ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಕಾವಡಿ ಪ್ರಾಥಮಿಕ ಉಪಕೇಂದ್ರದ ಸಮೀಪ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಹೋರಾಟ ಸಮಿತಿಯ ಪ್ರಮುಖರಾದ ಉದಯಶ್ಚಂದ್ರ ಶೆಟ್ಟಿ, ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ಪರವಾಗಿ ಆಕ್ಷೇಪ ವ್ಯಕ್ತಪಡಿಸಿ ಗ್ರಾಮವು ತನ್ನದೇ ಆದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ ಇಲ್ಲಿಯ ಶೇಕಡ ೯೦% ಭಾಗ ಜನರು ಹೆಚ್ಚಾಗಿ ಕೃಷಿ ಹಾಗೂ ಹೈನುಗಾರಿಕೆಯನ್ನು ಅವಲಂಬಿತರಾಗಿದ್ದಾರೆ.ಇಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು ಹೊಂದಿದ್ದು, ಜನನಿಬಿಡರು ವಸತಿಯನ್ನು ಹೊಂದಿದ್ದು, ಅಂಗನವಾಡಿ ಕೇಂದ್ರ, ಸಮುದಾಯ ಆರೋಗ್ಯ ಉಪಕೇಂದ್ರ ಮತ್ತು ಶತಮಾನಕ್ಕೂ ಹಳೆಯದಾದ ದೇವಸ್ಥಾನ, ದೈವಸ್ಥಾನ, ಹಾಗೂ ಗರಡಿಯನ್ನು ಹೊಂದಿದ್ದು, ಇಲ್ಲಿಯ ಜನರು ಹೆಚ್ಚಾಗಿ ಬಾವಿ ಹಾಗೂ ಕೆರೆಯ ನೀರನ್ನು ಕೃಷಿ ಮಾಡಲು ಮತ್ತು ಕುಡಿಯುವ ಬಗ್ಗೆ ನೀರನ್ನು ಉಪಯೋಗಿಸುತ್ತಿದ್ದಾರೆ, ಹೀಗಿರುವಾಗ ಸಾರ್ವಜನಿಕರಿಗೆ ಯಾವುದೇ ಸದ್ದಿಲದೆ,ಮಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಂಯೋಜನೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಟೇಶ್ವರ ಇವರ ಸಹಭಾಗಿತ್ವದಲ್ಲಿ ಹೆಚ್ಐವಿ/ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ತಾಲೂಕು ಆರೋಗ್ಯ ಕೇಂದ್ರ ಹಾಗೂ ಆಪ್ತ ಸಮಾಲೋಚಕರುರಾದ ನಳಿನಾಕ್ಷಿ ಅವರು ಮಾತನಾಡಿ, ರೋಗ ಲಕ್ಷಣಗಳ ಕುರಿತಾದ ತಿಳಿವಳಿಕೆ ರೋಗಮುಕ್ತ ಸಮಾಜದ ನಿರ್ಮಾಣಕ್ಕೆ ಅಡಿಪಾಯ. ವಿದ್ಯಾರ್ಥಿ ದೆಸೆಯಲ್ಲಿ ಆಕರ್ಷಣೆಗಳಿಗೆ ಬಲಿಯಾಗದೆ ನೈತಿಕ ಶುದ್ಧಿಯುಳ್ಳ ಜೀವನವನ್ನು ರೂಪಿಸಿಕೊಳ್ಳುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು. ಲೈಂಗಿಕ ಶಿಕ್ಷಣದ ಜ್ಞಾನ, ಸವಾಲಿನ ಸಂದರ್ಭದಲ್ಲಿ ಧೃತಿಗೆಡದ ಆತ್ಮವಿಶ್ವಾಸ ಅತಿ ಮುಖ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಜೈನ್ ಅವರು ವೈಯಕ್ತಿಕ ಜೀವನದಲ್ಲಿ ಪಾಳಿಸಬೇಕಾದ ಆರೋಗ್ಯ ಪೂರ್ಣ ಹವ್ಯಾಸಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೃಷಿ ಉತ್ಪಾದನೆ ಹೆಚ್ಚಿಸುವ ಕಾರ್ಯಕ್ರಮಗಳು ಆಗಾಗ ನಡೆಯಬೇಕು ಈ ಮೂಲಕ ಕೃಷಿ ಆದಾಯ ದ್ವಿಗುಣಗೊಳ್ಖಬೇಕು ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್ ಗುದ್ಯಾಳ್ ನುಡಿದರು. ಅವರು ಭಾನುವಾರ ಕೋಟದ ಗಾಂಧಿ ಮೈದಾನದಲ್ಲಿ ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ. ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಸಹಕಾರಿ ವ್ಯವಸಾಯಕ ಸಂಘ ಇವರುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಮಾವು ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೃಷಿ ಉತ್ಸವಗಳು ಕೃಷಿಗೆ ಪೂರಕ ವಾತಾವರಣವನ್ನು ಕಲ್ಪಿಸುತ್ತದೆ ಈ ದಿಸೆಯಲ್ಲಿ ಇಂತಹ ಕಾರ್ಯಕ್ರಮಗಳು ಎಲ್ಲಾ ಭಾಗದಲ್ಲಿ ಹೆಚ್ಚು ನಡೆಯಬೇಕು ಎಂದರು. ಇದೇ ವೇಳೆ ಸ್ಥಳೀಯ ರೈತ ಸಾಧಕರಾದ ಒಳಮಾಡು ಆನಂದ ಮರಕಾಲ, ಚಂದ್ರಶೇಖರ್ ಗಾಣಿಗ, ನಿಶಾ ದೇವಾಡಿಗ ಬೇಳೂರು ಅವರುಗಳನ್ನು ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಕ್ರತಿ ಸಂಭ್ರಮ ಟ್ರಸ್ಟ್ ನ ಶ್ರೀಧರ ಮರವಂತೆ ವಹಿಸಿದ್ದರು. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವು ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು. ಕಾಲೇಜಿನ ಸಂಚಾಲಕರಾದ ಅಪ್ಪಣ್ಣ ಹೆಗ್ಡೆ, ಪ್ರಾಸ್ತಾವಿಕ ಮಾತನಾಡಿ, ಮಕ್ಕಳು ಉತ್ತಮವಾದ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ದೃಢತೆಯನ್ನು ಬೆಳೆಸಬೇಕು ಎಂದು ಹೇಳಿದರು. ಮಾನ್ಯ ಅತಿಥಿಗಳಾಗಿ ಆಗಮಿಸಿದ ವಿಶ್ರಾಂತ ಪ್ರಾಂಶುಪಾಲರಾದ ಹಾಗೂ ಮಾಹೆಯ ಆಡಳಿತಾಧಿಕಾರಿಯಾದ ಡಾ. ವಿ. ಜಗದೀಶ ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು. ಶಿಕ್ಷಣ ಮಕ್ಕಳ ಪರಿಪೂರ್ಣತೆ, ಆತ್ಮ ವಿಶ್ವಾಸ, ಸ್ವತಂತ್ರವಾದ ತಿಳುವಳಿಕೆ, ಸೇವಾ ಮನೋಭಾವ ದೇಶಾಭಿಮಾನ, ಬೆಳೆಸುವಂತೆ ಮಾಡಬೇಕು ಹಾಗೂ ಶಿಕ್ಷಕರು ಮಕ್ಕಳಲ್ಲಿ ಜ್ಞಾನ ಹೆಚ್ಚಿಸುವ, ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದರು. ಕಾಲೇಜಿನ ಪ್ರಾಕ್ತಾನ ವಿದ್ಯಾರ್ಥಿ ಮತ್ತು ಎಕ್ಸಪರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಕರುಣಾಕರ ಬಳ್ಕೂರು ಸ್ವಸ್ತಿ ವಾಚನ ಗೈದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದಾಟುಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪುಂದ ಶಾಲೆಬಾಗಿಲಿನಲ್ಲಿ ಸಂಭವಿಸಿದೆ. ಜಯಶೀಲ ಗಾಯಗೊಂಡ ವ್ಯಕ್ತಿ. ಉಪ್ಪುಂದ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಜಯಶೀಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು ಮಣಿಪಾಲ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 11 ನೇ ಆವರ್ಸೆ ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ-ಹಿಂದುಳಿದ ವರ್ಗ ಅ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಂ ಅವರನ್ನು ಹಾಗೂ ಬಿಲ್ಲಾಡಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಕೋಟ ವಲಯ ಕೃಷಿ ಅಧಿಕಾರಿ ಸುಪ್ರಭ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಕನ್ನಡದ ನಿಜವಾದ ಸೊಗಡು ಕಾಣ ಸಿಗುವುದು ಗ್ರಾಮಾಂತರ ಭಾಗದಲ್ಲಿ. ಗ್ರಾಮೀಣ ಭಾಗದ ನಟ್ಟಿ ನೆಡುವ ಹೆಂಗಸರು, ಉಳುಮೆ ಮಾಡುವ ಗಂಡಸರು, ಭತ್ತ ತುಳಿಯುವವರು ಹೀಗೆ ಹತ್ತಾರು ವಿಭಾಗಗಳಿಂದ ಕುಂದಾಪ್ರ ಕನ್ನಡದ ಸೊಗಡು ಹರಿದು ಬಂದಿದೆ. ಅವೆಲ್ಲದರ ದಾಖಲೀಕರಣ ಅಗತ್ಯ ಎಂದು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು. ಅವರು ಭಾನುವಾರ ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಕೋಟತಟ್ಟು ಗ್ರಾ.ಪಂ., ಉಸಿರು ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಆಶ್ರಯದಲ್ಲಿ ಕೋಟದ ಕಾರಂತ ಥೀಮ್ ಪಾರ್ಕನ್ಲ್ಲಿ ನಡೆದ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ಕಾಂಬ ಉದ್ಘಾಟನೆ ಮಾಡಿ ಮಾತನಾಡಿದರು. ಭಾಷಿ ಬೆಳ್ಸಕರೆ ಮೊದಲ್ ಮಕ್ಕಳಿಗ್ ಹೇಳಿ ಕೊಡ್ಕ್. ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುಂದಾಪ್ರ ಭಾಷಿ ಬಗ್ಗೆ ಕೆಲಸ ಮಾಡಬೇಕು ಎಂದರು. ಸಮ್ಮೇಳನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮನಾಲಿ ಅವರನ್ನು ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಜಿ. ಗೋವಿಂದ್ರಾಯ ಆಚಾರ್ಯ, ಕೆ. ರಾಮನಾಥ ನಾಯಕ್, ಎನ್. ಅಶ್ವಿನ್ ನಾಯಕ್, ಎಂ. ನಾಗೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಸಹಶಿಕ್ಷಕಿ ಸುಜಾತ, ಮಂಜುನಾಥ ಖಾರ್ವಿ, ಮಂಜು ಟೈಲರ್ ಮತ್ತಿತರರು ಉಪಸ್ಥಿತರಿದ್ದರು.
