ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಎರಡು ದಿನಗಳು ನಡೆದ 11ನೇ ವರ್ಷದ ಆಳ್ವಾಸ್ ಪ್ರಗತಿ 2019 ಶನಿವಾರ ಸಂಪನ್ನಗೊಂಡಿದ್ದು, ಉದ್ಯೋಗ ಮೇಳದಲ್ಲಿ ಒಟ್ಟು 1712 ಉದ್ಯೋಗಾಕಾಂಕ್ಷಿಗಳು ಸ್ಪಾಟ್ ಆಫರ್ಸ್ ಪಡೆದರೆ, ಒಟ್ಟು 3697 ಅಭ್ಯರ್ಥಿಗಳು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಆಯ್ಕೆಗೊಂಡಿದ್ದಾರೆ. ಒಟ್ಟು ಎರಡು ದಿನದ ಉದ್ಯೋಗ ಮೇಳದಲ್ಲಿ ಆಗಮಿಸಿದ್ದ 208 ಕಂಪೆನಿಗಳಲ್ಲಿ 163 ಕಂಪೆನಿಗಳು ತಮ್ಮ ಸ್ಪಾಟ್ ಆಫರ್ಸ್ ಹಾಗೂ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಡುಗಡೆಗೊಳಿಸಿತ್ತು. ಒಟ್ಟು ಎರಡು ದಿನದ ಉದ್ಯೋಗ ಮೇಳದಲ್ಲಿ 8,453 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಕೋಡಿಕಲ್‍ನ ಪ್ರಜ್ಚಾಲ್ ಡಿ’ಕುನ್ಹಾ, ದೇರೆಬೈಲ್‍ನ್ ರಾಘವೇಂದ್ರ ಭಟ್ ಹಾಗೂ ಡೈನಿಟಾ ಪಿಂಟೋ ಅಂತರಾಷ್ಟ್ರೀಯ ಕಂಪೆನಿಯಾದ ರಿಫಿನಿಟಿವ್ ಕಂಪೆನಿಯಲ್ಲಿ ವಾರ್ಷಿಕ ರೂ 5.5 ಲಕ್ಷದ ವೇತನದೊಂದಿಗೆ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ತನ್ನ ಸಂತೋಷವನ್ನು ವ್ಯಕ್ತಪಡಿಸಿ ಮಾತನಾಡಿದ ಡೈನಿಟಾ ಪಿಂಟೋ, ಪ್ರಗತಿಯ ಮೊದಲ ದಿನ ತನ್ನ ಗೆಳತಿ ಇದೇ ಕಂಪೆನಿಯಲ್ಲಿ ಆಯ್ಕೆಯಾದ್ದರಿಂದ, ಅವಳ ಮಾಹಿತಿಯ ಮೇರೆಗೆ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲ ತಿಂಗಳುಗಳ ಹಿಂದೆ ನಾಗೂರು ಬಸ್ ನಿಲ್ದಾಣದ ಬಳಿ ಘಟಿಸಿದ ರಸ್ತೆ ಅಪಘಾತದಿಂದಾಗಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೈಂದೂರು ತಾಲೂಕಿನ ಉಪ್ರಳ್ಳಿ ಮೂಡುಮಠ ನಿವಾಸಿ ಸುರೇಶ್ ಪೂಜಾರಿ ಅವರ ಚಿಕಿತ್ಸೆಗೆ ಸಹೃದಯಿಗಳ ಮಾನವೀಯ ನೆರವಿನ ಅಗತ್ಯವಿದೆ. ಗಾರೆ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಸುರೇಶ್ ಪೂಜಾರಿ ಅವರು ಕೆಲವು ತಿಂಗಳುಗಳ ಹಿಂದೆ ನಾಗೂರು ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಲಾರಿಯೊಂದು ಅವರ ಮೇಲೆ ಹಾದು ಹೋಗಿದ್ದರಿಂದ ತಲೆಗೆ ಗಂಭೀರ ಗಾಯವಾಗಿ ಅರೆಕೋಮಾವಸ್ಥೆ ತಲುಪಿದ್ದರು. ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತಾದರೂ ಅವರು ಗುಣಮುಖರಾಗಿರಲಿಲ್ಲ. ಬಳಿಕ ಕುಂದಾಪುರದ ಮಾತಾ ಆಸ್ಪತ್ರೆಯಲ್ಲಿ ಒಂದು ತಿಂಗಳಿನಿಂದ ಹಾಗೂ ಕಳೆದ ಮೂರು ತಿಂಗಳಿಂದ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೊಳಪಡಿಸಿರುವ ವೈದ್ಯರು ಅವರು ಗುಣಮುಖರಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸುಮಾರು 10…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿಗೆ ಸಮೀಪದ ಕೂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಿದ್ಯಾರ್ಥಿ ಪೋಷಕರ ಸಭೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ಯಾಗ್ ಹಾಗೂ ಕೊಡೆಗಳನ್ನು ವಿತರಿಸಲಾಯಿತು. ಈ ಸಂದರ್ಭ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಬ್ಯಾಗ್ ಹಾಗೂ ಕೊಡೆ ವಿತರಿಸಿ ಮಾತನಾಡಿ ಕೆಲವು ವರ್ಷಗಳ ಹಿಂದೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದು ಮತ್ತು ಮೂಲಭೂತ ಸೌಕರ್ಯಗಳನ್ನು ಹೊಂದುವುದು ಒಂದು ಸವಾಲಾಗಿತ್ತು. ಆದರೆ ಇಂದು ಶಿಕ್ಷಣದ ಗುಣಮಟ್ಟ ಸುಧಾರಿಸಿದ್ದು ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಿಕೊಡುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಟ್ರಸ್ಟ್‌ನ ವತಿಯಿಂದ ಅರ್ಹ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಕೊಡೆಯನ್ನು ವಿತರಿಸಲಾಗುತ್ತಿದೆ. ಕಲಿಕೆಯಲ್ಲಿ ಉತ್ತಮವಿರುವ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌ನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಇಲ್ಲಿನ ದೇವಾಡಿಗ ನವೋದಯ ಸಂಘದ ವಾರ್ಷಿಕ ಮಹಾಸಭೆಯು ಇತ್ತಿಚಿಗೆ ಪದ್ಮನಾಭ ನಗರದ ಗ್ರೀನ್ ಗಾರ್ಡೇನಿಯಾದಲ್ಲಿ ನಡೆಯಿತು. ಸಂಘದ ಸದಸ್ಯೆ ದಾಮಿನಿ ಕರುಣಾಕರ್ ಅವರ ಪ್ರಾರ್ಥನೆಯೊಂದಿಗೆ ಸಭಾP ರ್ಯಕ್ರಮವು ಆರಂಭಗೊಂಡಿತು. ಚರಣ್ ಬೈಂದೂರು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಬಳಿಕ ಸಂಘದ ಸದಸ್ಯರಾದ ಗುರು ದೇವಾಡಿಗ ನಿರ್ಮಿಸಿದ, ದೇವಾಡಿಗ ನವೋದಯ ಸಂಘದ ಎರಡು ವರ್ಷಗಳ ಕಾರ್ಯ ಚಟುವಟಿಕೆಗಳ ಛಾಯಚಿತ್ರದ ವೀಡಿಯೋವನ್ನು ಪ್ರೊಜೆಕ್ಟರ್ ಪರದೆಯ ಮೂಲಕ ಸಭೆಯಲ್ಲಿದ ಸದಸ್ಯರಿಗೆ ತೋರಿಸಲಾಯಿತು. ಪ್ರಧಾನ ಕಾರ್ಯದರ್ಶಿ ಚರಣ್ ರವರು ಸಂಘದ 2017-19ರ ಸಾಲಿನ ಕಾರ್ಯಕ್ರಮಗಳ ವರದಿಯನ್ನು ಪ್ರಕಟಿಸಿದರು. ಖಜಾಂಚಿ ರಾಜೇಶ್ವರಿ ದೇವಾಡಿಗ ಮತ್ತು ದಿವ್ಯ ಸುಧೀರ್ ಸಂಘದ ಹಿಂದಿನ ಎರಡು ವರ್ಷಗಳ ಖರ್ಚು ವೆಚ್ಚ, ಆಯವ್ಯಯಗಳ ವರದಿ ಸಲ್ಲಿಸಿದರು. ಸಂಘದ ಅಧ್ಯಕ್ಷರಾದ ಹರಿ ಟಿ. ದೇವಾಡಿಗರವರು ಅಧ್ಯಕ್ಷ ಭಾಷಣದಲ್ಲಿ ಸಂಘದ ಸದಸ್ಯರು ಸಂಘವನ್ನು ಉತ್ತಮ ರೀತಿಯಲ್ಲಿ ನಡೆಸಿದ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾವು ಅಧ್ಯಕ್ಷರಾಗಿದ್ದ ಸಮಯದಲ್ಲಿ ನೀಡಿದ ಬೆಂಬಲ ಮುಂದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ದುಬೈ: ನಮ್ಮ ಕುಂದಾಪ್ರ ಕನ್ನಡ ಗಲ್ಫ್ ಇದರ ಎರಡನೇ ವಾರ್ಷಿಕೋತ್ಸವ ಮತ್ತು ಕುಟುಂಬ ಮಿಲನ ಕಾರ್ಯಕ್ರಮ ದುಬಾಯಿ ಅಜಮನ್‌ನ ಹ್ಯಾಬಿಟೆಟ್ ಸ್ಕೂಲ್‌ನ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿತು. ಫಾರ್ಚೂನ್ ಗ್ರೂಫ್ ಆಫ್ ಹೋಟೆಲ್ಸ್‌ನ ಮುಖ್ಯಸ್ಥ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಜಾಗತಿಕ ಮಟ್ಟದಲ್ಲಿ ಕುಂದಾಪುರ ತಾಲೂಕಿನವರ ಸಾಧನೆ ಅಪಾರ. ದೇಶ ವಿದೇಶಗಳಲ್ಲೂ ನಮ್ಮ ಸಂಸ್ಕ್ರತಿ, ಸಂಪ್ರದಾಯ, ಧಾರ್ಮಿಕ ಆಚರಣೆಗಳು ಇಂದಿಗೂ ಕೂಡ ವಿಶೇಷ ಗೌರವವನ್ನು ಉಳಿಸಿಕೊಂಡಿದೆ. ಗಲ್ಫ್ ರಾಷ್ಟ್ರದಲ್ಲಿ ಬದುಕು ಕಟ್ಟಿಕೊಳ್ಳಲು ಬಂದಿರುವ ನಮ್ಮವರಿಗೆ ಇಂತಹ ಕಾರ್ಯಕ್ರಮಗಳು ಪರಸ್ಪರ ಭಾಂದವ್ಯವನ್ನು ಬೆಳೆಸುತ್ತದೆ. ಮಾತ್ರವಲ್ಲದೆ ಉದ್ಯೋಗಕ್ಕಾಗಿ ದುಬನಲ್ಲಿ ಹಲವು ಸಮಸ್ಯೆಗಳಲ್ಲಿದ್ದವರಿಗೆ ಸಕಾಲದಲ್ಲಿ ಸ್ಪಂದನೆ, ಶೈಕ್ಷಣಿಕ ನೆರವು, ಆರೋಗ್ಯ ಕಾಳಜಿ ಮುಂತಾದ ಕಾರ್ಯಕ್ರಮಗಳನ್ನು ನಮ್ಮ ಕುಂದಾಪ್ರ ಕನ್ನಡ ದುಬ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು. ನಮ್ಮ ಕುಂದಾಪ್ರ ಕನ್ನಡ ಬಳಗದ ಅಧ್ಯಕ್ಷ ಸಾಧನದಾಸ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ನಮ್ಮ ಕುಂದಾಪ್ರ ಕನ್ನಡದ ದುಬ ಇದರ ಗೌರವಾಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಮಾಹಿತಿ. ಕುಂದಾಪುರ: ರಾಜ್ಯದ ವಿವಿಧ ಭಾಗಗಳಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ಉಸಿರಾಟದ ತೊಂದರೆಯಿಂದ ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷಿಸಿದಾಗ ಹೆಚ್1ಎನ್1 ಸೋಂಕು ಪತ್ತೆಯಾಗಿತ್ತು. ಕುಂದಾಪುರ ತಾಲೂಕಿನಲ್ಲಿಯೂ ಕೆಲವೊಂದು ಪ್ರಕರಣಗಳು ವರದಿಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್1ಎನ್1 ಇನ್‌ಪ್ಲೂಯೆಂಜಾ ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೇ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ ಸೀನಿದಾಗ ಈ ವೈರಸ್ ಹರಡುತ್ತದೆ. ಮುಂಜಾಗೃತ ಕ್ರಮಗಳು: ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗಿಗೆ ಕರವಸ್ತ್ರವನ್ನು ಅಡ್ಡವಾಗಿ ಇಡುವುದು ಮತ್ತು ಉಪಯೋಗಿಸಿದ ಕರವಸ್ತ್ರವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು. ಕೈಗಳನ್ನು ಸಾಬೂನಿನಿಂದ ಮತ್ತು ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈ ತೊಳೆಯದೇ ಮುಟ್ಟಬಾರದು. ಅತಿಯಾಗಿ ಜನಸಂದಣಿ ಇರುವ ಸ್ಥಳದಲ್ಲಿ ಹೋಗುವುದನ್ನು ತಪ್ಪಿಸುವುದು. ಫ್ಲೂ, ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳಿಂದ ದೂರವಿರಬೇಕು. ರಸ್ತೆಯಲ್ಲಿ ಅಥವಾ ಜನವಿರುವ ಪ್ರದೇಶದಲ್ಲಿ ಉಗುಳಬಾರದು. ವೈದ್ಯರ ಸಲಹೆ ಇಲ್ಲದೆ ಔಷಧಿ ತೆಗೆದು ಕೊಳ್ಳಬಾರದು. ವೈಯಕ್ತಿಕ ಸ್ವಚ್ಚತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಕಟ್ಟೆ ಕೋಟಿ ಚನ್ನಯ್ಯ ಪಂಜುರ್ಲಿ ಗರಡಿ ಜಿರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. ೩ ಲಕ್ಷ ದೇಣಿಗೆಯನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ್ ದೇಣಿಗೆಯಾಗಿ ಬಂದ 3 ಲಕ್ಷ ರೂಗಳ ಚೆಕ್ಕನ್ನು ನಾಕಟ್ಟೆಯ ಕೋಟಿ ಚನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶಿವರಾಮ ಪೂಜಾರಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ರಘುರಾಮ ಪೂಜಾರಿ, ತಾಲೂಕು ಯೋಜನಾಧಿಕಾರಿ ಶಶಿರೇಖಾ, ಬೈಂದೂರು ಮೇಲ್ವಿಚಾರಕಿ ಪ್ರೇಮಾ, ಯಡ್ತರೆ ಒಕ್ಕೂಟದ ಸೇವಾ ಪ್ರತಿನಿಧಿ ಅನಿತಾ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ದೈವಸ್ಥಾನದ ಅರ್ಚಕ ಕುಟುಂಬದ ಗಣೇಶ್, ಸ್ಥಳೀಯರಾದ ಆನಂದ ಶೆಟ್ಟಿ, ಮುತ್ತಯ್ಯ ಪೂಜಾರಿ, ಚಂದ್ರ ಪೂಜಾರಿ, ಅಣ್ಣಪ್ಪ ಪೂಜಾರಿ ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೇಖಕಿ ಹಾಗೂ ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ. ಐತಾಳ್ ಅವರ ’ಮಲೆಯಾಳದ ಮಹಿಳಾ ಕಥನ’ ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘ ಪ್ರೊ. ಎಸ್. ವಿ. ಪರಮೇಶ್ವರ ಭಟ್ಟರ ಹೆಸರಿನಲ್ಲಿ ಕೊಡಮಾಡುವ ಅತ್ಯುತ್ತಮ ಅನುವಾದಿತ ಕೃತಿ -2018 ಪ್ರಶಸ್ತಿ ಲಭಿಸಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಮಲೆಯಾಳ ಮತ್ತು ತುಳು-ಹೀಗೆ ಐದು ಭಾಷೆಗಳಲ್ಲಿ ಬರೆಯುವ ಪಾರ್ವತಿ ಐತಾಳ್ ಈ ಭಾಷೆಗಳ ನಡುವೆ ಪ್ರಸಿದ್ಧ ಲೇಖಕರ ಹಲವಾರು ಕೃತಿಗಳನ್ನು ಅನುವಾದಿಸಿದ್ದಾರಲ್ಲದೆ, ಸ್ವತಂತ್ರವಾಗಿಯೂ ಸಣ್ಣಕಥೆ, ಕಾದಂಬರಿ, ವಿಮರ್ಶೆ, ನಾಟಕ ಮತ್ತು ವೈಚಾರಿಕ ಪ್ರಬಂಧ ಕೃತಿಗಳನ್ನು ಪ್ರಕಟಿಸಿದ್ದಾರೆ. ಇದುವರೆಗೆ 40 ಅನುವಾದಿತ ಕೃತಿಗಳು, 23 ಸ್ವತಂತ್ರ ಕೃತಿಗಳು, ನಾಲ್ಕು ಸಂಪಾದಿತ ಮತ್ತು ಸಹಲೇಖಕರಾಗಿ ೯ಕೃತಿಗಳನ್ನು ಪ್ರಕಟಿಸಿದ್ದಾರೆ. 8 ಕೃತಿಗಳು ಪ್ರಕಟಣೆಯ ಹಂತದಲ್ಲಿವೆ. ಹಲವಾರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಾಗಾರ ಮತ್ತು ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರಿಗೆ ಇತ್ತಿಚಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ 2018 ನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ದೇಶಾಭಿಮಾನದಿಂದ ಉತ್ತಮ ಸಮಾಜ, ಆರೋಗ್ಯಕರ ಸಮಾಜ ಸೃಷ್ಠಿಯಾಗುತ್ತದೆ. ನಾವು ಚಿಕ್ಕವರಿದ್ದಾಗಲೇ ದೇಶದ ಮೇಲೆ ಗೌರವ ಹೊಂದಿ ದೇಶವನ್ನು ನಮ್ಮ ಸಂಸ್ಕೃತಿಯನ್ನು ಪ್ರೀತಿಸಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ, ರಾಜ್ಯ ಬಾಲಭವನ ಸೊಸೈಟಿ(ರಿ.) ಬೆಂಗಳೂರು, ತಾಲೂಕು ಬಾಲಭವನ ಸಮಿತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಕಾರಂತ ಪ್ರತಿಷ್ಠಾನ(ರಿ.)ಕೋಟ ಇವರ ಸಹಯೋಗದಲ್ಲಿ ಕಾರಂತ ಥೀಮ್ ಪಾರ್ಕ್ ಕೋಟದಲ್ಲಿ ನಡೆಯುತ್ತಿರುವ ೨೦೧೮-೨೦೧೯ ಸಾಲಿನ ವಾರಂತ್ಯ ಕಾರ್ಯಕ್ರಮಕ್ಕೆ ಭೇಟಿ ನೀಡಿ ಮಾತನಾಡಿದರು. ವೇದಿಕೆಯಲ್ಲಿ ಬ್ರಹ್ಮಾವರ ಶಿಶು ಅಭಿವೃದ್ಧಿ ಪ್ರಭಾರ ಯೋಜನಾಧಿಕಾರಿ ಶ್ರೀಮತಿ ಶೋಭಾ ಶೆಟ್ಟಿ, ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಲಕ್ಷ್ಮೀ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸತೀಶ್ ವಡ್ಡರ್ಸೆ, ಸಂಪನ್ಮೂಲ ವ್ಯಕ್ತಿ ಕೆ.ಕೆ.ಶಿವರಾಮ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ಮತ್ತು ಬೈಂದೂರು ತಾಲೂಕಿನ ಮರಾಠಿ ಜನಾಂಗದವರು ಶ್ರಮ ಜೀವಿಗಳು ಮತ್ತು ನಂಬಿಕಸ್ಥರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುಂದುವರಿಯಬೇಕಾದ್ದು ಬಹಳಿಷ್ಟಿದೆ. ಆ ನಿಟ್ಟಿನಲ್ಲಿ ಮರಾಟಿಗರ ಏಳಿಗೆಗೆ ಸರ್ವ ರೀತಿಯಲ್ಲಿ ಸಹಕರಿಸುವೆ ಎಂದು ಶಾಸಕ ಬಿ ಎಂ ಸುಕುಮಾರ ಶೆಟ್ಟಿಯವರು ನುಡಿದರು. ಗೋಳಿಹೊಳೆ ಮಹಿಷಾಮರ್ದಿನಿ ಸಭಾ ಭವನದಲ್ಲಿ ಜರುಗಿದ ಮರಾಠಿಗರ ಸಾಂಸ್ಕೃತಿಕ ಪರಂಪರೆಯನ್ನ ಬಿಂಬಿಸುವ ಛತ್ರಪತಿ ಯುವ ಸೇನೆ ಸಡಗರ 2019 ಉದ್ಘಾಟಿಸಿ ಮಾತನಾಡಿದರು. ಛತ್ರಪತಿ ಯುವ ಸೇನೆ ಸಾಂಸ್ಕೃತಿಕ ವೈಭವದಲ್ಲ್ಲಿ ಕುಂದಾಪುರ ತಾಲೂಕಿನ ಮೊಟ್ಟ ಮೊದಲ ವೈದ್ಯ ಪದವಿದರೆ ಡಾ, ನಿವೇದಿತ ನಂದಿಗದ್ದೆ ಮತ್ತು ಅಂತರ್ ರಾಷ್ಟ್ರೀಯ ಕ್ರೀಡಾಪಟು ಮಂಜುನಾಥ ಮರಾಟಿ ಹೊಸೇರಿ ಹಾಗು ವಿದ್ಯಾರ್ಥಿ ಸಾಧಕರದ ಭುವನೇಶ್ವರಿ ಕನ್ಕಿಮಡಿ, ವಿನೋದ ನಾಗರಮಕ್ಕಿ ಸುಬ್ರಮಣ್ಯ ಮಂಗಳಮಕ್ಕಿ, ಕಿಶನ್ ಹಾಲಾಡಿ, ರಾಜೇಶ ಹಾಲ್ಕಲ್, ರಜನಿ ಕೊಲ್ಲೂರುರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಬೈಂದೂರು ವಲಯ ಮರಾಠಿ ಸಮಾಜ ಸುಧಾರಕರ ಸಂಘದ ಅಧ್ಯಕ್ಷರಾದ ಬೋಜು ನಾಯ್ಕ ಜಾಂಬ್ಳಿಹೊಂಡ. ಉಪಾಧ್ಯಕ್ಷರಾದ ನಾಗೇಶ…
