ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದಿನ ದಿನದಲ್ಲಿ ಯುವಕರಿಂದ ಹಾದಿ ತಪ್ಪುವ ಕೆಲಸಗಳಾಗುತ್ತಿದೆ. ಇತಂಹ ಕಾಲಘಟ್ಟದಲ್ಲಿ ಸಾರ್ವಜನಿಕರ ಸೇವೆಗಾಗಿ ಕರಾವಳಿ ಫ್ರೆಂಡ್ಸ್ ಎಂಬ ಯುವ ಸಂಘಟನೆ ಸಮಾಜಕ್ಕೆ ಮಾದರಿ ಕೆಲಸಗಳನ್ನು ನೀಡುವ ಮೂಲಕ ಬೀಚ್ ಗಾರ್ಡನ್ ಕೊಡುಗೆ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಈ ಸಂಘಟನೆ ನಮ್ಮ ಭಾಗದ ದೊಡ್ಡ ಆಸ್ತಿ ಎಂದು ಬೀಜಾಡಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಅವರು ಬೀಜಾಡಿ ಕರಾವಳಿ ಫ್ರೆಂಡ್ಸ್ ಇವರ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಅಂಗವಾಗಿ ದಾನಿಗಳ ಸಹಕಾರದಿಂದ ಕೊಡುಗೆಯಾಗಿ ನೀಡಿದ ಬೀಚ್ ಗಾರ್ಡನ್ ಉದ್ಘಾಟಿಸಿ ಮಾತನಾಡಿದರು. ಉದ್ಯಮಿ ಸುರೇಶ್ ಬೆಟ್ಟಿನ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ವಲಯ ಅರಣ್ಯಧಿಕಾರಿ ಲೋಹಿತ್ ಸಸಿನೆಟ್ಟು ವನಪಾರ್ಕ್ಗೆ ಚಾಲನೆ ನೀಡಿದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಳದ ಆಡಳಿತ ಮಂಡಳಿ ಮಾಜಿ ಸದಸ್ಯ ಅಶೋಕ್ ಪೂಜಾರಿ ವಡ್ಡಿನಮನೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯ ಶೇಖರ ಚಾತ್ರಬೆಟ್ಟು, ಕುಂದಾಪುರ ಸನ್ರೈಸ್ ರೋಟರಿ ಅಧ್ಯಕ್ಷೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊಸ ದೆಹಲಿಯ ಭಾರತೀಯರ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣರಾಗಿದ್ದಾರೆ. ಕುಂದಾಪುರದ ಯಜ್ಞ ಪಿ. ಮಯ್ಯ ಅವರಲ್ಲಿ ಆರ್ಟಿಕಲ್ ಶಿಪ್ ತರಬೇತಿ ಪಡೆದಿರುವ ಇವರು ಕುಂದಾಪುರದ ರಮೇಶ್ ನಾವಡ ಮತ್ತು ಜಯಂತಿ ನಾವಡ ಇವರ ಪುತ್ರಿಯಾಗಿರುತ್ತಾರೆ .
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೇಟೆಯ ಮುಖ್ಯ ರಸ್ತೆಗೆ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಮಿತಿ ವತಿಯಿಂದ ಕುಂದಾಪುರ ಪುರಸಭಾ ಅದ್ಯಕ್ಷರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ. ಕುಂದಾಪುರದ ಮಿನಿ ವಿಧಾನ ಸೌಧದ ಮುಂಬಾಗದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆನ್ನುವ ಬೇಡಿಕೆಯನ್ನು ಹಲವಾರು ಬಾರಿ ಈ ಹಿಂದೆ ಸಲ್ಲಿಸಲಾಗಿತ್ತು ಇದೀಗ ಕುಂದಾಪುರ ಪೇಟೆಯ ಮುಖ್ಯ ರಸ್ತೆಗೆ ಗಣ್ಯರ ಹೆಸರಿಡುವ ಪ್ರಸ್ತಾವನೆ ಪುರಸಭೆಯ ಮುಂದಿದ್ದು ತಾಲೂಕಿನಲ್ಲಿರುವ ಅಂಬೇಡ್ಕರ್ ಭವನವೊಂದು ಬಿಟ್ಟರೆ ಬೇರೆ ಯಾವುದೇ ಒಂದು ಸರಕಾರಿ ಸಂಸ್ಥೆಗಾಗಲಿ ರಸ್ತೆಗಾಗಲಿ ಈತನಕ ಅಂಬೇಡ್ಕರ್ ಹೆಸರಿಟ್ಟಿರುವ ಉದಾಹರಣೆಗಳೇ ಇಲ್ಲ ಆದ್ದರಿಂದ ಕುಂದಾಪುರ ಪೇಟೆಯ ಮುಖ್ಯ ರಸ್ತೆಗೆ ಸಂವಿಧಾನ ಶಿಲ್ಪಿ ಯ ಹೆಸರಿಡುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಆಗ್ರಹಿಸಲಾಗಿದೆ ಅಂಬೇಡ್ಕರ್ ಹೆಸರನ್ನು ಕಡೆಗಣಿಸಿ ಬೇರಾವುದೇ ಹೆಸರಿಡಲು ಮುಂದಾದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ– 66ರಲ್ಲಿನ ಚತುಷ್ಪಥ ಕಾಮಗಾರಿಯ ಸ್ಥಿತಿ- ಗತಿಯನ್ನು ನೋಡಿದರೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆ ಕಂಪನಿ ಸರ್ಕಾರಗಳಿಗಿಂತಲೂ ಬಲವಾಗಿ ಬೆಳೆದಿದೆಯೇ ಎನ್ನುವ ಭಾವನೆ ಬಲವಾಗುತ್ತಿದೆ. ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಹಾಗೂ ದೊಡ್ಡ ವೈಫಲ್ಯದಿಂದಾಗಿ ಇಲ್ಲಿನ ಜನ ನಿತ್ಯ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರಿ ಸರ್ಕಲ್ನಿಂದ ವಿನಾಯಕವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಬಸ್ರೂರು ಮೂರುಕೈ ಹಾಗೂ ಟಿ.ಟಿ ರಸ್ತೆಯ ಸಮೀಪ ನಿರ್ಮಾಣವಾಗಿರುವ ಅಂಡರ್ಪಾಸ್ ತೆರವು ಹಾಗೂ ಕೆಇಬಿ ಸಮೀಪದ ಬೊಬ್ಬರ್ಯನ ಕಟ್ಟೆ ಬಳಿ ಪಾದಚಾರಿ ಸಂಚಾರಕ್ಕಾಗಿ ಜೀಬ್ರಾ ಕ್ರಾಸಿಂಗ್ ನಿರ್ಮಾಣಕ್ಕೆ ಒತ್ತಾಯಿಸಿ ತಾಲ್ಲೂಕು ಡಿವೈಎಫ್ಐ ನೇತೃತ್ವದಲ್ಲಿ, ತಾಲ್ಲೂಕು ಆಟೊ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು ) ಹಾಗೂ ವಿವಿಧ ಸಂಘಟನೆಳು ಜತೆಯಾಗಿ ನಡೆಸಿದ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹದಲ್ಲಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಮನೋವಿಜ್ಞಾನ ವಿಭಾಗದ ವತಿಯಿಂದ ‘ಪರ್ಸನಲ್ ಎಫೆಕ್ಟಿವ್ನೆಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೈನ್ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ. ಶೈಲಜಾ ಶಾಸ್ತ್ರೀ ಮಾತನಾಡಿ, ನಾವು ಇನ್ನೊಬ್ಬರ ಮಾತಿಗೆ ಅವಲಂಬಿತರಾಗದೆ, ಸ್ವ ಆಲೋಚನೆಯಿಂದ ಕೆಲಸ ಮಾಡಿದಾಗ ಮಾತ್ರ ಸ್ವಾವಲಂಬಿಯಾಗಿ ಬೆಳೆಯಲು ಸಾಧ್ಯ ಎಂದರು. ಸ್ಟಾಂಡಿಂಗ್ ಟವರ್, ಮಾಸ್ಕ್ ಮೇಕಿಂಗ್, ಫ್ರೇಮಿಂಗ್ ಸ್ಕ್ವಾರ್, ಲಾಫರ್ ತೆರಪಿ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ‘ಪರ್ಸನಲ್ ಎಫೆಕ್ಟಿವ್ನೆಸ್’ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ನಾವು ಒಂದು ವಿಷಯದ ಬಗ್ಗೆ ಆಳವಾದ ಯೋಚನೆ, ಭರವಸೆ, ವಿಶ್ವಾಸವನ್ನು ಹೊಂದಿರಬೇಕು. ಮಾತ್ರವಲ್ಲದೇ ಒಳ್ಳೆಯ ಆಲೋಚನೆಗಳನ್ನು ಬೆಳೆಸಿಕೊಂಡು ಆ ಆಲೋಚನೆಗಳನ್ನು ಇನ್ನೊಬ್ಬರಿಗೆ ಹಂಚಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಆಡ್ರಿ ಪಿಂಟೊ, ಉಪನ್ಯಾಸಕರಾದ ಮೇಘಾ ಮನೋಜ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಎ.ವಿ. ಹಾಲ್ನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ ನಾರಾಯಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕುಂದಾಪುರ ವಕೀಲ ಟಿ. ಮಂಜುನಾಥ ಗಿಳಿಯಾರು, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ರೇಖಾ ವಿ. ಬನ್ನಾಡಿ ಉಪಸ್ಥಿತರಿದ್ದರು. ರೋಹಿಣಿ ಶರಣ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಆಸ್ಪತ್ರೆಗಳಲ್ಲಿ ಸ್ವಾಬ್ ಪರೀಕ್ಷೆ ಕಡಿಮೆಯಾಗುತ್ತಿದ್ದು, ಐಎಲ್ಐ, ವರದಿ ಸರಿಯಾಗಿ ನಿರ್ವಹಿಸದೇ ಇರುವ ಹಾಗೂ ಹೊರರೋಗಿ ವಿಭಾಗದ ನೋಂದಣಿಯನ್ನು ನಿರ್ವಹಿಸದ ಮತ್ತು ದರಪಟ್ಟಿಯನ್ನು ಪ್ರದರ್ಶಿಸದೇ ಇರುವ ಖಾಸಗಿ ಆಸ್ಪತ್ರೆಗಳ ಮಾನ್ಯತೆಯನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು, ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿಯವರ ಕಚೇರಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ನೊಂದಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಲಸಿಕೆಯನ್ನು ಎಲ್ಲಾ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯು ಎಲ್ಲಾ ವಿಚಾರದಲ್ಲಿ ಮುಂಚೂಣಿಯಲ್ಲಿದ್ದು, ಲಸಿಕಾ ಕಾರ್ಯಕ್ರಮದಲ್ಲಿಯೂ ಕೂಡ ಈ ಸ್ಥಾನವನ್ನು ಕಾಯ್ದುಕೊಳ್ಳುವಂತೆ ಅವರು ತಿಳಿಸಿದರು. ಖಾಸಗಿ ಕ್ಲಿನಿಕ್ಗಳಲ್ಲಿ ಕೋವಿಡ್ಗೆ ಸಂಬಂಧಿಸಿದ ಐಎಲ್ಐ, ವರದಿಗಳನ್ನು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಅವರನ್ನು ಸ್ವಾಬ್ ಪರೀಕ್ಷೆಗೆ ಒಳಪಡಿಸದೇ ಇದ್ದಲ್ಲಿ ಅಂತವರ ಕ್ಲಿನಿಕ್ ನೋಂದಣಿಯನ್ನು ರದ್ದುಗೊಳಿಸಲಾಗುವುದು ಎಂದರು. ಸಭೆಯಲ್ಲಿ ಡಿಹೆಚ್ಓ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ 18 ವರ್ಷ ತುಂಬಿದ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೊಂದಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ, ರಾಜ್ಯ ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಶಂಭು ಭಟ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ನಡೆದ, ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಇ-ಎಪಿಕ್ ಕಾರ್ಡ್ ಕುರಿತಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಕಾರ್ಡ್ ಪಡೆಯುವಂತೆ ತಿಳಿಸಿ ಎಂದರು. ಸಭೆಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಲಕ್ಷ್ಮಿಮಶ್ವರ, ದಿನೇಶ್ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳು ಉಪಸ್ಥಿತರಿದ್ದರು. ಸಭೆಯ ನಂತರ ಮತದಾರರ ಪಟ್ಟಿಯ ಪರಿಶೀಲನೆ ಕುರಿತಂತೆ, ಉಡುಪಿಯ ಶಿವಳ್ಳಿ ಸೇರಿದಂತೆ ವಿವಿಧ ಭಾಗದ ಸಾರ್ವಜನಿಕರ ಮನೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಿಕ್ಷಾಟನೆಯಿಂದ ಬಂದ 1 ಲಕ್ಷ ರೂ. ಹಣವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ವೃದ್ಧೆಯೋರ್ವರ ಸೇವಾ ಕೈಂಕರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಂಚುಗೋಡು ಮೂಲದವರಾದ ಅಶ್ವಥ್ಥಮ್ಮ (80) ಈ ದೇಣಿಗೆ ನೀಡಿದ ಭಕ್ತೆ. ಉಡುಪಿ ಜಿಲ್ಲೆಯ ವಿವಿದೆಡೆ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ದಾನವಾಗಿ ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ಈ ಹಿಂದೆ ಅವರು ಗಂಗೊಳ್ಳಿ ಸಮೀಪದ ಕಂಚಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ., ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಗಳನ್ನು ಕೂಡ ದೇಣಿಗೆ ನೀಡಿದ್ದರು. ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆಯನ್ನು ಹಸ್ತಾಂತರಿಸುವ ಸಂದರ್ಭ ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ. ನಾಗರಾಜ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು. ಅಶ್ವಥ್ಥಮ್ಮ ದೇಶಾದ್ಯಂತ ವಿವಿಧ ದೇವಾಲಯಗಳಿಗೆ ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೦-೨೧ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಬಿ. ಎಸ್. ಸುರೇಶ್ ಶೆಟ್ಟಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಗತ್ಯ. ಆ ಮೂಲಕ ವಿದ್ಯಾರ್ಥಿ ದೆಸೆಯಲ್ಲಿಯೇ ಆತ್ಮ ಸ್ಥೈರ್ಯದಿಂದ ಕಾರ್ಯಪ್ರವೃತ್ತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಮಾತನಾಡಿ, ಶಿಸ್ತು, ಸಂಯಮ, ನಿಷ್ಠೆ, ಶ್ರದ್ಧೆ ಇವುಗಳು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದರು. ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ಸಿ.ಎಸ್. ಫೌಂಡೇಶನ್ ತೇರ್ಗಡೆ ಹೊಂದಿದ ಕಾಲೇಜಿನ 17 ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 95ಕ್ಕಿಂತ ಹೆಚ್ಚು ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.…
