ಕುಂದಾಪ್ರ ಡಾಟ್ ಕಾಂ’ ಸುದ್ದಿ. ಕುಂದಾಪುರ, ನ.26: ಕೋಡಿಯ ಶ್ರೀ ಚಕ್ರಮ್ಮ ದೇವಸ್ಥಾನದ ಆಡಳಿತ ಮೋಕ್ತೇಸರ, ಪಾತ್ರಿ,ಮಾಧವ ಪೂಜಾರಿ ನಿಧನರಾದರು. ಕುಂದಾಪುರದ ಹಿರಿಯ ಧಾರ್ಮಿಕ ನೇತಾರರಲ್ಲಿ ಓರ್ವರಾಗಿದ್ದ ಅವರು ತಮ್ಮ ಬರಹಗಳ ಮೂಲಕವೂ ಜನಪ್ರೀಯರಾಗಿದ್ದರು. ಸ್ವತಹ ಪತ್ರಿಕೆಯನ್ನೂ ನಡೆಸಿದ್ದರು. ಕೋಡಿಯ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲೂ ಪಾಲ್ಗೊಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವೈದ್ಯರ ಜೀವನದಲ್ಲಿ ನೋವು ನಲಿವುಗಳ ಅಪಾರ ಅನುಭಗಳು ಉಂಟಾಗುತ್ತವೆ. ಕರ್ತವ್ಯನಿಷ್ಠ ವೈದ್ಯ, ಸಮಾಜಕ್ಕೆ ಅನುಕೂಲವಾಗುವ ಸೇವೆಯನ್ನೇ ನೀಡುತ್ತಾನೆ. ಹಲವು ಮನೋಭಾವದ ಜನರೊಂದಿಗೆ ಸ್ಪಂದಿಸಿದಾಗ ಇಲ್ಲಿ ತಾಳ್ಮೆ, ವೃತ್ತಿ ಪ್ರಜ್ಞೆ ಎರಡೂ ಬೇಕಾಗುತ್ತದೆ. ಅಂತಹ ಅಪೂರ್ವ ಅನುಭವಗಳನ್ನು ಸ್ವಾರಸ್ಯಕರವಾಗಿ ತನ್ನ “ನೆನಪಿನಾಳದಿಂದ” ಕೃತಿಯಲ್ಲಿ ಕುಂದಾಪುರದ ಖ್ಯಾತ ವೈದ್ಯ ಡಾ| ಎ. ರಂಜಿತ್ ಕುಮಾರ್ ಶೆಟ್ಟಿ ನಿರೂಪಿಸಿದ್ದಾರೆ. ಇದು ಸಮಾಜದ ಪ್ರತಿಯೊಬ್ಬರೂ ಓದಲೇ ಬೇಕಾದ ಪುಸ್ತಕ. ವೈದ್ಯರ ಹಾಗೂ ಸಮಾಜದ ಕೆಲವರ ನಡುವೆ ಸಂಬಂಧಗಳು ಸಡಿಲವಾಗುತ್ತಿರುವಾಗ ಇಂತಹ ಕೃತಿ ಓದಿದರೆ ತಿಳುವಳಿಕೆ ಮೂಡುತ್ತದೆ” ಎಂದು ಮೂಡಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೇಳಿದರು. ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ “ಕುಂದಪ್ರಭ” ಆಶ್ರಯದಲ್ಲಿ ನಡೆದ ಡಾ.ಎ. ರಂಜಿತ್ ಕುಮಾರ್ ಶೆಟ್ಟಿಯವರ “ನೆನಪಿನಾಳದಿಂದ” ಪುಸ್ತಕ ಬಿಡುಗಡೆ ಸಮಾರಂಭ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವೈದ್ಯಕೀಯ ಸೇವೆಯಲ್ಲಿ ತನ್ನ ಅನುಭವಗಳ ಬುತ್ತಿ ಬಿಚ್ಚಿ ಹೇಳಿದ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವ ಸದುದ್ದೇಶದೊಂದಿಗೆ ಒಂದಿಷ್ಟು ಸಮಾನ ಮನಸ್ಕರು ಜೊತೆಯಾಗಿ ಹಮ್ಮಿಕೊಂಡಿರುವ ’ಕ್ಲೀನ್ ಕುಂದಾಪುರ ಪ್ರಾಜೆಕ್ಟ್’ ಅಭಿಯಾನಕ್ಕೆ ಕುಂದಾಪುರದ ಪೊಲೀಸರು ಕೈಜೋಡಿಸಿದ್ದು, ಭಾನುವಾರ ಕೋಡಿ ಕಡಲ ಕೀನಾರೆಯಲ್ಲಿ ಜರುಗಿದ ಸ್ವಚ್ಛತಾ ಕಾರ್ಯದಲ್ಲಿ ಕುಂದಾಪುರದ ಎಎಸ್ಪಿ ಹರಿರಾಮ್ ಶಂಕರ್ ಸೇರಿದಂತೆ ಉಪವಿಭಾಗದ ವಿವಿಧ ಪೊಲೀಸ್ ಠಾಣಾ ಸಿಬ್ಬಂಧಿಗಳು ಸ್ವಯಂಪ್ರೇರಣೆಯಿಂದ ಭಾಗವಹಿಸಿದರು. ಕೋಡಿ ಸೀವಾಕ್ ಸಮೀಪ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯದಲ್ಲಿ ಕುಂದಾಪುರ ವಿಭಾಗದ ಎಎಸ್ಪಿ ಹರಿರಾಮ್ ಶಂಕರ್, ವೃತ್ತನಿರೀಕ್ಷಕ ಮಂಜಪ್ಪ ಡಿ.ಆರ್ ಅವರ ನೇತೃತ್ವದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರ ಕಛೇರಿ, ಕುಂದಾಪುರ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ, ಕುಂದಾಪುರ ಸಂಚಾರಿ ಪೊಲೀಸ್ ಠಾಣೆ, ಕೊಲ್ಲೂರು, ಗಂಗೊಳ್ಳಿ ಹಾಗೂ ಅಮಾಸೆಬೈಲು ಪೊಲೀಸ್ ಠಾಣೆಯ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂಧಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದದರು. ಎಎಸ್ಪಿ ಹರಿರಾಮ್ ಶಂಕರ್ ಅವರ ಪತ್ನಿ ಅನಂತಾ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು. ಕಳೆದು ಕೆಲವು ತಿಂಗಳುಗಳಿಂದ ಪ್ರತಿ ಭಾನುವಾರ ನಿರಂತರವಾಗಿ ನಡೆಯುತ್ತಿರುವ…
ಕುಂದಾಪ್ರ ಡಾಟ್ ಕಾಂ ವರದಿ. ನ.26ರಂದು ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ ಇದಿರು ನೋಡುತ್ತಿರುತ್ತಾರೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವ. ಈ ಹಬ್ಬಕ್ಕೆ ಒಂದು ವಾರವಿರುವಾಗಲೇ ನಗರದ ಬೀದಿಗಳ ಬದಿಯಲ್ಲಿ ಸಂಚಾರೀ ಅಂಗಡಿಗಳವರು ಸಾಲುಗಟ್ಟಿ ಬೀಡು ಬಿಡುತ್ತಾರೆ. ದೇವಾಲಯದಲ್ಲಿ ದೀಪಾಲಂಕಾರ ಮತ್ತಿತರ ಸಿದ್ಧತೆಗಳು ಆರಂಭವಾಗುತ್ತವೆ. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುತ್ತದೆ. ಈ ಸಂದರ್ಭದಲ್ಲಿ ರಥೋತ್ಸವದ ಮಾದರಿಯಲ್ಲೇ ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ. ಕೊನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಾರರ ಮೇಲೆ ಹರಿಹಾಯುವ ಪ್ರವೃತ್ತಿ ಹೆಚ್ಚುತ್ತಿದೆ ಆದರೆ ಮಾಡುವ ಕೆಲಸದಲ್ಲಿ ಬದ್ಧತೆ ಇದ್ದರೆ ಅಂತಹ ಶಕ್ತಿಗಳಿಗೆ ಹೆದರುವ ಅಗತ್ಯವೇ ಇಲ್ಲ ಎಂದು ಸಿನೆಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಅವರು ಶನಿವಾರ ಕುಂದಾಪುರದ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ ನಡೆದ ನಾಲ್ಕು ದಿನಗಳ ಕಾರ್ಟೂನು ಹಬ್ಬ ಉದ್ಘಾಟಿಸಿ ಮಾತನಾಡಿ ಸಮಾಜವನ್ನು ವಿಡಂಬನಾ ದೃಷ್ಟಿಯಿಂದ ನೋಡಲು ಸಾಧ್ಯವಾದರೆ ಮಾತ್ರ ಉತ್ತಮ ಕಾರ್ಟೂನಿಷ್ಠ್ ಆಗಲು ಸಾಧ್ಯ. ಅದು ರಾಜಕೀಯ ಕಾರಣಗಳಿಂದಾಗಿ ವಿವಾದಕ್ಕೊಳಗಾದರೇ, ಅದಕ್ಕೆ ಪ್ರತಿಕ್ರಿಯಿಸುತ್ತಾ ಕೂರದೇ ಮುಂದೆ ಸಾಗುವುದು ಒಳಿತು ಎಂದರು. ಸಿನೆಮಾಗಳಲ್ಲಿ ನಮ್ಮ ಸುತ್ತಮುತ್ತಲಿನ ಕಥೆಯನ್ನೇ ಹೇಳಲು ಹೊರಟಾಗ ಅದರಲ್ಲಿನ ಕಥಾವಸ್ತು ಗಟ್ಟಿಯಾಗುತ್ತದೆ, ಜನರಿಗೂ ಹತ್ತಿರವಾಗುತ್ತದೆ. ಹಾಗೆಯೇ ಭಾರತೀಯ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಾಗ ನಾವು ಗಟ್ಟಿಯಾಗಲು, ನಮ್ಮತನ ಉಳಿಸಿಕೊಳ್ಳಲು ಸಾಧ್ಯವಿದೆ. ಬ್ರಿಟೀಷರ ಕಾಲದ ಗುಮಾಸ್ತವಾಗುವ ಶಿಕ್ಷಣ ಬದಲಾಗಬೇಕಿದೆ ಎಂದರು. ರಿಷಬ್ ಶೆಟ್ಟಿ ಅವರಿಗೆ ಕುಂದಾಪುರ ಸರಕಾರಿ ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧೀಜಿಯವರ ಚಿಂತನೆ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯುವುದಕ್ಕಷ್ಟೇ ಸೀಮಿತವಾಗಿರದೇ ಭಾರತೀಯರ ಆತ್ಮ ವಿಕಾಸ ಹಾಗೂ ಸ್ವರಾಜ್ ಕಲ್ಪನೆಯನ್ನು ಎಚ್ಚರಿಸುವುದೂ ಆಗಿತ್ತು. ನಮ್ಮೊಳಗಿನ ಸ್ವಾತಂತ್ರ್ಯ ಜಾಗೃತಗೊಳ್ಳಲು ಆತ್ಮ ವಿಕಾಸ ಅಗತ್ಯವೆಂಬುದನ್ನು ಅರಿತಿದ್ದ ಗಾಂಧಿ, ಭಾರತೀಯ ಶಿಕ್ಷಣ ಪದ್ದತಿಯಿಂದ ಅದು ಸಾಕಾರಗೊಳ್ಳುತ್ತದೆ ಎಂಬುದನ್ನೂ ಪ್ರತಿಪಾದಿಸಿದ್ದರು ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ಶನಿವಾರ ಕುಂದಾಪುರದ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ ನಡೆದ ನಾಲ್ಕು ದಿನಗಳ ಕಾರ್ಟೂನು ಹಬ್ಬ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ 1915ರಲ್ಲಿ ದಕ್ಷಿಣ ಆಫ್ರಿಕಾದಿಂದ ಮರಳಿದಾಗ ಗಾಂಧೀಜಿ ನೋಡಿದ ಭಾರತ ಭಿನ್ನವಾಗಿತ್ತು. ಅಸ್ಪಶ್ಯತೆ ನಿವಾರಣೆ, ಮಹಿಳಾ ಸಬಲೀಕರಣ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡುವ ಬಗೆಗೆ ಅವರು ಒತ್ತು ನೀಡಿದ್ದರು. ಸ್ವಾತಂತ್ರ್ಯ ಚಳುವಳಿಯೊಂದಿಗೆ ದೇಶದ ಆಂತರಿಕ ಸ್ವಾತಂತ್ರ್ಯದ ಸಂಕೊಲೆಗಳ ವಿರುದ್ಧ ಹೋರಾಟ ಆರಂಭಿಸಿದ್ದರು. ಮಧ್ಯರಾತ್ರಿಯಲ್ಲಿ ಮಹಿಳೆ ಧೈರ್ಯವಾಗಿ ರಸ್ತೆಯಲ್ಲಿ ತಿರುಗುವಂತಾದರೇ ಅಂದೇ ದೇಶಕ್ಕೆ ನಿಜವಾಗಿಯೂ ಸ್ವಾತಂತ್ರ್ಯ ದೊರೆತಂತೆ ಎಂದಿದ್ದ ಗಾಂಧಿಜಿಯವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ಉಡುಪಿ ಹಾಗೂ ಸಹಕಾರ ಇಲಾಖೆ ಜಂಟಿಯಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಕಾರ್ಯಕ್ರಮದಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಕುಂದಾಪುರ ಈ ಸಂಸ್ಥೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಜಾನ್ಸನ್ ಡಿಅಲ್ಮೇಡಾ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಸ್ಕಲ್ ಡಿಸೋಜಾ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಎಸ್. ರಾಜು ಪೂಜಾರಿ, ದಕ್ಷಿಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಕಚೇರಿಯಲ್ಲಿ ಬುಧವಾರ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ ಹೊಸ ಮರಳು ನೀತಿಗೆ ಅನುಸರಿಸುತ್ತಾ ಕುಳಿತರೆ ಮತ್ತೆ ಮಳೆಗಾಲ ಆರಂಭವಾಗುತ್ತದೆ. ಬಡವರಿಗೆ ಮರಳು ಅವಶ್ಯವಿದ್ದು, ಮರಳು ಎಲ್ಲರಿಗೂ ಸುಲಭ ಬೆಲೆಯಲ್ಲಿ ಸಿಗಬೇಕು. ಮರಳು ದಿಬ್ಬ ತೆರವು ಮಾಡಲು ಹೊಸ ಮರಳು ನೀತಿಗೆ ಕಾಯಿದೆ ವಾರಾಹಿ ನದಿಯಲ್ಲಿ ಬಾಕಿಯಾದ ಮರಳು ದಿಬ್ಬ ನಿರ್ಧಿಷ್ಟ ಕಾಲಾವಕಾಶದಲ್ಲಿ ತೆರವು ಮಾಡಲು ನಿರ್ಧಿಷ್ಠ ಸಮಯದಲ್ಲಿ ತೆರೆವು ಮಾಡಲು ಟೆಂಡರ್ ಕರೆಯುವಂತೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹಾಯಕ ನಿರ್ದೇಶಕ ರಾಮ್‌ಜಿ ನಾಯ್ಕ್, ವಾರಾಹಿ ಹಾಗೂ ಹಾಲಾಡಿ ನದಿಯಲ್ಲಿ ಮರಳು ತೆಗೆಯುವ ೯ ದಿಬ್ಬ ಗುರುತಿಸಿದ್ದು, ಜಿಲ್ಲಾಧಿಕಾರಿ ಜೊತೆ ಮಾತನಾಡಿ ಟೆಂಡರ್ ಪ್ರಕ್ರಿಯೆಗೆ ಚಾಲನ ನೀಡಲಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಮರಳು ವಿತರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಏರಿಕೆ ಮಾಡುವ ಸಲುವಾಗಿ ಕಿಂಡಿ ಅಣೆಕಟ್ಟುಗಳನ್ನು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಗ್ರಾಪಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ವರ್ಷ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ಕೆಲಸಗಳಿಗೆ ೭೦ ಕೋಟಿ ರೂ.ಅನುದಾನ ತಂದಿದ್ದು, ಪ್ರಸಕ್ತ ೩೦೦ ಕೋಟಿ ಅನುದಾನ ತಂದಿದ್ದೇನೆ. ಅಭಿವೃದ್ದಿ ಕಾರ್ಯ ನಡೆಯಬೇಕಿದ್ದರೆ ಮರಳು ಪ್ರಮುಖವಾಗಿ ಬೇಕಾಗುತ್ತದೆ. ಹೀಗಾಗಿ ಅಂತರ್ಜಲಮಟ್ಟ ಹೆಚ್ಚಿಸಲು ಕಿಂಡಿ ಅಣೆಕಟ್ಟುಗಳಲ್ಲಿ ತೆಗೆದಿರುವ ಹೂಳು ಅಭಿವೃದ್ದಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹೂಳೆತ್ತಲು ಪಂಚಾಯಿತಿ ಮೂಲಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾಮಗಾರಿಗೆ ಉಪಯೋಗಿಸಬಹುದಾದದ ಹೂಳು ಯಾರ್ಡ್‌ನಲ್ಲಿ ಸಂಗ್ರಹಿಸಿ ಅಲ್ಲಿಂದ ಕಡಿಮೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಭಾಜನರಾಗಿದ್ದು ಅವರು ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆದ ೬೬ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಸಂಯುಕ್ತ ಸಹಕಾರಿ ಅಧ್ಯಕ್ಷರು, ನಿರ್ದೇಶಕರು, ವಿವಿಧ ಸಹಕಾರಿಗಳ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ► ಎಸ್. ರಾಜು ಪೂಜಾರಿ ಅವರಿಗೆ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ – https://kundapraa.com/?p=33723 .
