ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದ ಮಕ್ಕಳು ಬಿಸಿಲು-ಮಳೆಗಳನ್ನು ಲೆಕ್ಕಿಸದೇ ದೈಹಿಕ ಶ್ರಮ ವಹಿಸಲು ಶಕ್ತರು. ಅನನುಕೂಲ ವಾತಾವರಣದಲ್ಲೂ ತಮ್ಮನ್ನು ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರಿಗೆ ಸಹಜ ದೇಹದಾರ್ಢ್ಯತೆ ಬರುವುದರಿಂದ ವಿದ್ಯಾರ್ಥಿಗಳಿಗೆ ಕ್ರೀಡಾಸಾಧನೆ ಮಾಡಲು ಸಹಾಯಕ ಎಂದು ಅರೆಶಿರೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಹೈಸ್ಕೂಲಿನ ದೈಹಿಕ ಶಿಕ್ಷಕರಾದ ರಾಜೀವ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೋತ್ಸವಕ್ಕೆ ಅತಿಥಿಯಾಗಿ ಆಗಮಿಸಿದ ನೇಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕರಾದ ವಸಂತ ರಾಜ್ ಶೆಟ್ಟಿ ಅವರು ಶಿಕ್ಷಣದ ಜೊತೆಗೆ ಕ್ರೀಡೆ ಇದ್ದರೆ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು. ಕಾಲೇಜಿನ ಸಂಚಾಲಕರಾದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಬೈಂದೂರಿನ ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಕುಂದಾಪುರ ತಾಲೂಕಿನ ಜನರ ವ್ಯಾಪಾರ ವ್ಯವಹಾರ, ಆಹಾರೋದ್ಯಮ, ಸುವ್ಯವಸ್ಥೆ ಎಲ್ಲರನ್ನೂ ಬೆರಗುಗೊಳಿಸುತ್ತಿದೆ ಎಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೀದರ್ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ :ಟ್ರೆಡಿಶನಲ್: ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ- ಪ್ರಥಮ ಸ್ಥಾನಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್.ಜಿ. – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಶ್ರೀವತ್ಸರಾಜ್ ಮತ್ತು ಪೃಥ್ವಿಚಾರ್ ಎನ್ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್ ಜಿ – ಪ್ರಥಮ ಸ್ಥಾನಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ – ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷg ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಸಹಾಯ, ಸಹಕಾರಗಳು ಸಾಧ್ಯವಾಗುವುದು ಇಂತಹ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಶಿಕ್ಷಣದ ನಿಜವಾದ ಅರ್ಥವನ್ನು ಅರ್ಥೈಸಿಕೊಳ್ಳಿ ಎಂದು ಅರಣ್ಯ ಗುತ್ತಿಗೆದಾರ, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಕಟ್ಕೇರಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ-ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ʼಉಗಮ 2026ʼನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೆಸ್ಕುತ್ತೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಕ್ರೀಡೋತ್ಸವದಂದು ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಆಟೋಟ ಹಾಗೂ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅತ್ಯುನ್ನತ ಅಂಕಗಳನ್ನು ಗಳಿಸಿ ಯಮುನಾ ತಂಡದ ವಿದ್ಯಾರ್ಥಿಗಳು 2026-27ನೇ ಸಾಲಿನ ಚಾಂಪಿಯನ್ ತಂಡವಾಗಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಗಂಗಾ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ರನ್ನರ್ ಅಪ್ ಟ್ರೋಪಿಯನ್ನು ಪಡೆದರು. ಕಾರ್ಯಕ್ರಮದಲ್ಲಿ ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಪಿರಾಮಿಡ್ ಮೊದಲಾದ ಸಾಹಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ನೇಹಿತನ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ ಹಣದ ಬೇಡಿಕೆಯ ಸಂದೇಶ ಕಳುಹಿಸಿದ ಸೈಬರ್ ವಂಚಕರು, ವ್ಯಕ್ತಿಯೊಬ್ಬರಿಂದ 52,000 ರೂ. ಹಣವನ್ನು ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಕೋಟದ ದಯಾನಂದ (64) ಅವರಿಗೆ ತೆಕ್ಕಟ್ಟೆಯ ಅನಂತ ಎಂಬುವವರು ಸ್ನೇಹಿತರಾಗಿದ್ದರು. ಸೆಪ್ಟೆಂಬರ್ 22ರಂದು ಅನಂತ ಅವರ ಹೆಸರಿನ ವಾಟ್ಸಾಪ್ ಖಾತೆಯಿಂದ ದಯಾನಂದ ಅವರಿಗೆ ಸಂದೇಶವೊಂದು ಬಂದಿತ್ತು. ತುರ್ತಾಗಿ ಹಣದ ಅಗತ್ಯವಿದ್ದು ಕಳುಹಿಸಿರುವ ಕ್ಯೂಆರ್ ಕೋಡ್ಗೆ 52,000 ರೂ. ವರ್ಗಾಯಿಸುವಂತೆ ಅದರಲ್ಲಿ ಮನವಿ ಮಾಡಲಾಗಿತ್ತು. ಸ್ನೇಹಿತನೇ ಹಣ ಕೇಳಿದ್ದಾರೆಂದು ನಂಬಿದ ದಯಾನಂದ ಅವರು, ಯಾವುದೇ ಅನುಮಾನವಿಲ್ಲದೆ ತಮ್ಮ ಬ್ಯಾಂಕ್ ಖಾತೆಯಿಂದ ಕ್ಯೂಆರ್ ಕೋಡ್ ಮೂಲಕ 52,000 ರೂ. ಹಣವನ್ನು ವರ್ಗಾಯಿಸಿದ್ದರು. ಬಳಿಕ ಅನಂತ ಅವರನ್ನು ಸಂಪರ್ಕಿಸಿ ವಿಚಾರಿಸಿದಾಗ, ಅವರ ಮೊಬೈಲ್ ಹ್ಯಾಕ್ ಆಗಿರುವುದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಬ್ಬರ್ ಪ್ಲಾಂಟ್ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಉಂಟಾದ ವೈಮನಸ್ಸು ಹಿಂಸಾತ್ಮಕ ಘಟನೆಗೆ ತಿರುಗಿದ್ದು, ವ್ಯಕ್ತಿಯೊಬ್ಬರ ಮೇಲೆ ಏರ್ ಗನ್ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಜಾನುವಾರುಕಟ್ಟೆ ಸಮೀಪ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೇರಳ ಮೂಲದ, ಬಿಲ್ಲಾಡಿ ಗ್ರಾಮದ ನಿವಾಸಿ ಬಿಬಿನ್ ಮ್ಯಾಥ್ಯ ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು 18 ವರ್ಷಗಳಿಂದ ಬಿಲ್ಲಾಡಿಯಲ್ಲಿ ವಾಸವಾಗಿದ್ದು, ರಬ್ಬರ್ ಪ್ಲಾಂಟ್ ವ್ಯವಹಾರ ನಡೆಸುತ್ತಿದ್ದಾರೆ. ಬಿಬಿನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಜೋಸ್ ಮತ್ತು ಸುರೇಶ್ ಎಂಬವರು ಸರಿಯಾಗಿ ಕೆಲಸ ಮಾಡದೆ ಪದೇ ಪದೇ ಹಣ ಕೇಳುತ್ತಿದ್ದ ಕಾರಣ ಕೆಲಸ ಬಿಟ್ಟು, ಬಿಲ್ಲಾಡಿಯಲ್ಲಿ ರಬ್ಬರ್ ಪ್ಲಾಂಟ್ ಹೊಂದಿರುವ ಸಂತೋಷ್ ಎಂಬವರ ಬಳಿ ಕೆಲಸಕ್ಕೆ ಸೇರಿಕೊಂಡಿದ್ದರು. ಇದೇ ವಿಚಾರದಲ್ಲಿ ಆರೋಪಿಗಳ ನಡುವೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ನವೆಂಬರ್ 5ರಂದು ರಾತ್ರಿ ಸುಮಾರು 10.10ರ ವೇಳೆಗೆ ಬಿಬಿನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಅಜಯ್ ಎಂಬಾತ ಕರೆ ಮಾಡಿ, ಜಾನುವಾರುಕಟ್ಟೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರೋಶನಿ ಪಿ. ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ-ಮುಳ್ಳಿಕಟ್ಟೆ ಫ್ಲೈ ಓವರ್ ಮೇಲೆ ಮೀನು ಸಾಗಾಟದ ವಾಹನವೊಂದು ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ನೋಂದಣಿಯ ಈ ವಾಹನವು ಮುಂಬಯಿಯಿಂದ ಮಂಗಳೂರಿಗೆ ಮೀನು ಸಾಗಿಸುತ್ತಿತ್ತು. ಫ್ಲೈ ಓವರ್ ಮೇಲೆ ಚಲಿಸುತ್ತಿದ್ದಾಗ ವಾಹನದ ಒಂದು ಬದಿಯ ಆಕ್ಸಲ್ ತುಂಡಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಡಿವೈಡರ್ ಮೇಲೆ ಪಲ್ಟಿಯಾಗಿದೆ. ವಾಹನದಲ್ಲಿ ಚಾಲಕನೊಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಐ ಆನಂದ ಹಾಗೂ ಸಿಬ್ಬಂದಿ ಮತ್ತು ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಮೂಲಕ ಪಲ್ಟಿಯಾದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಪಾರ್ಟ್ ಟೈಮ್ ಉದ್ಯೋಗದ ಜಾಹೀರಾತು ನೋಡಿ ಕ್ಲಿಕ್ ಮಾಡಿದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ 1,86,570 ರೂ. ಕಳೆದುಕೊಂಡ ಘಟನೆ ಸೌಕೂರು ಗುಲ್ವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸೌಕೂರಿನ ರೇಣುಕಾ ಗಣೇಶ ದೇವಾಡಿಗ ಹಣ ಕಳೆದುಕೊಂಡವರು. ಅವರು ಕಳೆದ ಅ.16ರಂದು ಮೊಬೈಲ್ ಪೋನ್ನಲ್ಲಿ ಮೀಶೋ ನೀಡ್ ಸ್ಟಾಫ್ (‘MEESHO NEED STAFF’) ಎಂಬ ಹೆಸರಿನಲ್ಲಿ ಪಾರ್ಟ್ಟೈಮ್ ಉದ್ಯೋಗವಿರುವ ಜಾಹೀರಾತನ್ನು ನೋಡಿ ಅದರ ಮೇಲೆ ಕ್ಷಿಕ್ ಮಾಡಿದಾಗ ಅವರಿಗೆ ಕೆಲವು ಟಾಸ್ಕ್ಗಳನ್ನು ನೀಡಲಾಗಿತ್ತು. ಮೊದಲ ಟಾಸ್ಕ್ ಪೂರ್ಣಗೊಳಿಸಿದ ಬಳಿಕ ಹಣ ನೀಡುವ ಆಮಿಷ ತೋರಿಸಿದ ವಂಚಕರು, ಹಂತ ಹಂತವಾಗಿ ಹೆಚ್ಚಿನ ಹಣ ಗಳಿಸುವ ಅವಕಾಶದ ಹೆಸರಿನಲ್ಲಿ ಮತ್ತಷ್ಟು ಟಾಸ್ಕ್ಗಳನ್ನು ನೀಡಿದ್ದಾರೆ. ಆರಂಭದಲ್ಲಿ ರೇಣುಕಾ ಅವರಿಗೆ 120 ರೂ., ನಂತರ 10,130 ರೂ. ಪಾವತಿಸಿ ವಿಶ್ವಾಸ ಮೂಡಿಸಿದ ವಂಚಕರು. ಬಳಿಕ ಹೆಚ್ಚಿನ ಹಣ ಪಡೆಯುವ ಆಮಿಷವೊಡ್ಡಿ ವಿವಿಧ ಹಂತಗಳಲ್ಲಿ ಹಣ ಹೂಡಿಕೆ ಮಾಡುವಂತೆ ಮಾಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸೆಪ್ಟೆಂಬರ್ನಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರೀಯ ಸರಾಸರಿ ಶೇಕಡಾ 18.93ರಷ್ಟಿದ್ದ ಈ ಪರೀಕ್ಷೆಯಲ್ಲಿ, ಆಳ್ವಾಸ್ ಸಂಸ್ಥೆ ಶೇಕಡಾ 31.75 ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಧಿತು ಪಡಿಸಿದೆ. ಸೆಪ್ಟೆಂಬರ್ 2026ರಲ್ಲಿ ನಡೆದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಯಾದ ಸುವಿತ್ ಭಂಡಾರಿ, ವಿಕಾಸ್ ಶೆಟ್ಟಿ, ಸೂರಜ್ ಮಾಹಂತೇಶ್, ಸುಪ್ರೀತಾ, ಸುದೀಕ್ಷಾ , ತನುಷ್ ಜಿ ಶೆಟ್ಟಿ, ನಂದನ್ ಪಿ. ನಾಯಕ್, ವೆಂಕಟೇಶ್ ಪ್ರಭು, ತನ್ವಿ ವಿಜಯ್ ಕೋಟ್ಯಾನ್, ವೆನಿಸ್ಸಾ, ಶ್ರೇಯಾ ಎಸ್. ಶೆಟ್ಟಿ, ವೈಷ್ಣವಿ, ಪ್ರಥಮ್ ನಾಯಕ್, ಶ್ರಾವ್ಯ, ಶಾಶ್ವತ್, ಪ್ರಗತಿ, ಪ್ರೀತಮ್, ಆಯೇಷಾ ಆನಮ್, ಸಾಹಿತ್ಯಾ ಕುಶಲ್ ಹಾಗೂ ವರುಣ್ ಕುಮಾರ್ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ವಾಣಿಜ್ಯ ವಿಭಾಗದ 41 ವಿದ್ಯಾರ್ಥಿಗಳು…
