ಮೂಲ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅನುವು ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಮೇ 6: ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಅಂಗ ಸಂಸ್ಥೆಗಳು ಸಾರ್ವಜನಿಕರಿಂದ ವಿವಿಧ ರೀತಿಯ ಠೇವಣಿಗಳನ್ನು ಸಂಗ್ರಹಿಸಿದ್ದು ಅವುಗಳ ನಿಗಧಿತ ಅವಧಿ ಮುಗಿದ ನಂತರ ಅದರ ಹೂಡಿಕೆದಾರರಿಗೆ ಹಿಂತಿರುಗಿಸದೆ ವಂಚಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ವಂಚಿತ ಸಂಸ್ಥೆಯ ಆಸ್ತಿಯನ್ನು ಕರ್ನಾಟಕ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತಸಂರಕ್ಷಣಾ ಕಾಯ್ದೆಯಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದು, ಹರಾಜು ಪ್ರಕ್ರಿಯೆಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಲಾಗಿರುತ್ತದೆ. ನ್ಯಾಯಾಲಯದ ಆದೇಶದಂತೆ ಹರಾಜಿನಿಂದ ಬಂದ ಹಣವನ್ನು ಠೇವಣಿದಾರರಿಗೆ ವಿತರಿಸಲು ನ್ಯಾಯಾಲಯಕ್ಕೆ ಠೇವಣಿದಾರರ ವಿವರಗಳನ್ನು ಸಲ್ಲಿಸಬೇಕಾಗಿರುತ್ತದೆ. ಆದ್ದರಿಂದ ಮೈತ್ರಿ ಪ್ಲಾಂಟೇಷನ್ ಮತ್ತು ಹಾರ್ಟಿಕಲ್ಚರ್ ಮತ್ತು ಅದರ ಅಂಗ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿರುವ ಠೇವಣಿದಾರರು ಅವರ ಠೇವಣಿಗಳಿಗೆ ಸಂಬಂಧಿಸಿದಂತೆ ಸದರಿ ಸಂಸ್ಥೆಯವರು ನೀಡಿರುವ ಬಾಂಡ್/ಪಾಸ್ ಪುಸ್ತಕ ಇತ್ಯಾದಿ ಮೂಲ ದಾಖಲೆಗಳೊಂದಿಗೆ ಅರ್ಜಿಗಳನ್ನು ೩೦ ದಿನಗಳ ಒಳಗೆ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯ ನಂತರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ’ ಸುದ್ದಿ ಉಡುಪಿ: 2019-20 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಆಸಕ್ತ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗೇರು, ತೆಂಗು, ಕಾಳುಮೆಣಸು, ಅನಾನಸು, ಬಾಳೆ, ಕೊಕ್ಕೋ, ಮ್ಯಾಂಗೋ ಸ್ಟೀನ್, ರಾಂಬುಟಾನ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಲಭ್ಯವಿದೆ. ತೋಟಗಾರಿಕಾ ಬೆಳೆಗಳಲ್ಲಿ ರೋಗ/ ಕೀಟಗಳ ನಿಯಂತ್ರಣಕ್ಕೆ ಖರೀದಿಸಿದ ಸಸ್ಯ ಸಂರಕ್ಷಣಾ ಔಷಧಿಗಳಿಗೆ, ಸಸ್ಯ ಪೋಷಕಾಂಶಗಳಿಗೆ ಗೇರು, ತೆಂಗು ಹಾಗೂ ಕಾಳುಮೆಣಸು ಹಳೆ ತೋಟಗಳ ಪುನಶ್ಚೇತನಕ್ಕಾಗಿ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ, ಹಸಿರು ಮನೆ, ನೆರಳು ಪರದೆ ನಿರ್ಮಾಣಕ್ಕಾಗಿ ಸಣ್ಣ ಪ್ರಮಾಣದ ಸಸ್ಯಗಾರ ಸ್ಥಾಪನೆಗೆ, ತೆಂಗಿನಲ್ಲಿ ರೋಗ / ಕೀಟ ನಿಯಂತ್ರಣಕ್ಕಾಗಿ ಪರಿಕರಗಳ ಖರೀದಿಗೆ ಜೇನು ಕೃಷಿ ತರಬೇತಿಯೊಂದಿಗೆ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರಗಳ ಖರೀದಿಗೆ ಹಾಗೂ ಮಧುವನಗಳ ಸ್ಥಾಪನೆಗೆ ಸಹಾಯಧನ ಲಭ್ಯವಿದೆ. ತೋಟಗಾರಿಕೆಯಲ್ಲಿ ಬಳಸುವ ಯಂತ್ರಗಳ ಖರೀದಿಗೆ 20 HP ಕ್ಕಿಂತ ಕಡಿಮೆ ಸಾಮರ್ಥ್ಯದ ಟ್ರಾಕ್ಟರ್ ಖರೀದಿಗೆ, ಪ್ಯಾಕ್ ಹೌಸ್ ಹಾಗೂ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಂಡುಬರಬಹುದಾದ ಎಲ್ಲಾ ಸಮಸ್ಯೆಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಇರುವ ಅಡಚಣೆ ನಿವಾರಣೆಗೆ ಒಂದು ವಾರದೊಳಗೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ದೇಶಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಬರುವ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಸಿದ್ಧತೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವೆಡೆ ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಸಮರ್ಪಕ ರೀತಿಯಲ್ಲಿ ಪೂರ್ಣಗೊಳ್ಳದೇ ಮಳೆಗಾಲದಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ. ಸರಿಯಾದ ರಿಫ್ಲೆಕ್ಟರ್ ಹಾಗೂ ಫಲಕಗಳನ್ನು ಅಳವಡಿಸದೆ ಜೀವಕ್ಕೆ ಅಪಾಯ ಒದಗಬಹುದು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಕೂಡಲೇ ಕಾರ್ಯಪ್ರವೃತ್ತವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಹೆದ್ದಾರಿಗಳಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಅವರು ನಿರ್ದೇಶಿಸಿದರು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಡಿಪ್ಲೋಮ ಇನ್ ಅರ‍್ಚಿಟೆಕ್ಚರ್ ಸರ್ಟಿಫಿಕೇಟ್ ಕೋರ್ಸ್ ಮತ್ತು ಮೂರು ದಿನಗಳು ನಡೆಯಲಿರುವ ವಿಶುವಲ್ ಅರ್ಟ್ ತರಬೇತಿ ಕಾರ್ಯಾಗಾರಕ್ಕೆ ಎಂ.ಬಿ.ಎ ಸೆಮಿನಾರ್ ಹಾಲ್‌ನಲ್ಲಿ ಚಾಲನೆ ನೀಡಲಾಯಿತು. ಉದ್ಯಮಿ ಅಬ್ದುಲ್ ರವೂಫ್ ಪುತ್ತಿಗೆ ಕಾರ್ಯಾಗಾರವನ್ನು ಉದ್ಘಾಟಿಸಿ, ಮನುಷ್ಯನಿಗೆ ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಶಿಸ್ತು ಮತ್ತು ಸಂಯಮ ಅತ್ಯಂತ ಮಹತ್ತರ ಪಾತ್ರವನ್ನು ವಹಿಸುತ್ತದೆ. ಜಗತ್ತಿನ ಶ್ರೇಷ್ಠ ಕಟ್ಟಡಗಳಲ್ಲಿ ಒಂದಾದ ಬುರ್ಜಾ ಖಲೀಫ್ ಮತ್ತು ಏಫೇಲ್ ಟವರ್‌ನ ನೀರ್ಮಾಣದ ಹಿಂದೆ ಅವಿರತ ಶ್ರಮದ ಜೊತೆಗೆ ಶಿಸ್ತು ಇದೆ ಎಂಬುದನ್ನು ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಗಮನಿಸಬೇಕೆಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆವಹಿಸಿ ಮಾತನಾಡಿ, ಉದ್ಯೋಗದ ಅವಕಾಶ ಕಡಿಮೆ ಇದೆ ಎಂಬ ಮಾತು ಸತ್ಯಕ್ಕೆ ದೂರ, ಅದ್ದರಿಂದ ಸಿಕ್ಕ ಅವಕಾಶವನ್ನು ಸದುಪಯೋಗನ್ನು ಪಡಿಸಿಕೊಂಡು, ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗಿದೆ ಎಂದರು. ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಡಿಂಸ್, ವಿಭಾಗದ ಮುಖ್ಯಸ್ಥ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಅರ್.ಎಲ್ ಜಾಲಪ್ಪ ಇನ್ಸ್‌ಸ್ಟಿಟ್ಯೂಟ್ ಅಫ್ ಟೆಕ್ನಾಲಜಿ, ದೊಡ್ಡಬಳ್ಳಾಪುರದಲ್ಲಿ ನಡೆದ ವಿಟಿಯು ಅಂತರ್ ವಲಯ ಬಾಲ್ ಬ್ಯಾಡ್ಮಿಂಟನ್ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಚಾಂಪಿಯನ್‌ಶಿಪ್ ಮುಡಿಗೆರಿಸಿಕೊಳ್ಳುವ ಮೂಲಕ ಆಳ್ವಾಸ್ ಇನ್ಸ್‌ಸ್ಟಿಟ್ಯೂಟ್ ಅಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಹ್ಯಾಟ್ರಿಕ್ ಪ್ರಶಸ್ತಿಯನ್ನು ಪಡೆಯಿತು. ಫೈನಲ್‌ನಲ್ಲಿ ಮಹಿಳಾ ವಿಭಾಗದಲ್ಲಿ ಮಲ್ನಾಡ್ ಕಾಲೇಜ್ ಅಫ್ ಇಂಜಿನಿಯರಿಂಗ್, ಹಾಸನವನ್ನು ೩೫-೧೫, ೩೫-೧೨ ಅಂತರದಿಂದ ಮಣಿಸಿ ಪ್ರಶಸ್ತಿಯನ್ನು ತನ್ನದಗಿಸಿಕೊಂಡಿತು, ಪುರುಷರ ವಿಭಾಗದಲ್ಲಿ ಫೈನಲ್ ಅತ್ಯಂತ ರೋಚಕ ಘಟ್ಟವನ್ನು ತಲುಪಿದ್ದು , ಅತಿಥೇಯ ಅರ್.ಎಲ್ ಜಾಲಪ್ಪ ಇನ್ಸ್‌ಸ್ಟಿಟ್ಯೂಟ್ ಅಫ್ ಟೆಕ್ನಾಲಜಿ, ದೊಡ್ಡಬಳ್ಳಾಪುರ ಕಾಲೇಜ ಅನ್ನು ೩೫-೩೨, ೩೫-೨೮, ೩೫-೩೦ ಅಂಕಗಳೊಂದಿಗೆ ಸೋಲಿಸಿ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡಿತು. ವಿಜೇತರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಮ್ಯಾನೆಜಿಂಗ್ ಟ್ರಸ್ಟೀ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ತರಬೇತುದಾರ ಪ್ರವೀಣ್ ಮತ್ತು ದೈಹಿಕ ಶಿಕ್ಷಣ ನೀರ್ದೆಶಕ ದಿಲೀಪ್ ಶೆಟ್ಟಿ ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ’ ಸುದ್ದಿ ಕುಂದಾಪುರ: ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ 9ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಬುಧವಾರ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಜರುಗಿತು. ಬಿಲ್ಲವ ಸಮಾಜದ ಗುರು–ಹಿರಿಯದ ಸಮ್ಮುಖದಲ್ಲಿ 6 ಜೋಡಿ ವಿವಾಹಿತರಾದರು. ವಧೂವರರಿಗೆ ಉಚಿತವಾಗಿ ನೀಡಲಾದ ದೋತಿ, ಶಾಲು, ಪೇಟಾ, ರವಿಕೆ ಕಣ, ಧಾರೆ ಸೀರೆ, ಬಾಸಿಂಗ ಹಾಗೂ ಮಂಗಳ ಸೂತ್ರಗಳನ್ನು ದಾನಿ ಯಶೋಧಾ ಸುಭಾಷ್ ಪೂಜಾರಿ ಸಂಗಮ್ ವಿತರಿಸಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬಿಜೆಪಿ ಮುಖಂಡ ಕಿರಣ್ ಕುಮಾರ್ ಕೊಡ್ಗಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಮಕಿಶನ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಲಕ್ಷ್ಮೀ ಮಂಜು ಬಿಲ್ಲವ, ಶ್ರೀಲತಾ ಸುರೇಶ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಜ್ಯೋತಿ ಉದಯ್ ಪೂಜಾರಿ, ಸೂರ್ಗೋಳಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ಕೆ.ಮೋಹನ್‌ದಾಸ್ ಶೆಣೈ, ಶೇಖರ ಪೂಜಾರಿ ಹುಂಚಾರು ಬೆಟ್ಟು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ತನ್ನ ಅಣ್ಣನನ್ನೇ ಒಡಹುಟ್ಟಿದ ತಮ್ಮ ಕೊಲೆ ಮಾಡಿದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಬವಳಾಡಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬವಳಾಡಿ ಮೇಲ್ಮಕ್ಕಿಚೌಕಿ ನಿವಾಸಿ ನಾಗರಾಜ (47) ಕೊಲೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಆತನ ಸಹೋದರ ಸಂತೋಷ (20) ಕೊಲೆಗೈದ ಆರೋಪಿ. ಘಟನೆಯನ್ನು ಸಹಜ ಸಾವು ಎಂದು ಬಿಂಬಿಸಲು ಹೊರಟಿದ್ದು, ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಕೊಲೆಯ ಬಗ್ಗೆ ತಿಳಿದುಬಂದಿದ್ದು, ಆರೋಪಿ ಪರಾರಿಯಾಗಿದ್ದಾನೆ. ಆಗಿದ್ದೇನು?: ಬವಳಾಡಿ ಮೇಲ್ಮಕ್ಕಿಚೌಕಿ ನಿವಾಸಿಯಾದ ಕುಪ್ಪ ಕೊರಗ ಎಂಬುವವರಿಗೆ ೧೨ ಮಕ್ಕಳ ಪೈಕಿ ನಾಗರಾಜ ಹಾಗೂ ಸಂತೋಷ ಇಬ್ಬರು ಕೂಲಿ ಕೆಲಸ ಮಾಡಿ ಒಟ್ಟಿಗೆ ಬದುಕುತ್ತಿದ್ದರು. ಇಬ್ಬರು ಗುರುವಾರ ಆಲೂರಿನಲ್ಲಿ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬರುವಾಗ ಕುಡಿದು ಬಂದಿದ್ದರು. ರಾತ್ರಿ 9:30ರ ಸುಮಾರಿಗೆ ತಮ್ಮ ಸಂತೋಷ ಕೇವಲ ಒಳ ಉಡುಪಿನಲ್ಲಿ ಮನೆಯ ಸನಿಹದಲ್ಲಿ ತಿರುಗುತ್ತಿದ್ದು, ಇದನ್ನು ಆಕ್ಷೇಪಿಸಿದ ಅಣ್ಣ ನಾಗರಾಜನು, ಹೆಂಗಸರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮನೆಗಳಲ್ಲಿ, ಗುಡಿಗಳಲ್ಲಿ ನಡೆಸುವ ಅಲ್ಪಕಾಲದ ಆರಾಧನೆ ಸಾಂಕೇತಿಕ. ಉಳಿದ ಅವಧಿಯಲ್ಲಿ ಸಮಾಜದ ಎಲ್ಲರಲ್ಲಿರುವ ದೇವರ ಆರಾಧನೆ ನಡೆಸಬೇಕು. ದೇವರನ್ನು ಪುಷ್ಪಗಳಿಂದ ಪೂಜಿಸುವ ನಾವು ಸಹಜೀವಿಗಳನ್ನು ಅಹಿಂಸೆ, ಪ್ರೀತಿ, ದಯೆ, ಕರುಣೆಗಳೆಂಬ ಭಾವಪುಷ್ಪಗಳಿಂದ ಪೂಜಿಸಬೇಕು ಎಂದು ಉಡುಪಿ ಪೇಜಾವರ ಮಠದ ಶೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಉಳ್ಳೂರು ಗ್ರಾಮದ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನರಷ್ಟಬಂಧ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನಗೈದರು. ಗುಡಿಗೋಪುರಗಳಲ್ಲಿ ಮಾಡುವ ದೇವತಾರಾಧನೆಯಿಂದ ಪೂರ್ಣ ಫಲ ದೊರೆಯದು. ಎಲ್ಲ ಜೀವಿಗಳ ಹೃದಯದಲ್ಲಿ ದೇವರು ಇದ್ದಾನೆ ಎಂದು ಭಗವಂತನೇ ಭಗವದ್ಗೀತೆಯಲ್ಲಿ ಸಾರಿದ್ದಾನೆ. ಎಲ್ಲರಿಗೂ ಸುಖ, ಸಂತಸ ಬೇಕು. ಕಷ್ಟ, ದು:ಖ ಬೇಡ. ಆದರೆ ಒಬ್ಬ ತನ್ನ ಸುಖ, ಸಂತೋಷದ ಗಳಿಕೆಗಾಗಿ ನಡೆಸುವ ಕೃತ್ಯಗಳಿಂದ ಬೇರೆಯವರಿಗೆ ಕಷ್ಟ, ದು:ಖ ಆಗಬಾರದು. ಅದನ್ನು ಭಗವಂತ ಮೆಚ್ಚುವುದಿಲ್ಲ ಎಂಬ ಎಚ್ಚರವೂ ಎಲ್ಲರಿಗಿರಬೇಕು ಎಂದರು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕಿರಿಮಂಜೇಶ್ವರ : ಶುಭದಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ೨೦೧೮-೧೯ ನೇ ಸಾಲಿನಲ್ಲಿ ಅತ್ಯತ್ತಮ ಸರಾಸರಿ ಅಂಕಗಳೊಂದಿಗೆ ಬೈಂದೂರು ವಲಯದಲ್ಲಿ ಶೇಕಡಾ ೧೦೦ ಫಲಿತಾಂಶವನ್ನು ದಾಖಲಿಸಿರುತ್ತದೆ .ಈ ಸಂದರ್ಭದಲ್ಲಿ ಶುಭದಾ ಎಜ್ಯುಕೇಶನಲ್ ಟ್ರಸ್ಟಿನ ಸ್ಥಾಪಕ ಅಧ್ಯಕ್ಷರಾದ ಡಾ|| ಎನ್.ಕೆ. ಬಿಲ್ಲವ ಮತ್ತು ಸಲಹಾ ಸಮಿತಿಯ ಸದಸ್ಯರಾದ ರಾಜೀವ ಶೆಟ್ಟಿ ಇವರು ಶಾಲಾ ಮುಖ್ಯ ಶಿಕ್ಷಕರಾದ ರವಿದಾಸ ಶೆಟ್ಟಿ ಅವರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು. ಶಾಲೆಯ ನಿರ್ದೇಶಕರಾದ ಕೆ.ಪುಂಡಲೀಕ್ ನಾಯಕ್, ಸಂಯೋಜಕಿ ಗೀತಾದೇವಿ ಅಡಿಗ, ಸಂಚಾಲಕ ಶಂಕರ ಪೂಜಾರಿ, ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಐತಿಹಾಸಿಕ ಮಹತೋಭಾರ ಶ್ರೀ ಸೇನೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಮೇ.03ರಿಂದ ಮೊದಲ್ಗೊಂಡು ಮೇ.11ರ ತನಕ ಜರುಗಲಿದ್ದು, ಆ ಪ್ರಯುಕ್ತ ಶುಕ್ರವಾರ ಮಧ್ಯಾಹ್ನ ದೇವಳದ ತಂತ್ರಿ ಕೃಷ್ಣ ಸೋಮಯಾಜಿ ಆಚಾರ್ಯತ್ವದಲ್ಲಿ ಧ್ವಜಾರೋಹಣ ನೆರವೇರಿತು. ಬೆಳಿಗ್ಗೆ ದೇವಳದಲ್ಲಿ ಕಲಶಪ್ರತಿಷ್ಠೆ, ಕಂಕಣ ಧಾರಣೆಯ ನಂತರ ರುಜ್ಜು ಬಂಧನ ಮುಂತಾದ ಧಾರ್ಮಿಕ ವಿಧಾನಗಳು ನಡೆಯಿತು. ಈ ಸಂದರ್ಭ ದೇವಳದ ಅಧ್ಯಕ್ಷ ಚೆನ್ನಕೇಶವ ಉಪಾಧ್ಯಾಯ, ಅರ್ಚಕ ವೃಂದ, ಸ್ಥಳೀಯ ಜನಪ್ರತಿನಿಧಿಗಳು, ದೇವಳದ ಸಿಬ್ಬಂದಿವರ್ಗ ಹಾಗೂ ಊರಿನ ಹತ್ತು ಸಮಸ್ತರು ಭಾಗವಹಿಸಿದ್ದರು. ಮೇ.೯ರಂದು ಮನ್ಮಹಾರಥೋತ್ಸವ ಜರುಗಲಿದ್ದು, ರಥೋತ್ಸವದ ಪ್ರಯುಕ್ತ ಪ್ರತಿದಿನ ಸಂಜೆ ಅಪ್ಪಿಕಟ್ಟೆ ಉತ್ಸವ, ಬಿಯಾರಕಟ್ಟೆ ಉತ್ಸವ, ಜಟ್ಕನಕಟ್ಟೆ ಉತ್ಸವ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ, ಅವಭೃತೋತ್ಸವ, ನಗರೋತ್ಸವ ನಡೆಯಲಿದೆ. ಉತ್ಸವದ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
