ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ವಹಿಸಿ ಕನ್ನಡ ಅಭಿಮಾನದ ಬಗ್ಗೆ ಮಹತ್ವ ಸಾರುವ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಂದಿ ಇವರು ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಅವರು ಕನ್ನಡ ನಾಡು – ನುಡಿ – ಸಂಸ್ಕ್ರತಿಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳ ಕನ್ನಡ ಗೀತಗಾಯನ ಕಾರ್ಯಕ್ರಮಕ್ಕೆ ಮೆರಗು ನೀಡಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಪ್ರಾರ್ಥಿಸಿದರು, ವಿದ್ಯಾರ್ಥಿಗಳಾದ ಶ್ರೇಯಸ್ ಎಸ್ ಸ್ವಾಗತಿಸಿ, ಪ್ರತೀಕ್ಷಾ ಹಾಗೂ ಲಾವಣ್ಯ ಕಾರ್ಯಕ್ರಮ ನಿರೂಪಿಸಿ ವಿಘ್ನೇಶ್ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ನ.1: ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಈ ಕೆಳಗಿನಂತೆ ಆದೇಶ ಹೊರಡಿಸಿರುತ್ತಾರೆ. 2012 ಫೆಬ್ರವರಿ 1 ರಿಂದ 2022 ಜೂನ್ 30 ರ ವರೆಗೆ ಪ್ರಸ್ತುತ ಉಡುಪಿ ತಾಲೂಕಿನ ವಿಳಾಸ ಹೊಂದಿದ್ದು, ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಇವರಿಂದ ಪರವಾನಿಗೆ ಪಡೆದು ಸಂಚರಿಸುತ್ತಿರುವ ಎಲ್ಲಾ ಆಟೋರಿಕ್ಷಾಗಳು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನ ಅಧಿಸೂಚನೆಯಲ್ಲಿ ನಿರ್ಭಂದಿಸಿದ ಸ್ಥಳಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀಜಾಡಿ ಸರ್ಕಾರಿ ಪ್ರೌಢಶಾಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿರುವ ಸದಾನಂದ ಬೈಂದೂರು ಅವರಿಗೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ವಿಭಾಗದ ಅನ್ವಯಿಕ ಜಾನಪದ ನಿಕಾಯದಡಿಯಲ್ಲಿ ಪಿಎಚ್ಡಿ ಪದವಿ ದೊರೆತಿದೆ. ಅವರು ಮಂಡಿಸಿದ “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ, 2009 ಮತ್ತು ಸಾಮಾಜಿಕ ನ್ಯಾಯ: ಉಡುಪಿ ಜಿಲ್ಲೆಯನ್ನು ಅನುಲಕ್ಷಿಸಿ” ಕುರಿತ ಸಂಶೋಧನಾ ಮಹಾಪ್ರಬಂಧಕ್ಕಾಗಿ ಅವರಿಗೆ ಪಿಎಚ್ಡಿ ದೊರೆತಿದೆ. ಸದಾನಂದ ಅವರು ರಾಜ್ಯಶಾಸ್ತ್ರ, ಇತಿಹಾಸ, ಕನ್ನಡ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಮೈಸೂರು ಹಾಗೂ ಧಾರವಾಡ ವಿಶ್ವವಿದ್ಯಾನಿಲಯಗಳಲ್ಲಿ ಪಡೆದಿದ್ದಾರೆ. ನೀನಾಸಮ್ ರಂಗಶಿಕ್ಷಣ ಡಿಪ್ಲೊಮಾವನ್ನು ಪಡೆದಿದ್ದಾರೆ. 17 ವರ್ಷ ಪ್ರಾಥಮಿಕ ಶಾಲಾ ಶಿಕ್ಷಕರಾಗಿ, 10 ವರ್ಷ ಪ್ರೌಢಶಾಲಾ ಶಿಕ್ಷಕರಾಗಿ ಹಾಗೂ 5 ವರ್ಷ ಕುಂದಾಪುರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ನಿವೃತ್ತ ಪ್ರಾಂಶುಪಾಲರು ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಎಂ ದಿನೇಶ ಹೆಗ್ಡೆ ಇವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.31: ತಾಲೂಕಿನ ಜಾಲಾಡಿ ಸಮೀಪದ ಎನ್.ಹೆಚ್- 66ರಲ್ಲಿ ಕಾರು ಹಾಗೂ ಬೈಕ್ ನಡುವೆ ಸೋಮವಾರ ಅಪಘಾತ ಸಂಭವಿಸಿದೆ. ಉದ್ಯಮಿ, ಸಮಾಜ ಸೇವಕ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬೈಕ್ ಸವಾರನಿಗೆ ಗಾಯಗಳಾಗಿದೆ. ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರಿಗೆ ಜಾಲಾಡಿ ಸಮೀಪ ವಿರುದ್ದ ದಿಕ್ಕಿನಿಂದ ಏಕಾಏಕಿ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಬೈಕ್ ಸವಾರನ ಮುಖಭಾಗಕ್ಕೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಏರ್ ಬಲೂನ್ಸ್ ತೆರೆದುಕೊಂಡಿತ್ತು. ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜ, ಅವರ ಪತ್ನಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಾಸಲಾಗಿದೆ. ಕೃಷ್ಣಮೂರ್ತಿ ಮಂಜ ಅವರು ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದರು. ಅವರಿಗೆ ನಿನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2022ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಈ ಭಾರಿ 36 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪೈಕಿ ಕುಂದಾಪುರ ತಾಲೂಕಿನ ನಾಗರಾಜ ಪಾಣ (ದೈವಾರಾಧನೆ), ಮಹಿಮಾ ಕುಂದಾಪುರ (ಬಾಲಪ್ರತಿಭೆ), ಯಾಕೂಬ್ ಖಾದರ್ ಗುಲ್ವಾಡಿ (ಸಾಹಿತ್ಯ), ಬೈಂದೂರು ತಾಲೂಕಿನ ರಾಮಯ್ಯ ಬಳೆಗಾರ (ಯಕ್ಷಗಾನ), ಸುರೇಂದ್ರ ಮೊಗವೀರ (ಯಕ್ಷಗಾನ) ಬ್ರಹ್ಮಾವರ ತಾಲೂಕಿನ ಮನು ಹಂದಾಡಿ (ರಂಗಭೂಮಿ), ಜಾನಕಿ ಹಂದೆ (ಕೃಷಿ), ರಾಘವೇಂದ್ರ ಶೆಟ್ಟಿ ಗಿಳಿಯಾರು (ಜನಪದ) ಸೇರಿದಂತೆ ವಿವಿಧ ಕ್ಷೇತ್ರಗಳ ಒಟ್ಟು 36 ಸಾಧಕರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ. 2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಕಾರ್ಕಳ “ಶ್ರೀ ಲೋಕು ಪೂಜಾರಿ – ದೈವಾರಾಧನೆ2 ಕುಂದಾಪುರ “ಶ್ರೀ ನಾಗರಾಜ ಪಾಣ -ದೈವಾರಾಧನೆ3 ಬೈಂದೂರು “ಶ್ರೀ ರಾಮಯ್ಯ ಬಳೆಗಾರ ಯಕ್ಷಗಾನ4 ಕಾಪು “ಶ್ರೀ ಗಿರೀಶ್ ಫಲಿಮಾರು -ಯಕ್ಷಗಾನ/ ರಂಗಭೂಮಿ5 ಬ್ರಹ್ಮಾವರ “ಶ್ರೀ ಮನು ಹಂದಾಡಿ -ರಂಗಭೂಮಿ6 ಕಾಪು “ಶ್ರೀ ರಾಜ ಕಟಪಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 67ನೇ ಕನ್ನಡ ರಾಜ್ಯೋತ್ಸವದಂದು ವಿವಿಧ ಕ್ಷೇತ್ರದ ಸಾಧಕರಿಗೆ ನೀಡಲಾಗುವ ಪ್ರಶಸ್ತಿಗೆ 67 ಮಂದಿ ಸಾಧಕರು ಹಾಗೂ 10 ಸಂಘ ಸಂಸ್ಥೆಗಳನ್ನು ಸರಕಾರ ಗುರುತಿಸಿದೆ. ಸಾಮಾನ್ಯರಾಗಿದ್ದುಕೊಂಡು ಅಸಮಾನ್ಯ ಕೆಲಸ ಮಾಡಿದ ನಾಡಿದ ಸಾಧಕರನ್ನು ಹಾಗೂ ಸಂಘ ಸಂಸ್ಥೆಗಳನ್ನು ಸರಕಾರ ಗುರುತಿಸಿರುವುದು ವಿಶೇಷವಾಗಿದೆ. ಸರಕಾರವೇ ಗುರುತಿಸಿ ಪ್ರಶಸ್ತಿ ನೀಡುವ ಪ್ರಕ್ರಿಯೆ ಈ ವರ್ಷದಿಂದ ಆರಂಭಗೊಂಡಿದ್ದರೂ ಸಾಕಷ್ಟು ಅರ್ಜಿಗಳು ಬಂದಿದ್ದರಿಂದ, ಆಯ್ಕೆ ಸಮಿತಿ ಎರಡನ್ನೂ ಸಮಾನವಾಗಿ ಪರಿಗಣಿಸಿ ಆಯ್ಕೆ ಮಾಡಿದೆ. ಕುಂದಾಪುರದ ತಾಲೂಕಿನ ಸಮಾಜ ಸೇವಕ ಹಾಗೂ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ, ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣರ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಡಾ. ಎಂ. ಪ್ರಭಾಕರ ಜೋಶಿ, ಯಕ್ಷಗಾನ ಸ್ತ್ರೀ ಪಾತ್ರಧಾರಿ ಎಂ.ಎ ನಾಯ್ಕ್ ಸೇರಿದಂತೆ ವಿವಿಧ ಸಾಧಕರಿಗೆ ಪ್ರಶಸ್ತಿ ಒಲಿದು ಬಂದಿದೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಭಾರತದ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ವಿ. ಮುರಳಿಧರನ್ ಅವರು ಭಾನುವಾರ ಕೊಲ್ಲೂರಿಗೆ ಭೇಟಿ ನೀಡಿದ ಸಂದರ್ಭ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಸಚಿವರನ್ನು ಭೇಟಿ ಮಾಡಿ ಬೈಂದೂರು ವಿಧಾನಸಭಾ ಕ್ಷೇತ್ರದ ರೈಲ್ವೇ, ಏರ್ ಸ್ಟ್ರಿಪ್ ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ನೆರವು ನೀಡುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ, ಕೊಲ್ಲೂರು ಗ್ರಾ. ಪಂ ಅಧ್ಯಕ್ಷರಾದ ಸಂತೋಷ್ ಭಟ್, ರೈಲ್ವೇ ಬೋರ್ಡ್ ಮಾಜಿ ನಿರ್ದೇಶಕರಾದ ವೆಂಕಟೇಶ್ ಕಿಣಿ, ಬೈಂದೂರು ವಕೀಲರ ಸಂಘದ ಅಧ್ಯಕ್ಷರಾದ ಮೊಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಅವರ ಸಾರಥ್ಯದಲ್ಲಿ ಆಯೋಜಿಸಲಾದ ವರಲಕ್ಷ್ಮೀ ಬೃಹತ್ ಉದ್ಯೋಗ ಮೇಳ ಭಾನುವಾರ ಉಪ್ಪುಂದದ ನಂದನವನ – ಪ್ರಗ್ನ್ಯಾ ಸಾಗರ್ ಹಾಲ್ನಲ್ಲಿ ಉದ್ಘಾಟನೆಗೊಂಡಿತು. ಉಡುಪಿ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಅರುಣಪ್ರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣದ ಬಳಿಕ ಉದ್ಯೋಗವನ್ನು ಗಿಟ್ಟಿಸಿಗೊಳ್ಳಲು ಹಲವಾರು ಆಯ್ಕೆಗಳಿದ್ದು, ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುನ್ನಡೆಯುವ ಛಾತಿಯನ್ನು ವಿದ್ಯಾರ್ಥಿಗಳು ಹೊಂದಬೇಕಾಗಿದೆ ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್’ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಟ್ರಸ್ಟ್ ಮೂಲಕ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯ ಮಾಡಲಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ಬ್ಯಾಗ್ ವಿತರಣೆ, ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್, ವಿದ್ಯಾರ್ಥಿ ದತ್ತು ಸ್ವೀಕಾರ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡಲಾಗಿದ್ದು, ಇದೀಗ ಉದ್ಯೋಗ ಮೇಳ ಆಯೋಜಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಸ.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ವಠಾರದಲ್ಲಿ ಶುಕ್ರವಾರ ನಡೆಯಿತು. ಗಂಗೊಳ್ಳಿ ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಮತ್ತು ಕಾರ್ಯದರ್ಶಿ ಎಚ್.ಗಣೇಶ ಕಾಮತ್ ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣಾ ಆರ್.ಕೆ., ಶಾಲೆಯ ಆಡಳಿತ ಮಂಡಳಿ ಸದಸ್ಯ ಕೆ.ರಾಮನಾಥ ನಾಯಕ್, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಸಂಜೀವಿನಿ ಸಂಘದ ಒಕ್ಕೂಟದ ಪದಾಧಿಕಾರಿಗಳು, ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಉಪನ್ಯಾಸಕರು, ಸಹಶಿಕ್ಷಕರು, ಶಾಲೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ “ಕೋಟಿ ಕಂಠ ಗಾಯನ” ಅಭಿಯಾನದ ಕಾರ್ಯಕ್ರಮ ಕುಂದಾಪುರದ ಗಾಂಧಿ ಮೈದಾನದಲ್ಲಿ ಶುಕ್ರವಾರ ಜರುಗಿತು. ಕುಂದಾಪುರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಸರಕಾರಿ ನೌಕರರು ಸೇರಿದಂತೆ ಸುಮಾರು 5000 ಮಂದಿ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದಾರೆ. ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ತಾಲೂಕು ಕ್ರೀಡಾ ಮತ್ತು ಯುವಜನ ಸೇವಾ ಅಧಿಕಾರಿ ಕುಸುಮಾಕರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಡಿವೈಎಸ್ಪಿ ಶ್ರೀಕಾಂತ್ ಕೆ., ಉಪತಹಶೀಲ್ದಾರ್ ವಿನಯ್ ಮೊದಲಾದವರು ಉಪಸ್ಥಿತರಿದ್ದರು. ಆಕಾಶವಾಣಿ ಕಲಾವಿದ ಗಣೇಶ್ ಗಂಗೊಳ್ಳಿ ಅವರ ಸಾರಥ್ಯದಲ್ಲಿ ಒಟ್ಟು ನಾಲ್ಕು ಗೀತೆಗಳನ್ನು ಹಾಡಲಾಯಿತು. ಬಿಸಿಲಿಗೆ ತಲೆಸುತ್ತಿ ಬಿದ್ದ ವಿದ್ಯಾರ್ಥಿಗಳು:ಬೆಳಿಗ್ಗೆ 11 ಗಂಟೆಯ ಬಿಸಿಲಿನ ಜಳಪಿಗೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಲೆಸುತ್ತಿ ಬಿದ್ದ ಘಟನೆಯೂ ನಡೆಯಿತು.…
