Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ಬಳಿಕವೂ ಹಿಂದಿನ ಸರಕಾರದಂತೆ ಜನರಿಗೆ ನೀಡಿರುವ ಭರವಸೆಯನ್ನು ಪ್ರಾಮಾಣಿಕವಾಗಿ ಈಡೇರಿಸಲಾಗುತ್ತಿದೆ. ಆದರೆ ಬಿಜೆಪಿ ಮಾತ್ರ ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ತೂರು ಕಂಚಿನಕೊಡ್ಲುವಿನಲ್ಲಿ ಸೋಮವಾರ ಜರುಗಿದ ಕಾಂಗ್ರೆಸ್ – ಜೆಡಿಎಸ್ ಪಕ್ಷ ಚುನಾವಣಾ ಪ್ರಚಾರದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದು, ಅಭಿವೃದ್ಧಿ ಹಾದಿಯಲ್ಲಿಯೇ ಸಾಗಿದೆ. ಕಳೆದ ಅರವತ್ತು ವರ್ಷಗಳಲ್ಲಿ ವಿವಿಧ ರಂಗದಲ್ಲಿ ದೇಶ ಪ್ರಗತಿಯನ್ನು ಸಾಧಿಸಲು ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದಿದೆ. ಬಿಜೆಪಿ ಜನರನ್ನು ಒಂದು ಭಾರಿ ಮರಳು ಮಾಡಬಹುದು ಆದರೆ ಪ್ರತಿ ಭಾರಿಯೂ ಮರಳು ಮಾಡಲು ಸಾಧ್ಯವಿಲ್ಲ. ಈ ಭಾರಿ ಜನರು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಬಹುಮತದಿಂದ ಗೆಲ್ಲಿಸಲಿದ್ದಾರೆ…

Read More

ವಿಜಯ ಸಂಕಲ್ಪ ಪಾದಯಾತ್ರೆ ಜೊತೆಯಾಗಿ ಹೆಜ್ಜೆ ಹಾಕಿದ ನಾಯಕರು ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಸ್ತ್ರಿ ವೃತ್ತದಿಂದ ಮುಖ್ಯರಸ್ತೆಯಲ್ಲಿ ಸೋಮವಾರ ಸಂಜೆ ನಡೆದ ಬಿಜೆಪಿ ವಿಜಯ ಸಂಕಲ್ಪ ಪಾದಯಾತ್ರೆಯಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಜೊತೆಯಾಗಿ ಹೆಜ್ಜೆಹಾಕಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದರು. ಪಾದಯಾತ್ರೆ ಉದ್ಘಾಟಿಸಿದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸುದ್ದಿಗಾರರ ಜತೆ ಮಾತನಾಡಿ ಶೋಭಾ ಗೋಬ್ಯಾಕ್ ಎನ್ನೋದು ಟಿಕೆಟ್ ಆಕಾಂಕ್ಷಿಗಳ ಹುನ್ನಾರ. ಕಳೆದ ವಿಧಾನ ಸಭೆ ಚುನಾವಣೆ ಸಮಯದಲ್ಲಿ ವಿರೋಧಿಸಿದ ಹತ್ತಾರು ಜನ ಶೋಭಾ ಗೋಬ್ಯಾಕ್ ಎನ್ನುವ ಹುಯಿಲೆಬ್ಬಿಸಿದ್ದಾರೆ. ಇದರಿಂದ ಶೋಭಾ ಕರಂದ್ಲಾಜೆ ಗೆಲವು ತಡೆಯಲು ಆಗೋದಿಲ್ಲ. ಜಾತಿ ಸಂಘಟನೆ ಹೆಸರಲ್ಲಿ ಮತಕೇಳುವುದಕ್ಕೆ ಇದೇನು ಸಂಘಟನೆ ಚುನಾವಣೆಯಲ್ಲ. ರಾಷ್ಟ್ರ ನಿರ್ಮಾಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಚುನಾವಣೆ ಜಾತಿ ಆಧಾರಿತ ಮತ ಯಾಚನೆ…

Read More

ಕುಂದಾಪ್ರ ಡಾಟ್ ಕಾಂ’ ಸುದ್ದಿ ಬೈಂದೂರು: ಇಲ್ಲಿನ ಪ್ರಥಮ ಶಾಪಿಂಗ್ ಮಾಲ್ ’ರುಪೀ ಮಾಲ್’ ಎ.೬ರ ಯುಗಾದಿಯಂದು ಬೈಂದೂರು ಮುಖ್ಯರಸ್ತೆಯ ಸಿಟಿ ಪಾಯಿಂಟ್‌ನಲ್ಲಿ ಶುಭಾರಂಭಗೊಂಡಿದ್ದು, ಸಂಸ್ಥೆಯ ಅಧಿಕೃತ ರೂಪದರ್ಶಿಯಾಗಿ ಕಾಣಿಸಿಕೊಳ್ಳಲು ಬೈಂದೂರು ಸುತ್ತಲಿನ ಯುವತಿಯರನ್ನು ಆಹ್ವಾನಿಸಿದ್ದು, ಬ್ಯೂಟಿ ಬೈಂದೂರು ಸ್ವರ್ಧೆಯನ್ನು ಆಯೋಜಿಸಿದೆ. 18 ರಿಂದ 25 ವರ್ಷದ ಸುಂದರ ಯುವತಿಯರು ’ಬ್ಯೂಟಿ ಬೈಂದೂರು’ ಸ್ವರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಸ್ವರ್ಧೆಯ ವಿಜೇತರ ಪೋಟೋಗಳು ಸಂಸ್ಥೆಯ ಮುದ್ರಣ ಮತ್ತು ಹೊರಾಂಗಣ ಜಾಹೀರಾತು ಫಲಕಗಳಲ್ಲಿ ಒಂದು ವರ್ಷದ ಅವಧಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೇ ಸ್ವರ್ಧೆಯಲ್ಲಿ ವಿಜೇತರಾದವರಿಗೆ ರೂ. 10,000ದ ಗಿಫ್ಟ್ ವೋಚರ್ ಹಾಗೂ ರನ್ನರ್ ಅಪ್ ಆಗುವವರಿಗೆ ರೂ.5000ದ ಗಿಫ್ಟ್ ವೋಚರ್ ಬಹುಮಾನವಾಗಿ ನೀಡಲಾಗುತ್ತದೆ. ಆಸಕ್ತ ಯುವತಿಯರು 9611917204 ಸಂಖ್ಯೆಗೆ ವಾಟ್ಸಪ್ ಮೂಲಕ ಒಂದು ಕ್ಲೂಸಪ್ ಪೋಟೋ ಹಾಗೂ ಒಂದು ಪುಲ್ ಸೈಜ್ ಪೋಟೋವನ್ನು ಎಪ್ರಿಲ್ 30ರ ಒಳಗೆ ಕಳುಹಿಸಬಹುದಾಗಿದೆ. ಮೊದಲ ಸುತ್ತಿನಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸಲು ಕರೆಮಾಡಿ ತಿಳಿಸಲಾಗುತ್ತದೆ. ಎರಡನೇ ಸುತ್ತಿನಲ್ಲಿ ಆಯ್ಕೆಯಾಗುವ 10…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ರಹ್ಮಾವರದಿಂದ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ (42) ಭಾನುವಾರ ಸಂಜೆ ಕರ್ತವ್ಯ ನಿಮಿತ್ತ ಬ್ರಹ್ಮಾವರದಿಂದ ಬರುತ್ತಿದ್ದ ವೇಳೆ ಮಾಬುಕಳ ಬ್ರಿಡ್ಜ್ ಬಳಿ ಅಪಘಾತ ನಡೆದಿದ್ದು ಟೆಂಪೋ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದ. ಕುಂದಾಪ್ರ ಡಾಟ್ ಕಾಂ ಸುದ್ದಿ. ಅಪಘಾತದಿಂದ ಚಂದ್ರಶೇಖರ್ ರಸ್ತೆಗೆ ಬಿದ್ದು ಕುತ್ತಿಗೆ, ತಲೆಗೆ ಗಂಭೀರ ಗಾಯಗಳಾಗಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಯಾರೂ ಕೂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿರಲಿಲ್ಲ. ಅದೇ ವೇಳೆ ಉಡುಪಿಯಿಂದ ಚುನಾವಣಾ ವಿಚಾರದಲ್ಲಿ ಸಭೆ ಮುಗಿಸಿ ಆ ಮಾರ್ಗವಾಗಿ ಬರುತ್ತಿದ್ದ ಕುಂದಾಪುರ ಪಿಎಸ್ಐ ಹರೀಶ್ ಆರ್, ಹಾಗೂ ಚಾಲಕ ಲೋಕೇಶ್ ಮತ್ತು ಸಿಬ್ಬಂದಿಗಳು ಕೂಡಲೇ ಚಂದ್ರಶೇಖರ್ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದರು. ಕಳೆದ ಇಪ್ಪತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯಲ್ಲಿ ಹಿಂದೂಳಿದ ವರ್ಗದ ಮತದಾರರನ್ನು ಓಲೈಸುತ್ತಿರುವ ಬಿಜೆಪಿ ಪಕ್ಷ ಹಿಂದೂಳಿದ ವರ್ಗದವರ‍್ಯಾರನ್ನೂ ಅಭ್ಯರ್ಥಿಯನ್ನಾಗಿಸಿಲ್ಲ. ಓಟಿಗಾಗಿ ಮಾತ್ರ ಹಿಂದೂಳಿದ ವರ್ಗದವರನ್ನು ದಾಳವಾಗಿಸಿಕೊಂಡು ಇಡೀ ಸಮುದಾಯಕ್ಕೆ ಅನ್ಯಾಯ ಎಸಗುತ್ತಿದೆ. ಹಿಂದುತ್ವ, ಸೇನೆ ಮುಂತಾದ ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಸ್ವಂತ ವರ್ಚಸ್ಸಿಲ್ಲದೇ ಹೆಣಗಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆರೋಪಿಸಿದರು. ಅವರು ಸೋಮವಾರ ಕುಂದಾಪುರದಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಕರಾವಳಿಯ ನಾಲ್ಕು ಸಂಸದರ ಪೈಕಿ ಮೂರು ಸೀಟನ್ನು ಹಿಂದೂಳಿದ ವರ್ಗದವರಿಗೆ ನೀಡಿದೆ. ನರೇಂದ್ರ ಮೋದಿ ವಾರಣಾಸಿಯಲ್ಲಿ ಸ್ವರ್ಧೆ ಮಾಡುತ್ತಿದ್ದಾರೆ. ಆದರೆ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಲ್ಲಿಯೂ ಮೋದಿಗೆ ಓಟು ನೀಡಿ ಎನ್ನುತ್ತಿದ್ದಾರೆ. ಮೋದಿಗೆ ಓಟು ನೀಡಿ ಎನ್ನುವ ಅಭ್ಯರ್ಥಿಗಳಿಗೆ ಸ್ವಂತ ವರ್ಚಸ್ಸಿಲ್ಲವೇ. ಐದು ವರ್ಷ ಉಡುಪಿ ಚಿಕ್ಕಮಂಗಳೂರಿನಲ್ಲಿ ಅಭ್ಯರ್ಥಿಯಾಗಿದ್ದವರು ತಮ್ಮ ಹಾಗೂ ಸರಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: 2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಶೇ. 92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.90.91 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಶೇ. 83.31ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.51.42 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್,ಆರ್ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ. ರಾಜ್ಯದ 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ 80 ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. 4,17,573 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ ಎಂದು ಕಾರ್ಯದರ್ಶಿ ಎಸ್,ಆರ್ ಉಮಾಶಂಕರ್ ತಿಳಿಸಿದ್ದಾರೆ, ಮಧ್ಯಾಹ್ನ 12 ಗಂಟೆ ನಂತರ http://kseeb.kar.nic.in ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ. ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂವಿಧಾನ ತಿದ್ದುವ ಕೆಲಸ ಮಾಡದೆ, ಸಂವಿಧಾನದ ಆಶಯದಂತೆ ಸರ್ಕಾರಗಳು ಕೆಲಸ ಮಾಡಬೇಕು. ಅಂಬೇಡ್ಕರ್ ದೂರದೃಷ್ಟಿತ್ವದಲ್ಲಿ ರಚಿಸಿದ ಸಂವಿಧಾನ ಎಲ್ಲಾ ಕಾಲಕ್ಕೂ ಅನ್ವಯವಾಗುತ್ತಿದ್ದು, ಅಧಿಕಾರಿಕ್ಕೆ ಬಂದ ಯಾವುದೇ ಸರ್ಕಾರವಾಗಲಿ ಅಂಬೇಡ್ಕರ್ ಆಶಯದಂತೆ ಕೆಲಸ ಮಾಡಲಿ ಎಂದು ಕುಂದಾಪುರ ಬಾರ್ ಅಸೋಶಿಯೇಶನ್ ಅಧ್ಯಕ್ಷ ಎಸ್.ನಿರಂಜನ್ ಹೆಗ್ಡೆ ಸಟ್ವಾಡಿ ಅಭಿಪ್ರಾಯಪಟ್ಟರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನಾ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಕುಂದಾಪುರ ತಾಲೂಕು ಪಂಚಾಯಿತಿ ಮುಂಭಾಗದಲ್ಲಿ ಭಾನುವಾರ ನಡೆದ ಸಾಮಾಜಿಕ ಸಮಾನತಾ ಸಮಾವೇಶ ಹಾಗೂ ಸನ್ಮಾನ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಬೇರಾವ ದೇಶದಲ್ಲೂ ಕಂಡುಬಾರದ ಶ್ರೇಷ್ಠ ಸಂವಿಧಾನ ಕೊಟ್ಟ ಅಂಬೇಢ್ಕರ್ ವಿಶ್ವ ಮಾನವರಾಗಿ ಗುರುಸಿಕೊಂಡಿದ್ದಾರೆ. ಶಿಕ್ಷಣದ ಮಹತ್ವ ಅರಿತ ಅಂಬೇಡ್ಕರ್ ತಾವು ಹತ್ತು ಹಲವು ಪದವಿ ಪಡೆಯುವ ಮೂಲಕ ಸಮಾಜ ಸುಧಾರಣೆಗೆ ಶಿಕ್ಷಣವೇ ದಾರಿ ಎಂದು ಪ್ರತಿಪಾಧಿಸಿದರು. ಶಿಕ್ಷಣದ ಮೂಲಕ ಸಮಾಜದ ವೈರುಧ್ಯ ದೂರ ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು:  ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು, ಉಪ್ಪುಂದ ವಲಯದ ವತಿಯಿಂದ ಶ್ರೀ ರಾಮ ನವಮಿ ಆಚರಣೆಯನ್ನು ಮಹಿಳಾ ವೇದಿಕೆಯಿಂದ ಲಲಿತ ಸಹಸ್ರನಾಮ ಪಠಣ, ಪ್ರವಚನ, ಭಜನೆ ಸಹಿತ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಷ್ಣುವಿನ ಅವತಾರವಾದ ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ಸಾಮಾನ್ಯ ಮನುಷ್ಯನಂತೆ ಬದುಕಿನ ಕಷ್ಟಕಾರ್ಪಣ್ಯಗಳನ್ನು ಎದುರಿಸಿ, ಜೀವನ ಮೌಲ್ಯಗಳ ಆದರ್ಶ ಪರಂಪರೆಯನ್ನು ಸ್ಥಾಪಿಸಿ ಜಗದ್ವಂದ್ಯನಾಗಿದ್ದಾನೆ. ಪ್ರಭು ಶ್ರೀ ರಾಮಚಂದ್ರನ ಪಿತೃವಾಕ್ಯ ಪರಿಪಾಲನೆ, ರಾಜಧರ್ಮ ಪಾಲನೆ,ಪ್ರಜಾ ವಾತ್ಸಲ್ಯ,ಸತ್ಯ ನಿಷ್ಠತೆಯೇ ಮೊದಲಾದ ಅನುಕರಣೀಯ ನಡೆ-ನುಡಿಗಳು ಯುಗ-ಯುಗಗಳವರೆಗೆ ಮನುಕುಲಕ್ಕೆ ಧರ್ಮ ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುತ್ತಿರುತ್ತದೆ ಎಂದು ಧಾರ್ಮಿಕ ಪ್ರವಚನ ಮಾಡಿದ ಭಟ್ಕಳದ ಶ್ರೀ ಸುಬ್ರಹ್ಮಣ್ಯ ಭಟ್ಟರು ನುಡಿದರು. ಕಾರ್ಯಕ್ರಮದ ಪ್ರಾಯೋಜಕತ್ವವನ್ನು ನಿರ್ವಹಿಸಿದ ವೇದಮೂರ್ತಿ ಶ್ರೀ ಕೃಷ್ಣಮೂರ್ತಿ ನಾವಡ ದಂಪತಿಗಳನ್ನು ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಶಾಂತಿ ಮಂತ್ರ ಪಠಣ, ಮಂಗಳಾರತಿ ಮತ್ತು ಲಘು ಉಪಹಾರದೊಂದಿಗೆ ಸಮಾಪ್ತಗೊಂಡ ಸಮಾರಂಭ ವಲಯಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅನಿಷ್ಟ ಪದ್ದತಿಯನ್ನು ಮೌನ ಹಾಗೂ ರಕ್ತ ರಹಿತಿ ಕ್ರಾಂತಿ ಮೂಲಕ ತೊಡದು ಹಾಕಿದ ಹಿರಿಮೆ ಡಾ. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಮೇಲು, ಕೇಳು, ಜಾತಿ ವ್ಯವಸ್ಥೆ ತೊಡೆದು ಹಾಕಲು ಶಿಕ್ಷಣದಿಂದ ಮಾತ್ರ ಸಾಧ್ಯ ಎನ್ನೋದು ಅಂಬೇಡ್ಕರ್ ನಂಬಿಕೆಯಾಗಿದ್ದು, ಅದಕ್ಕಾಗಿ ಸಂಘಟನೆ ಮೂಲಕ ಸಂಘರ್ಷವಿಲ್ಲದೆ ಸಾಧಿಸಬೇಕಾಗಿದೆ ಎಂದು ಕುಂದಾಪುರ ಸಹಾಯಕ ಆಯುಕ್ತ ಡಾ. ಎಸ್. ಎಸ್. ಮಧುಕೇಶ್ವರ್ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ, ಕುಂದಾಪುರ ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘಟನೆಗಳ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಭಾನುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಮಾತನಾಡಿದರು. ಡಾ.ಆಂಬೇಡ್ಕರ್ ಪಡೆದಷ್ಟು ಪದವಿ, ಪಿಹೆಚ್‌ಡಿ ಬೇರಾರು ಪಡೆದಿಲ್ಲ ಎಂದ ಅವರು, ಬ್ರಿಟಿಷ್ ಸರ್ಕಾರದ ವಿರೋಧ ಕಟ್ಟಿಕೊಳ್ಳದೆ ಅವರೊಟ್ಟಿಗೆ ಇದ್ದು ಸಮಾಜಿಕ ನ್ಯಾಯ ಕೊಡಿಸುವಲ್ಲಿ ಅಂಬೇಡ್ಕರ್ ಸಫಲರಾದರು. ಸಮಾಜದ ದೀನ,ದಲಿತರ ಏಳಿಗೆಯ…

Read More

ಸುನಿಲ್ ಹೆಚ್. ಜಿ., ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ,ಎ.13: ತಹರೇವಾರಿ ಹಾಡು, ಡೈಲಾಗ್‌ಗಳಿಗೆ ಲಿಪ್‌ಸಿಂಕ್ ಮಾಡಿ, ನಟನಾ ಕೌಶಲ್ಯ ಪ್ರದರ್ಶಿಸುವ ವಿಡಿಯೋ ಹಂಚಿಕೊಳ್ಳಲೆಂದೇ ಇರುವ ಟಿಕ್‌ಟೊಕ್ ಸದ್ಯ ಯುವಕ ಯುವತಿಯರ ನೆಚ್ಚಿನ ಆ್ಯಪ್‌ಗಳಲ್ಲೊಂದು. ಇದೇ ಆ್ಯಪ್‌ ಮೂಲಕ ಕುಂದಾಪುರದ ಯುವತಿಯೋರ್ವಳು ಕುಂದಗನ್ನಡ ಹಾಡಿಗೆ ಮಾಡಿದ ವಿಡಿಯೋವೊಂದು ಈಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸುದ್ದಿಯಲ್ಲಿದ್ದಾಳೆ. ಕುಂದಾಪುರ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಕವನ ಎನ್ನುವ ಯುವತಿ ಕುಂದಾಪುರದ ಕ್ರಶ್ ಎಂದೆನಿಸಿಕೊಂಡಿದ್ದು, ಆಕೆಯ ವಿಡಿಯೋಗಳು ನಿನ್ನೆಯಿಂದ ಫೇಸ್ಬುಕ್ ಹಾಗೂ ವಾಟ್ಸ್‌ಪ್ ಸ್ಟೇಟಸ್‌ಗಳಾಗುತ್ತಿರುವುದಲ್ಲದೇ, ಭರ್ಜರಿ ಶೇರ್ ಆಗುತ್ತಿದೆ. ಕವನ ಜಾಗ್ವಾರ್ ಎಂಬ ಪ್ರೊಪೈಲ್ ಮೂಲಕ ಅವರು ಟಿಕ್‌ಟೊಕ್ ವಿಡಿಯೋ ಮಾಡಿದ್ದಾರೆ.  ಕುಂದಾಪ್ರ ಡಾಟ್ ಕಾಂ ವರದಿ. ಇತ್ತಿಚಿಗೆ ಕುಂದಾಪುರದ ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಅವರು ನಿರ್ದೇಶಿಸಿದ್ದ ಕುಂದಾಪುರ ಕನ್ನಡದ ’ಹ್ವಾಯ್ ಬನಿಯೆ ಉಂಬುಕ್ ಹ್ವಾಪ’ ಆಲ್ಬಂ ಸಾಂಗ್ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಕವನ ಅವರು ಅದರ ಸಾಹಿತ್ಯದ ತುಣುಕಿಗೆ ಟಿಕ್‌ಟೊಕ್‌ನಲ್ಲಿ…

Read More