ ರಾಜ್ ಅವರು ಶಾಲೆಗೆ ದೇಣಿಗೆ ನೀಡಿದ್ದು, ಅವರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ನಾಗರಾಜ ಯಾಲಕ್ಕಿ, ಆರೀಫ್ ಹಾಗೂ ಪ್ರಭಾಕರ ಹಂದೆ ಉಪಸ್ಥಿತರಿದ್ದರು. ಸಹ ಶಿಕ್ಷಕ ವೆಂಕಟ್ರಮಣ ಹೋಬಳಿದಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗೊಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಜ ಪೂಜಾರಿ ದಾನಿಗಳ ಪರಿಚಯ ಮಾಡಿದರು. ಮುಖ್ಯೋಪಧ್ಯಾಯರಾದ ಶೇಷು ಮರಾಠಿ ಸ್ವಾಗತಿಸಿದರು. ಶಿಲ್ವಾ ವಂದಿಸಿದರು. ಸಹಶಿಕ್ಷಕಿ ಭಾಗೀರಥಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವ ಭಾರತವು ನವ ಶಕ್ತಿಯೊಂದಿಗೆ ಮುನ್ನಡೆಯಲಿದೆ, ಯುವಕರ ಸಬಲೀಕರಣಕ್ಕೆ ಶ್ರೀ ನರೇಂದ್ರ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ನೀಡಿದೆ. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗೆ ಒಂದೂವರೆ ವರ್ಷದೊಳಗೆ ತುರ್ತು ನೇಮಕಾತಿ ಮಾಡುವಂತೆ ಸೂಚಿಸಿದ್ದಾರೆ ಹಾಗೂ ಸೇನೆಗೆ 46000 ಅಗ್ನಿ ವೀರರನ್ನು 4 ವರ್ಷದ ಸೇವಾವಧಿಗೆ ನೇಮಕ ಮಾಡಿಕೊಳ್ಳಲಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ. ‘ಅಗ್ನಿ ಪಥ್’ ಯೋಜನೆ ಜಾರಿಗೆ ತಂದಿರುವುದು ನಮ್ಮ ಉತ್ಸಾಹಿ ದೇಶಭಕ್ತ ಯುವಕರಿಗೆ ಸೇನೆಗೆ ಸೇರುವ ಸದಾವಕಾಶವನ್ನು ಕಲ್ಪಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದೀಜಿ ಅವರಿಗೆ, ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹಾಗೂ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ. ಇದು ಯುವಕರ ಪಾಲಿಗೆ ಕೇವಲ ಉದ್ಯೋಗಾವಕಾಶವಲ್ಲ. ಶಿಸ್ತು, ಮ್ಯಾನೇಜೆಂಟ್, ಜೀವನ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳೋದಕ್ಕೆ ಭಾರತೀಯ ಸೇನೆಗಿಂತ ಉತ್ತಮ ಸ್ಥಳ ಇನ್ನೊಂದಿಲ್ಲ. ಸದೃಢ ಸಮಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಟಿ.ಎಸ್. ನಾಗಾಭರಣ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳಿಸುವುವಾಗ ಇಲಾಖೆಗಳ ಮಧ್ಯೆ ಆಗುವ ಪ್ರತಿಯೊಂದು ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಒಂದೊಮ್ಮೆ ಅಂಗ್ಲಭಾಷೆಯಲ್ಲಿ ಇದ್ದಲ್ಲಿ ಸಂಬAಧಪಟ್ಟ ಇಲಾಖೆಗೆ ಎಚ್ಚರಿಸುವ ಕೆಲಸವನ್ನು ಮಗದೊಂದು ಇಲಾಖೆ ಮಾಡುವುದರೊಂದಿಗೆ ಸಮನ್ವಯ ಸಾಧಿಸಬೇಕು ಎಂದರು. ಸಾರ್ವಜನಿಕರು ತಮ್ಮ ದೈನಂದಿನ ಆರ್ಥಿಕ ಚಟುವಟಿಕೆಗಳನ್ನು ನಡೆಸಿ, ಅಗತ್ಯ ಸೇವೆಗಳನ್ನು ಪಡೆಯಲು ಬ್ಯಾಂಕ್ಗಳಿಗೆ ಭೇಟಿ ನೀಡಿದಾಗ, ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು. ಒಂದೊಮ್ಮೆ ಅಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.25: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ.30ರಂದು ಜರುಗಿದ್ದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗುತ್ತಿಗೆದಾರ, ತೆಕ್ಕಟ್ಟೆ ಬೆಟ್ಟು ನಿವಾಸಿ ಸುರೇಂದ್ರ ದೇವಾಡಿಗ (43) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತಲೆ ಹಾಗೂ ಇತರ ಭಾಗಗಳಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್‌ ಕೂಡ ಮಾಡಲಾಗಿತ್ತು. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರಿಗೆ ಮತ್ತೆ ತಲೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುರೇಂದ್ರ ದೇವಾಡಿಗ ತೆಕ್ಕಟ್ಟೆ ಭಾಗದಲ್ಲಿ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದು ಈ ಭಾಗದಲ್ಲಿ ಜನಪ್ರಿಯರಾಗಿದ್ದರು. ಮೃತರು ಮಡದಿ, ಪೋಷಕರು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.14: ಮಾಜಿ ಶಾಸಕ, ಹಿರಿಯ ಮುತ್ಸದ್ದಿ ಎ.ಜಿ.ಕೊಡ್ಗಿ (93) ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಅಮಾಸೆಬೈಲಿನಲ್ಲಿ ನಡೆಯಿತು. ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದ್ದರು. ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಅವಕಾಶವನ್ನು ಅಮಾಸೆಬೈಲುವಿನ ಗೋಕುಲ್ ಇಂಡಸ್ಟ್ರೀಸ್ ವಠಾರದಲ್ಲಿ ಮಾಡಿಕೊಡಲಾಗಿತ್ತು. ► ಮಾಜಿ ಶಾಸಕ, ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ ನಿಧನ – https://kundapraa.com/?p=59835 . ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೆಂದ್ರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಹರೀಶ್ ಪೂಂಜಾ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.13: ಸೋಮವಾರ ದೈವಾಧೀನರಾದ ಮಾಜಿ ಶಾಸಕ ಎ.ಜಿ ಕೊಡ್ಗಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಅಮಾಸೆಬೈಲುವಿನ ಗೋಕುಲ್ ಇಂಡಸ್ಟ್ರೀಸ್ ವಠಾರದಲ್ಲಿ ಇರಿಸಲಾಗಿದ್ದು, ಮಂಗಳವಾರ ವಿವಿಧ ಕ್ಷೇತ್ರಗಳ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೆಂದ್ರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಹರೀಶ್ ಪೂಂಜಾ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಸಹಿತ ಅನೇಕ ಗಣ್ಯರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದ್ದರು. ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ:ಸಕಲ ಸರಕಾರಿ ಗೌರವದೊಂದಿಗೆ ಕೋವಿಡ್ ನಿಯಮ ಪಾಲಿಸಿಕೊಂಡು ಎ.ಜಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿ.ಇ.ಟಿ, ಜೆ.ಇ.ಇ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ. ಶಶಿಕಾಂತ್ ಹತ್ವಾರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ. ಎಂ. ಗೊಂಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ರಿತೇಶ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಘಟಕ ಹಾಗೂ ಕೆ.ಎಂ.ಸಿ ಮಣಿಪಾಲದ ಸಹಯೋಗದಲ್ಲಿ “ಬೆಸಿಕ್ಸ್ ಆಫ್ ಪಿಇಟಿ ಸಿಟಿ” ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕೋಟೇಶ್ವರದ ಸಹನಾ ಹೋಟೆಲಿನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೆಎಂಸಿ ಮಣಿಪಾಲದ ನ್ಯೂಕ್ಲಿಯರ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಸುಮೀತ್ ಸುರೇಶ್ ಮಲಪೂರೆ ಅವರು ಭಾಗವಹಿಸಿದ್ದರು. ಐಎಂಎ ಕುಂದಾಪುರದ ಅಧ್ಯಕ್ಷರಾದ ಎಲುಬು ಕೀಲು ಶಸ್ತ್ರ ಚಿಕಿತ್ಸಾ ತಜ್ನ ಡಾ. ಸಂದೀಪ ನಾವಡ ಪಡುಕೋಣೆ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಾನಸಿಕ ತಜ್ಞ ಡಾ. ರವೀಂದ್ರ ಮುನೊಳಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಜಿ ಶಾಸಕ, ಮೂರನೇ ಹಣಕಾಸು ಆಯೋಗದ ಅಧ್ಯಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (93) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಬಹು ಅಂಗಾಗಳ ವೈಫಲ್ಯಕ್ಕೆ ಒಳಗಾಗಿದ್ದರು. 5 ವರ್ಷಗಳ ಹಿಂದೆ ಎ.ಜಿ. ಕೊಡ್ಗಿ ಅವರೊಂದಿಗೆ ‘ಕುಂದಾಪ್ರ ಡಾಟ್ ಕಾಂ’ ನಡೆಸಿದ ಸಂದರ್ಶನ ► ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ – https://kundapraa.com/?p=3243 . ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷನಾಗಿ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಅವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದಿಂದಲೇ ನಿವೃತ್ತಿ ಪಡೆದ ಅಪರೂಪದ ಮುತ್ಸದ್ದಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ). ಅವರು ರಾಜಕೀಯದಲ್ಲಿ ಮಾತ್ರ ತೊಡಗಿಸಿಕೊಳ್ಳದೇ ಕೃಷಿ, ಸಹಕಾರಿ ಕ್ಷೇತ್ರದಲ್ಲಿಯೂ ತಮ್ಮ ಛಾಪು ಮೂಡಿಸಿದವರು. 93ರ ವಯಸ್ಸಿನಲ್ಲಿಯೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಹಳೆ ವಿದ್ಯಾರ್ಥಿಗಳ ನೆನಪು ಹಾಗೂ ಚಟುವಟಿಕೆಗಳು ನೆನಪಿನ ಬುತ್ತಿಗಳಾಗಬೇಕಾದರೆ, ಅವುಗಳನ್ನು ಶಾಶ್ವತವಾಗಿ ಸಂಗ್ರಹಿಸಿಡುವ ಕಾರ್ಯಗಳು ನಡೆಯಬೇಕು. ಶಾಲೆಯ ಹಳೆಯ ವಿದ್ಯಾರ್ಥಿಗಳೇ ಆಯಾ ಶಿಕ್ಷಣ ಸಂಸ್ಥೆಗಳ ಶಾಶ್ವತ ಆಧಾರ ಸ್ತಂಭಗಳು ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್ ಹೇಳಿದರು ಇಲ್ಲಿನ ಕಲಾ ಮಂದಿರದಲ್ಲಿ ಬೋರ್ಡ್ ಹೈಸ್ಕೂಲ್ ಕುಂದಾಪುರ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಶತಮಾನೋತ್ತರ ಬೆಳ್ಳಿ ಹಬ್ಬ ಭವನ ಹಸ್ತಾಂತರ ಹಾಗೂ ಈ ಶಾಲೆಗೆ ತಂದ ನಂದಳಿಕೆ ಮುದ್ದಣ, ಡಾ. ಕೋಟ ಶಿವರಾಮ ಕಾರಂತ ಹಾಗೂ ಮೊಗೇರಿ ಗೋಪಾಲಕೃಷ್ಣ ಅಡಿಗರ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು. ವ್ಯಕ್ತಿಗಳು ಸಾಧನೆಯ ಮೂಲಕ ಸಮಾಜದ ಆಸ್ತಿಗಳಾಗಬೇಕು. ಸಾಹಿತ್ಯ ಕ್ಷೇತ್ರದ ಮೇರು ವ್ಯಕ್ತಿತ್ವ ರೂಪಿಸಿಕೊಂಡಿದ್ದ ಡಾ.ಕಾರಂತ, ಅಡಿಗ ಹಾಗೂ ಮುದ್ದಣ್ಣ ಅವರಂತಹ ಸಾಹಿತ್ಯ ರತ್ನಗಳು ಶಾಶ್ವತವಾಗಿ ಜನ ಮಾನಸದಲ್ಲಿ ಉಳಿಯುವಂತಹ ಕಾರ್ಯಗಳು ನಡೆಯಬೇಕು ಎಂದರು. ಶತಮಾನೋತ್ತರ ಬೆಳ್ಳಿ ಹಬ್ಬ ಸಮಿತಿ ಕಾರ್ಯಾಧ್ಯಕ್ಷ…

Read More