ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಮಾಜವನ್ನು ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಸಣ್ಣ ಸಣ್ಣ ಗುಂಪುಗಳಾಗಿ ಒಡೆಯುವ ಕೆಲಸವನ್ನು ಪ್ರಭುತ್ವ ಮಾಡುತ್ತಿರುವ ಹೊತ್ತಿನಲ್ಲಿ ರಂಗಭೂಮಿಯ ಬೆಸೆಯುವ ಗುಣವನ್ನು ಇನ್ನಷ್ಟು ಜಾಗೃತಗೊಳ್ಳಬೇಕಿದೆ ಎಂದು ಸಮುದಾಯ ಕರ್ನಾಟಕದ ಸಂಘಟನಾ ಕಾರ್ಯದರ್ಶಿ ವಿಠ್ಠಲ ಭಂಡಾರಿ ಕೆರೆಕೋಣ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಶನಿವಾರ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ ನಾಟಕಗಳು ಚರಿತ್ರೆಯ ಭಾಗವಾಗುವ ಬದಲು ಜನರ ಮನಸ್ಸಿನಲ್ಲಿ ಸ್ಥಾನ ಪಡೆಯುವಂತಾಗಬೇಕು. ಪ್ರಭುತ್ವವನ್ನು ಪ್ರಶ್ನಿಸಿದಾಗಲೇ ಅದು ಸಾಧ್ಯವಾಗುತ್ತದೆ. ಮನುಷ್ಯ ಮನುಷ್ಯರ ನಡುವಿನ ಕಂದಕವನ್ನು ಮುಚ್ಚುವ ಅರ್ಥಪೂರ್ಣ ಕೆಲಸವನ್ನು ರಂಗಭೂಮಿ ಮಾಡಬೇಕಿದೆ ಎಂದರು. ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ ಅಧ್ಯಕ್ಷರಾದ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕಲಾ ಪ್ರಕಾರಗಳು ಮನುಷ್ಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಯಾವುದೇ ಪ್ರಕಾರವಾದರೂ ಅದನ್ನು ಆಸ್ಪಾದಿಸುವ ವರ್ಗವಿದೆ. ಕಲೆಯನ್ನು ಸವಿಯುವುದರೊಂದಿಗೆ ಪ್ರೋತ್ಸಾಹಿಸುವ ಕೆಲಸವೂ ಕಲಾಭಿಮಾನಿಗಳಿಂದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗುಲ್ವಾಡಿ ಗ್ರಾಮದ ಮೆಹರಾಜ್ ಜುಮ್ಮ ಮಸೀದಿಯ ನೂತನ ನವೀಕೃತ ಕಟ್ಟಡದ ಉದ್ಘಾಟನೆ ಇದೆ ಎ.8 ರಂದು ನಡೆಯಲಿದೆ. 1965 ರಲ್ಲಿ ನಿರ್ಮಾಣಗೊಂಡ ಹಳೆಯ ಮಸೀದಿಯನ್ನ 2001 ರಲ್ಲಿ ಪುನರ್ನಿರ್ಮಿಸಲಾಗಿದ್ದು . ಪ್ರಸ್ತುತ ಪ್ರಾರ್ಥನೆಗೆ ಸ್ಥಳಾವಕಾಶ ಕಡಿಮೆ ಆದ್ದರಿಂದ ಸ್ಥಳೀಯ ಉದಯ ನಗರ,ಬೊಳ್ ಕಟ್ಟೆ, ಶೆಟ್ರ ಕಟ್ಟೆ, ಕಲ್ಲು ಕಂಬ, ಕರ್ಕಿ, ಪಾರ್ತಿಕಟ್ಟೆ ಸೇರಿದಂತೆ ಸುಮಾರು ಇನ್ನೂರ ಐವತ್ತು ಮನೆಯವರ ಮತ್ತು ಹೊರಗಿನವರ ಸಹಕಾರದಿಂದ ಸುಮಾರು ಎಪ್ಪತ್ತು ಲಕ್ಷ ಅಂದಾಜಿನಲ್ಲಿ ಸ್ಥಳೀಯ ಮುಸ್ಲಿಮರ ಧಾರ್ಮಿಕ ಅನುಕೂಲಕ್ಕಾಗಿ ಈ ಭವ್ಯ ಮೊದಲ ಮಹಡಿಯ ಕಟ್ಟಡ ನಿರ್ಮಾಣ ಗೊಂಡು ಇದೀಗ ಉದ್ಘಾಟನೆಗೆ ಸಜ್ಜು ಗೊಂಡಿದೆ. 55 ವರ್ಷಗಳ ಹಿಂದೆ ಮಸೀದಿಯ ನಿರ್ಮಾಣಕ್ಕೆ ಮರ್ಹೂಮ್ ಸೈಯದ್ ಇಸ್ಮಾಯಿಲ್ ತಂಙಳ್ ಅವರು ಅಡಿಪಾಯ ಹಾಕಿದ್ದು ನಂತರದ ದಿನಗಳಲ್ಲಿ ಮರ್ಹೂಮ್ ಫಕೀರ್ ಬ್ಯಾರಿ, ಕಲಂದರ್ ಬ್ಯಾರಿ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಹಾಜಿ ಇಬ್ರಾಹಿಂ ಸಾಹೇಬ್, ಜಿ.ಕೆ ಮುಸ್ಲಿಯಾರ್, ಮಹಮದ್ ಅಬ್ಬಾ ಸಾಹೇಬ್ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಭಾವಂತ ವಿದ್ಯಾರ್ಥಿನಿ ಆಶಿಕಾ ಪೈ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಕರ್ನಾಟಕದಲ್ಲಿ ದ್ವಿತೀಯ ರ‍್ಯಾಂಕ್ ಗಳಿಸಿದ್ದಾರೆ. ಶಾಂತಾರಾಮ್ ಪೈ ಹಾಗೂ ಅನಸೂಯ ಪೈ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನ ಎಜೆ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಶಿಕ್ಷಣ ಪಡೆದಿದ್ದು, ಇದು ಎ.ಜೆ. ಇಂಜಿನಿಯರಿಂಗ್ ಕಾಲೇಜಿನ ಮೊಟ್ಟ ಮೊದಲ ಬ್ಯಾಚ್ ಆಗಿದ್ದುದು ಕೂಡ ವಿಶೇಷ. 10ನೇ ತರಗತಿಯಲ್ಲಿ ಪೂರ್ಣ 10 ಅಂಕಗಳ CGPA ಗಳಿಸಿದ್ದ ಇವರು, ನಂತರ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಮಾಡಿದ್ದು ಅಲ್ಲಿಯೂ 90% ಅಂಕ ಗಳಿಸಿದ್ದಲ್ಲದೇ, DCET ಎಕ್ಸಾಂನಲ್ಲಿ ಕರ್ನಾಟಕಕ್ಕೆ 40ನೇ ರ‍್ಯಾಂಕ್ ಗಳಿಸಿದ್ದರು. ಇದೀಗ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 9.24 CGPA ಅಂಕಗಳೊಂದಿಗೆ , ದ್ವಿತೀಯ ರ‍್ಯಾಂಕ್‌ಗಳಿಸಿ M. tech ಮಾಡುವುದು ಇವರ ಸದ್ಯದ ಗುರಿಯಾಗಿದೆ. ಆಶಿಕಾ ಪೈ ಸಾಧನೆಗೆ ಎಜೆ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ , ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಾಂಶುಪಾಲ ಶಾಂತಾರಾಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿಗೆ ಬಂದಿದೆ. ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಜಾರಿಗೆ ಬರುವಂತೆ ಹೊಸ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ವಿದ್ಯಾಗಮ ಸೇರಿದಂತೆ 6-9ನೇ ತರಗತಿ ಸ್ಥಗಿತ, ಜಿಮ್, ಪಾರ್ಟಿ ಹಾಲ್, ಕ್ಲಬ್, ಈಜು ಕೊಳ ಬಂದ್, ರ್ಯಾಲಿ ಮುಷ್ಕರಗಳಿಗೆ ನಿಷೇಧ, ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆ ನಿಗದಿಪಡಿಸಿದ ಆಸನ ಸಂಖ್ಯೆ ಮೀರುವಂತಿಲ್ಲ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣಕನ್ನಡ, ಉಡುಪಿ, ಕಲಬುರಗಿ, ಧಾರವಾಡ, ಮೈಸೂರು, ಬೀದರ್ ಜಿಲ್ಲೆಗಳಲ್ಲಿ ಸಿನೆಮಾ ಹಾಲ್ 50% ಮೀರುವಂತಿಲ್ಲ, ಪಬ್, ಬಾರ್, ರೆಸ್ಟೊರೆಂಟ್, ಬಾರಿನಲ್ಲಿ 50% ಹೆಚ್ಚಿನ ಗ್ರಾಹಕರು ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರಾ ಮಹೋತ್ಸವ, ಮೇಳಗಳು ಗುಂಪು ಸೇರುವುದು ನಿಷೇಧ ಸೇರಿದಂತೆ ಟಫ್ ರೂಲ್ಸ್ ಜಾರಿಯಾಗಿದೆ. ಏಪ್ರಿಲ್ 20ರವರೆಗೆ ಈ ಕೆಳಗಿನ 16 ನಿಯಮಗಳು ಜಾರಿಯಲ್ಲಿರಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 70 ಅಧಿಕ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮಾಜಿ ಶಾಸಕ ಗೋಪಾಲ ಪೂಜಾರಿ ಅವರ ಕಟ್‌ಬೆಲ್ತೂರಿನ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಮುಖಂಡರ ಏಕಪಕ್ಷೀಯ ನಿಲುವುಗಳಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಹಾಗೂ ತ್ರಾಸಿ ಜಿಲ್ಲಾ ಪಂಚಾಯತ್ ಉಸ್ತುವಾರಿ ಶರತ್ ಕುಮಾರ್ ಶೆಟ್ಟಿ ಪಕ್ಷದ ಬಾವುಟ ನೀಡುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮಾತನಾಡಿ, ಗೋಪಾಲ ಪೂಜಾರಿಯವರು ಈ ಹಿಂದೆ ಮಾಡಿರುವ ಜನಪರ ಕೆಲಸ ಹಾಗೂ ಅವರ ನಾಯಕತ್ವವನ್ನು ಒಪ್ಪಿಕೊಂಡು ಗಂಗೊಳ್ಳಿಯ ಯುವಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹಿಂದೂತ್ವ ಹಾಗೂ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಭಾಗದ ಶಾಸಕರು ಗಂಗೊಳ್ಳಿಯ ಯುವಕರನ್ನು ಚುನಾವಣೆಗೆ ಬಳಸಿಕೊಂಡಿದ್ದು ಬಿಟ್ಟರೆ ಮತ್ತೇನೂ ಉಪಕಾರ ಮಾಡಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಬಾಡದ ರಾಘವೇಂದ್ರ ಎಮ್. ಹಾಗೂ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದು, ಬೆಂಗಳೂರಿನ ಕೆ.ಎಸ್.ಆರ್.ಪಿ ಪೆರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪದಕ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಉಪಸ್ಥಿತರಿದ್ದರು. ರಾಘವೇಂದ್ರ ಅವರು 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿ ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಕು. ವಿದ್ಯಾ ಹೆಚ್. ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಆಯ್ಕೆಯಾಗಿದ್ದಾರೆ. ಬಿ.ಎಡ್ ವಿದ್ಯಾರ್ಥಿನಿಯಾಗಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಲವಾರು ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿಯನ್ನು ಗಳಿಸಿದ ಅವರು, ಸಮವಸ್ತ್ರ ಧರಿಸುವ ವೃತ್ತಿಯನ್ನು ಮಾಡಬೇಕು ಮತ್ತು ಮಹಿಳೆ ಪುರುಷರಷ್ಟೇ ಸಮರ್ಥಳು ಎಂಬುದನ್ನು ನಿರೂಪಿಸಬೇಕು ಎಂಬ ಮಹಾದಾಸೆಯನ್ನು ವಿದ್ಯಾರ್ಥಿ ದೆಸೆಯೆಂದಲೇ ಹೊಂದಿದವರಾಗಿದ್ದಾರೆ. ಅವರ ಈ ಸಾಧನೆಗೆ ನಮ್ಮ ವಿದ್ಯಾರ್ಥಿಗಳು ಸೇನೆಗೆ ಸೇರ್ಪಡೆಯಾಗಬೇಕುಂಬುದು ನನ್ನ ಅಭಿಲಾಷೆ ಎಂದು ಪ್ರತಿಕ್ರಿಯಿಸಿದ, ಬ್ಯಾರೀಸ್ ಸಮೂಹದ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಅವರು, ನಿರ್ದೇಶಕರು, ಪ್ರಾಂಶುಪಾಲರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ 1.94ಕೋಟಿ ರೂ. ಅನುದಾನದಲ್ಲಿ ಶಿರೂರು ಪೇಟೆ, ದೊಂಬೆ ಅಡ್ಡರಸ್ತೆ ಕಾಮಗಾರಿ ಹಾಗೂ ಹಡವಿನಕೋಣೆ ರಸ್ತೆ ಅಭಿವೃದ್ಧಿಗೆ ಮಂಜೂರಾದ 70 ಲಕ್ಷ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ ರಾಘವೇಂದ್ರ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ನಡುವೆ ಸಂಸದ ಮತ್ತು ಶಾಸಕರ ವಿಶೇಷ ಮುತುವರ್ಜಿಯಿಂದ ಮಂಜೂರಾದ ಶಿರೂರು ಕೋಟೆಮನೆ ಬಳಿ ಸಂಕದಗುಂಡಿ ವೆಂಟೆಡ್ ಡ್ಯಾಂ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ರಾಜಪ್ಪ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ಶಂಕರ ಪೂಜಾರಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ತಾಲೂಕು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಷ್ಪರಾಜ್ ಶೆಟ್ಡಿ, ತಾ.ಪಂ ಸದಸ್ಯ ಮೌಲಾನ ದಸ್ತಗೀರ್, ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಉಮೇಶ್ ಶೆಟ್ಟಿ ಕಲ್ಗದ್ದೆ, ಮಹಿಳಾ ಮೋರ್ಚಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ, ಗಂಗೊಳ್ಳಿ ಉಪ ಅಂಚೆ ಕಛೇರಿ ಇವರ ಸಹಯೋಗದೊಂದಿಗೆ ಆಧಾರ್ ಕುರಿತಾದ ವಿವಿಧ ಸೇವಾ ಶಿಬಿರ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ನಡೆಯಿತು. ಶಿಬಿರದಲ್ಲಿ ಮಾಹಿತಿ ನೀಡಿ ಮಾತನಾಡಿದ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕ ನವೀನಚಂದರ್, ಕೇಂದ್ರ ಸರಕಾರದ ಅನೇಕ ಯೋಜನೆಗಳು ಅಂಚೆ ಇಲಾಖೆ ಮೂಲಕ ಅನುಷ್ಠಾನಗೊಳ್ಳುತ್ತಿದ್ದು ಇದರ ಪ್ರಯೋಜನ ಎಲ್ಲರೂ ಪಡೆದುಕೊಳ್ಳಬೇಕಿದೆ. ಸರಕಾರದ ಎಲ್ಲಾ ಯೋಜನೆಯ ಪ್ರಯೋಜನ ಪಡೆಯಲು ಆಧಾರ ಕಡ್ಡಾಯ ಮಾಡಿರುವುದರಿಂದ ಎಲ್ಲರೂ ಆಧಾರ್ ನೊಂದಣಿ ಮಾಡಿಸಿಕೊಳ್ಳಬೇಕು. ಆಧಾರ್ ಕಾರ್ಡ್‌ನಲ್ಲಿ ವಿಳಾಸ, ಹೆಸರು ಬದಲಾವಣೆ, ಬಯೋಮೆಟ್ರಿಕ್ ಪರಿಷ್ಕರಣೆ, ಮೊಬೈಲ್ ನಂಬರ್ ತಿದ್ದುಪಡಿ ಇದ್ದಲ್ಲಿ ಮಾಡಿಸಿಕೊಳ್ಳಬೇಕು. ಗಂಗೊಳ್ಳಿಯ ಉಪ ಅಂಚೆ ಕಛೇರಿಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಲು ಹಾಗೂ ವಾರದ ಎಲ್ಲಾ ದಿನಗಳಲ್ಲಿ ಆಧಾರ್ ತಿದ್ದುಪಡಿ ಸೇವೆ ನೀಡಲು ಕ್ರಮಕೈಗೊಳ್ಳಲಾಗವುದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಮಂಗಳೂರು ವಿ.ವಿ. ಅಂತರ್ ಕಾಲೇಜು ಪುರುಷ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಕೂಟದ ಸಮಾರೋಪ ಸಮಾರಂಭ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು. ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರದ ಪ್ರತಿಷ್ಠಿತ ಚಕ್ರವರ್ತಿ ಸ್ಫೋರ್ಟ್ಸ್ ಮನೋಜ್ ನಾಯರ್ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುದೀಪ್ ಶೆಟ್ಟಿ ಆಜ್ರಿ ಆಗಮಿಸಿದ್ದರು. ಮಂಗಳೂರು ವಿ.ವಿ. ವ್ಯಾಪ್ತಿಯ 18 ಕಾಲೇಜುಗಳ ಕ್ರಿಕೆಟ್ ತಂಡಗಳು ಪಂದ್ಯಾಕೂಟದಲ್ಲಿ ಭಾಗವಹಿಸಿದ್ದು ಎಸ್.ಡಿ.ಎಮ್ ಕಾಲೇಜು, ಉಜಿರೆ ಚಾಂಪಿಯನ್ನಾಗಿ ಹಾಗೂ ಬ್ರಹ್ಮಾವರದ ಎಸ್.ಎಮ್.ಎಸ್ ಕಾಲೇಜು ರನ್ನರ್ ಅಪ್ ಆಗಿ ಹೊರಹೊಮ್ಮಿತು. ಮಂಗಳೂರು ವಿ.ವಿ ಕ್ಯಾಂಪಸ್ನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ.ಸಂದೀಪ್ ಸರಣಿ ಶ್ರೇಷ್ಠ ಆಟಗಾರರಾಗಿ, ಎಸ್.ಡಿ.ಎಮ್ ಕಾಲೇಜಿನ ನವೀನ್ ಜೈನ್ ಉತ್ತಮ ದಾಂಡಿಗ ಹಾಗೂ…
