Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19ನ ಪಾಸಿಟಿವ್ ಬಂದಿರುವ ಪ್ರಕರಣಗಳಲ್ಲಿ ಶೇ.98 ಮಂದಿಗೆ ರೋಗ ಲಕ್ಷಣಗಳು ಇಲ್ಲ.  ರೋಗಿಗೆ ಆಕ್ಸಿಜಿನ್, ವೆಂಟಿಲೇಟರ್, ಐ.ಸಿ.ಯು ಸೇವೆ ನೀಡುವಂತಹ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಂದು ಉಡುಪಿ ಕೋವಿಡ್ -19 ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ಶನಿವಾರ ನಡೆದ ದಿಶಾ ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಬಂದಿರುವ ಎಲ್ಲರೂ ಚಿಕಿತ್ಸೆಗೆ ಶೀಘ್ರದಲ್ಲಿ ಸ್ಪಂದಿಸುತ್ತಿದ್ದು, ಆರೋಗ್ಯವಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಇಂದಿನಿಂದ ಸರಾಸರಿ 100 ಮಂದಿ ಪ್ರತಿದಿನ ಗುಣಮುಖರಾಗಿ ಡಿಸ್ಚಾಜ್ ಆಗಲಿದ್ದಾರೆ. ಕೊರೋನಾ ಸೋಂಕಿತ ಚಿಕಿತ್ಸೆಗಾಗಿ ಉಡುಪಿ ಟಿಎಂಎ ಪೈ ಆಸ್ಪತ್ರೆ, ಕುಂದಾಪು ಸರಕಾರಿ ಆಸ್ಪತ್ರೆ, ಕಾರ್ಕಳ ಆಸ್ಪತ್ರೆ, ಎಸ್.ಡಿ.ಎಂ ಕಾಲೇಜು ಮತ್ತು ಕೊಲ್ಲೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಜಿಲ್ಲೆಯಲ್ಲಿ ಕ್ವಾರಂಟೈನ್ ಕೇಂದ್ರಗಳಿಂದ ತೆರಳಿದವರಿಂದ ಅವರ ಮನೆಯವರಿಗೆ ಹಾಗೂ ಸಮುದಾಯಕ್ಕೆ ರೋಗ ಹರಡಿಲ್ಲ, ಹೋಂ ಕ್ವಾರಂಟೈನ್ ನಲ್ಲಿರುವವರ ಮನೆಗೆ ಪ್ರತಿದಿನ ಆಶಾ ಕಾರ್ಯಕರ್ತೆಯರು ಭೇಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜೂ.6: ಬೈಂದೂರು ತಾಲೂಕಿನಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚು ವರದಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಬಿಜೂರು, ಉಪ್ಪುಂದ, ನಂದನವನ ಹಾಗೂ ಕೆರ್ಗಾಲು ಭಾಗದ ವ್ಯಾಪಾರಸ್ಥರು ನಾಳೆಯಿಂದ ಒಂದು ವಾರಗಳ ಕಾಲ ಸ್ವಯಂಪ್ರೇರಿತವಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಪರ-ವಿರೋಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಹೆಚ್ಚಿನ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಆ ಪೈಕಿ ಬೈಂದೂರು ತಾಲೂಕಿನಲ್ಲಿಯೇ ಗರಿಷ್ಠ ಪ್ರಕರಣಗಳು ದಾಖಲಾಗಿದೆ. ಇದರಿಂದ ಮುಂಜಾಗೃತಾ ಕ್ರಮವಾಗಿ ಜೂನ್7ರಿಂದ ಜೂನ್15ರ ತನಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದೆ. ಆಸ್ಪತ್ರೆ ಹಾಗೂ ಮೆಡಿಕಲ್ ಹೊರತುಪಡಿಸಿ, ಈ ಭಾಗದ ವ್ಯಾಪಾರಸ್ಥರು ಎಂಟು ದಿನಗಳ ಕಾಲ ವ್ಯವಹಾರ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಅಲ್ಲಲ್ಲಿ ಬ್ಯಾನರ್ ಅಳವಡಿಸಿದ್ದು, ರಿಕ್ಷಾದಲ್ಲಿ ಪ್ರಚಾರವನ್ನು ಮಾಡಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ವಯಂ ಪ್ರೇರಿತ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ. ಬ್ಯಾಂಕ್, ಸೊಸೈಟಿ, ಆಸ್ಪತ್ರೆ ಎಂದಿನಂತೆ ತೆರೆದಿರಲಿದೆ: ಈ ಭಾಗದ ಆಸ್ಪತ್ರೆ,ಮೆಡಿಕಲ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾರ್ ಅಸೋಸಿಯೇಶನ್ಗೆ ನಡೆದ ಚುನಾವಣೆಯಲ್ಲಿ ನಿರಂಜನ್ ಹೆಗ್ಡೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಹಂದೆ ಆಯ್ಕೆಗೊಂಡಿದ್ದಾರೆ. ಕುಂದಾಪುರ ಬಾರ್ ಅಸೋಸಿಯೇಶನ್ಗೆ ಜೂ.5ರಂದು ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನಿರಂಜನ್ ಹೆಗ್ಡೆ ಹಾಗೂ ಕೆ.ಸಿ ಶೆಟ್ಟಿ ಸ್ಪರ್ಧಿಸಿದ್ದರು. ಒಟ್ಟು 232 ಮತಗಳಲ್ಲಿ 223 ಮತಗಳು ಚಲಾಯಿಸಲ್ಪಟ್ಟಿದ್ದವು. 9 ಮತಗಳಿಂದ ನಿರಂಜನ್ ಹೆಗ್ಡೆ ಗೆಲುವು ಸಾಧಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರಮೋದ್ ಹಂದೆ ಸ್ಪರ್ಧೆ ಮಾಡಿದ್ದು, ಅವರು 32 ಮತಗಳಿಂದ ಗೆಲುವು ಸಾಧಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಮುಂಬಯಿಯ ಬಿಲ್ಲವ ಸೇವಾ ಸಂಘ ಕುಂದಾಪುರ, ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಯಾವುದೇ ಸದ್ದು ಗದ್ದಲವಿಲ್ಲದೆ ಅಸಹಾಯಕ ಸಮುದಾಯ ಬಾಂಧವರಿಗೆ ಹಾಗೂ ಸಂಕಷ್ಟಕ್ಕೆ ಸಿಲುಕಿದ ಕೆಲವು ಕುಟುಂಬಗಳಿಗೆ ದೈನಂದಿನ ಅಗತ್ಯ ವಸ್ತುಗಳು ವಿತರಿಸಿದ ಸಂಘ ನೊಂದ ಸದಸ್ಯರ ಪಾಲಿಗೆ ಆಶಾಕಿರಣವಾಗಿದೆ. ಲಾಕ್ ಡೌನ್ ನಿಂದ ಮುಂಬಯಿ ಮಹಾನಗರ ಮತ್ತು ಉಪನಗರಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಂಘದ ಸದಸ್ಯರಿಗೆ, ಸಮುದಾಯ ಬಾಂಧವರಿಗೆ ಮತ್ತು ಬಿಲ್ಲವರೇತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದಿದೆ. ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿಯವರ ನೇತೃತ್ವದಲ್ಲಿ ಸಮಾಜದ ದಾನಿಗಳು ಹಾಗೂ ಸಂಘದ ಆಡಳಿತ ಸಮಿತಿ ಮತ್ತು ಉಪಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದೊಂದಿಗೆ ನಾಲಾಸೋಪಾರ, ವಿರಾರ್, ದಿಘಾ, ಐರೋಳಿ, ಸಾಯನ್, ಕುರ್ಲಾ, ಬಾಂಢೂಪ್, ಥಾಣೆ, ಡೊಂಬಿವಲಿ, ಠಾಕುರ್ಲಿ, ಅಂಬರನಾಥ್ ಮುಂತಾದ ಕಡೆಗಳಲ್ಲಿ ನೆಲೆಸಿರುವ ಸಂಕಷ್ಟಕ್ಕೀಡಾದ ಕೆಲವು ಕುಟುಂಬಗಳಿಗೆ ದೈನಂದಿನ ಆಹಾರ ಸಾಮಗ್ರಿಗಳನ್ನು ವಿತರಿಸಿದೆ. ಕುಂದಾಪ್ರ ಡಾಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.5ರ ಶುಕ್ರವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 204 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಪೈಕಿ 203 ಮಂದಿ ಮಹಾರಾಷ್ಟದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಓರ್ವ ಸ್ಥಳೀಯ ಪೊಲೀಸ್ ಸಿಬ್ಬಂದಿಗೂ ಪಾಸಿಟಿವ್ ಬಂದಿದೆ.  204ರಲ್ಲಿ 157 ಪುರುಷರು, 40 ಜನ ಮಹಿಳೆರು ಹಾಗೂ 7 ಜನ ಮಕ್ಕಳಿಗೆ ಪಾಸಿಟಿವ್ ದೃಢವಾಗಿದೆ.   ಜಿಲ್ಲೆಯಲ್ಲಿ ಸದ್ಯ ಒಟ್ಟು 767 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 134 ಮಂದಿ ಬಿಡುಗಡೆಯಾಗಿದ್ದು, 634 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ ಉಪವಿಭಾಗ ವ್ಯಾಪ್ತಿಯಲ್ಲಿ ಒಟ್ಟು 80 ಕಡೆ ಸೀಲ್ ಡೌನ್ – https://kundapraa.com/?p=38288 . ► ಉಡುಪಿ ಜಿಲ್ಲೆ: ಗುರುವಾರ 92 ಕೊರೋನಾ ಪಾಸಿಟಿವ್ – https://kundapraa.com/?p=38278 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈನ ಹೋಟೆಲ್ ಉದ್ಯಮಿ, ಆಲೂರು ಕಲ್ಲಂಗಡಿ ಮನೆ ಮಂಜುನಾಥ ಪೂಜಾರಿ (55) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ, ಸಹೋದರರು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂ.4: ಕೋವಿಡ್-19 ಪಾಸಿಟಿವ್ ಬರುವ ವ್ಯಕ್ತಿಯ ಮನೆಯ ಸುತ್ತಲಿನ 200 ಮೀ. ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಕುಂದಾಪುರ ಉಪವಿಭಾಗದಲ್ಲಿ ಇಲ್ಲಿಯ ತನಕ ಒಟ್ಟು 80 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಈ ಪೈಕಿ ಗಂಗೊಳ್ಳಿ ಹಾಗೂ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗರಿಷ್ಠ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬೈಂದೂರು ಠಾಣೆ ವ್ಯಾಪ್ತಿಯಲ್ಲಿ 31, ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ 2, ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ 32, ಕುಂದಾಪುರ ಠಾಣೆ ವ್ಯಾಪ್ತಿಯಲ್ಲಿ 07, ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 07, ಅಮಾಸೆಬೈಲು ಠಾಣೆ ವ್ಯಾಪ್ತಿಯ 01 ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಹಾಗೂ ಕಂಟೈನ್ಮೆಂಟ್ ಆಗಿರುವ ಪ್ರದೇಶಗಳಲ್ಲಿ ಕೇದೂರು, ತೆಕ್ಕಟ್ಟೆ, ಬೀಜಾಡಿ, ಬಸ್ರೂರು, ಕೋಣಿ, ಗುಲ್ವಾಡಿ, ಕರ್ಕುಂಜೆ, ಹಳ್ನಾಡು, ಕೋಡಿ,  ವಡೇರಹೋಬಳಿ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ಹಕ್ಲಾಡಿ, ಮರವಂತೆ, ನಾವುಂದ, ಹಡವು ನಾಡ, ನೆಂಪು, ಕಂಬದಕೋಣೆ, ಗಂಗೊಳ್ಳಿ, ಗುಜ್ಜಾಡಿ, ಕೊಲ್ಲೂರು, ಜಡ್ಕಲ್, ಗೋಳಿಹೊಳೆ, ಯಡ್ತರೆ, ಬೈಂದೂರು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.4ರ ಗುರುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 92 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಂಬೈನಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ 78 ಪುರುಷರು, 13 ಮಹಿಳೆಯರು ಹಾಗೂ 1 ಮಗು ಸೇರಿದೆ. ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 563 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 108 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 454 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ► ಕೋವಿಡ್ ಪ್ರಕರಣ ನಿಭಾಯಿಸುವಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಲಕ್ಷ್ಯ ಧೊರಣೆ: ಬ್ಲಾಕ್ ಕಾಂಗ್ರೆಸ್ ನಿಯೋಗ ಖಂಡನೆ – https://kundapraa.com/?p=38258 . ► ಕುಂದಾಪುರ ತಾಲೂಕಿನ 24, ಬೈಂದೂರು ತಾಲೂಕಿನ 15 ಕಡೆಗಳಲ್ಲಿ ಸೀಲ್‌ಡೌನ್ – https://kundapraa.com/?p=38263 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕ್ವಾರಂಟೈನ್ ಮುಗಿಸಿದ ಬಳಿಕ ಸರಕಾರದ ಆದೇಶದ ಹಿನ್ನಲೆ ಮನೆಗೆ ಬಂದ ಗಂಗೊಳ್ಳಿ ಗ್ರಾಮದ ಮಹಿಳೆಯೋರ್ವಳಿಗೆ ಕೋವಿಡ್-೧೯ ಸೋಂಕು ದೃಢಪಟ್ಟಿದ್ದು, ಗಂಗೊಳ್ಳಿ ಗ್ರಾಮದ ವೆಂಕಿಮನೆ ಪ್ರದೇಶವನ್ನು ಗುರುವಾರ ಸೀಲ್‌ಡೌನ್ ಮಾಡಲಾಗಿದೆ. ಗಂಗೊಳ್ಳಿ ಗ್ರಾಮದ ವೆಂಕಿಮನೆ ಸಮೀಪದ ಮನೆಗೆ ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಗೆ ವರದಿಯು ಪಾಸಿಟಿವ್ ಬಂದಿದ್ದು ಇದೀಗ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವೆಂಕಿಮನೆ ಸಮೀಪದ ೧೦೦ ಮೀಟರ್ ವ್ಯಾಪ್ತಿಯ ಎಂಟು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಗಂಗೊಳ್ಳಿ ಗ್ರಾಮ ಕರಣಿಕ ರಾಘವೇಂದ್ರ ಡಿ. ಅವರು ಕಂಟೈನ್‌ಮೆಂಟ್ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸೀಲ್ ಡೌನ್ ಮಾಡಿದ ಸ್ಥಳಕ್ಕೆ ಯಾರೂ ಪ್ರವೇಶಿಸುವಂತಿಲ್ಲ ಮತ್ತು ಮನೆಯವರು ಯಾರು ಹೊರಗೆ ಬರುವಂತಿಲ್ಲ ಎಂದು ಸೂಚನೆ ನೀಡಿದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಎಸ್.ಪೂಜಾರಿ, ಪಿಡಿಒ ಚಂದ್ರಶೇಖರ, ಕಾರ್ಯದರ್ಶಿ ದಿನೇಶ ಶೇರುಗಾರ್, ಟಾಸ್ಕ್‌ಪೋರ್ಸ್ ಸದಸ್ಯ ಬಿ.ರಾಘವೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇಲಾಖೆಗಳ ಸಮನ್ವಯತೆ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿರುವುದಲ್ಲದೇ, ಆತಂಕದ ನಡುವೆ ಬದುಕುವಂತಾಗಿದೆ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ನಿಯೋಗ ಆರೋಪಿಸಿದೆ. ಗುರುವಾರ ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್ ಅವರನ್ನು ಭೇಟಿ ಮಾಡಿ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಆಗುತ್ತಿರುವ ಗೊಂದಲಗಳ ಬಗ್ಗೆ ಮನವರಿಕೆ ಮಾಡಿತು. ಈ ಸಂದರ್ಭ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸುವ ರೀತಿಯೇ ಗೊಂದಲಮಯವಾಗಿದೆ. ಕೋವಿಡ್ ವರದಿಯಲ್ಲಿ ನೆಗೆಟಿವ್ ಬಂದವರ ಮಾಹಿತಿಯನ್ನು ಅವರಿಗೆ ತಿಳಿಸುತ್ತಿಲ್ಲ. ಪಾಟಿಸಿವ್ ಬಂದಿರುವ ಬಗ್ಗೆ ತಿಳಿಸಿದ ಮೇಲೆ ಕೂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ೨-೩ ದಿನ ತೆಗೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಪಾಸಿಟಿವ್ ಬಂದವರ ಮನೆಗೆ ತೆರಳಿ ಕರೆದೊಯ್ಯುವ ಬದಲಿಗೆ ಹೈವೆಗೆ ಬಂದು ನಿಂತುಕೊಳ್ಳುವಂತೆ ಹೇಳಲಾಗುತ್ತಿದೆ. ಆರೋಗ್ಯ ಇಲಾಖೆಯ ಈ ನಿರ್ಧಾರ…

Read More