Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವದೆಹಲಿಯ ಜಿ-ಟೌನ್ ಸೊಸೈಟಿ ನಡೆಸಿದ 2020ರ ಭಾರತದ ಅಗ್ರ 50 ಪ್ರಭಾವಿ ವ್ಯಕ್ತಿಗಳ ಸಮೀಕ್ಷೆಯಲ್ಲಿ ಮಣಿಪಾಲ ಎಂಐಟಿ ಉಪನ್ಯಾಸಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರು ಆಯ್ಕೆಯಾಗಿದ್ದು, ಪರಿಸರ ಸಂರಕ್ಷಣೆ ವಿಭಾಗದಲ್ಲಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು, ಇತ್ತಿಚಿಗೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ಕೆಲವು ವರ್ಷಗಳಲ್ಲಿ ಬಾಲಕೃಷ್ಣ ಮದ್ದೋಡಿ ಅವರು ಕೈಗೊಂಡ ಪರಿಸರ ಸಂರಕ್ಷಣೆ ಬಗೆಗಿನ ಕಾರ್ಯಗಳು, 100 ವರ್ಷಗಳಿಗಿಂತ ಹೆಚ್ಚು ಹಳೆಯದಾದ 5 ಮರಗಳನ್ನು ಮರು ನೆಡುವಿಕೆ, 2000ಕ್ಕಿಂತ ಹೆಚ್ಚಿನ ಸಸಿಗಳನ್ನು ನೆಡುವುದು, 60 ಮರಗಳನ್ನು ಕಡಿಯುವುದನ್ನು ತಡೆಗಟ್ಟುವಲ್ಲಿ ಅವರ ಕೊಡುಗೆಯನ್ನು ಸಮೀಕ್ಷೆ ತೀರ್ಪುಗಾರರು ಪರಿಗಣಿಸಿ ಆಯ್ಕೆಮಾಡಲಾಗಿದೆ. ಹಸಿರು ಅಭಿವೃದ್ಧಿ, ಗ್ರೀನಥಾನ್ ಕಾರ್ಯಕ್ರಮದ ಮೂಲಕ ಕರ್ನಾಟಕದ ಸುಮಾರು 20,000 ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಅವರು ಸಂಘಟಿಸಿದ್ದಾರೆ. ವಿಶ್ವ ಜಲ ದಿನ, ವಿಶ್ವ ಪರಿಸರ ದಿನ, ವಿಶ್ವ ಭೂ ದಿನ, ವಿಶ್ವ ಓಝೋನ್ ದಿನವನ್ನು ಆಯೋಜಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 319 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 156, ಕುಂದಾಪುರ, ಬೈಂದೂರು ತಾಲೂಕಿನ 103, ಕಾರ್ಕಳ, ಹೆಬ್ರಿ ತಾಲೂಕಿನ 59 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ ಓರ್ವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 319 ಪ್ರಕರಣಗಳಲ್ಲಿ 127 ಸಿಂಟಮಿಕ್ ಹಾಗೂ 192 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 35 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 284 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3820 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1565 ಸಕ್ರಿಯ ಪ್ರಕರಣಗಳಿದ್ದು,  245 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕೊರೋನಾ ಅಬ್ಬರದಿಂದ ಕಾನೂನು ಬಿಗಿಗೊಳಿಸಿರುವ ಹೊತ್ತಲ್ಲೇ ಹಲವು ತಿಂಗಳ ಹಿಂದೆ ನಿಗದಿಯಾಗಿದ್ದ ಮದುವೆ ಮುಂತಾದ ಖಾಸಗಿ ಕಾರ್ಯಕ್ರಮಗಳು ಕೊರೋನಾ ಮಾರ್ಗಸೂಚಿಯಂತೆ ನಡೆಯುತ್ತಿವೆ. ವಾರದ ಕರ್ಪ್ಯೂ ನಡುವೆಯೂ ಇಂದು ಹಾಗೂ ನಾಳೆ ಶುಭ ಮುಹೂರ್ತವಿರುವುದರಿಂದ ಕೋವಿಡ್ ನಿಯಮ ಪಾಲಿಸಿಕೊಂಡು, ಅನುಮತಿ ಪಡೆದ ನೂರಾರು ಕಾರ್ಯಕ್ರಮಗಳು ಕರಾವಳಿ ಭಾಗದಲ್ಲಿ ನಡೆಯುತ್ತಿದೆ. ಎ.25ರಂದು ಕುಂದಾಪುರ ತಾಲೂಕಿನಲ್ಲಿ ಮದುವೆ ಮೊದಲಾದ 91 ಖಾಸಗಿ ಕಾರ್ಯಕ್ರಮಗಳಿಗೆ  ಅನುಮತಿ ನೀಡಲಾಗಿದ್ದರೇ, ಬೈಂದೂರು ತಾಲೂಕಿನಲ್ಲಿ 54 ಹಾಗೂ ಬ್ರಹ್ಮಾವರ ತಾಲೂಕಿನ 55 ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ. ಕಾರ್ಕಳದಲ್ಲಿ 41, ಹೆಬ್ರಿಯಲ್ಲಿ 12, ಉಡುಪಿಯಲ್ಲಿ 71, ಕಾಪುವಿನಲ್ಲಿ 55 ಕಾರ್ಯಕ್ರಗಳಿಗೆ ಅನುಮತಿ ನೀಡಲಾಗಿದೆ. ಎ.26ರಂದು ಕುಂದಾಪುರದಲ್ಲಿ ಗರಿಷ್ಠ ಕಾರ್ಯಕ್ರಮಗಳು ನಡೆಯಲಿದ್ದು ತಾಲೂಕಿನಲ್ಲಿ ಒಟ್ಟು 152 ಮದುವೆ ಮೊದಲಾದ ಸಮಾರಂಭಗಳು, ಬೈಂದೂರು ತಾಲೂಕಿನಲ್ಲಿ 25, ಬ್ರಹ್ಮಾವರ ತಾಲೂಕಿನ್ಲಲಿ 24, ಕಾರ್ಕಳದಲ್ಲಿ 17, ಹೆಬ್ರಿಯಲ್ಲಿ 4, ಉಡುಪಿಯಲ್ಲಿ 51 ಹಾಗೂ ಕಾಪುವಿನಲ್ಲಿ 17 ಸಮಾರಂಭಗಳಿಗೆ ಅನುಮತಿ ನೀಡಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 403 ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ 208, ಕುಂದಾಪುರ 143, ಕಾರ್ಕಳ ತಾಲೂಕಿನ 48 ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 403 ಪ್ರಕರಣಗಳಲ್ಲಿ 171 ಸಿಂಟಮಿಕ್ ಹಾಗೂ 232 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 25 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 378 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 1491 ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3421 ಮಂದಿಯನ್ನು ಪರೀಕ್ಷಿಸಲಾಗಿದ್ದು, 177 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ  ಹಿನ್ನೆಲೆಯಲ್ಲಿ,ರಾಜ್ಯ ಸರ್ಕಾರ ಕಟ್ಟುನಿಟ್ಟಿನ ವಾರಾಂತ್ಯದ ಕರ್ಫ್ಯೂ ವಿಧಿಸಿದ ನಂತರ, ಸಾಮಾನ್ಯ ಜೀವನ ಸ್ಥಗಿತಗೊಂಡಿದೆ. ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿಯುತ್ತಿದ್ದಂತೆ ಜನರು ತಮ್ಮ ಅನಗತ್ಯವಾಗಿ ಹೊರಗೆ ಬರದಂತೆ ತಡೆಯಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದರೇ, ಜನರೂ ಕೂಡ ಅನಗತ್ಯವಾಗಿ ಹೊರಬರದೇ ಸ್ಪಂದಿಸುತ್ತಿರುವುದು ಕಂಡುಬಂದಿದೆ. ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಪೇಟೆ ಭಾಗದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದ್ದವು. 10 ಗಂಟೆಯ ಬಳಿಕ ದಿನಸಿ ಹಾಗೂ ಅಗತ್ಯ ವಸ್ತುಗಳ ಅಂಗಡಿಗಳ ವರ್ತಕರು ಬಾಗಿಲು ಹಾಕಿದ್ದರಿಂದ ಜನಸಂಚಾರ ವಿರಳವಾಗಿತ್ತು. ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದ್ದರೆ, ಸರ್ಕಾರಿ ಬಸ್ ಸಂಚಾರ ವಿರಳವಾಗಿತ್ತು. ಕುಂದಾಪುರ ನಗರದಲ್ಲಿ ವಾರದ ಸಂತೆಗೆ ನಿಷೇಧವಿದ್ದುದರಿಂದ ಅಲ್ಲಿಗೆ ಬಂದಿದ್ದ ಹಣ್ಣಿನ ವ್ಯಾಪಾರಿಗಳನ್ನು ವಾಪಾಸ್ ಕಳುಹಿಸಲಾಯಿತು.  ಬೆಳಿಗ್ಗೆ 10 ಗಂಟೆಯ ನಂತರ ನಗರದೊಳಕ್ಕೆ ತೆರಳುವ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿತ್ತು. ಕುಂದಾಪುರ ನಗರದಲ್ಲಿ ಉಪವಿಭಾಗಾಧಿಕಾರಿ ರಾಜು…

Read More

ಕುಂದಾಪ್ರ ಡಾಟ್ ಕಾಂ ವರದಿ. ಶಂಕರನಾರಾಯಣ: ಶಂಕರನಾರಾಯಣ ಮೆಸ್ಕಾಂ ಉಪ ವಿಭಾಗ ಕಛೇರಿಗೆ ಅವಶ್ಯವಿರುವ ಸರಕಾರಿ ಜಮೀನು ಲಭವಿಲ್ಲವೆಂಬ ನೆಪವಿರಿಸಿಕೊಂಡು, ಇಲಾಖಾ ಅನುದಾನಗಳಿದ್ದರೂ ಸ್ವಂತ ಕಟ್ಟಡ ನಿರ್ಮಿಸದೇ ಉಪವಿಭಾಗ ಕೇಂದ್ರವನ್ನು ಎತ್ತಂಗಡಿ ಮಾಡುವ ಕಾರ್ಯ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. 2013ರಿಂದ ಶಂಕರನಾರಾಯಣದ ಬಾಡಿಗೆ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಮೆಸ್ಕಾಂ ಉಪವಿಭಾಗ ಕೇಂದ್ರಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಡಿಮ್ಡ್ ರಹಿತ ಸರಕಾರಿ ಜಮೀನು ಲಭ್ಯವಿಲ್ಲ ಎಂದು ಕಂದಾಯ ಇಲಾಖೆ ಪತ್ರ ಬರೆದಿದೆ. ಮೆಸ್ಕಾಂ ಉಪ ವಿಭಾಗಕ್ಕೆ ಸ್ವಂತ ಕಚೇರಿ, ಅಧಿಕಾರಿಗಳ ಕ್ವಾಟ್ರರ್ಸ್, ಕಂಬ ಟಿಸಿ ವಯರು ದಾಸ್ತಾನು ಇಡಲು ಗೋದಾಮು, ವಿದ್ಯುತ್ ಬಿಲ್ಲು ಕಟ್ಟಲು ಕೌಂಟರ್ ಅವಶ್ಯಕತೆ ಇದೆ. ಸಹಾಯಕ ಕಾರ್ಯನಿರ್ವಾಹಕ (ಎಇಇ) ಇಂಜಿನಿಯರ್ ಹುದ್ದೆಯನ್ನು ಹೊಂದಿರುವ ಈ ಉಪ ವಿಭಾಗವು ಬೆಳ್ವೆ, ಹಾಲಾಡಿ, ಸಿದ್ದಾಪುರ, ಅಂಪಾರು, ಹೊಸಂಗಡಿಯಲ್ಲಿ ಜೆ.ಇ ಕಚೇರಿ ಶಾಖೆಯನ್ನು ಹೊಂದಿ ಹಳ್ಳಿಹೊಳೆಯಿಂದ ಕಾವ್ರಾಡಿ, ಹಳ್ಳಾಡಿ – ಹರ್ಕಾಡಿ, ಅಮವಸೆಬೈಲ್, ಶೇಡಿಮನೆ, ಮಾಡಾಮಕ್ಕಿವರೆಗೆ ಸುಮಾರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕೊರೋನಾ ಲಕ್ಷಣಗಳು ಕಂಡಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಶಾಸಕರನ್ನು ಸದ್ಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್‌ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ ಪಡೆದು ಅಗ್ರ ಹತ್ತು ವಿಜೇತರಲ್ಲಿ ಒಬ್ಬರಾಗಿದ್ದಾರೆ. ಹಾಗೆಯೇ ಭಾರತ ಸರ್ಕಾರದ ನ್ಯಾಷನಲ್ ಕ್ರಿಟಿಕಲ್ ಇನ್ಫಾರ್ಮಶನ್ ಇನ್ಫ್ರಾಸ್ಟ್ರುಕ್ಚರ್ ಪ್ರೊಟೆಕ್ಷನ್ ಸೆಂಟರ್ ವತಿಯಿಂದ ನೀಡಲ್ಪಡುವ ಇಂಟರ್ನ್ಶಿಪ್ ಗೂ ಆಯ್ಕೆಯಾಗಿದ್ದಾರೆ. ಅಡ್ವಾನ್ಸಡ್ ಸ್ಕಿಲ್ ಡೆವಲಮೆಂಟ್ ತರಬೇತಿ ಕೇಂದ್ರವು ಈ ಕೋರ್ಸ್ ನ ಗ್ರ್ಯಾಂಡ್ ಫೈನಲ್ ನಡೆಸಿತ್ತು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಾರ್ಥ್ ಜೆ ಶೆಟ್ಟಿ 827 ವಿದ್ಯಾರ್ಥಿಗಳಿಗೆ ನಡೆಸಿದ ಫೈನಲ್ ಸ್ಪರ್ಧೆಯಲ್ಲಿ ಆಗ್ರ ಹತ್ತು ವಿಜೇತರೊಳಗೆ ಸ್ಥಾನ ಪಡೆಯೋದು ಹೆಮ್ಮೆಯ ವಿಷಯವಾಗಿದ್ದು, ಇಂತಹ ಮತ್ತಷ್ಟು ಸಾಧನೆ ಮಾಡಲಿ ಎಂದು ಶುಭಹಾರೈಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಸಾಮೂಹಿಕ ಉಪನಯನ, ಸತ್ಯನಾರಾಯಣ ಪೂಜೆ, ರಾಮ ನವಮಿಯನ್ನು ವ್ಯಾಸರಾಜ ಕಲಾ ಮಂದಿರದಲ್ಲಿ ಆಚರಿಸಲಾಯಿತು. ಸಮಾಜದ 22 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಮಠದ ಅರ್ಚಕ ವಿಜಯ ಪೆಜತ್ತಾಯ ಪೂಜಾ ವಿಧಿ ವಿಧಾನ ನಡೆಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜತೆ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಆಗಮಿಸಿದರು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಎಂ.ಲಕ್ಷ್ಮಣ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು ಸ್ವಾಗತಿಸಿದರು. ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು ವಂದಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಚಂದ್ರಶೇಖರ ಬೀಜಾಡಿ ಪರಿಚಯಿಸಿ, ಸುಬ್ರಹ್ಮಣ್ಯ ಜಿ.ಉಪ್ಪುಂದ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ನೂತನ ವೈದ್ಯಕೀಯ ಅಧೀಕ್ಷಕರಾಗಿ ಡಾ. ನಾಗರಾಜ ಎಸ್. ಅವರು ಅಧಿಕಾರ ಸ್ವೀಕರಿಸಿದರು. ಡಾ. ನಾಗರಾಜ ಎಸ್. ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬಿ.ಎ.ಎಮ್.ಎಸ್. ಪದವಿ ಪಡೆದು ಸ್ನಾತಕೋತ್ತರ ಹಾಗೂ ಪಿಎಚ್.ಡಿ. ಪದವಿಗಳನ್ನು ಗುಜರಾತ್ ಆಯುರ್ವೇದ ಯುನಿವರ್ಸಿಟಿಯಲ್ಲಿ ಪಡೆದಿರುತ್ತಾರೆ. ಇವರು ರೋಗನಿಧಾನ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ಹಾಗೂ ಪಿಎಚ್.ಡಿ ಅಧ್ಯಯನ ಕೇಂದ್ರದ ಸಹಾಯಕ ಡೀನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ 21ವರ್ಷಗಳಿಂದ ಕಾಲೇಜು ಹಾಗೂ ಆಸ್ಪತ್ರೆಯ ವಿವಿಧ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸಿ ಕಾಲೇಜು ಹಾಗೂ ಆಸ್ಪತ್ರೆಯ ಏಳಿಗೆಗೆ ಶ್ರಮಿಸುತ್ತಿದ್ದಾರೆ.  ಬೈಂದೂರು ತಾಲೂಕಿನ ಯಡ್ತರೆಯವರಾದ ಡಾ. ನಾಗರಾಜ ಅವರು ಪ್ರಸ್ತುತ ಉಡುಪಿಯಲ್ಲಿ ನೆಲೆಸಿದ್ದಾರೆ. ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ ಅವರಿಂದ ಡಾ ನಾಗರಾಜ ಅವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Read More