ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 13028 ರೆಗ್ಯೂಲರ್, 484 ರೆಗ್ಯೂಲರ್ ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು 14034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿಭದ್ರತೆಯಲ್ಲಿ, ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಪರೀಕ್ಷಾ ಸಿದ್ದತೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಯಾವುದೇ ಲೋಪಗಳಿಲ್ಲದಂತೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೇಂಜರ್ಸ್ ಘಟಕದ ಆಶ್ರಯದಲ್ಲಿ ಒಂದು ದಿನದ ಹೊರಾಂಗಣ ಕಾರ್ಯಕ್ರಮ ನಡೆಯಿತು. ರೇಂಜರ್ಸ್ ಘಟಕದ ಸುಮಾರು 28 ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿಗಳನ್ನು ನೆಡುವುದರ ಮೂಲಕ ಶಾಲಾ ಕೈತೋಟ ನಿರ್ಮಾಣ, ಶಾಲಾ ಪರಿಸರದ ಸ್ವಚ್ಛತೆ ಮುಂತಾದ ಕಾರ್ಯಕ್ರಮಗಳಲ್ಲಿ ಶ್ರಮದಾನ ಮಾಡಿದರು ಹಾಗೂ ಅಲ್ಲಿನ ವಿಶೇಷ ಮಕ್ಕಳ ಕುರಿತಾದ ಮಾಹಿತಿಯನ್ನು ಪಡೆದರು. ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು, ಗೌರವ ಶಿಕ್ಷಕಿ ಮನೋರಮ, ರೇಂಜರ್ಸ್ ಘಟಕದ ಲೀಡರ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜ್ಯೋತಿ ಪ್ರಸನ್ನ ಹಾಗೂ ಶಾಲೆಯ ಇತರ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾಲೇಜಿನ ವಾಣಿಜ್ಯ – ನಿರ್ವಹಣಾ ಸಂಘ ಮತ್ತು ಉದ್ಯಮಶೀಲತೆ ಕೇಂದ್ರದ ವತಿಯಿಂದ ಕೈಗಾರಿಕಾ ಭೇಟಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಇರುವ ಏಸ್ ಬಾಂಡ್ ಕಂಪೆನಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು. ಅದೇ ವೇಳೆಯಲ್ಲಿ ಏಸ್ ಬಾಂಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸಂದೀಪ್ ಅವರು ಕಂಪೆನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ವೀಣಾ ಭಟ್ ಮತ್ತು ಸ್ವಸ್ತಿ ಆರ್. ಶೆಟ್ಟಿ, ಉದ್ಯಮಶೀಲತೆ ಕೇಂದ್ರದ ಸಂಯೋಜಕರಾದ ಯೋಗೀಶ್ ಶಾನುಭೋಗ್ ಮತ್ತು ಧನಶ್ರೀ ಎಮ್. ಕಿಣಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವದ ಅಂಗವಾಗಿ ಗ್ರೀಷ್ಮಾ ಕಿಣಿ ಮಂಗಳೂರು ಇವರಿಂದ ಭಜನ ಗಂಗಾ ಭಜನೆ ಕಾರ್ಯಕ್ರಮ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಭವನದಲ್ಲಿ ಜರಗಿತು. ಹಾರ‍್ಮೋನಿಯಂನಲ್ಲಿ ಎಂ.ಮುಕುಂದ ಪೈ ಗಂಗೊಳ್ಳಿ, ಕೆ.ಕಾರ್ತಿಕ ಕಾಮತ್ ಕೋಟೇಶ್ವರ ತಬಲಾದಲ್ಲಿ ಮತ್ತು ಎನ್.ಅಜಿತ್ ನಾಯಕ್ ತಾಳದಲ್ಲಿ ಸಹಕರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಜಿ.ವೇದವ್ಯಾಸ ಕೆ.ಆಚಾರ್ಯ, ಎಚ್.ಸುನೀಲ್ ನಾಯಕ್, ಟಿ.ರತ್ನಾಕರ ಶೆಣೈ, ಗಣೇಶ ಕಿಣಿ ಕಾರ್ಯಕ್ರಮ ಉದ್ಘಾಟಿಸಿದರು. ಸುಧಾ ವಿ.ಪೈ ಹಾಗೂ ಎಂ.ರಾಮಕೃಷ್ಣ ಪೈ ಕಲಾವಿದರನ್ನು ಗೌರವಿಸಿದರು. ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ಸಂಸ್ಥೆಯ ಸದಸ್ಯರು, ಸಮಾಜಬಾಂದವರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದಲ್ಲಿ ಕೊಂಕಣ ಖಾರ್ವಿ ಸಮಾಜದವರು ಮಾ. 8 ರಿಂದ 10 ರ ವರೆಗೆ ಹೋಳಿ ಹಬ್ಬವನ್ನು ಆಚರಿಸಲಿದ್ದು, ಮಾರ್ಚ್ 10 ರಂದು ಹೋಳಿ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಾರ್ಚ್ 10 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹರಿ ಓಂ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಜರಗಿದ ಗಂಗೊಳ್ಳಿ ಜಿಎಸ್‌ಬಿ ಪ್ರೀಮಿಯರ್ ಲೀಗ್ ಪಂದ್ಯಾಟದಲ್ಲಿ ಗಂಗೊಳ್ಳಿಯ ವಿ.ಕೆ. ಪೊವಾಸ್ ತಂಡ ಪ್ರಥಮ ಸ್ಥಾನ ಗಳಿಸಿ ಹರಿಓಂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯಾಟದಲ್ಲಿ ವಿ.ಕೆ. ಪೊವಾಸ್ ತಂಡ ಗಂಗೊಳ್ಳಿಯ ಕಾರ್ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ ವಿ.ಕೆ. ಪೊವಾಸ್ ತಂಡ ತಾನಾಡಿದ ಎಲ್ಲಾ ಲೀಗ್ ಹಂತದ ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರೆ, ಕಾರ್ ಸೂಪರ್ ಕಿಂಗ್ಸ್ ತಂಡವು ವಿ.ವಿ. ಫೈಟರ‍್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಕಾರ್ ಸೂಪರ್ ಕಿಂಗ್ಸ್ ತಂಡದ ವಿಜೇತ ಪಡಿಯಾರ್ ಉತ್ತಮ ದಾಂಡಿಗ, ವಿ.ಕೆ. ಪೊವಾಸ್ ತಂಡದ ಪ್ರದೀಪ ಭಟ್ ಉತ್ತಮ ಎಸೆತಗಾರ ಮತ್ತು ವಿ.ಕೆ. ಪೊವಾಸ್ ತಂಡದ ಶ್ರೇಯಸ್ ಶೆಣೈ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪುರುಷ ಪ್ರಧಾನ ವ್ಯವಸ್ಥೆ ಬದಲಾಗಿದೆ. ಸಾಮಾಜಿಕವಾಗಿ ಮಹಿಳೆ ಬಹುಮುಖಿ ನೆಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವುದರ ಜತೆಗೆ ಯಶಸ್ಸನ್ನು ಕಂಡಿದ್ದಾಳೆ. ಮಹಿಳೆ ಹಠವಾದಿ ಮಾತ್ರವಲ್ಲ ಛಲವಾದಿ ಎಂದು ಜೇಸಿಐ 15 ವಲಯಾಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ ಹೇಳಿದರು . ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆ ಹಾಗೂ ಕುಂದಾಪುರ ಸಿಟಿ ಜೇಸಿಐ ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ‘ಸಮ್ಮಿಲನ’ ಕಾರ್ಯಕ್ರಮದಲ್ಲಿ ಮಾತನಾಡಿದರು . ಇದೇ ಸಂದರ್ಭದಲ್ಲಿ ಸಾರ್ವಜನಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಕುಂದಾಪುರದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಇಂದಿರಾ, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ| ಅಮ್ಮಾಜಿ, ಕಾಲೇಜಿನ ಕ್ರೀಡಾ ಪ್ರತಿಭೆ ತೃತೀಯ ಬಿ.ಕಾಂ. ಬಿ ವಿಭಾಗದ ರೂಪಾ ಶೆಟ್ಟಿ, ರಂಗಭೂಮಿ ಪ್ರತಿಭೆ ತೃತೀಯ ಬಿ.ಬಿ.ಎ. ಪೌರ್ಣಮಿ, ಶೈಕ್ಷಣಿಕ ಪ್ರತಿಭೆ ದ್ವಿತೀಯ ಬಿ.ಸಿ.ಎ. ಕಾವ್ಯ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾ| ಅಮ್ಮಾಜಿ ಅವರು ಮಾತನಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಹಾಗೂ ಪೂರ್ವ ಪ್ರಾಥಮಿಕ (ಹವೇ) ಶಾಲೆ ವತಿಯಿಂದ ದಾಖಲಾತಿ ಆಂದೋಲನ-ವಿಚಾರ ಸಂಕೀರ್ಣ ಡಾ.ಅಂಬೇಡ್ಕರ್ ಸಭಾಭವನದಲ್ಲಿ ವಠಾರದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ, ಕನ್ನಡ ಶಾಲೆ ಉಳಿಸಿ ಎಂಬ ಅಭಿಯಾನದಲ್ಲಿ ಪ್ರತಿ ಮನೆ ಮನೆಗೂ ಭೇಟಿ ನೀಡಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ನಡೆಯಲಿದೆ. ಪ್ರತಿಯೊಬ್ಬರೂ ಕನ್ನಡ ಶಾಲೆ ಉಳಿಸಿ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ದಿಲ್‌ಶಾದ್, ಪಲ್ಲವಿ, ಮೀನಾಕ್ಷಿ, ದೀಪಾ ಖಾರ್ವಿ, ನೇತ್ರಾವತಿ, ಆಶಾ ಖಾರ್ವಿ, ಅನಿತಾ ಖಾರ್ವಿ, ಲಕ್ಷ್ಮೀ, ತುಳಸಿ, ನಟರಾಜ್, ಸುಮಿತ್, ಶಾರದಾ ಮೊದಲಾದವರು ಉಪಸ್ಥಿತರಿದ್ದರು. ಗೌರವ ಶಿಕ್ಷಕಿ ಸುನೀತಾ ದಿನೇಶ್ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಟೀಚರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಕುಂದಾಪುರ ಇವರ ಸಂಯೋಜನೆಯ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಸಂಪೂರ್ಣ ಸಾಕ್ಷರತಾ ಅಭಿಯಾನ – 2020. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಿಂದ 10 ತಂಡದ ಭೋಧಕ/ಭೋಧಕೇತರ ಸಿಬ್ಬಂದಿಗಳನ್ನೊಳಗೊಂಡು ಊರ ಗಣ್ಯರ ಸಮಕ್ಷಮದಲ್ಲಿ, ಶ್ರೀ. ಕ್ಷೇತ್ರ ಚಕ್ರೇಶ್ವರಿ ಕೋಡಿ ಇಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಕೋಡಿ ಕುಂದಾಪುರ ಇವರ ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಇವರು ಮಾದಕ ವ್ಯಸನದಿಂದ ಮುಕ್ತ ಕೋಡಿ ನಿರ್ಮಾಣ ಆಗುವುದರೊಂದಿಗೆ ಬ್ಯಾರೀಸ್‌ನ ಶಿಕ್ಷಣದ ಫಲ ಸರ್ವರಿಗೂ ತಲುಪುವುದರ ಮೂಲಕ ಯಶಸ್ಸನ್ನು ಕಾಣಬೇಕಾದದ್ದು ಈ ಅಭಿಯಾನದ ಗುರಿ ಎಂದು ಪ್ರಾಸ್ತಾವಿಕವಾಗಿ ನುಡಿದರು. ಕುಂದಾಪುರ ಪುರಸಭಾ ಸದಸ್ಯೆ ಲಕ್ಷ್ಮೀಭಾಯಿ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಜನಜಾಗೃತಿ ಆಂದೋಲನದ ಸ್ಟಿಕ್ಕರ್ ಬಿಡುಗಡೆಗೊಳಿಸಿ ಅಭಿಯಾನಕ್ಕೆ ಶುಭ ಹಾರೈಸಿದರು. ಶ್ರೀ.ಕ್ಷೇತ್ರ ಚಕ್ರೇಶ್ವರಿಯ ಟ್ರಸ್ಟೀ ಸಂಜೀವ ಪೂಜಾರಿ ಇವರು ಬ್ಯಾರೀಸ್ ಸಮೂಹ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಅತ್ಯಂತ ಹಿಂದುಳಿದ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ವಿವಿಧ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರದ ಅನುದಾನ ಒದಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಗಂಗೊಳ್ಳಿ ಮುಖ್ಯರಸ್ತೆ ಕಾಂಕ್ರೀಟಿಕರಣಕ್ಕೆ 1.47 ಕೋಟಿ ರೂ. ಮಂಜೂರಾಗಿದ್ದು, ಅತೀ ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ. ಈ ಭಾಗದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಇದರ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುವುದು. ಮಳೆಗಾಲದ ನೀರು ಹರಿದು ಹೋಗುವ ಗೋಧಿ ತೋಡು ಅಭಿವೃದ್ಧಿಗೆ ಸರಕಾರದಿಂದ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಗ್ರಾಮದ ಶ್ರೀ ವೀರೇಶ್ವರ ದೇವಸ್ಥಾನದ ಬಳಿಯಿಂದ ಗುಡ್ಡೆಕೇರಿ ಸಂಪರ್ಕ ರಸ್ತೆಯ ಸುಮಾರು 35 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ…
