ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಾಕ್‌ಡೌನ್‌ನಿಂದಾಗಿ ಎಲ್ಲವೂ ಸ್ತಬ್ದವಾಗಿದೆ. ನಗರಗಳು, ಪೇಟೆ, ಪಟ್ಟಣಗಳು ಬಿಕೋ ಎನ್ನುತ್ತಿವೆ. ಸ್ವಚ್ಛತೆಯ ಕೊರತೆಯೂ ಕಾಡುತ್ತಿದೆ. ಆದರೆ ವಂಡ್ಸೆ ಗ್ರಾಮ ಲಾಕ್‌ಡೌನ್ ನಲ್ಲಿಯೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತಿದೆ. ಇದಕ್ಕೆ ಕಾರಣ ಎಸ್.ಎಲ್.ಆರ್.ಎಂ ಘಟಕ. ಲಾಕ್‌ಡೌನ್‌ನಿಂದ ಜನ ಹೊರಗೆ ಬರಲು ಹೆದರುತ್ತಿದ್ದಾರೆ. ಈ ನಡುವೆ ನಗರ ನೈರ್ಮಲ್ಯ ಹಾಳಾಗಬಾರದು, ಕಸದ ವಿಲೇವಾರಿಗೆ ತೊಡಕಾಗಬಾರದು ಎಂಬ ಹಿನ್ನೆಲೆಯಲ್ಲಿ ವಂಡ್ಸೆ ಎಸ್.ಎಲ್.ಆರ್.ಎಂನ ಕಾರ್ಯಕರ್ತರು ನಿತ್ಯವೂ ಸಾಮಾಜಿಕ ಅಂತರವಿಟ್ಟುಕೊಂಡು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಎಸ್.ಎಲ್.ಆರ್.ಎಂನ ಎಲ್ಲಾ ಕಾರ್ಯಕರ್ತರು ನಿತ್ಯವೂ ಕಸ ಸಂಗ್ರಹಣೆ, ವಿಲೇವಾರಿ, ವಿಂಗಡಣೆಯಲ್ಲಿ ಶ್ರಮಿಸುತ್ತಿದ್ದಾರೆ. ಕೊರೋನಾ ಸುರಕ್ಷತಾ ವಿಧಾನಗಳನ್ನು ಅನುಸರಿಸಿಕೊಂಡು ಸಾಮಾಜಿಕ ಅಂತರದ ಜೊತೆಯಲ್ಲಿ ಸ್ಯಾನಿಟೈಸರ್ ಬಳಕೆ, ಮುಖಕ್ಕೆ ಮಾಸ್ಕ್, ಕೈಗವಚಗಳನ್ನು ಧರಿಸಿ ಕಸ ವಿಲೇವಾರಿಯಲ್ಲಿ ಶ್ರಮಿಸುತ್ತಿದ್ದಾರೆ. ನಾಗರಕರೆಲ್ಲರ ಕರೋನಾ ಭೀತಿಯಲ್ಲಿ ಮನೆಯೊಳಗೆ ಇದ್ದರೆ ಪುರ ಸ್ವಚ್ಛತೆಯ ಮಹಾತ್ಕಾರ್ಯವನ್ನು ನಿಲ್ಲಿಸದ ಎಸ್.ಎಲ್.ಆರ್.ಎಂ ಕಾರ್ಯಕರ್ತರ ಸೇವೆ ಪ್ರಶಂಸೆಗೆ ಪಾತ್ರವಾಗುತ್ತಿದೆ. ಕೊರೋನಾದಂತಹ ವೈರಸ್ ವಕ್ಕರಿಸುತ್ತಿರುವ ಸಂದರ್ಭದಲ್ಲಿ ಸ್ವಚ್ಛತೆಯ ಅಗತ್ಯವಿದೆ. ಕಸ ಕಡ್ಡಿ ತ್ಯಾಜ್ಯಗಳು ಎಲ್ಲೆಂದರಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಕೋವಿಡ್-19 ರೋಗಾಣುವಿನಿಂದ ಇಡೀ ರಾಜ್ಯ ಲಾಕ್ ಡೌನ್ ಆಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು/ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ನಿರತರಾಗಿದ್ದು ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರಬಾರದು ಮತ್ತು ಯಾವುದೇ ಸರಕಾರಿ ನೌಕರರರಾಗಿರಬಾರದು (ರಾಜ್ಯ/ಕೇಂದ್ರ/ನಿಗಮ/ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳು.) ಕಲಾವಿದರು /ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವ ವಿವರಗಳೊಂದಿಗೆ, ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಗತಿ ನಗರ, ಅಲೆವೂರು ಗ್ರಾಮ, ಉಡುಪಿ, ಈ ಮೇಲ್ dkc.udupi@gmail.com ಅಥವಾ ಮೊ.ಸಂ. 9945731062 ಗೆ ವಾಟ್ಸಾಪ್ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಲ್ಲೆಯ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಅಭಾವವನ್ನು ನೀಗಿಸುವ ಸಲುವಾಗಿ ಬ್ಲಡ್ ಹೆಲ್ಫ್ ಕೇರ್ ಕರ್ನಾಟಕ ಮತ್ತು ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇವರ ಜಂಟಿ ಆಶ್ರಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ ಕುಂದಾಪುರ ಇದರ ಸಹಯೋಗದೊಂದಿಗೆ ಗಂಗೊಳ್ಳಿಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆದು ಬುಧವಾರ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ೫೪ ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ ರಕ್ತದಾನಿಗಳಿಗೆ ಕೋವಿಡ್-೧೯ ತಪಾಸಣೆ, ಮುಂಜಾಗ್ರತಾ ಕ್ರಮ ಅನುಸರಿಸಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನೊಂದಾವಣೆ, ತಪಾಸಣೆ, ರಕ್ತದಾನ ಸಂದರ್ಭಗಳಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ಗಂಗೊಳ್ಳಿ ಜಮಾತುಲ್ ಮುಸ್ಲಿಮೀನ್ ಅಧ್ಯಕ್ಷ ಪಿ. ಎಂ. ಹಸೈನಾರ್, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್., ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಬನಾಜ್, ತೌಹೀದ್ …
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಹಾಗೂ ಶಿರೂರು ಎಂ.ಎಂ ಹೌಸ್ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಸುಮಾರು 65 ಆಶಾ ಕಾರ್ಯಕರ್ತರು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ನರ್ಸ್‌ಗಳು ಹಾಗೂ ಇತರ ಸಿಬ್ಬಂಧಿಗಳಿಗೆ ಆಹಾರ ಸಾಮಾಗ್ರಿ ಕಿಟ್ ಹಾಗೂ ಪ್ರೋತ್ಸಾಹಧನವನ್ನು ವಿತರಿಸಲಾಯಿತು. ಈ ಸಂದರ್ಭ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್, ವೈದ್ಯಾಧಿಕಾರಿ ಪ್ರೇಮಾನಂದ್, ಪೊಲೀಸ್ ವೃತ್ತನಿರೀಕ್ಷಕ ಸುರೇಶ್ ನಾಯ್ಕ್, ಎಸ್ಪೈ ಸಂಗೀತಾ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಶಿರೂರು ಎಂಎಂ ಹೌಸ್ ಮಣಿಗಾರ್ ಜಿಘ್ರಿ, ಗಿರೀಶ್ ಬೈಂದೂರು ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕುಂದಾಪುರ ಪೊಲೀಸರು ನಗರದ ಬೀದಿಗಳ ಸಂಪರ್ಕ ಮಾರ್ಗಗಳ ಬಂದ್ ಮಾಡಿದ್ದು, ಮೂರು ಕಡೆಗಳಲ್ಲಿ ಚೆಕ್‌ಪಾಯಿಂಟ್ ನಿರ್ಮಿಸಿ ವಿಚಾರಣೆಯ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ನಗರದ ಶಾಸ್ತ್ರೀ ವೃತ್ತ, ಚರ್ಚ್ ರಸ್ತೆ ಹಾಗೂ ಚಿಕನ್‌ಸಾಲ್ ರಸ್ತೆಯನ್ನು ಹೊರತುಪಡಿಸಿ ಉಳಿದೆಲ್ಲಾ ರಸ್ತೆಗಳ ಬಾಹ್ಯ ಸಂಚಾರವನ್ನು ಸೋಮವಾರ ರಾತ್ರಿಯಿಂದಲೇ ಬಂದ್ ಮಾಡಲಾಗಿತ್ತು. ಪ್ರತಿಯೊಂದು ವಾಹವನ್ನು ನಿಲ್ಲಿಸಿ ವಿಚಾರಿಸಿದ ಬಳಿಕವಷ್ಟೇ ಅವರನ್ನು ನಗರದಿಂದ ಒಳಕ್ಕೆ ಹಾಗೂ ಹೊರಕ್ಕೆ ಬಿಡಲಾಗುತ್ತಿದೆ. ಅಗತ್ಯ ಕೆಲಸಗಳಿಗಾಗಿ ಒಂದಕ್ಕಿಂತ ಹೆಚ್ಚು ಮಂದಿ ಬಂದರೆ ಅವರನ್ನು ವಾಪಾಸ್ ಕಳುಹಿಸಲಾಗುತ್ತಿದೆ. ತಪಾಸಣೆಯ ವೇಳೆ ರಸ್ತೆಯುದ್ದಕ್ಕೂ ವಾಹನದ ಸಾಲು ಕಂಡುಬಂತು. ಲಾಕ್‌ಡೌನ್ ಜಾರಿಯಲ್ಲಿರುವಾಗಲೇ ಕುಂದಾಪುರ ನಗರದಲ್ಲಿ ಬೆಳಿಗ್ಗೆ ವಾಹನ ದಟ್ಟಣೆಯಾಗುತ್ತಿದೆ ಎಂಬ ದೂರಿನ ಮೇರೆಗೆ ಎಎಸ್‌ಪಿ ಹರಿರಾಮ್ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ಪೊಲೀಸರು ಸಾರ್ವಜನಿಕರ ಸಂಚಾರಕ್ಕೆ ಕಡಿವಾಣ ಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಆದ್ಯತಾ (ಬಿಪಿಎಲ್) ಮತ್ತು ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ, ವಿಲೇವಾರಿಗೆ ಬಾಕಿ ಇರುವ ಅರ್ಜಿದಾರರು, ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ. ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಅರ್ಜಿಗೆ 10 ಕೆಜಿ ಯಂತೆ ಅಕ್ಕಿಯನ್ನು ಉಚಿತವಾಗಿ ಮತ್ತು ಎಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 15 ರೂ ದರದಲ್ಲಿ 10 ಕೆಜಿ ಅಕ್ಕಿಯನ್ನು ಪಡೆಯಬಹುದಾಗಿದೆ. ಅರ್ಜಿದಾರರು ಅರ್ಜಿ ಸಲ್ಲಿಸಿದ ಬಗ್ಗೆ ತಮ್ಮಲ್ಲಿ ಇರುವ ಅರ್ಜಿಯ ಪ್ರತಿಯನ್ನು ಹಾಗೂ ಆಧಾರ್ ಕಾರ್ಡ್‌ನ್ನು ನ್ಯಾಯಬೆಲೆ ಅಂಗಡಿಗೆ ಹಾಜರುಪಡಿಸಿ ಅಕ್ಕಿಯನ್ನು ಪಡೆಯಬಹುದಾಗಿದೆ. ಒಂದು ವೇಳೆ ಹಾಜರುಪಡಿಸಿದ ಅರ್ಜಿದಾರರ ಆಧಾರ್ ಸಂಖ್ಯೆ , ಬೇರೆ ಯಾವುದೇ ಚಾಲ್ತಿ ಪಡಿತರ ಚೀಟಿಯಲ್ಲಿ ಜೋಡಣೆಯಾಗಿದ್ದಲ್ಲಿ ಅಂತಹ ಅರ್ಜಿಗಳಿಗೆ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಏಪ್ರಿಲ್ 27 ರೊಳಗೆ ಪಡಿತರ ಪಡೆಯಿರಿ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ 2020ರ ಮಾಹೆಯಲ್ಲಿ, ಪ್ರಧಾನ ಮಂತ್ರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೈಂದೂರು ತಾಲೂಕು ಘಟಕದ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮಂಗಳವಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಿತು. ರಕ್ತದಾನ ಶಿಬಿರವನ್ನು ಬೈಂದೂರು ಪೊಲೀಸ್ ಉಪನಿರೀಕ್ಷಕಿ ಸಂಗೀತಾ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಬೈಂದೂರು ತಹಶೀಲ್ದಾರ ಬಸಪ್ಪ ಪೂಜಾರ್, ಬೈಂದೂರು ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ನಿತೀನ್ ಕುಮಾರ್ ಶೆಟ್ಟಿ, ಖಂಜಾಚಿ ಸಂತೋಷ್ ಶೆಟ್ಟಿ, ಸದಸ್ಯರಾದ ಯು. ಸಂದೇಶ ಭಟ್, ಗುರುರಾಜ್ ಶೆಟ್ಟಿ, ಅನಿಲ್ ದೇವಾಡಿಗ, ದಿವಾಕರ್ ಶೆಟ್ಟಿ ನೆಲ್ಯಾಡಿ, ರಮೇಶ್ ಜೋಗಿ ಹಳಗೇರಿ, ಪ್ರಸಾದ್ ಶೆಟ್ಟಿ, ಸುಬ್ರಹ್ಮಣ್ಯ ಬಾಡ ಮೊದಲಾದವರು. ಇದ್ದರು. ಶಿಬಿರದಲ್ಲಿ ಸುಮಾರು ೧೨೦ ಯುನಿಟ್ ರಕ್ತ ಸಂಗ್ರಹವಾಯಿತು. ಬದುಕಿನ ಹೋರಾಟದಲ್ಲಿ ರಕ್ತದಾನದಂತಹ ಶ್ರೇಷ್ಠ ಕಾರ್ಯವನ್ನು ಕರ್ತವ್ಯವೆಂಬಂತೆ ಮಾಡಬೇಕು. ರಕ್ತದಾನದಿಂದ ಅದೆಷ್ಟೋ ಮಂದಿಯ ಬದುಕು ಬೆಳಗುತ್ತದೆ. ಯುವಕರು ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಸಂಗಮ್ ಜಂಕ್ಷನ್ ಬಳಿ ಮೀನು ಮಾರಾಟ ಮಾಡುವ ಸಂದರ್ಭ ಸಾರ್ವಜನಿಕರು ಅಂತರ ಕಾಯ್ದುಕೊಳ್ಳದೆ ಗುಂಪಾಗಿ ಸೇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೋಮವಾರ ತಡರಾತ್ರಿ ಮೀನು ಖರೀದಿ ಮಾಡುವ ಸ್ಥಳದಲ್ಲಿ ವಿಂಗಡನೆಗೆ ಬ್ಯಾಂಡ್ ಹಾಕಿ, ಪ್ರತ್ಯೇಕ ವೃತ್ತ ಬರೆದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಪುರಸಭೆ ಹಿಂಭಾಗದಲ್ಲಿ ಕಾರ್ಯಚರಿಸುತ್ತಿದ್ದ ಮೀನು ಮಾರುಕಟ್ಟೆಯು ಲಾಕ್‌ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಆ ಬಳಿಕ ತಾತ್ಕಾಲಿಕವಾಗಿ ಸಂಗಮ್ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿಯೇ ಬೆಳಿಗ್ಗೆ ೭ ಗಂಟೆಯಿಂದ ೧೧ ಗಂಟೆಯವರೆಗೆ ಮೀನು ಮಾರಾಟ ಮಾಡಲಾಗುತ್ತಿದೆ. ಕೆಲ ದಿನಗಳಿಂದ ಇಲ್ಲಿ ಜನರು ಗುಂಪುಗುಂಪಾಗಿ ಸೇರುವುದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಎಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ಪಿಎಸ್‌ಐ ಹರೀಶ್ ಆರ್. ನಾಯ್ಕ್, ಪುರಸಭೆ ಸದಸ್ಯ ಶ್ರೀಧರ್ ಶೇರುಗಾರ್ ಹಾಗೂ ಪೊಲೀಸ್ ಇಲಾಖಾ ಸಿಬ್ಬಂಧಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವು ತುರ್ತು ಚಿಕಿತ್ಸೆಯ ಸಂದರ್ಭ ರಕ್ತದ ಕೊರತೆಯಿಂದ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಿದ ಪುಣ್ಯ ರಕ್ತದಾನಿಗೆ ಸಲ್ಲುತ್ತದೆ. ಹಾಗಾಗಿ ರಕ್ತದಾನವನ್ನು ಜೀವದಾನ ಎಂದು ಪರಿಗಣಿಸಲಾಗುತ್ತದೆ ಎಂದು ನಾವುಂದ ಮೊಯಿದ್ದೀನ್ ಜುಮ್ಮಾ ಮಸೀದಿಯ ಖತೀಬ್ ಅಬ್ದುಲ್ ಲತೀಫ್ ಹೇಳಿದರು. ನಾವುಂದ ಫ್ರೆಂಡ್ಸ್, ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ರಿ. ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ರಕ್ತನಿಧಿಯ ಸಹಯೋಗದಲ್ಲಿ ಸೋಮವಾರ ಅಲ್ಲಿನ ಶಾದಿ ಮಹಲ್‌ನಲ್ಲಿ ನಡೆಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿನೆ ಮಾತನಾಡಿದರು. ಬ್ಲಡ್ ಹೆಲ್ಪ್ ಕೇರ್ ಕರ್ನಾಟಕದ ಫಯಾಜ್ ಅಲಿ ಮಾತನಾಡಿ ಕುಂದಾಪುರ, ಬೈಂದೂರು ಮತ್ತಿತರ ಕಡೆಗಳಿಂದ ಪ್ರತಿದಿನ ಪ್ರತಿದಿನ 5 ರಿಂದ 6 ಯೂನಿಟ್ ರಕ್ತಕ್ಕೆ ಬೇಡಿಕೆ ಬರುತ್ತಿದೆ. ಲಾಕ್‌ಡೌನ್ ನಿರ್ಬಂಧದ ಕಾರಣ ಕುಂದಾಪುರಕ್ಕೆ ಹೋಗಿ ರಕ್ತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ರೆಡ್‌ಕ್ರಾಸ್ ನೆರವಿನಿಂದ ಇಲ್ಲಿಯೇ ಶಿಬಿರ ಏರ್ಪಡಿಸಲಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ತದಾನಿಗಳಿಗೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಬಿಜೂರು ಗ್ರಾಮದ ೩ ಹಾಗೂ ೪ನೇ ವಾರ್ಡಿನ ಗ್ರಾಮಸ್ಥರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು ಹಾಗೂ ಅಗತ್ಯವುಳ್ಳವರಿಗೆ ಆಹಾರ ಸಾಮಾಗ್ರಿ ಕಿಟ್‌ಗಳನ್ನು ವಿತರಿಸಲಾಯಿತು. ಬೈಂದೂರು ಪೊಲೀಸ್ ಉಪನಿರೀಕ್ಷಕಿ ಸಂಗೀತಾ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಎಲ್ಲರೂ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಬ್ಯಾಂಕ್ ಉದ್ಯೋಗಿ ಗುರುರಾಜ ಪೂಜಾರಿ ಬಿಜೂರು ಇದ್ದರು./ಕುಂದಾಪ್ರ ಡಾಟ್ ಕಾಂ/
