Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ’ಯುತ್ ರೆಡ್‌ಕ್ರಾಸ್ ವಿಂಗ್’ ಇತ್ತಿಚಿಗೆ ಉದ್ಘಾಟನೆಗೊಂಡಿತು. ಕುಂದಾಪುರದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಘಟಕವನ್ನು ಉದ್ಘಾಟಿಸಿ ಮಾತನಾಡಿ ರೆಡ್‌ಕ್ರಾಸ್ ಸೊಸೈಟಿಯ ಉಗಮ, ವಿಸ್ತಾರವು ಜಗತ್ತಿನಾದ್ಯಂತ ಆದುದು ಮಾತ್ರವೇ ಅಲ್ಲದೆ ಶಾಂತಿ ಸೌಹಾರ್ಧತೆಯನ್ನು ಕಾಪಾಡುವ ಸಾಮಾಜಿಕ ಕಳಕಳಿಯ ಸಂಸ್ಥೆ ಎನ್ನುವುದಕ್ಕೆ ನಮಗೆಲ್ಲಾ ಹೆಮ್ಮೆಯ ವಿಚಾರ ಎಂದರು. ಸತ್ಯನಾರಾಯಣ ಪುರಾಣಿಕ್ ಇವರು ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಇಂದಿನ ಯುವಜನತೆಯನ್ನು ಸಮಾಜಮುಖಿ ಕಾರ್ಯದತ್ತ ಕೊಂಡೊಯ್ಯುವ ಘಟಕ ಈ ರೆಡ್ ಕ್ರಾಸ್ ಘಟಕವಾಗಿದೆ. ಮೊಬೈಲ್‌ನ ಗೀಳು ಬಿಟ್ಟು ಸಮಾಜಮುಖಿಯಾಗಿ ತಮ್ಮನ್ನು ಸಮರ್ಪಿಸಿಕೊಂಡು ನೆಮ್ಮದಿಯಾಗಿ ಬದುಕಿ ಎಂದರು. ಖಜಾಂಚಿ ಶ್ರೀ.ಶಿವರಾಮ ಶೆಟ್ಟಿ, ಶ್ರೀ.ಗಣೇಶ್ ಆಚಾರ್ಯ ಹಾಗೂ ಶ್ರೀ.ಅಬ್ದುಲ್ ಬಶೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುತ್ ರೆಡ್‌ಕ್ರಾಸ್ ಘಟಕದ ಉಸ್ತುವಾರಿ ಉಪನ್ಯಾಸಕ ಅಹ್ಮದ್ ಖಲೀಲ್ ಸ್ವಾಗತಿಸಿ, ಘಟಕದ ವಿದ್ಯಾರ್ಥಿ ಮುಖಂಡ ಫಿಝಾನ್ ವಂದಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು ಮತ್ತು ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಎನ್‌ಸಿಸಿ ಸಹಯೋಗದಲ್ಲಿ ಪುನೀತ್ ಸಾಗರ್ ಅಭಿಯಾನ (ಬೀಚ್ ಸ್ವಚ್ಛತಾ ಮತ್ತು ಜಾಗೃತಿ ಅಭಿಯಾನ) ಕಾರ್ಯಕ್ರಮ ಇತ್ತಿಚಿಗೆ ಕೋಡಿ ಬೀಚ್ ಬಳಿ ನಡೆಯಿತು. ಎನ್‌ಸಿಸಿ 21 ಕರ್ನಾಟಕ ಬೆಟಾಲಿಯನ್ ನಿರ್ದೇಶನದಂತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಎನ್‌ಸಿಸಿ ಭೂದಳದ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎ. ಎಲ್ ಮತ್ತು ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಸಿ.ಸಿ ವಿಬಾಗದ ಕೇರ್‌ಟೇಕರ್ ಶಿವರಾಜ್ ಅವರು ಭಾಗವಹಿಸಿದ್ದರು. ಸುಮಾರು 85 ಎನ್.ಸಿ.ಸಿ ಕೆಡೆಟ್‌ಗಳು ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಮಾನ್ಯ ಮಾಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ, ದ್ವಿಸದಸ್ಯ ಪೀಠ ತಡೆ ನೀಡಿದೆ. ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಮುನ್ನ ಚಂದ್ರಶೇಖರ ಶೆಟ್ಟಿ ಹಾಗೂ ಬೆಳ್ವೆ ಗಣೇಶ್ ಕಿಣಿ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರಿಂದ ಅಧ್ಯಕ್ಷರ ಆಯ್ಕೆಪ್ರಕ್ರಿಯೆಯಲ್ಲಿ ಪಾಲೊಂಡಿದ್ದ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠ ರಾಜಿನಾಮೆ ನಂತರ ಅಧ್ಯಕ್ಷರ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾಗಿರುವ ಸಿಂಧುವಲ್ಲ ಎಂದು ಚಂದ್ರಶೇಖರ ಶೆಟ್ಟಿ ಅಧ್ಯಕ್ಷರ ಆಯ್ಕೆ ರದ್ದು ಮಾಡಿತ್ತು. ಏಕ ಸದಸ್ಯ ಪೀಠ ನೀಡಿದ ಆದೇಶ ಪ್ರಶ್ನಿಸಿ ಚಂದ್ರಶೇಖರ ಶೆಟ್ಟಿ ಅಪೀಲ್ ಮಾಡಿದ್ದು, ಹೈಕೋರ್ಟ್ ದ್ವಿಸದಸ್ಯ ಪೀಠವು ನ್ಯಾಯಮೂರ್ತಿ ಸಚಿನ್ ಶಂಕರ ಮಗದುಮ್ ಏಕ ಸದಸ್ಯ ಪೀಠ ಆದೇಶಕ್ಕೆ ಬುಧವಾರ ತಡೆ ನೀಡಿ ಚಂದ್ರಶೇಖರ ಶೆಟ್ಟಿ ಅಧ್ಯಕ್ಷರಾಗಿ ಮುಂದುವರಿಯುವಂತೆ ಆದೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಫಿನಿಕ್ಸ್ ಅಕಾಡೆಮಿ ಇಂಡಿಯಾ ಆಶ್ರಯದಲ್ಲಿ ಮೂಡ್ಲಕಟ್ಟೆ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ಹಾಗೂ ಇಂಜಿನಿಯರಿಂಗ್ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಶ್ರೀ. ಕೀರ್ತಿ ಜಿ.ಕೆ ಇವರು ಆಗಮಿಸಿದ್ದು, ಅನಿರೀಕ್ಷಿತವಾಗಿ ನಡೆಯುವ ಘಟನೆ ಸಂದರ್ಭದಲ್ಲಿ ಹೇಗೆ ಪಾರಾಗಬೇಕು, ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳುವುದು ಎನ್ನುವ ಕುರಿತು ಸ್ವಯಂ ರಕ್ಷಣೆ ಕೌಶಲ ಪ್ರಾತ್ಯಕ್ಷಿಕೆ ನೀಡಿದರು. ಕರಾಟೆ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಆಟಗಾರರಾಗಿರುವ ಮತ್ತು ಸ್ವಯಂ ರಕ್ಷಣಾ ತರಬೇತುದಾರರಾಗಿರುವ ಅಂಕಿತ ಬಿ. ಟಿ ಮತ್ತು ಉಡುಪಿ ಜಿಲ್ಲೆಯ ಕರಾಟೆ ಅಸೋಸಿಯೇಷನ್ ಡೈರೆಕ್ಟರ್ ಮತ್ತು ಮೂಡಲಕಟ್ಟೆ ಕಾಲೇಜಿನ ಸಿಬ್ಬಂದಿ ಆಗಿರುವ ಅಕ್ಷಯ್ ಪೂಜಾರಿ ಅವರು ಮಕ್ಕಳಿಗೆ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಕಾಲೇಜಿನ ಡೀನ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವೃತ್ತಿ ಬದುಕು ಸಫಲವಾಗಲು ತಾಂತ್ರಿಕ ಜ್ಞಾನ ಅಗತ್ಯ ಎಂದು ಬೆಂಗಳೂರಿನ ಕ್ಯೂ-ಸ್ಪೈಡರ್ಸ್ ಸಂಸ್ಥೆಯ ಕಾರ್ಪೋರೇಟ್ ಟ್ರೈನರ್ ವಿಶಾಲ್ ವನಕಿ ಹೇಳಿದರು. ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸಯನ್ಸ್ ಇಂಜಿನಿಯರಿಂಗ್ ವಿಭಾಗದ ಸಿ-ಮೇನಿಯಕ್ಸ್ ಫೋರಂನ ವತಿಯಿಂದ ನಡೆದ ಗುರುವಾರ ‘ವಾರ್‌ಟೆಕ್ಸ್’ ಟೆಕ್ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಯಲ್ಲೂ ಬುದ್ಧಿವಂತಿಕೆಯಿದೆ. ಅದನ್ನು ವ್ಯಕ್ತಪಡಿಸಲು ಈಗಿನ ಮಕ್ಕಳಲ್ಲಿ ಆತ್ಮಸ್ಥೈರ್ಯದ ಕೊರತೆಯಿದೆ. ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದಲ್ಲಿ ಸದೃಢವಾಗಿ ಬೆಳೆಯಬೇಕಾದರೆ ಪ್ರೋಗ್ರಾಮಿಂಗ್ ಹಾಗೂ ಕೋಡಿಂಗ್ ಕೌಶಲ್ಯಗಳನ್ನು ಬಲಪಡಿಸಿಕೊಳ್ಳುವ ಅಗತ್ಯವಿದೆ ಎಂದರು. ಉದ್ಘಾಟನೆಯ ಬಳಿಕ ಸಂಸ್ಥೆಯ ಅಂತರ್ ಕಾಲೇಜು ಮಟ್ಟದ ಕೋಡಿಂಗ್ ಹಾಗೂ ಪ್ರೋಗ್ರಾಮಿಂಗ್ ಸಂಬಂಧಿಸಿದ ೧೩ ಸ್ಪರ್ದೆಗಳು ನಡೆದವು. ಆಳ್ವಾಸ್ ಸಂಸ್ಥೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದರು. ಸಂಸ್ಥೆಯ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶೈಕ್ಷಣಿಕ ಪರಿಸರವು ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೆ ಅನುಕೂಲವಾಗುವಂತಿರಬೇಕು. ಕಲಿಕೆಯು ನಿರಂತರ ಪ್ರಕ್ರಿಯೆಯಾಗಿದ್ದು, ಸೋಲಿನಿಂದಲೇ ಗೆಲುವಿನ ಪಾಠ ಕಲಿಯಬೇಕೆಂದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.15: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 10 ನೇ ತರಗತಿ ಒಳಗಿನ ವಿಕಲಚೇತನ ವಿದ್ಯಾರ್ಥಿಗಳು https://ssp.karnataka.gov.in/, ಪಿ.ಯು.ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ವಿದ್ಯಾರ್ಥಿಗಳು https://ssp.postmatric.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ (ಸಿಡಿಎಸ್) ಜ.ಬಿಪಿನ್ ರಾವತ್ ದಂಪತಿ ಸೇರಿದಂತೆ, ಹುತಾತ್ಮರಾದ ಎಲ್ಲಾ ವೀರ ಯೋಧರಿಗೆ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಡಿ.15ರಂದು ದೀಪ ನಮನ ಸಲ್ಲಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರರು ಕೈಯಲ್ಲಿ ಮೇಣದ ದೀಪ ಬೆಳಗಿಸಿ, ದೇಶಭಕ್ತಿ ಗೀತೆ ಹಾಡುವುದರ ಮೂಲಕ ಹುತಾತ್ಮರ ಆತ್ಮಕ್ಕೆ ದೀಪ ಪ್ರಜ್ವಲನದ ಶ್ರದ್ಧಾಂಜಲಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ, ಭಾರತೀಯ ಸೇನಾಪಡೆಯ ಯೋಧ ಪ್ರಶಾಂತ್ ದೇವಾಡಿಗ., ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ಸಂಸ್ಥೆಯ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ, ಸಹ ಸಂಯೋಜಕ ಸುಜಯ್, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತುಮಕೂರು ಜಿಲ್ಲಾ ಸಂಸ್ಥೆ ಸಹಯೋಗದೊಂದಿಗೆ ಗಾಂಧಿನಗರ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ರವಿವಾರ ಮುಕ್ತಾಯಗೊಂಡ ಕರ್ನಾಟಕ ರಾಜ್ಯ ಮಟ್ಟದ ಆಹ್ವಾನಿತ ಪುರುಷರ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪುರುಷರ ತಂಡ ಭರತ್ ಸಾಯಿಕುಮಾರ್ ಸ್ಮರಣಾರ್ಥ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಪಡೆಯಿತು. ರಾಜ್ಯದ 24 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯು ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ನಡೆದಿದ್ದು, ಅಂತಿಮ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್‌ಕ್ಲಬ್ ತಂಡವನ್ನು 35-22 ಹಾಗೂ 35-14 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಪಡೆದುಕೊಂಡಿತು. ಸೆಮಿಫೈನಲ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಸಹ್ಯಾದ್ರಿ ಸ್ಪೋರ್ಟ್ಸ್‌ಕ್ಲಬ್ ತಂಡವನ್ನು 35-21 ಹಾಗೂ 35-18 ಅಂಕಗಳಿಂದ ಸೋಲಿಸಿದರೆ, ಬನಶಂಕರಿ ತಂಡದವರು ಅತಿಥೇಯ ಗಾಂಧಿನಗರ ಸ್ಪೋರ್ಟ್ಸ್‌ಕ್ಲಬ್ ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತೇರ್ಗಡೆಗೊಂಡಿದ್ದರು. ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ತಂಡ ದ್ವಿತೀಯ, ಸಹ್ಯಾದ್ರಿ ಸ್ಪೋರ್ಟ್ಸ್ ಕ್ಲಬ್ ತಂಡ ಹಾಗೂ ಅತಿಥೇಯ ಗಾಂಧಿನಗರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.15: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಡಿ.18 ರಂದು ಮೆಗಾ ಲೋಕ್ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಹಾಗೂ ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣ, ಜನನ ಪ್ರಮಾಣ ಪತ್ರಕ್ಕೆ ಸಂಬAಧಿಸಿದ ಪ್ರಕರಣ, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛ ಭಾರತ್ ಮಿಷನ್ (ಗ್ರಾ) ಕಾರ್ಯಕ್ರಮದಡಿ ದ್ರವ ತ್ಯಾಜ್ಯ ನಿರ್ವಹಣೆ ಪ್ರಮುಖ ಘಟಕಾಂಶವಾಗಿದ್ದು, ಗ್ರಾಮಗಳಲ್ಲಿ ದಿನನಿತ್ಯ ಸ್ನಾನದ ಮನೆಯಿಂದ, ಪಾತ್ರೆ ತೊಳೆಯುವುದರಿಂದ, ಬಟ್ಟೆ ಒಗೆಯುವುದಿಂದ ಮನೆಗಳಲ್ಲಿ ಉತ್ಪತ್ತಿಯಾಗುವ, ಹಾಗೂ ಹೋಟೆಲ್, ಮದುವೆ ಹಾಲ್ ಇತ್ಯಾದಿ ವಾಣಿಜ್ಯ ಕೇಂದ್ರಗಳಿಂದ ಉತ್ಪತ್ತಿಯಾಗುವ ಬೂದು ನೀರನ್ನು ಕಿಚನ್ ಗಾರ್ಡನ್ ಮೂಲಕ, ವೈಯಕ್ತಿಕ ಅಥವಾ ಸಮುದಾಯ ಹಂತದ ಸೋಕ್ ಪಿಟ್ ನಿರ್ಮಾಣ ಅಥವಾ ಇತರೇ ಸೂಕ್ತ ವಿಧಾನದ ಮೂಲಕ ವೈಜ್ಞಾನಿಕವಾಗಿ ಮಾಡಬೇಕಾಗುತ್ತದೆ. ಇದಕ್ಕಾಗಿ ಸಮರ್ಪಕ ದ್ರವ ತ್ಯಾಜ್ಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವಿಸ್ತೃತಾ ಯೋಜನೆಯನ್ನು ಸಿದ್ದಪಡಿಸಿ, ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಅದರಂತೆ ಪ್ರಥಮ ಹಂತದಲ್ಲಿ ದ್ರವ ನಿರ್ವಹಣೆ ಕುರಿತಂತೆ, ಪ್ರತಿ ತಾಲೂಕಿನಲ್ಲಿ ಒಂದೊಂದು ಗ್ರಾಮ ಪಂಚಾಯತ್ ಗಳನ್ನು ಗುರುತಿಸಿ, ಆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ, ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಲು ಕೊಳಚೆ ಮುಕ್ತ ಗ್ರಾಮದೆಡೆ…

Read More