ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.27: ಕಾರಿನಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಯುವಕರನ್ನು ಪ್ರಶ್ನಿಸಿದ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಮೇಲೆ ಕಾರು ಚಾಲಕ ಹಲ್ಲೆ ನಡೆಸಿದ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ. ಇದಿನಬ್ಬ ಸಾಹೀದ್ ಆರೋಪಿಯಾಗಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಗಿದ್ದೇನು:ಶಂಕರನಾರಾಯಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ವಿಲ್ಪೇಡ್ ಡಿ’ಸೋಜಾ (50) ಅವರು ಸಮವಸ್ತ್ರದಲ್ಲಿ ಇತರ ಸಿಬ್ಬಂದಿಗಳ ಜೊತೆಗೆ ಕರ್ತವ್ಯದಲ್ಲಿದ್ದು ಕೋವಿಡ್ -19 ಮಾರ್ಗಸೂಚಿಯಂತೆ ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮಾಸ್ಕ್ ಧರಿಸದೇ ತಿರುಗಾಟ ಮಾಡುವವರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕಾರಿನಲ್ಲಿ 4 ಜನ ಪ್ರಯಾಣ ಮಾಡುತ್ತಿದ್ದನ್ನು ನೋಡಿ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಮಾಸ್ಕ್ ಧರಿಸದೆ ಪ್ರಯಾಣ ಮಾಡುತ್ತಿದ್ದ ಬಗ್ಗೆ ವಿಚಾರಿಸುತ್ತಿರುವಾಗ ಕಾರಿನ ಚಾಲಕ ಆರೋಪಿ ಇದಿನಬ್ಬ ಸಾಹೀದ್ ಕಾರಿನಿಂದ ಇಳಿದು ಬಂದು ಹೆಡ್ ಕಾನ್ಸ್ಟೆಬಲ್ ವಿಲ್ಪೇಡ್ ಡಿ’ಸೋಜಾ ಮೈ ಮೇಲೆ ಬಿದ್ದು ಕೈಯಿಂದ ಬೆನ್ನಿಗೆ ಹಾಗೂ ಕಪಾಳಕ್ಕೆ ಹೊಡೆದು ಹಲ್ಲೆಮಾಡಿ ಸಮವಸ್ತ್ರವನ್ನು ಹರಿದು ಹಾಕಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫೆರ್ನಾಂಡಿಸ್ ಅವರು ಅನಾರೋಗ್ಯದಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗುವಂತೆ ಬೈಂದೂರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆ ರಮೇಶ್ ಗಾಣಿಗ, ಗ್ರಾಮ ಪಂಚಾಯತ್ ಸದಸ್ಯ ಕೆ ಪ್ರಕಾಶ್ ಪೂಜಾರಿ, ಕಾಂಗ್ರೆಸ್ ಮುಖಂಡ ವಾಸುದೇವ್ ಯಡಿಯಾಳ, ಚಂದ್ರ ಬಳೆಗಾರ, ವಾಸು ಮೊಗವೀರ, ನಾರಾಯಣ ಶೆಟ್ಟಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಕೆ. ರಮೇಶ್ ಗಾಣಿಗ ಕುಟುಂಬದವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದಲ್ಲಿ ಒಂದು ಹೊತ್ತಿನ ಅನ್ನದಾನ ಸೇವೆಯನ್ನು ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ನ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಇಲ್ಲಿನ ಸ.ವಿ. ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ರೋಟರಿಯ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದ ರೋಟರಿ ಜಿಲ್ಲೆ ೩೧೮೨ ವಲಯ ೧ರ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ್ ಶೆಟ್ಟಿ, ರೋಟರಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿದೆ. ರೋಟರಿ ಸದಸ್ಯರು ನಿಸ್ವಾರ್ಥವಾಗಿ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಆಯಾ ಪ್ರದೇಶದ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಅನೇಕ ಉತ್ತಮ ಸೇವೆಗಳ ಮೂಲಕ ಉತ್ತಮ ಹೆಸರು ಪಡೆದುಕೊಂಡಿರುವ ಗಂಗೊಳ್ಳಿ ರೋಟರಿ ಸಂಸ್ಥೆ ರೋಟರಿಯ ಧ್ಯೇಯೋದ್ದೇಶಗಳಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ನೂತನ ಅಧ್ಯಕ್ಷ ರಾಜೇಶ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯ ಸಂಚಾಲಕ ಎಸ್.ನಿತ್ಯಾನಂದ ಪೈ ಮತ್ತು ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಶುಭಾಶಂಸನೆಗೈದರು. ಇದೇ ಸಂದರ್ಭ ಪ್ರಸಕ್ತ ಸಾಲಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜದ ಒಳಿತು ಕೆಡುಕುಗಳ ವಿಮರ್ಶೆ ಮಾಡಿ ಒಳಿತನ್ನು ಸ್ವೀಕರಿಸುವ ಪ್ರಬುದ್ಧ ಮನಸ್ಸುಗಳ ನಿರ್ಮಾಣ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಜ್ಞಾನ ಭೀಕ್ಷಾ ಪಾದಯಾತ್ರೆಯ ವಿವೇಕಾನಂದ ಹೆಚ್. ಕೆ. ಹೇಳಿದರು. ಅವರು, ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲಾ ಘಟಕ ಇದರ ಸಹಯೋಗದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದರು. ಶಾಲಾ ವಾಚನಾಲಯ ಸಂದರ್ಶಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಣಾಕರ ಶೆಟ್ಟಿ, ರತ್ತುಬಾಯ್ ಜನತಾ ಪ್ರೌಢ ಶಾಲೆ ಮುಖ್ಯ ಉಪಾಧ್ಯಯರಾದ ಮಂಜು ಕಾಳವಾರ, ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರವೀಂದ್ರ ಪಿ, ನಿವೃತ್ತ ಶಿಕ್ಷಕರಾದ ತಿಮ್ಮಪ್ಪಯ್ಯ ಜಿ. ಕಲಾವಿದರಾದ ಗಿರೀಶ್ ಬೈಂದೂರು, ಮಾರುತಿ, ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದ್ಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿ ಕ್ಷಕಿ ಮುಕ್ತಾ ಪಿ. ಸ್ವಾಗತಿಸಿದರು. ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲಾ ಘಟಕದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆಯ ಸಮೀಪದ ಹೊಳೆದಂಡೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವೊಂದು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉಪ್ಪುಂದ ಕರ್ಕಿಕಳಿ ವಿಶ್ವನಾಥ ಖಾರ್ವಿ ಅವರ ಪುತ್ರ ಸರ್ವದ (2 ವರ್ಷ 1 ತಿಂಗಳು) ಮೃತ ದುರ್ದೈವಿ. ಸೋಮವಾರ ಮಧ್ಯಾಹ್ನ 3:30ರ ವೇಳೆಗೆ ವಿಶ್ವನಾಥ ಖಾರ್ವಿ ಅವರು ಮನೆಯ ಕೋಣೆಯಲ್ಲಿ ಮಗುವನ್ನು ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಮಗುವಿನ ತಾಯಿ ಬೇರೆ ಕೆಲಸದಲ್ಲಿ ನಿರತರಾಗಿದ್ದರು. ಸುಮಾರು 4 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಕೋಣೆಯಲ್ಲಿ ಮಲಗಿದ್ದ ಮಗು ಎದ್ದು, ಯಾರ ಗಮನಕ್ಕೂ ಬಾರದಂತೆ ಮನೆಯ ಸಮೀಪ ಹರಿಯುವ ಎಡಮಾವಿನ ಹೊಳೆಯ ದಡದಲ್ಲಿ ನಡೆದುಕೊಂಡು ಹೋಗಿತ್ತು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದೆ. ಮೃತದೇಹವು ತೇಲಿಕೊಂಡು ಹೋಗಿ ಎಡಮಾವಿನ ಹೊಳೆಯು ಸಮುದ್ರವನ್ನು ಸೇರುವ ಉಪ್ಪುಂದ-ಕರ್ಕಿಕಳಿ ಬ್ರೇಕ್ ವಾಟರ್ ಸಮೀಪ ನೀರಿನಲ್ಲಿ ದೊರೆತಿರುವುದಾಗಿ ವರದಿಯಾಗಿದೆ. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತೀಯ ಸನಾತನ ಹಿಂದು ಧರ್ಮದಲ್ಲಿ ಗುರುಪೂರ್ಣಿಮೆಗೆ ವಿಶೇಷ ಮಹತ್ವದ ಸ್ಥಾನವಿದೆ. ಗುರುಗಳ ಆಶೀರ್ವಾದವಿಲ್ಲದೆ ಯಾರೂ ಕೂಡ ಜೀವದಲ್ಲಿ ಯಶಸ್ವಿಯಾಗಲಾರರು ಎಂದು ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಅರುಣ್ ಕುಮಾರ್ ಜಿ.ಟಿ. ಹೇಳಿದರು. ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಸಭಾಭವನದಲ್ಲಿ ಗುರುಪೂರ್ಣಿಮೆ ಅಂಗವಾಗಿ ಜರಗಿದ ಗುರುಪೂರ್ಣಿಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಜಿ.ಈಶ್ವರ, ಅರ್ಚಕ ಶಿವ ಜಿ.ಟಿ., ಮಹೇಶ ಜಿ.ಡಿ., ನರಸಿಂಹ ಕೆ., ರಾಘವೇಂದ್ರ ಜಿ.ಟಿ., ಚೇತನ್ ಮತ್ತಿತರರು ಉಪಸ್ಥಿತರಿದ್ದರು. ಅರುಣ್ ಕುಮಾರ್ ಜಿ.ಟಿ. ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಕಾಂತ ಎನ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕುಂದಾಪುರ ಕಸಬಾ ಗ್ರಾಮದಿಂದ ಕಾಪು ತಾಲೂಕು ಹೆಜಮಾಡಿ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿ 66(17) ರ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ನೋಟೀಸು ನೀಡಿದರೂ, ಕೆಲವು ಭೂ ಮಾಲಕರು ಈವರೆಗೂ ತಮ್ಮ ಹಕ್ಕಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಿ ಪರಿಹಾರಧನ ಪಡೆದಿರುವುದಿಲ್ಲ. ಬಾಕಿಯಾದ ಭೂಸ್ವಾಧೀನ ಪ್ರಕರಣಗಳ ಮತ್ತು ಬಾಕಿ ಇರುವ ಪರಿಹಾರ ಹಣದ ಬಗ್ಗೆ ಪಟ್ಟಿ ತಯಾರಿಸಿ, ಸಂಬಂಧಪಟ್ಟ ಗ್ರಾಮಕರಣಿಕರ ಹಾಗೂ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇರಿಸಲಾಗಿದೆ. ಜಮೀನು ಕಳೆದುಕೊಂಡು ಪರಿಹಾರ ಪಡೆಯಲು ಬಾಕಿ ಇರುವ ಸಂತ್ರಸ್ತರು ಸಂಬಂಧಪಟ್ಟ ಗ್ರಾಮ ಕರಣಿಕರಿಂದ ಮಾಹಿತಿ ಪಡೆದು 30 ದಿನಗಳ ಒಳಗೆ ಅಗತ್ಯವುಳ್ಳ ದಾಖಲೆಗಳೊಂದಿಗೆ ಕುಂದಾಪುರ ಸಕ್ರಮ ಪ್ರಾಧಿಕಾರಿಯವರು ರಾ.ಹೆ(17) ಹಾಗೂ ಸಹಾಯಕ ಕಮೀಷನರ್ ಕಚೇರಿಗೆ ಕೋರಿಕೆ ಅರ್ಜಿ ಸಲ್ಲಿಸಿ, ಪರಿಹಾರ ಹಣ ಪಡೆಯುವಂತೆ ಕುಂದಾಪುರ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಮಹಾಸಾಗರದಲ್ಲಿರುವ ಮಾಸ್ಕಡ್ ಬೂಬಿ ಎಂಬ ವಿಶೇಷ ಪಕ್ಷಿಯು ಗಾಯಗೊಂಡಿರುವ ರೀತಿಯಲ್ಲಿ ಕಂಡು ಬಂದಿದ್ದು, ಅರಣ್ಯ ಇಲಾಖೆಯವರು ಹಾಗೂ ಗ್ರಾಮಸ್ಥರು ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಕಾರ್ಯ ನಡೆದಿದೆ. ಈ ಸಂದರ್ಭ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಗಳಾದ ರವಿರಾಜ್. ಬಿ., ಗುರುರಾಜ .ಬಿ., ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಊರ ಗ್ರಾಮಸ್ಥರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ನೊಂದಾಯಿತವಾದ ಎಲ್ಲಾ ಆಸ್ಪತ್ರೆ, ಕ್ಲಿನಿಕ್ಗಳನ್ನು, ತಮ್ಮಲ್ಲಿ ದೊರೆಯುವ ವಿವಿಧ ಚಿಕಿತ್ಸೆಗಳು, ಚಿಕಿತ್ಸೆಯ ದರಗಳು, ಚಿಕಿತ್ಸಾ ವಿಧಾನಗಳು (ಅಲೋಪತಿ, ಆಯುರ್ವೇದ ಇತ್ಯಾದಿ), ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ಇದು ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತಿರಬೇಕು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೆ.ಪಿ.ಎಂ.ಇ ಯಡಿ ನೊಂದಾಯಿತ ಆಸ್ಪತ್ರೆಗಳು, ತಮ್ಮ ಅನುಮತಿಯ ನವೀಕರಣಕ್ಕೆ ಬರುವ ಸಂದರ್ಭದಲ್ಲಿ, ಕಾಯ್ದೆಯಡಿಯಲ್ಲಿನ ಎಲ್ಲಾ ಷರತ್ತುಗಳನ್ನು ಪೂರೈಸಿರುವ ಕುರಿತು ಪರಿಶೀಲನೆ ನಡೆಸಿ, ಅನುಮತಿಯನ್ನು ನವೀಕರಿಸಬೇಕು. ಜಿಲ್ಲೆಯಲ್ಲಿ ಯಾವುದೇ ನಕಲಿ ವೈದ್ಯರು ಕ್ಲಿನಿಕ್ಗಳನ್ನು ತೆರೆದು ಚಿಕಿತ್ಸೆ ನೀಡದಂತೆ ಪರಿಶೀಲಿಸಿ, ನವೀಕರಣ ಮಾಡಿಸದ ಆಸ್ಪತ್ರೆಗಳ ಪರವಾನಗಿಯನ್ನು ರದ್ದು ಮಾಡಿ, ಅವರು ಹೊಸದಾಗಿ ಪರವಾನಿಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ತಾಲೂಕಿನ ವಾಲಿಬಾಲ್ ಅಸೋಸಿಯೇಶನ್ ಉದ್ಘಾಟನಾ ಸಮಾರಂಭವು ಮೂಡುಬಿದಿರೆಯಲ್ಲಿ ಶನಿವಾರ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ. ವಿನಯ್ ಆಳ್ವ ಅಸೋಸಿಯೇಶನ್ನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ವಿನಯ್ ಆಳ್ವ, ‘ಒಬ್ಬ ವೈದ್ಯನಾಗಿ ವೈದ್ಯಕೀಯ ಸೇವೆಗೆ ನನ್ನ ಆದ್ಯತೆ. ಆದರೆ ಅದರ ಜೊತೆಗೆ ಕ್ರೀಡಾ ಸ್ಪೂರ್ತಿ ಒದಗಿಸುವ, ದೈಹಿಕ ಸಮತೋಲನ ಕಾಯ್ದುಕೊಳ್ಳಲು ನೆರವಾಗುವ ವಾಲಿಬಾಲ್ನಂತಹ ಕ್ರೀಡೆಗಳಿಗೂ ಪ್ರಾಮುಖ್ಯತೆ ಕೊಡಲಿಚ್ಛಿಸುತ್ತೇನೆ. ಈ ಹಿನ್ನೆಲೆಯಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ವಿನೂತನವಾಗಿ ಉದ್ಘಾಟನೆಗೊಂಡಿರುವ ವಾಲಿಬಾಲ್ ಅಸೋಸಿಯೇಶನ್ನ ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ’ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ನ ಅಧ್ಯಕ್ಷ ಸತೀಶ್ ಕುಮಾರ್ ಪುತ್ತೂರು, ಆರಂಭದಲ್ಲಿಯೇ ಡಾ. ಮೋಹನ್ ಆಳ್ವರ ಬೆಂಬಲ ಸಿಕ್ಕಿದ್ದು ನಮಗೆ ಆನೆ ಬಲ ಸಿಕ್ಕಂತಾಗಿದೆ. ಆಳ್ವರು ಮೊದಲಿನಿಂದಲೂ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಾ ಬಂದವರು. ಅವರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ತಾಲೂಕಿನ ವಾಲಿಬಾಲ್ ಅಸೋಸಿಯೇಶನ್ ನೇತೃತ್ವದಲ್ಲಿ ಒಳ್ಳೆಯ ಕ್ರೀಡಾಕೂಟಗಳನ್ನು ಆಯೋಜಿಸಿ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮುವಂತೆ ಮಾಡುವ…
