ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ 3,000 ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿದಾಗಿ ಬಾಧಿತರಾಗಿದ್ದ ಸಮಾಜದ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021 ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ 3,000 ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ 22,000 ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು 6.60 ಕೋಟಿ ರೂ. ಮೀಸಲಿರಿಸಿದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಬಲಾಯಿಪಾದೆ ಜಂಕ್ಷನ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಇಲ್ಲಿ ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಆದಷ್ಟು ಶೀಘ್ರದಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಲಾಯಿಪಾದೆ ಜಂಕ್ಷನ್ ಬಳಿ ಸರ್ವೀಸ್ ರಸ್ತೆ ನಿರ್ಮಾಣದ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಯ ಕಾರಣದಿಂದ ಕುಂದಾಪುರ ಶಾಸ್ತಿ ಸರ್ಕಲ್, ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹಾಗೂ ಮಹೇಶ್ ಹಾಸ್ಪಿಟಲ್ ಬಳಿ ಮತ್ತು ಬಾರ್ಕೂರು ಕ್ರಾಸ್ಗಳಲ್ಲಿ ನಡೆಯುತ್ತಿದ್ದ ರಸ್ತೆ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿದ ಪರಿಣಾಮವಾಗಿ, ಈ ಪ್ರದೇಶದಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಇಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಉಡುಪಿಯಿಂದ ಬಲಾಯಿಪಾದೆ ಹಾಗೂ ಉದ್ಯಾವರಕ್ಕೆ ತೆರಳುವ ಮಾರ್ಗದಲ್ಲಿ, ಸರ್ವಿಸ್ ರಸ್ತೆ ಇಲ್ಲದ ಕಾರಣ, ಇಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುವುದರ ಜೊತೆಗೆ, ವಾಹನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಹಾಗೂ ಕೋವಿಡ್ನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸಮರ್ಪಕ ಪರಿಹಾರ ಧನ ವಿತರಿಸಬೇಕು ಎಂದು ಆಗ್ರಹಿಸಿ ಜನಸಾಮಾನ್ಯರ ಧ್ವನಿಯಾಗಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಮಂಗಳವಾರ ಇಲ್ಲಿನ ಶಾಸಕರ ಕಚೇರಿ ಎದುರು ಜನಾಗ್ರಹ ಆಂದೋಲನದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾದ ಹಿನ್ನೆಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸಾವನ್ನಪ್ಪುವಂತಾಗಿದೆ, ಸರ್ಕಾರದ ತಪ್ಪು ನಿರ್ಧಾರಗಳಿಂದಾಗಿಯೇ ಜನ ಸಂಕಷ್ಟಪಡುವಂತಾಗಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಒಂದು ಲಕ್ಷ ರೂ. ಪರಿಹಾರ ಒದಗಿಸುವುದಾಗಿ ಘೋಷಿಸಿದ್ದರು, ಅದು ಏನೇನು ಸಾಲದು, ಮೃತಪಟ್ಟ ಕುಟುಂಬಗಳಿಗೆ ಕನಿಷ್ಠ ಐದು ಲಕ್ಷ ರೂ. ಪರಿಹಾರಧನ ವಿತರಿಸಬೇಕು ಎಂದು ಆಗ್ರಹಿಸಿದರು. ದೇಶದಲ್ಲಿ ಸದ್ಯದಲ್ಲಿಯೇ ಕೊರೊನಾ ಮೂರನೇ ಅಲೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತಿನ ಹಲವು ದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಡಾನ್ ಬಾಸ್ಕೊ ಸಂಸ್ಥೆ ಗುಣಮಟ್ಟದ ಶಿಕ್ಷಣದ ಪ್ರತೀಕವಾಗಿದೆ. ಅಂತಹ ಸಂಸ್ಥೆ ತ್ರಾಸಿಯಂತಹ ಗ್ರಾಮೀಣ ಭಾಗದಲ್ಲಿ ಸಿಬಿಎಸ್ಸಿ ಪಠ್ಯಕ್ರಮದ ಸೀನಿಯರ್ ಸೆಕೆಂಡರಿ ಶಾಲೆ ತೆರೆದಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ನ ನಿರ್ದೇಶಕ ಪ್ರೊ. ಮ್ಯಾಥ್ಯೂ ಸಿ. ನೈನಾನ್ ಹೇಳಿದರು. ಅವರು ನೂತನ ಸೀನಿಯರ್ ಸೆಕೆಂಡರಿ ಶಾಲೆಯ 11ನೆ ತರಗತಿಯು ಈಚೆಗೆ ವರ್ಚುವಲ್ ಪ್ಲ್ಯಾಟ್ಫಾರ್ಮ್ನಲ್ಲಿ ಉದ್ಘಾಟನೆಗೊಳಿಸಿ ಮಾತನಾಡಿದರು. ಸಿಬಿಎಸ್ಇಯ 11 ಮತ್ತು 12ನೆ ತರಗತಿ ಶಿಕ್ಷಣವು ಅದೇ ಹಂತದ ಪಿಯುಸಿ ಶಿಕ್ಷಣಕ್ಕಿಂತ ಮೇಲ್ಮಟ್ಟದ್ದು. ಮಹತ್ವದ ಶೈಕ್ಷಣಿಕ ಮೈಲುಗಲ್ಲು ಎಂದು ಪರಿಗಣಿತವಾದ ಅದರ ವಿದ್ಯಾರ್ಥಿಯಾಗುವುದು ಜಾಣ ಆಯ್ಕೆಯೆನಿಸುತ್ತದೆ. ಅದರಲ್ಲಿ ಉತ್ತೀರ್ಣರಾದವರು ಐಐಟಿ, ಐಐಎಂನಂತಹ ಪ್ರತಿಷ್ಠಿತ ಶಿಕ್ಷಣಕ್ಕೆ ಸುಲಭದಲ್ಲಿ ಪ್ರವೇಶ ಪಡೆಯುತ್ತಾರೆ ಮತ್ತು ಶಿಕ್ಷಣ ಪಡೆದ ಬಳಿಕ ಮಹತ್ವದ ಸಾಧನೆ ಮಾಡುತ್ತಾರೆ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ ಎಂದ ಮ್ಯಾಥ್ಯೂ ನೈನಾನ್ ವಿದ್ಯಾರ್ಥಿಗಳು ಮುಂದೆ ಸಮಾಜಕ್ಕೆ…
ಕೋರೊನಾ ಒಂದನೆ ಎರಡನೇ ಅಲೆ ಎಲ್ಲ ಜನ ಸಾಮಾನ್ಯರ ಬದುಕಿನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ನಿತ್ಯ ಬದುಕಿನ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪರದಾಡುವಂತೆ ಪರಿಸ್ಥಿತಿ ನಿರ್ಮಾಣವಾಗಿರುವುದರಲ್ಲಿ ಸಂಶಯವಿಲ್ಲ. ಬಡ ಜನರು ಅನಾರೋಗ್ಯಕ್ಕೆ ತುತ್ತಾದಾಗ ದುಬಾರಿ ಬೆಲೆಯ ಔಷಧಿ, ಲ್ಯಾಬ್ ಟೆಸ್ಟಿಂಗ್ ನಂತಹ ವ್ಯವಸ್ಥೆಗಳು ಬಡವರಿಗೆ ಕಬ್ಬಿಣ ಕಡಲೆಯಾಗಿ ಪರಿಣಮಿಸುತ್ತದೆ. ಖಾಸಗಿ ಲಾಬ್ ಟೆಸ್ಟಿಂಗ್ ದೊಡ್ಡ ಹೊರೆಯೂ ಆಗುತ್ತದೆ. ಇದಕ್ಕೆ ಪರಿಹಾರ ಎಂಬಂತೆ ಕೋಟದ ಆಶ್ರಿತ್ ನರ್ಸಿಂಗ್ ಕಾಲೇಜಿನ ಅರೆ ವೈದ್ಯಕೀಯ ವಿದ್ಯಾರ್ಥಿನಿ ಕುಮಾರಿ ಶ್ವೇತಾ ಕುಂದರ್ ಸೂಚಿಸಿರುವ ಯೋಜನೆ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಜನೌಷಧ ಕೇಂದ್ರ ಕೇಂದ್ರ ಸರಕಾರದ ಜನಪರ ಯೋಜನೆಗಲ್ಲಿ ಒಂದು ಇದು ದೇಶದ ಬಹುತೇಕ ಬಡವರ್ಗದ ಜನರ ಪಾಲಿನ ಸಂಜೀವಿನಿಯಾಗಿದೆ. ದಿನದ/ವಾರದ/ತಿಂಗಳ ದುಡಿಮೆಯ ಹಣದ ಬಹುಪಾಲನ್ನು ಔಷಧಿಗಾಗಿ ಮೀಸಲಿಡುತ್ತಿದ್ದ ಮಧ್ಯಮ ವರ್ಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಔಷಧಗಳು ದೊರಕುವಂತಾಗಿದೆ. ಹಾಗೆಯೇ ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ವೈದ್ಯರು ಬರೆದುಕೊಡುವ ಲ್ಯಾಬ್ ಟೆಸ್ಟ್, ಎಕ್ಸರೇ, ಸ್ಕ್ಯಾನಿಂಗ್ ಪರೀಕ್ಷೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೋವಿಡ್-19 ಲಸಿಕಾ ಮಹಾಮೇಳದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಲಸಿಕಾ ಅಭಿಯಾನ ಕಾರ್ಯಕ್ರಮ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ರಾಜ್ಯ ಸರಕಾರ ಗುರುತಿಸಿದ ದುರ್ಬಲ ವರ್ಗದ ಗುಂಪಿನವರಿಗೆ ಹಾಗೂ ರಾಜ್ಯ ಕರೋನಾ ಮುಂಚೂಣಿ ಕಾರ್ಯಕರ್ತರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡು ಕರೋನಾವನ್ನು ಹೊಡೆದೊಡಿಸಬೇಕು. ಗಂಗೊಳ್ಳಿಯನ್ನು ಕರೋನಾ ಮುಕ್ತ ಗ್ರಾಮವನ್ನಾಗಿ ಮಾಡಲು ಎಲ್ಲರೂ ಆರೋಗ್ಯ ಇಲಾಖೆ ಹಾಗೂ ಗ್ರಾಪಂ.ಗೆ ಸಹಕಾರ ನೀಡಬೇಕು ಎಂದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ನಾಗರಾಜ ಖಾರ್ವಿ ಗುಡ್ಡೆಕೇರಿ, ಮಂತಿ ಶ್ರೀನಿವಾಸ ಖಾರ್ವಿ, ಪ್ರಶಾಂತ ಖಾರ್ವಿ, ಬಿ.ರಾಘವೇಂದ್ರ ಪೈ, ಬಿ.ಗಣೇಶ ಶೆಣೈ, ಬಿ.ಲಕ್ಷ್ಮೀಕಾಂತ ಮಡಿವಾಳ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಮಹಾಗಣಪತಿ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ ಯೋಗ ಶಿಕ್ಷಕ ಯೋಗೇಶ ನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ ಪೂಜಾರಿ ಜೆಡ್ಡು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಅಶೋಕ ಎನ್.ಡಿ., ಸಿದ್ಧಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರವೀಣ ಶೆಟ್ಟಿ, ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ ಶೆಟ್ಟಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಬಿಜೆಪಿ ಬೈಂದೂರು ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ಶಾಂತಿ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ವಿವಿಧ ಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋವಿಡ್-19 ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು. ಕಾರ್ಯಕ್ರಮ ವನ್ನು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ನಂದಿನಿ ಪ್ರಾಸ್ತಾವಿಕ ಮಾತುಗಳ್ನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳುತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಬೈಂದೂರು ಶಿಕ್ಷಕರು ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ತಾಲೂಕು ಹಿರಿಯ ಮೇಲ್ವಿಚಾರಕ ಸಂದೀಪ ಕಾರ್ಯಕ್ರಮ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಮಕ್ಕಳಿಗೆ ಕೋವಿಡ್ 3 ನೇ ಅಲೆಯಿಂದ ಯಾವುದೇ ತೊಂದರೆಯಾಗದ ಕುರಿತಂತೆ ತಕ್ಷಣದಿಂದಲೇ ಜಿಲ್ಲೆಯ ಎಲ್ಲಾ ಶಾಲಾ ವ್ಯಾಪ್ತಿಯಲ್ಲಿನ ಮಕ್ಕಳ ವಿವರಗಳನ್ನು ಸಂಗ್ರಹಿಸಿ, ಅವರ ವ್ಯಾಸಾಂಗ ಮಾಡುತ್ತಿರುವ ಶಾಲೆಯಲ್ಲಿಯೇ ಅವರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಿ, ತಪಾಸಣಾ ಸಂದರ್ಭದಲ್ಲಿ ಒಬ್ಬರು ಎಂ.ಬಿ.ಬಿಎಸ್ ವೈದ್ಯರು , ಆಯುಷ್ ವೈದ್ಯರು ಮತ್ತು ಮಕ್ಕಳ ತಜ್ಞರನ್ನು ತಂಡವಾಗಿ ನಿಯೋಜಿಸಿ, ಪ್ರತೀ ಗ್ರಾಮಗಳಲ್ಲಿನ ಶಾಲೆಗಳಿಗೆ ಭೇಟಿ ನೀಡಲು ಯೋಜನೆ ರೂಪಿಸಿ ಎಂದರು. ಮಕ್ಕಳ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಕ್ಕಳಲ್ಲಿನ ಅಪೌಷ್ಠಿಕತೆ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಿ , ಅಗತ್ಯವಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈಗಾಗಲೇ ಕೋವಿಡ್ ಲಾಕ್ಡೌನ್ ಅತ್ಯಂತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಉದ್ಯಮದಲ್ಲಿ ಖಾಸಗಿ ಸಾರಿಗೆ ವ್ಯವಸ್ಥೆ ಕೂಡ ಒಂದು. ಸರ್ಕಾರ ಉಡುಪಿ ಜಿಲ್ಲೆಗೆಲಾಕ್ಡೌನ್ ವಿನಾಯಿತಿ ನೀಡಿದ್ದರು ಸಹ ಖಾಸಗಿ ಬಸ್ ಮಾಲಕರು ತಮ್ಮ ಬಸ್ಸುಗಳನ್ನು ಪೂರ್ಣ ಪ್ರಮಾದಲ್ಲಿ ಕೋವಿಡ್ ನಿಯಮಗಳೊಂದಿಗೆ ಸಂಚಾರ ಪ್ರಾರಂಭಿಸಲು ಹಲವು ದಿನಗಳೇ ಬೇಕಾಗಬಹುದು ಅಲ್ಲಿಯ ತನಕ ಜನಸಾಮಾನ್ಯರಿಗೆ, ಖಾಸಗಿ ಸಂಸ್ಥೆಗಳಲ್ಲಿ ದುಡಿಯುವ ಮಹಿಳೆಯರಿಗೆ, ಗ್ರಾಮೀಣ ಪ್ರದೇಶದಿಂದ ಉದ್ಯೋಗದ ನಿಮಿತ್ತ ದೂರದ ಊರುಗಳಿಗೆ ಹೋಗುವವರಿಗೆ ಸಂಚಾರ ಕ್ಕೆ ತೀವ್ರವಾದ ತೊಂದರೆಯಾಗುವುದರಿಂದ ಸರ್ಕಾರ ಖಾಸಗಿ ಸಾರಿಗೆ ವ್ಯವಸ್ಥೆಯವರಿಗೆ ಸಂಚಾರ ಪ್ರಾರಂಭ ಮಾಡಲು ಉತ್ತೇಜನ ಕ್ರಮಗಳನ್ನು ಕೈಗೊಳ್ಳಬೇಕು ಅಥವಾ ಸಾರಿಗೆ ವ್ಯವಸ್ಥೆ ಸಮರ್ಪಕವಾಗುವವರೆಗೆ ಸರ್ಕಾರಿ ಬಸ್ ವ್ಯಸ್ಥೆಯನ್ನು ಉಡುಪಿ ಜಿಲ್ಲೆಯಾದ್ಯಂತ ಮಾಡಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.
