ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ ‘ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ’ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು, ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಯೂನಿಟ್ ನಾಯಕರುಗಳಾದ ನೌಫಾಲ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ತುಳುನಾಡಿನ ದೈವಾರಾಧನೆ ಕುರಿತು ಸೋನು ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ‘ಧರ್ಮದೈವ’ ತುಳು ಕಿರುಚಿತ್ರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಮೋಹನ್ ಆಳ್ವ ಮಾತನಾಡಿ, ದೈವಾರಾದನೆ ತುಳುನಾಡಿನ ಸಂಸ್ಕೃತಿ ಎಂಬ ಸತ್ಯವನ್ನು ಯಾರಿಂದಲೂ ಅಲ್ಲಗೆಳೆಯಲು ಸಾಧ್ಯವಿಲ್ಲ. ಅಲ್ಲದೇ ಈ ವಿಚಾರಗಳು ಬರೀ ಮೂಢನಂಬಿಕೆಯಲ್ಲ, ಇಡೀ ತುಳು ಸಮಾಜವೇ ದೈವಾರಾಧನೆಯ ನಂಬಿಕೆಯ ಮೇಲೆ ನಿಂತಿದೆ ಎಂದರು. ಧರ್ಮದೈವ ಕಿರುಚಿತ್ರ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಕರ್ನಾಟಕ ಜಾನಪದ, ಯಕ್ಷಗಾನ ಅಕಾಡೆಮಿ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ ಅಭಿಪ್ರಾಯಪಟ್ಟರು. ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನ ಮಾಡಿದ್ದು, ಸುಧಾಕರ್ ಪಡೀಲ್ ನಿರ್ಮಾಣ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ಕೋವಿಡ್ ಲಾಕ್ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸ.ನಿಗಮದ ವತಿಯಿಂದ ಮಂಗಳೂರು-ಹೈದ್ರಾಬಾದ್, ಮಂಗಳೂರು-ಮAತ್ರಾಲಯ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 25 ರಿಂದ ಪುನಃ ಸಾರಿಗೆಗಳ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸಾರಿಗೆ ಕಾರ್ಯಾಚರಣೆಯ ವಿವರ: ಅಂಬಾರಿ ಡ್ರೀಮ್ ಕ್ಲಾಸ್ ವೋಲ್ವೋ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಹೊರಟು ಉಡುಪಿ, ಮಣಿಪಾಲ, ಕುಂದಾಪುರ, ಕುಮಟ, ಹುಬ್ಬಳ್ಳಿ, ರಾಯಚೂರು, ಮೆಹಬೂಬನಗರ ಮಾರ್ಗವಾಗಿ ಬೆಳಗ್ಗೆ 9 ಗಂಟೆಗೆ ಹೈದ್ರಾಬಾದ್ ತಲುಪಲಿದೆ. ಮರು ಪ್ರಯಾಣದಲ್ಲಿ ಸಂಜೆ 5 ಗಂಟೆಗೆ ಹೈದ್ರಾಬಾದ್ನಿಂದ ಹೊರಟು ಮೆಹಬೂಬನಗರ, ರಾಯಚೂರು, ಹುಬ್ಬಳ್ಳಿ, ಕುಮಟ, ಕುಂದಾಪುರ, ಮಣಿಪಾಲ, ಉಡುಪಿ ಮಾರ್ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ತಲುಪಲಿದೆ. ನಾನ್ ಎಸಿ ಸ್ಲೀಪರ್ ಸಾರಿಗೆಯು ಮಧ್ಯಾಹ್ಮ 3.30 ಕ್ಕೆ ಮಂಗಳೂರಿನಿಂದ ಹೊರಟು ಉಡುಪಿ, ಕುಂದಾಪುರ, ಸಿದ್ಧಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ ಮಾರ್ಗವಾಗಿ ಬೆಳಗ್ಗೆ 6.30 ಕ್ಕೆ ಮಂತ್ರಾಲಯ ತಲುಪಲಿದ್ದು, ಮರು ಪ್ರಯಾಣದಲ್ಲಿ ಸಂಜೆ 5 ಗಂಟೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಅಕ್ಟೋಬರ್ 15 ರ ವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ಬದಲಿ ಮಾರ್ಗ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸAಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ► ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ: ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ – https://kundapraa.com/?p=49392 . ► ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ – https://kundapraa.com/?p=49466 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೇ 20 ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಪ್ರಯಾಣ ದರ ಪರಿಷ್ಕರಣೆಯನ್ನು ಸಾರ್ವಜನಿಕರ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಸ್ಥಳೀಯ ಜನಸಂಖ್ಯೆಗನುಗುಣವಾಗಿ ಮತು ಟ್ಯಾಕ್ಸಿ ಮಾಲಕ/ ಚಾಲಕರ ಜೀವನ ನಿರ್ವಹಣಾ ವೆಚ್ಚ, ಇಂಧನ ಬೆಲೆಗಳ ಹೆಚ್ಚಳ ಹಾಗೂ ವಾಹನಗಳ ಬೆಲೆ ಮತ್ತು ನಿರ್ವಹಣಾ ವೆಚ್ಚವು ಹೆಚ್ಚಾಗಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕೆಳಗಿನಂತೆ ದರ ನಿಗದಿಪಡಿಸಿ, ಆದೇಶ ಹೊರಡಿಸಿ, ನಿರ್ಣಯ ಕೈಗೊಳ್ಳಲಾಗಿರುತ್ತದೆ. 5 ಲಕ್ಷ ದವರೆಗಿನ ಮೌಲ್ಯದ ಡಿ ವರ್ಗದ ಟ್ಯಾಕ್ಸಿಗಳಿಗೆ ನಿಗಧಿತ ದರ ಕನಿಷ್ಟ 4 ಕಿ.ಮೀ. ವರೆಗೆ 75 ರೂ, ಹೆಚ್ಚುವರಿ ಪ್ರತಿ ಕಿ.ಮೀ ಗೆ 25 ರೂ ಆಗಿರುತ್ತದೆ. 5 ರಿಂದ 10 ಲಕ್ಷದ ವರೆಗಿನ ಮೌಲ್ಯದ ಸಿ ವರ್ಗದ ಟ್ಯಾಕ್ಸಿಗಳಿಗೆ ನಿಗಧಿತ ದರ ಕನಿಷ್ಟ 4 ಕಿ.ಮೀ. ವರೆಗೆ 100 ರೂ. ಆಗಿದ್ದು, ಹೆಚ್ಚುವರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೇಗವಾಗಿ ಬೆಳೆಯುತ್ತಿರುವ ಜಾಗತಿಕ ಮಟ್ಟದ ತಂತ್ರಜ್ಞಾನದ ಬೆಳವಣಿಗೆಗೆ ಅನುಗುಣವಾಗಿ ವಿದ್ಯಾರ್ಥಿಗಳ ಶಿಕ್ಷಣವು ರಂಗವೂ ಬೆಳೆಯುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಸರ್ಕಾರ ಉಚಿತವಾಗಿ ನೀಡುತ್ತಿರುವ ಪಿಸಿ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಕ್ಲಾಸ್ ರೂಂನ ಸದುಪಯೋಗ ವಿದ್ಯಾರ್ಥಿಗಳು ಪಡೆದುಕೋಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಿಸಿ ಟ್ಯಾಬ್ಲೆಟ್ ವಿತರಿಸಿ, ಆರು ಸ್ಮಾರ್ಟ್ ಕ್ಲಾಸ್ ರೂಮ್ಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಮಾತನಾಡಿ ಸರಕಾರದ ಆದೇಶದ ಅನ್ವಯ ಪ್ರಥಮ ಪದವಿ ವ?ದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಿಸಿ ಟ್ಯಾಬ್ಲೆಟ್ ಕಾಲೇಜಿಗೆ ಸರಬರಾಜು ಆಗಿದ್ದು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಇದನ್ನು ವಿತರಿಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ದಕ್ಷವಾಗಿ ಬಳಸಿಕೋಳ್ಳಲಾಗುವುದು ಎಂದರು. ಸಾಂಕೇತಿಕವಾಗಿ ಹತ್ತು ವಿದ್ಯಾರ್ಥಿಗಳಿಗೆ ಪಿಸಿ ಟ್ಯಾಬ್ಲೆಟ್ ವಿತರಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 123 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 7 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 45, ಕುಂದಾಪುರ, ಬೈಂದೂರು ತಾಲೂಕಿನ 50, ಕಾರ್ಕಳ, ಹೆಬ್ರಿ ತಾಲೂಕಿನ 24 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 123 ಪ್ರಕರಣಗಳಲ್ಲಿ 12 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 111 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 69 ವರ್ಷದ ವೃದ್ಧೆ, 77 ವರ್ಷದ ವೃದ್ಧೆ, 57 ವರ್ಷದ ಪುರುಷ, 52 ವರ್ಷದ ಪುರುಷ, ಕಾರ್ಕಳ ತಾಲೂಕಿನ 67 ವರ್ಷದ ವೃದ್ಧೆ, 75 ವರ್ಷದ ವೃದ್ಧೆ, ಕುಂದಾಪುರ ತಾಲೂಕಿನ 70 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 209 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 1330 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ಸುಸಜ್ಜಿತವಾದ ಸಮುದಾಯ ಭವನ ನಿರ್ಮಾಣ ಮಾಡುವ ಕುರಿತು ಗರಡಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಮುತ್ತ ಬಿಲ್ಲವರ ಅಧ್ಯಕ್ಷತೆಯಲ್ಲಿ ಇತ್ತಿಚಿಗೆ ಆನ್ಲೈನ್ ಸಭೆ ನಡೆಯಿತು. ಟ್ರಸ್ಟಿನ ಮುಂಬಯಿ ಸಮಿತಿಯ ಅಧ್ಯಕ್ಷರಾದ ಡಾ. ಎನ್ ಕೆ ಬಿಲ್ಲವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸಮುದಾಯ ಭವನದ ರೂಪುರೇಷೆಗಳನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ ಆನಂದ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶೀನ ಪೂಜಾರಿ, ಜಗದೀಶ ಪೂಜಾರಿ ಹಕ್ಕಾಡಿ, ಮುಂತಾದವರು ತಮ್ಮ ಸಲಹೆಗಳನ್ನು ನೀಡುವುದರ ಜೊತೆಗೆ ತಮ್ಮ ಸಹಮತವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಮುದಾಯ ಭವನ ನಿರ್ಮಾಣ ಸಮಿತಿಗೆ ಸದಸ್ಯರ ಆಯ್ಕೆಯನ್ನು ಮಾಡಲಾಯಿತು. ಆನಂದ ಶೆಟ್ಟಿ (ಗೌರವ ಅಧ್ಯಕ್ಷರು), ಡಾ. ಎನ್ ಕೆ ಬಿಲ್ಲವ (ಅಧ್ಯಕ್ಷರು), ಜಗದೀಶ ಪೂಜಾರಿ ಹಕ್ಕಾಡಿ (ಉಪಾಧ್ಯಕ್ಷರು), ವಿಶ್ವನಾಥ ಶೆಟ್ಟಿ (ಉಪಾಧ್ಯಕ್ಷರು), ಶೀನ ಪೂಜಾರಿ (ಉಪಾಧ್ಯಕ್ಷರು), ಶೇಖರ ಪೂಜಾರಿ (ಪ್ರಧಾನ ಕಾರ್ಯದರ್ಶಿ) ಪರಮೇಶ್ವರ ಪೂಜಾರಿ ಮತ್ತು ರಾಮಕೃಷ್ಣ ಬಿಲ್ಲವ…
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಸ್ತೆ ಬದಿಯ ನಾಯಿಗಳು ಸ್ವಲ್ಪ ಹಿಂದೆ ಬಂದರೆ ಸಾಕು ದೂರ ಓಡಿಸುವವರ ಮಧ್ಯೆ ಅಪಘಾತಕ್ಕೀಡಾಗ ಎರಡೂ ಕಾಲುಗಳ ಬಲಕಳೆದುಕೊಂಡು ಬಿದ್ದಿದ್ದ ನಾಯಿಮರಿಯೊಂದಕ್ಕೆ ವಿದ್ಯಾರ್ಥಿನಿಯೋರ್ವಳು ಮರುಜನ್ಮ ನೀಡಿದ್ದಾಳೆ. ಅನ್ನ ಆಹಾರ ನೀಡಿ ಸಲಹಿದ್ದಲ್ಲದೇ ತೆವಳಿಕೊಂಡು ಸಾಗುತ್ತಿದ್ದ ನಾಯಿಮರಿ ಮತ್ತದೆ ಹುಮ್ಮಸ್ಸಿನಿಂದ ಓಡಾಡುವಂತೆ ಮಾಡಿ ಎಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದಾಳೆ. ತಾಲೂಕಿನ ಮೂಡ್ಲಕಟ್ಟೆ ಇಂಜನಿಯರಿಂಗ್ ಕಾಲೇಜಿನ ಎಂಬಿಎ ಅಂತಿಯ ವರ್ಷದ ವಿದ್ಯಾರ್ಥಿನಿ, ಹೊಸಂಗಡಿಯ ಕೆಪಿಸಿ ಉದ್ಯೋಗಿ ಕೆ. ರಾಮಸ್ವಾಮಿ ಅವರ ಮಗಳು ಪ್ರಿಯಾ ಎಂ.ಆರ್., ನಾಯಿ ಮರಿಗೆ ಮರುಜನ್ಮ ಪಾಲಿಸಿದ ಮಾತೃಹೃದಯಿ. ಹೊಸಂಗಡಿ ಕೆಪಿಸಿ ಕ್ವಾಟ್ರಸ್ ಸಮೀಪ ಮೇ ತಿಂಗಳಿನಲ್ಲಿ ನಾಯಿ ಮರಿಯೊಂದು ಅಪಘಾತವಾಗಿ ಕೂಗುತ್ತಿರುವುದನ್ನು ಪ್ರೀಯಾ ನೋಡಿದ್ದಾರೆ. ತಮ್ಮ ಮನೆಯಿಂದ ಸ್ವಲ್ವ ದೂರದಲ್ಲಿ ಇದ್ದುದರಿಂದ ಇವರೇ ಅದಕ್ಕೆ ಆಹಾರವನ್ನು ನೀಡಿ ಬಂದಿದ್ದರು. ಮರುದಿನ ಆ ನಾಯಿ ಮರಿ ತೆವಳಿಕೊಂಡೇ ಪ್ರೀಯಾ ಅವರ ಮನೆಗೆ ಹಿಂಬಾಲಿಸಿ ಬಂದಿತ್ತು. ಈ ಹೊತ್ತಿಗಾಗಲೇ ನಾಯಿಮರಿಯ ಹಿಂದಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಬ್ಯೂರೋ ಆಫ್ ಇಮಿಗ್ರೇಶನ್ ರವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ಅಸಿಸ್ಟೆಂಟ್/ ಐ.ಎ ಮತ್ತು ಇಮಿಗ್ರೇಶನ್ ಸಪೋರ್ಟ್/ ಐ.ಎಸ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಿ.ಜಿ.ಆರ್ ವೆಬ್ಸೈಟ್ ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
