Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುಲ್ವಾಡಿ ಮೆಹರಾಜ್ ಜುಮ್ಮ ಮಸೀದಿಯ 2021-2022 ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಜಿ.ಟಿ.ಉಸ್ಮಾನ್ ಅವಿರೋಧ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಸಂತೆಮಕ್ಕಿ ಪಕೀರ್ ಸಾಹೇಬ್, ಉಪಾಧ್ಯಕ್ಷರಾಗಿ ಜಿ.ಪಿ.ಮೊಹಮ್ಮದ, ಹಾಜಿ.ಹಮೀದ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಆಲಿ ಅಕ್ಬರ್, ಜೊತೆ ಕಾರ್ಯದರ್ಶಿಯಾಗಿ ಪಳ್ಳಿ ಉಸ್ಮಾನ್, ಕೋಶಾಧಿಕಾರಿಯಾಗಿ ಜಿ.ಕೆ. ಹಂಝ, ಗೌರವ ಸದಸ್ಯರಾಗಿ ಪಕೀರ್ ಹಸನಬ್ಬ, ಹೆಚ್.ಎಂ.ಹಂಝ, ಎಸ್.ಎಸ್.ಹನೀಫ್, ಜಿ.ಹೆಚ್. ಇಬ್ರಾಹಿಂ, ಜಿ.ಹೆಚ್. ಅಬ್ದುಲ್ಲ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಪ್ರಜ್ಞಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಒಡೆತನದ ಪ್ರಜ್ಞಾ ಸಾಗರ್ ಮಲ್ಟಿಕ್ಯುಸೀನ್ ರೆಸ್ಟೋರೆಂಟ್ ಗುರುವಾರ ಶುಭಾರಂಭಗೊಂಡಿತು. ಹೊಸ್ಮಾರು ಶ್ರೀ ಕ್ಷೇತ್ರ ಬಲ್ಯೊಟ್ಟುನ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ನೂತನ ರೆಸ್ಟೋರೆಂಟ್ ಲೋಕಾರ್ಪಣೆಗೊಳಿಸಿದರು. ಉಪ್ಪುಂದ ಶನಿಮಂದಿರದ ವಿಜಯ ಪಾತ್ರಿಯವರು ಕ್ಯಾಶ್ ಕೌಂಟರ್ ಉದ್ಘಾಟಿಸಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ರಾಜ್ಯಧ್ಯಾಕ್ಷರಾದ ತಿಮ್ಮೇಗೌಡ ಬಿ.ಕೆ. ಹಾಗೂ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷರಾದ ವೇದಕುಮಾರ್ ಕಿಚನ್ ಉದ್ಘಾಟಿಸಿದರು. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಎಸಿ ರೆಸ್ಟೊರೆಂಟ್ ಉದ್ಘಾಟಿಸಿದರು. ಈ ಸಂದರ್ಭ ಪ್ರಜ್ಞಾ ಸಾಗರ್ ಹೋಟೆಲ್ & ರೆಸಾರ್ಟ್ಸ್ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ, ನಿರ್ದೇಶಕ ಮಾಲತಿ ಗೋವಿಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರ ಧಾರವಾಡ ಹಾಗೂ ಉಪ್ಪುಂದದ ನಿವಾಸದ ಮೇಲೆ ಗುರುವಾರ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ಸಂಜೆಯ ತನಕ ದಾಖಲೆಗಳ ಪರಿಶೀಲಿಸಿರುವ ಬಗ್ಗೆ ತಿಳಿದುಬಂದಿದೆ. ಮಂಗಳೂರಿನಿಂದ ಕಾರಿನಲ್ಲಿ ಬಂದ 9 ಮಂದಿ ಅಧಿಕಾರಿಗಳ ತಂಡ, ಯು.ಬಿ. ಶೆಟ್ಟಿ ಅವರ ಉಪ್ಪುಂದದ ನಿವಾಸಕ್ಕೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದೆ. ಯು.ಬಿ. ಶೆಟ್ಟಿ ಅವರು ಸದ್ಯ ಧಾರವಾಡದಲ್ಲಿದ್ದು ಅಲ್ಲಿ ಅವರ ನಿವಾಸ ಹಾಗೂ ಅವರ ಸಹೋದರ, ಉದ್ಯಮಿ ಸೀತಾರಾಮ ಶೆಟ್ಟಿ ಅವರ ನಿವಾಸದಲ್ಲಿ ಸಂಜೆಯತನಕ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಉಪ್ಪುಂದ ಮೂಲದವರಾದ ಯು.ಬಿ ಶೆಟ್ಟಿ ಅವರ ಧಾರವಾಡದಲ್ಲಿ ಉದ್ಯಮಿಯಾಗಿದ್ದು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಆಪ್ತರ ಮೇಲೆ ನಡೆಯುತ್ತಿರುವ ದಾಳಿಯ ಮುಂದುವರಿದ ಭಾಗ, ರಾಜಕೀಯ ಪ್ರೇರಿತ ದಾಳಿ ಎನ್ನಲಾಗುತ್ತಿದೆ. ಯು.ಬಿ ಶೆಟ್ಟಿ ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಎಂ.ಎಲ್.ಸಿ ಸೀಟಿಗಾಗಿ ಉಮೇದುವಾರಿಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪಠ್ಯೇತರ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗುತ್ತದೆ. ಮಕ್ಕಳಲ್ಲಿ ಮಾನಸಿಕ, ದೈಹಿಕ, ಆರೋಗ್ಯ ರಕ್ಷಣೆಗೆ ಮತ್ತು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರಲ್ಲಿ ಮನೋಸ್ಥೈರ್ಯವನ್ನು ಹೆಚ್ಚಿಸುವಲ್ಲಿ ಶಿಬಿರಗಳು ಸಹಕಾರಿಯಾಗಲಿದೆ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಹೇಳಿದರು. ಬಾಳ್ಕುದ್ರು ಹಂಗಾರಕಟ್ಟೆ ಅಭಿವೃದ್ಧಿ ಸಂಸ್ಥೆ, ಗ್ರಾಮ ಪಂಚಾಯತ್ ಗುಜ್ಜಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇವರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಮೂರು ದಿನಗಳ ಮಕ್ಕಳ ಕ್ರಿಯಾತ್ಮಕ ದಸರಾ ಮಜಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಇಂದಿರಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಶ್ರೀಧರ ಗುಜ್ಜಾಡಿ, ಪ್ರಕಾಶ ಎಂ.ಪೂಜಾರಿ, ತುಂಗಾ ಪೂಜಾರಿ, ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ. ಮತ್ತಿತರರು ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಇಂದು ಬೆಳಿಗ್ಗೆ 11ಕ್ಕೆ ಜಗತ್ತಿನಾದ್ಯಂತ 5 ಲಕ್ಷ ಜನರಿಂದ ಏಕಕಾಲದಲ್ಲಿ ಸಾಮೂಹಿಕ ಲಕ್ಷಕಂಠ ಗೀತಗಾಯನ ನಡೆಯಿತು. ಈ ಅಭಿಯಾನದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವೂ ಕೈಜೋಡಿಸಿ, ಇದರ ಯಶಸ್ಸಿನಲ್ಲಿ ಭಾಗಿಯಾಯಿತು. ಪುತ್ತಿಗೆ, ಮಿಜಾರು, ವಿದ್ಯಾಗಿರಿ ಹಾಗೂ ನುಡಿಸಿರಿ ವೇದಿಕೆಯಲ್ಲಿ 5000ಕ್ಕೂ ಅಧಿಕ ವಿದ್ಯಾರ್ಥಿಗಳು ಗೀತಗಾಯನದಲ್ಲಿ ತಮ್ಮ ಕಂಠ ಜೋಡಿಸಿದರು. 4 ಪ್ರತ್ಯೇಕ ಸ್ಥಳಗಳಲ್ಲಿ ನೆರೆದಿದ್ದ ವಿದ್ಯಾರ್ಥಿಗಳಿಂದ, ಕೆ. ವಿ. ರಮಣ್ ಅವರ ನಿರ್ದೇಶನದಲ್ಲಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳು ಏಕಕಾಲದಲ್ಲಿ ಮೊಳಗಿತು. ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಎಲ್ಲಾ ವಿದ್ಯಾರ್ಥಿಗಳು ಕನ್ನಡ ಬಾವುಟವನ್ನು ಬೀಸುವ ಮೂಲಕ, ತಮ್ಮ ಕನ್ನಡದ ಅಭಿಮಾನವನ್ನು, ಕನ್ನಡ ನಾಡಿನ ಮೇಲಿರುವ ಪ್ರೀತಿಯನ್ನು ತೋರ್ಪಡಿಸಿದರು. ಈ ಸಂದರ್ಭ ಆಳ್ವಾಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮೀನುಗಾರಿಕಾ ಇಲಾಖೆ, ಉಪನಿರ್ದೇಶಕರು, ಬಂದರು ಯೋಜನೆ ಗಂಗೊಳ್ಳಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘ, ಹಸಿ ಮೀನು ವ್ಯಾಪಾರಸ್ಥರ ಸಂಘ ಗಂಗೊಳ್ಳಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಹಾಗೂ ವಿವಿಧ ಮೀನುಗಾರ ಸಂಘಟನೆಗಳ ಜಂಟಿ ಆಶ್ರಯದಲ್ಲಿ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡ ರಾಜ್ಯೋತ್ಸವ ಅಭಿಯಾನ ಅಂಗವಾಗಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಗುರುವಾರ ಜರಗಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ನಾರಾಯಣ ಖಾರ್ವಿ, ಹಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಆಶ್ರಯದಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಹಲ್ಲಿನ ಸ್ವಚ್ಛತೆ ಮತ್ತು ಬಾಯಿಯ ಆರೋಗ್ಯ ದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ದಂತ ಸ್ವಚ್ಛತಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮಾರಲ ಡೆಂಟಲ್ ಕ್ಲಿನಿಕ್ ದಂತ ವೈದ್ಯ ಡಾ. ರಾಜಾರಾಂ ಶೆಟ್ಟಿ, ಮಕ್ಕಳಲ್ಲಿ ಹಲ್ಲಿನ, ಬಾಯಿಯ ಆರೋಗ್ಯದ ಮಹತ್ವ ಮತ್ತು ಹಲ್ಲುಜ್ಜುವ ಸರಿಯಾದ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ರೋಟರಿ ಕ್ಲಬ್ನ ಅಧ್ಯಕ್ಷರಾದ ಶಶಿಧರ್ ಹೆಗ್ಡೆ, ವಿಶೇಷ ಮಕ್ಕಳ ಪಾಲನೆಯಲ್ಲಿ ಫೋಷಕರು ಅತ್ಯಂತ ತಾಳ್ಮೆ ಮತ್ತು ಕಾಳಜಿಯಿಂದ ಬೆಳೆಸಬೇಕು ಎಂದರು ಮತ್ತು ರೋಟರಿ ಕ್ಲಬ್ ಕುಂದಾಪುರ ಇಂತಹ ಕಾರ್ಯಗಳಿಗೆ ಸದಾ ಬೆಂಬಲವನ್ನು ನೀಡಲಿದೆ ಎಂಬ ಭರವಸೆಯನ್ನು ನೀಡಿದರು. ತಲ್ಲೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಭೀಮವ್ವ ಪಂಚಾಯತ್ ಮೂಲಕ ವಿಶೇಷ ಮಕ್ಕಳಿಗೆ ದೂರೆಯುವ ಸವಲತ್ತುಗಳನ್ನು ದೂರಕಿಸಿ ಕೊಡುವಲ್ಲಿ ವಿಶೇಷ ಪ್ರಯತ್ನವನ್ನು ನಡೆಸುವುದರೊಂದಿಗೆ ಸಂಸ್ಥೆಯ ಚಟುವಟಿಕೆಗಳನ್ನು ಪ್ರಶಂಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ಕುಂದಾಪುರದ ವಿವಿಧೆಡೆ ನಡೆಯಿತು. ಕುಂದಾಪುರದ ಮಿನಿವಿಧಾನಸೌಧ, ತಾಲೂಕು ಪಂಚಾಯತ್ ಕಛೇರಿ, ಕೋಡಿ ಸೀವಾಕ್, ಕುಂದಾಪುರ ಬೋರ್ಡ್ ಹೈಸ್ಕೂಲ್, ಪದವಿ ಪೂರ್ವ ಕಾಲೇಜು, ಗಾಂಧಿ ಪಾರ್ಕ್‌ ವಿವಿಧೆಡೆಯಲ್ಲಿ ನಡೆದ ಗೀತ ಗಾಯನದಲ್ಲಿ ಅಧಿಕಾರಿಗಳು, ವಿದಾರ್ಥಿಗಳು ಹಾಗೂ ಸಾರ್ವಜನಿಕರು ಕನ್ನಡ ಗೀತ ಗಾಯನದಲ್ಲಿ ಪಾಲ್ಗೊಂಡರು. ಆರಂಭದಲ್ಲಿ ನಾಡಗೀತ ಬಳಿಕ ನಿಗದಿಪಡಿಸಿದ ಮೂರು ಕನ್ನಡಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. ಕುಂದಾಪುರ ಮಿನಿ ವಿಧಾನಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಾಜು ಕೆ. ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಗಾಯಕ ಗಣೇಶ್ ಗಂಗೊಳ್ಳಿ ಮೊದಲಾದವರು ಗೀತ ಗಾಯನದಲ್ಲಿ ಭಾಗವಹಿಸಿದರು. ಇದನ್ನೂ ಓದಿ:► ಬೈಂದೂರು ತಾಲೂಕಿನಲ್ಲಿ ಸಾಮೂಹಿಕ ಕನ್ನಡ ಗೀತ ಗಾಯನ – https://kundapraa.com/?p=54101 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ಪರಂಪರೆ, ಸಂಸ್ಕೃತಿಯ ಹಿರಿಮೆ ಕನ್ನಡ ನಾಡಿನದ್ದಾಗಿದೆ. ನಾಡಿನ ಏಳಿಗೆಗೆ ಪರಿಶ್ರಮ ಪಟ್ಟವರವನ್ನು ಸದಾ ನೆನಪಿಸಬೇಕಿದೆ. ನಾಡು ನುಡಿಯ ಚಿಂತನೆ ಭಾಷೆಯ ಅಭಿಮಾನ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು. ಬೈಂದೂರು ತಾಲೂಕು ದಂಡಾಧಿಕಾರಿ ಶೋಭಾಲಕ್ಷ್ಮೀ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಹೈಸ್ಕೂಲು ವಿದ್ಯಾರ್ಥಿಗಳು, ರತ್ತೂಬಾಯಿ ಜನತಾ ಪ್ರೌಢಶಾಲೆ, ಯುಬಿ ಶೆಟ್ಟಿ ಶಾಲೆಯ ವಿದ್ಯಾರ್ಥಿಗಳು ಸಮೂಹ ಗಾಯನದಲ್ಲಿ ಪಾಲ್ಗೊಂಡರು. ಆರಂಭದಲ್ಲಿ ನಾಡಗೀತ ಬಳಿಕ ನಿಗದಿಪಡಿಸಿದ ಮೂರು ಕನ್ನಡಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. 600ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡರು. ಸಂಗೀತ ನಿರ್ದೇಶಕ ಚಂದ್ರ ಬಂಕೇಶ್ವರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಅಂಗವಾಗಿ 45 ದಿನಗಳ ಕಾಲ ನಿರಂತರ ಸ್ವಯಂ ಸೇವಕರಾಗಿ ಕೆಲಸ ಮಾಡಿದ ಸೇವಾಭಾರತಿ ಕಾರ್ಯಕರ್ತರು, ಕಲಾಕ್ಷೇತ್ರ -ಕುಂದಾಪುರ ಸದಸ್ಯರು ಸೇರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರೊಂದಿಗೆ ಕುಂದಾಪುರ ಕಲಾಮಂದಿರದಲ್ಲಿ ಸಂಭ್ರಮವನ್ನು ಆಚರಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಕಲಾಕ್ಷೇತ್ರ ಅಧ್ಯಕ್ಷ ರಾದ ಬಿ. ಕಿಶೋರ್ ಕುಮಾರ್ ಭಾರತ ಈ ರೀತಿ ಸಾಧನೆಯನ್ನು ಮಾಡಲು ಕೇಂದ್ರ ಸರ್ಕಾರದ ಜೊತೆಗೆ ಸ್ಥಳೀಯವಾಗಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ದಾದಿಯರು, ಹಾಗೂ ಆಶಾ ಕಾರ್ಯಕರ್ತೆಯರ ಶ್ರಮದಿಂದ ಇದು ಸಾಧ್ಯವಾಯಿತು. ನಿಮಗೆಲ್ಲರಿಗೂ ಅಭಿನಂದನೆಗಳು ಎಂದರು. ಆಸ್ಪತ್ರೆಯ ವೈದ್ಯರಾದ ಡಾ. ನಾಗೇಶ್ ಮಾತನಾಡಿ ಭಾರತ ವಿಶ್ವದಲ್ಲೇ 100 ಕೋಟಿ ಲಸಿಕೆ ವಿತರಣೆ ಮಾಡಿ, ಸಾಧನೆ ಮಾಡಿರುವ ಮೊದಲ ದೇಶವಾಗಿದ್ದು, ಇದಕ್ಕೆ ಕಾರಣ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸಾರ್ವಜನಿಕ ರ ಬೆಂಬಲ…

Read More