Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮೊನಚು ಬರಹಗಳಿಂದ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಹಿರಿಯ ಸಾಹಿತಿ ಹಾಗೂ ನಿವೃತ್ತ ಬ್ಯಾಂಕ್ ಅಧಿಕಾರಿ ಜಿ.ಕೆ. ಐತಾಳ್ (68) ಗುರುವಾರ ಕೋಟೇಶ್ವರದ ಸ್ವಗೃಹದಲ್ಲಿ ನಿಧನರಾದರು. 1951ನೇ ಜೂ.25ರಂದು ಜನಿಸಿದ್ದ ಅವರು ಕೋಟೇಶ್ವರ ಹಾಗೂ ಕುಂದಾಪುರದಲ್ಲಿ ಶಿಕ್ಷಣಾಭ್ಯಾಸ ಮುಗಿಸಿದ್ದರು. ನಂತರ ಕರ್ಣಾಟಕ ಬ್ಯಾಂಕ್ ಸೇರಿದ್ದ ಜಿ.ಗೋಪಾಲಕೃಷ್ಣ ಐತಾಳರು ವಿಜ್ಞಾನ ಪದವೀಧರರಾಗಿದ್ದರೂ ಕೂಡ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಮೊದಮೊದಲು ಸಾಮಾನ್ಯ ನಾಟಕ ವಿಮರ್ಶೆಗಳ ಮೂಲಕ ಹವ್ಯಾಸಿ ಬರಹಗಾರರಾಗಿ ಗುರುತಿಸಿಕೊಂಡಿದ್ದರು. ಸಾಹಿತ್ಯ ಕ್ಷೇತ್ರದಲ್ಲಿನ ಆಸಕ್ತಿ, ರಂಗ ಚಟುವಟಿಕೆಯ ಮೇಲೆ ಅವರಿಗಿದ್ದ ಮೋಹ ಬಹು ಬೇಗನೆ ಅವರನ್ನು ವೃತ್ತಿಪರ ಬರಹಗಾರರನ್ನಾಗಿಸಿತ್ತು. ಜಿ.ಕೆ. ಐತಾಳರ ಬರಹಗಳಲ್ಲಿನ ವಾಕ್ಯಗಳು ಕ್ಲಿಷ್ಟವಾಗಿದ್ದರೂ, ಓದುಗರ ಮನದಲ್ಲಿ ಅಚ್ಚಳಿಯದೆ ಉಳಿಯುತ್ತಿದ್ದವು. ಈ ಕಾರಣಕ್ಕಾಗಿಯೇ ಜಿಲ್ಲೆಯ ಸಾಹಿತ್ಯ ಕ್ಷೇತ್ರದಲ್ಲಿ ಅವರದೇ ಆದ ಅಭಿಮಾನಿ ಬಳಗವಿತ್ತು. ‘ನವಭಾರತ’ ಪತ್ರಿಕೆಯಲ್ಲಿ ‘ಕಡಲ ತಡಿಯ ಕಲಾವಿದರು’ ಎನ್ನುವ ಬರಹದ ಮೂಲಕ ಎಲೆಮರೆಯ ಕಲಾವಿದರನ್ನು ಸಮಾಜದ ಮುಖ್ಯಭೂಮಿಕೆಯಲ್ಲಿ ಕರೆ ತರುವ ಪ್ರಯತ್ನ ಮಾಡಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗುಜ್ಜಾಡಿಯ ಮಾರಿಕಾಂಬ ಮಹಿಳಾ ಸಹಕಾರಿ ಸಂಘದ ೨ನೇ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾಭವನದಲ್ಲಿ ಭಾನುವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ನಿರ್ದೇಶಕರಾದ ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ಶಾರದಾ, ಶಾಂತಾ, ರೇಖಾ, ಚೌಕಿ ಪುಷ್ಪ ಖಾರ್ವಿ, ಲಲಿತಾ ಖಾರ್ವಿ, ಶ್ಯಾಮಲಾದೇವಿ, ರತ್ನಾ ಟಿ.ದೇವಾಡಿಗ, ಸುನೀತಾ ಪೂಜಾರಿ, ಶಾಂತಾ ಮರಾಠಿ ನಾಯ್ಕ್ ಉಪಸ್ಥಿತರಿದ್ದರು. ಉಡುಪಿ ಮಹಿಳಾ ಅಭಿವೃದ್ಧಿ ನಿಗಮದ ಸಂಯೋಜಕ ಅವಿನಾಶ್ ಅವರು ಮಹಿಳೆಯರ ಅಭಿವೃದ್ಧಿ ಹಾಗೂ ಸ್ವ ಉದ್ಯೋಗದ ಮಾಹಿತಿ ನೀಡಿದರು. ಶ್ರೀಲವಿ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ ವರದಿ ವಾಚಿಸಿದರು. ಭಾಸ್ಕರ ಗಾಣಿಗ ಕೊಡಪಾಡಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ವಿಜಯಾ ಬಿ.ಗಾಣಿಗ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಸೆ.19: ಕುಂದಾಪುರ ಕಂದಾಯ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಗೆ ಎರಡು ದಿನದ ಹಿಂದೆ ಅಧಿಕಾರ ಹಸ್ತಾಂತರ ಮಾಡಿದ್ದ ಉಪವಿಭಾಗಾಧಿಕಾರಿ ಡಾ.ಎಸ್.ಎಸ್.ಮಧುಕೇಶ್ವರ ಮನೆಯ ಮೇಲೆ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಶ್ರೇಣಿ ಅಧಿಕಾರಿಯಾಗಿದ್ದ ಮಧುಕೇಶ್ವರ ಮಂಗಳವಾರ ನೂತನ ಉಪವಿಭಾಗಾಧಿಕಾರಿಯಾಗಿ ಬಂದಿದ್ದ ಎ. ರಾಜು ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದರು. ಆಧಿಕಾರ ಹಸ್ತಾಂತರ ಮಾಡಿದ ಬಳಿಕವೂ ಉಪವಿಭಾಗಾಧಿಕಾರಿ ಕಚೇರಿಗೆ ಸಂಬಂಧಿಸಿದ ಕಡತಗಳನ್ನು ಮಿನಿ ವಿಧಾನಸೌಧಕ್ಕೆ ಸಮೀಪದಲ್ಲಿ ಇರುವ ಉಪವಿಭಾಗಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ವಿಲೆವಾರಿ ಮಾಡುತ್ತಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ತಂಡ ದಾಳಿ ನಡೆಸಿದೆ. ಎಸಿಬಿ ಡಿವೈಎಸ್‌ಪಿ ಮಂಜುನಾಥ ಕವರಿ ನೇತ್ರತ್ವದ ತಂಡ ನಡೆಸಿದ ದಾಳಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 24 ಅಧಿಕೃತ ಕಡತ ಹಾಗೂ 1.28 ಲಕ್ಷ ರೂ. ಆರಂಭದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಸಂಜೆಯವರೆಗೂ ಎಸಿಬಿ ತಂಡ ದಾಖಲೆಗಳ ಪರಿಶೀಲನೆ ಮುಂದುವರಿಸಿ ಸುಮಾರು 1,80,000 ಹಣವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆನಡಾದ ಸೆಂಟ್ ಜೋನ್ಸ್ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಅಂತರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್‌ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಕುಂದಾಪುರದ ವಿಶ್ವನಾಥ ಭಾಸ್ಕರ ಗಾಣಿಗ ಬಾಳಿಕೆರೆ 2 ಚಿನ್ನ ಹಾಗೂ 2 ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಡೆಡ್ ಲಿಫ್ಟ್ನಲ್ಲಿ ನೂತನ ದಾಖಲೆ ಬರೆದಿದ್ದಾರೆ. ತಾಲೂಕಿನ ದೇವಲ್ಕುಂದದವರಾದ ವಿಶ್ವನಾಥ ಗಾಣಿಗ ಅವರು ಡೆಡ್‌ಲಿಫ್ಟಿಂಗ್‌ನಲ್ಲಿ 327.5 ಕೆ.ಜಿ. ದಾಖಲೆಯನ್ನು ಎತ್ತುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾರೆ. ಸ್ನ್ಯಾಚ್’ನಲ್ಲಿ 295.1 ಕೆ.ಜಿ. ಬೆಂಚ್’ಪ್ರೆಸ್ ನಲ್ಲಿ 180ಕೆ.ಜಿ. ಬಾರವೆತ್ತಿ 2 ಬೆಳ್ಳಿ ಪದಕವನ್ನೂ ಗೆದ್ದುಕೊಂಡಿದ್ದಾರೆ. ವಿಶ್ವನಾಥ ಗಾಣಿಗ ಕಾಮನ್ವೆಲ್ತ್ನಲ್ಲಿ ಒಟ್ಟು 802.5 ಕೆ.ಜಿಯೊಂದಿಗೆ ಚಿನ್ನ ಗೆದ್ದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಜೀಣೋದ್ಧಾರಗೊಳ್ಳುತ್ತಿರುವ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ದೇವಳ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭ ಮುಂಬೈ ಉದ್ಯಮಿ ಕೇಶವ ಪೂಜಾರಿ, ಬೈಂದೂರು ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಹಾಗೂ ದೈವಸ್ಥಾನ ಜೀಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬುಧವಾರ ಬೈಂದೂರು ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು  ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಅವರು ಮಾತನಾಡಿ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಮಟ್ಕಾ ಹಾವಳಿ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದು, ಅವುಗಳು ಸಂಪೂರ್ಣ ನಿಷೇಧಿಸಲು ಕ್ರಮ ಕೈಗೊಳ್ಳುವಂತೆ ಪೋಲೀಸ್ ಇಲಾಖೆಗೆ ಸೂಚಿಸಿದರು. ಒಂದು ವಾರದೊಳಗೆ ಮರಳು ಸಮಸ್ಯೆ ಬಗೆಹರಿಯಲಿದ್ದು, ೧೫೮ ಜನರಿಗೆ ಪರವಾನಗಿ ನೀಡಲಾಗುತ್ತದೆ, ಜಿಲ್ಲೆಯ ಮರಳು ಅನ್ಯ ಜಿಲ್ಲೆಗೆ ಕಳುಹಿಸದಂತೆ ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಲಾಗುವುದು ಎಂದರು. ಬೈಂದೂರು ತಾಲೂಕಿನಲ್ಲಿ ಪ್ರಸ್ತುತ 16 ಇಲಾಖೆಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ 14 ಇಲಾಖೆಗಳು ಶೀಘ್ರ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಇಲಾಖೆ ಕಾರ್ಯನಿರ್ವಹಿಸಲು ಕಟ್ಟಡಗಳ ಸಮಸ್ಯೆ ಕಂಡುಬಂದರೆ ಸದ್ಯ ಬಾಡಿಗೆ ಕಟ್ಟಡದಲ್ಲಾದರೂ ಕಾರ್ಯಹಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಕೊಲ್ಲೂರು ಹಾಗೂ ಬೈಂದೂರಿನಲ್ಲಿ ಪೋಲೀಸ್ ವಸತಿಗೃಹ ನಿರ್ಮಾಣಕ್ಕೆ ಸಮರ್ಪಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಿಟಿ ಪಾಯಿಂಟ್ ನಲ್ಲಿರುವ ಮಾತೃಭೂಮಿ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಬೈಂದೂರಿನ ರೋಟರಿ ಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ನಿರ್ದೇಶಕರಾದ ಉಮಾವತಿ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿ ಡಿ.ಕೆ.ಆರ್.ಡಿ.ಎಸ್ ಮಹಾಸಂಘದ ಅಧ್ಯಕ್ಷರಾದ ಬಾನುಮತಿ ಜಯಾನಂದ್ ಬಿ.ಕೆ ಭಾಗವಹಿಸಿದ್ದರು. ಅವರ ಸಾಮಾಜಿಕ ಧಾರ್ಮಿಕ ಸೇವೆ ಗುರುತಿಸಿ ಸಂಸ್ಥೆಯು ಅವರನ್ನು ಸನ್ಮಾನಿಸಿ ಗೌರವಿಸಿತು. ಸಭೆಯಲ್ಲಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ಹಾಗೂ ನಿರ್ದೇಶಕರಾದ ಶ್ಯಾಮಲಾ, ಮಹಾಲಕ್ಷ್ಮೀ, ಸಾವಿತ್ರಿ, ನ್ಯಾನ್ಸಿ ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ವಾರ್ಷಿಕ ವರದಿ ಲೆಕ್ಕಪತ್ರಗಳ ಮಂಡನೆ ಮಾಡಿದರು. ಸಂಸ್ತೆಯ ನಿರ್ದೇಶಕರಾದ ಮಹಾಲಕ್ಷ್ಮೀ ಅವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ಪತ್ರಕರ್ತರಾದ ಅಂದುಕಾ ನಿರೂಪಿಸಿ ವಂದಿಸಿದರು. ಸಂಸ್ಥೆಯ ಸಿಬ್ಬಂದಿಗಳಾದ ಅನ್ವಿತಾ ಮೆಂಡನ್ ಮತ್ತು ನಾಗಶ್ರೀ ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯು ಕಳೆದ ವರ್ಷ ರೂ 154 ಕೋಟಿ ವ್ಯವಹಾರ ನಡೆಸಿ ರೂ 79.5 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ 13 ಲಾಭಾಂಶ ನೀಡಲಾಗುವುದು ಎಂದು ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಬುಧವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು 17 ವರ್ಷ ಪೂರೈಸಿದೆ. ಐದು ಕಡೆ ಶಾಖೆಗಳನ್ನು ಹೊಂದಿದೆ. ಶಿರೂರು, ಗುಲ್ವಾಡಿ, ತೆಕ್ಕಟ್ಟೆಯಲ್ಲಿ ನೂತನ ಶಾಖೆಗಳನ್ನು ತೆರೆಯಲಿದೆ. ಕುಂದಾಪುರ ಶಾಖೆ ಸ್ವಂತ ನಿವೇಶನ, ಕಟ್ಟಡ ಹೊಂದಿದೆ. ಬೈಂದೂರಿನ ಪ್ರಧಾನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಸದ್ಯ ರೂ 36.4 ಕೋಟಿ ಠೇವಣಿ ಸಂಗ್ರಹ ಹೊಂದಿದ್ದು, ಮುಂದಿನ ವರ್ಷ ಅದಕ್ಕೆ ರೂ 10 ಕೋಟಿ ಸೇರಿಸಲು ನಿರ್ಧರಿಸಲಾಗಿದೆ. ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರದಿಂದ ಸೊಸೈಟಿ ಪ್ರಗತಿ ಸಾಧಿಸುತ್ತಿದೆ ಎಂದು ಅವರು ಹೇಳಿದರು. ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದಿನ ಕಾಲಘಟ್ಟದಲ್ಲಿ ಕೇವಲ ಬುದ್ದಿವಂತನಾದರೆ ಮಾತ್ರ ಸಾಲದು ಸಮಾಜದ ಕಟ್ಟಕಡೆಯ ವ್ಯಕ್ತಿ ಕೂಡಾ ವಿದ್ಯಾವಂತನಾಗಬೇಕು. ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಪ್ರಜ್ಞೆ, ಪ್ರಾಮಾಣಿಕತೆಯಿದ್ದರೆ ಮಾತ್ರ ಬಲಿಷ್ಠ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಉಳ್ಳೂರು ಗ್ರಾಮದ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೈಂದೂರು ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವಕರ್ಮ ಸಮುದಾಯವು ಕಲೆ ಮತ್ತು ನಿರ್ಮಾಣ ಕೌಶಲ್ಯವನ್ನು ಪರಂಪರಾನುಗತವಾಗಿ ರೂಢಿಸಿಕೊಂಡು ಬಂದಿದೆ. ಎಲ್ಲ ವರ್ಗದ ಜನರಿಗೂ ಅನಿವಾರ್ಯವೆನಿಸಿದ ಕಾರಣದಿಂದ ಸಮಾಜದ ಪ್ರಧಾನ ಅಂಗಗಳಲ್ಲಿ ಒಂದಾಗಿರುವ ವಿಶ್ವಕರ್ಮ ಸಮುದಾಯ ಇನ್ನಷ್ಟು ಸಂಘಟಿತವಾಗಿ, ಅಭಿವೃದ್ಧಿ ಸಾಧಿಸಿ, ತನ್ನ ಹಿರಿಮೆ ಮೆರೆಯಬೇಕು ಎಂದ ಶಾಸಕರು, ವಿಶ್ವಕರ್ಮರು ತಮ್ಮ ಕುಲಕಸುಬನ್ನು ಅನುಸರಿಸುತ್ತಿರುವುದು ಒಳ್ಳೆಯದೆ. ಆದರೆ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯವಾಗುವುದರಿಂದ ಮಕ್ಕಳ ಶಿಕ್ಷಣವನ್ನು ಕಡೆಗಣಿಸದೆ ಸಮುದಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ಸಂಸ್ಕೃತಿ ಹಾಗೂ ಕಲೆಯನ್ನು ಬೆಳೆಸುವಲ್ಲಿ ಸಂಘ-ಸಂಸ್ಥೆಗಳ ಪಾತ್ರ ಅತೀ ಮಹತ್ವದಾಗಿದ್ದು, ಸಮಾಜಮುಖಿ ಚಿಂತನೆಯೊಂದಿಗೆ ಹುಟ್ಟಿಕೊಂಡ ಜೇಸಿ ಸಂಸ್ಥೆ ವ್ಯಕ್ತಿತ್ವವನ್ನು ಬೆಳೆಸುವುದರ ಮೂಲಕ ಸಮಾಜದ ಪರಿವರ್ತನೆಗೆ ಸಹಕಾರಿಯಾಗಿದೆ ಎಂದು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಸ್ಥಳೀಯ ಜೇಸಿಐ ಘಟಕದ ೧೫ನೇ ಜೇಸಿ ಸಪ್ತಾಹ ’ಸಮರ್ಜಿತ್ ಸಾಂಸ್ಕೃತಿಕ ಚಿಲುಮೆ’ ಉದ್ಘಾಟಿಸಿ ಮಾತನಾಡಿದರು. ಬದುಕಿನಲ್ಲಿ ಅವಕಾಶ ದೊರೆಯುವುದು ವಿರಳ. ಆದರೆ ದೊರೆತ ಅವಕಾಶಗಳನ್ನು ಸಾರ್ಥಕ ಸದುಪಯೋಗ ಪಡಿಸಿಕೊಳ್ಳಬೇಕಾಗಿರುವುದು ಯುವಜನತೆಯ ಜವಬ್ದಾರಿಯಾಗಿದೆ. ಈ ನೆಲೆಯಲ್ಲಿ ಜೇಸಿ ಸಂಸ್ಥೆಯ ಯುವ ಸಮುದಾಯದ ಸಂಘಟನಾ ಪ್ರಯತ್ನ ಶ್ಲಾಘನೀಯ. ಈ ಸಪ್ತಾಹದಲ್ಲಿ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳು ಉತ್ತಮವಾಗಿದೆ. ಪ್ರೇಕ್ಷಕರಲ್ಲಿ ಹೊಸ ಅಭಿರುಚಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಹೆಚ್ಚುಕಾಲ ನೆನಪಿನಲ್ಲಿ ಉಳಿಯುತ್ತದೆ ಎಂದರು. ಜೇಸಿಐ ಅಧ್ಯಕ್ಷ ಪುರಂದರ ಖಾರ್ವಿ ಅಧ್ಯಕ್ಷತೆವಹಿಸಿದ್ದರು. ಬೆಂಗಳೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಇವರಿಗೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್…

Read More