Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ, ಸೆ.23: ತಾಲೂಕಿನ ಕೋಟೇಶ್ವರದ ಪ್ರಸಿದ್ಧ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪದ್ಮನಾಭ ಅವರು, ಕಳೆದ ನಾಲ್ಕು ತಿಂಗಳಿಂದ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಅವರು ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಬಳಿಕ ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲ ಮೇಲೆ ಅವರ ಚಪ್ಪಲಿ ಹಾಗೂ ಟೋಪಿ ಪತ್ತೆಯಾಗಿದ್ದರಿಂದ, ಅವರು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಬುಧವಾರ ಬೆಳಿಗ್ಗೆಯಿಂದಲೇ ಕೆರೆಯಲ್ಲಿ ಶೋಧ ನಡೆಸಲಾಯಿತು. ನಿತ್ಯ ಕೆರೆಯಲ್ಲಿ ಈಜಾಡುವ ಸ್ಥಳೀಯರಾದ ಸುಧೀ‌ರ್ ಕುಮಾ‌ರ್ ಶೆಟ್ಟಿ, ಪ್ರಭಾಕ‌ರ್ ಶೆಟ್ಟಿ ಹಾಗೂ ಸತ್ಯನಾರಾಯಣ ಮಂಜ ಮೊದಲಾದವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹೊನ್ನನಕೇರಿ ನಿವಾಸಿ ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದ ಆಲ್ವಿನ್ ಪ್ರಕಾಶ್ ಕುಂದರ್ (50) ಕೊಲೆಯಾಗಿರುವುದು ತಿಳಿದುಬಂದಿದೆ. ಪ್ರಕರಣದ ಬಳಿಕ ನಾಪತ್ತೆಯಾಗಿರುವ ಮೃತರ ಪತ್ನಿ ಹಾಗೂ ಪುತ್ರನಿಗಾಗಿ ಶೋಧ ಮುಂದುವರಿದಿದೆ. ಕಳೆದ 14 ವರ್ಷಗಳಿಂದ ಶಾರ್ಜಾದ ಖಾಸಗಿ ವಿಮಾನ ಕಂಪೆನಿಯ ಟರ್ಮಿನಲ್ ಎರಡರಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ದುಷ್ಕರ್ಮಿಗಳು ಆಲ್ವಿನ್ ಪ್ರಕಾಶ್ ಕುಂದರ್ ಅವರ ಎದೆಗೆ ಚೂರಿ ಇರಿದು 9 ತುಂಡುಗಳಾಗಿ ಕತ್ತರಿಸಿ ಒಮನ್‌ಗೆ ತೆರಳುವ ದಾರಿಯಲ್ಲಿ ಅವರದ್ದೇ ಕಾರಿನ ಢಿಕ್ಕಿಯಲ್ಲಿ ಎರಡು ಬ್ಯಾಗ್‌ಗಳಲ್ಲಿ ತುಂಬಿಸಿಟ್ಟಿದ್ದರು ಎನ್ನಲಾಗಿದೆ. ಸದ್ಯ ಸೆ.21ರಂದು ಕುಟುಂಬಕ್ಕೆ ಡೆತ್ ಸರ್ಟಿಫಿಕೆಟ್ ಬಂದಿದ್ದು, ಎಫ್‌ಐಆ‌ರ್ ಇನ್ನೂ ಕೈ ಸೇರಿಲ್ಲ. ಶಾರ್ಜಾದಲ್ಲಿ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬದವರು ಕಾಯುತ್ತಿದ್ದಾರೆ. ಆಲ್ವಿನ್ ಪ್ರಕಾಶ್ ಕುಂದರ್ ತನ್ನ ಹಿರಿಯ ಸಹೋದರ ಕುಂದಾಪುರದ ಅನಿಲ್ ಪ್ರಶಾಂತ್ ಕುಂದರ್‌ ಅವರ ಜತೆ ಕರೆ ಅಥವಾ ವಾಟ್ಸಪ್ ವಾಯ್ಸ ಸಂದೇಶದ ಮೂಲಕ ಮಾತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ ತೀರ್ಥ ಪದವಿ ಪೂರ್ವ ಕಾಲೇಜು, ಪಾಜಕ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ  ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾಕ್ಷಿ, ಪ್ರೀತಿ, ಶಿವಮಣಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿನ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಕ್ರೀಡಾ ಕೌಶಲ್ಯ ಮೆರೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ  – ಬೋಧಕೇತರ ಸಿಬ್ಬಂದಿ  ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರಸ್ಥಳ ಜಗದ್ಗುರು ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಇಲ್ಲಿನ ಕಾಳಿಕಾಂಬಾ ಮಹಿಳಾ ಸಮಿತಿಯ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚಿಗೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ಮಹಿಳಾ ಸಮಿತಿಯ ನೂತನ ಅಧ್ಯಕ್ಷೆಯಾಗಿ ಪೂರ್ಣಿಮಾ ಗಣೇಶ್‌ ಆಚಾರ್ಯ ನಾಯ್ಕನಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಲತಾ ಸುರೇಂದ್ರ ಆಚಾರ್ಯ ನೀರ್ಕೆರೆ ಆಯ್ಕೆಗೊಂಡಿದ್ದಾರೆ. ಸಮಿತಿಯ ಗೌರವಾಧ್ಯಕ್ಷೆ ಜಲಯ ಚಂದ್ರಯ್ಯ ಆಚಾರ್ಯ, ಉಪಾಧ್ಯಕ್ಷರಾಗಿ ಸುಮತಿ ಸದಾನಂದ ಆಚಾರ್ಯ, ಶ್ರೀಧರ ಆಚಾರ್ಯ, ರಾಮಚಂದ್ರ ಆಚಾರ್ಯ, ಸವಿತಾ ನಾಗೇಂದ್ರ ಆಚಾರ್ಯ, ಗಾಯತ್ರಿ ದಿನೇಶ ಆಚಾರ್ಯ, ಶಾಲಿನಿ ಮಹಾಬಲೇಶ್ವರ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ವಿಜಯ ಗಣೇಶ್ ಪುರೋಹಿತರು, ಜ್ಯೋತಿ ದಿನೇಶ್ ಆಚಾರ್ಯ, ಶರಾವತಿ ಯೋಗೀಶ್ ಆಚಾರ್ಯ, ಸುಜಾತ ಉದಯ ಆಚಾರ್ಯ, ಅನುಷಾ ದಿವಾಕರ ಆಚಾರ್ಯ, ಕ್ರೀಡಾ ಕಾರ್ಯದರ್ಶಿಗಳಾಗಿ ಮುಕ್ತ ನಾಗೇಶ್ ಆಚಾರ್ಯ, ಅಕ್ಷತಾ ಪ್ರಶಾಂತ್ ಆಚಾರ್ಯ, ಜಯಶ್ರೀ ಸದಾನಂದ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ರತ್ನಾವತಿ ಲಕ್ಷ್ಮಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪರೀಕ್ಷಾ ಪೂರ್ವ ಸಿದ್ಧತಾ ತರಬೇತಿಗಳು ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ನೈತಿಕ ಶಕ್ತಿಯನ್ನು ನೀಡುತ್ತವೆ. ಆಯ್ಕೆ ಪ್ರಕ್ರಿಯೆಯಲ್ಲಿ ಸರ್ಕಾರದಲ್ಲಿ ನೇರ ನೇಮಕಾತಿ ಹಾಗೂ ಸಂದರ್ಶನ ಎಂಬ ಎರಡು ನಿಯಮಗಳಿವೆ. ಇದರ ಜೊತೆಗೆ ಸಂದರ್ಶನ ಎನ್ನುವ ತಂತ್ರಗಾರಿಕೆಯೂ ಇದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಕೋಟದ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾದ ಶಿಕ್ಷಕ ಹುದ್ದೆಗಳ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರು ಸಂದರ್ಶನದಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಯಾಗುವ ಘಟನೆಗಳೂ ನಡೆಯುತ್ತವೆ. ಆದರೆ ನ್ಯಾಯಲಯಗಳು ತಡೆಯಾಜ್ಞೆ ನೀಡದೇ ಇರುವ ಒಂದೇ ಒಂದು ನಿಯಮ ಎಂದರೆ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳಿಗೆ ಮೆರಿಟ್ ಹಾಗೂ ರೋಸ್ಟರ್ ಪದ್ದತಿಯಲ್ಲಿ ನೇಮಕಾತಿ ಮಾಡುವುದು. ಮೆರಿಟ್ ಇದ್ದೂ ಪರೀಕ್ಷಾ ಪೂರ್ವ ಸಿದ್ಧತೆಗಳಿಲ್ಲದಿದ್ದರೆ ಅಭ್ಯರ್ಥಿಗಳ ಆಯ್ಕೆಗೆ ತೊಡಕಾಗುತ್ತದೆ. ಆ ನಿಟ್ಟಿನಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುಜರಾತ್‌ನ ಏಕ್ತಾ ನಗರದಲ್ಲಿ ಜರುಗಿದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ನಾನಿರುವುದೇ ನಿಮಗಾಗಿ ನಾಡಿರುವುದೇ ನಮಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ” ಕೃತಿಗೆ ಡಾ. ಪ್ರದೀಪ್ ಕೆಂಚನೂರು ಅವರಿಗೆ ಅತ್ಯುತ್ತಮ ಸಿನಿಮಾ ಆಧಾರಿತ ಪುಸ್ತಕ ವಿಭಾಗದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಪ್ರದೀಪ್ ಕೆಂಚನೂರು ಹಾಗೂ ಪುಸ್ತಕ ಪ್ರಕಾಶನಕ್ಕಾಗಿ ಪತ್ನಿ ಸೌಮ್ಯ ಪ್ರದೀಪ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ ► ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ – https://kundapraa.com/?p=98971 . ಇದನ್ನೂ ಓದಿ ► ಡಾ. ಪ್ರದೀಪ್ ಕುಮಾರ ಶೆಟ್ಟಿ ಅವರಿಗೆ ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ – https://kundapraa.com/?p=100044 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವರು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಗಾಂಧಿ ಮೈದಾನದಲ್ಲಿ ನಡೆಸಿದ ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇ೦ಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರು 200 ಮೀ. ಓಟದ ಸ್ಪರ್ಧೆಯಲ್ಲಿ ಜಯಶಾಲಿಗಳಾಗಿ ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. 14ರ ವಯೋಮಾನದ ಬಾಲಕಿಯರ ವಿಭಾಗದ 200 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಶರಣ್ಯ ಪ್ರಥಮ ಸ್ಥಾನ ಪಡೆದುಕೊಂಡರೆ, 17ರ ವಯೋಮಾನದ ಬಾಲಕಿಯರ ವಿಭಾಗದ 200 ಮೀಟ‌ರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಚಾರ್ವಿ ಪ್ರಥಮ ಸ್ಥಾನ ಹಾಗೂ 100 ಮೀಟ‌ರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡರು. ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಿಂಚು ಹರಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ ಬೋಧಕೇತರ ವೃಂದದವರು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಕ್ರಿಕೆಟ್‌ ಪಂದ್ಯಾಟದಲ್ಲಿ 14ರ ವಯೋಮಾನದ ಹುಡುಗರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರತಿಭೆ ಮೆರೆದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್‌ ಜಿ. ಹೆಗ್ಡೆ, ಲಿಯೋನ್‌ ಡಿ. ಹಾಗೂ ಎಂ. ಆತ್ಮಯ್‌ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕುಮಾರ್‌ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಾಗೂ ಸಂಘಟಿತ ಪ್ರಯತ್ನಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಉಪ್ಪುಂದ ದೇವಾಡಿಗರ ಸಂಘ ರಿ. ಮಹಿಳಾ ಘಟಕದ ನೇತೃತ್ವದಲ್ಲಿ ಕೆರ್ಗಾಲ್‌ನ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಭವನದಲ್ಲಿ ‘ಅರಿಶಿನ ಕುಂಕುಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರ’ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಮಚಂದ್ರ ದೇವಾಡಿಗ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷರಾದ ಗಿರಿಜಾ ದೇವಾಡಿಗ ಮಾತನಾಡಿ, “ಅರಿಶಿನ ಕುಂಕುಮವು ಮಹಿಳೆಯರಿಗೆ ಸೌಭಾಗ್ಯದ ಸಂಕೇತವಾಗಿದೆ. ನಮ್ಮ ಹಿಂದೂ ಸಮಾಜದಲ್ಲಿ ಯಾರಾದರೂ ಅರಿಶಿನ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಿ ಆಹ್ವಾನಿಸಿದಾಗ ಮಹಿಳೆಯರು ಪ್ರೀತಿಯಿಂದ ಭಾಗವಹಿಸುತ್ತಾರೆ. ಇಂತಹ ಕಾರ್ಯಕ್ರಮಗಳು ಮಹಿಳೆಯರ ನಡುವೆ ಆತ್ಮೀಯತೆ ಹಾಗೂ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸುತ್ತವೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಿಯದರ್ಶಿನಿ ದೇವಾಡಿಗ ಹಾಗೂ ಸಂಘದ ಗೌರವಾಧ್ಯಕ್ಷರಾದ ಶ್ರೀ ರವೀಂದ್ರ ಎಚ್. ದೇವಾಡಿಗ ಮಹಿಳಾ ಘಟಕದ ಕಾರ್ಯದರ್ಶಿ ಸೀತಾ ದೇವಾಡಿಗ ಮಹಾಬಲೇಶ್ವರ, ಉಪಾಧ್ಯಕ್ಷೆಯರಾದ ಸೀತು ದೇವಾಡಿಗ ಮೂರ್ತಿಮನೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ 2026 ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಇಂಪನಾ ಆರ್ (4ನೇ ತರಗತಿ) ಪ್ರಥಮ ಸ್ಥಾನ, ಅಧ್ವಿಕ್ ಕ್ಷತ್ರೀಯ (4ನೇ ತರಗತಿ) ಐದನೆಯ ಸ್ಥಾನ  ಹಾಗೂ ಕೌಸ್ತುಭ (6ನೇ ತರಗತಿ )ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More