ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಬದುಕಿಗೆ ವಿಮುಖವಾಗಿ ಕಾರಂತರು ಇದ್ದವರಲ್ಲ. ಕಾರಂತರನ್ನು ಚಿರಸ್ಥಾಯಿಯನ್ನಾಗಿ ಉಳಿಸಿಕೊಳ್ಳುವುದಕ್ಕೆ ಸಂಘ ಸಂಸ್ಥೆಗಳನ್ನು ಕಟ್ಟುವ ಅಗತ್ಯವಿಲ್ಲ. ಅವರ ಸಾಹಿತ್ಯ ಕೃತಿಗಳೇ ಅವರನ್ನು ಚಿರಾಯುವಾಗಿ ಉಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಮ್ ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವರಾಮ ಕಾರಂತ ಪ್ರಶಸ್ತಿ, ಶಿವರಾಮ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕೋಟ ಶಿವರಾಮ ಕಾರಂತರು ಸಾಹಿತ್ಯ ಕ್ಷೇತ್ರದಲ್ಲಿ ಪ್ರಭಾವಿಸಿದ ಪರಿ ದೊಡ್ಡದು. ವಿಚಾರ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ಕಾರಂತರು. ಅವರದ್ದು ಅಂಕುಶವಿಲ್ಲದ ವೈಚಾರಿಕ ಪ್ರಜ್ಞೆ. ಎಂದಿಗೂ ಜಾತಿ, ಧರ್ಮವನ್ನು ಭಿನ್ನತೆಯನ್ನು ಬೆಂಬಲಿಸಿದವರಲ್ಲ. ಕಾರಂತರ ಚಿಂತನೆ, ಸಾಹಿತ್ಯ ಎಂದಿಗೂ ಪ್ರಸ್ತುತ. ಅವರ ಜೀವನಾದರ್ಶವೇ ನಮ್ಮ ಬದುಕಿಗೆ ಪಾಠ ಎಂದರು. ಶಿವರಾಮ ಕಾರಂತ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಹಿರಿಯ ಸಾಹಿತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಬ್ಯಾಂಕಿಂಗ್ ಫೌಂಡೇಶನ್ ಕೋರ್ಸ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾದ ರಾಧೇಶ್ ಕಾಮತ್ ಅಸಿಸ್ಟೆಂಟ್ ಬ್ಯಾಂಕ್ ಮ್ಯಾನೇಜರ್ ಬಾಗಲಕೋಟೆ ಇವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ಮುಖ್ಯಸ್ಥರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹೆಣ್ಣು ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿಯೇ ವಿವಿಧ ನೆಲೆಯಲ್ಲಿ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು. ಪುರುಷ ಪ್ರಧಾನ ವ್ಯವಸ್ಥೆ, ಸಾಮಾಜಿಕವಾಗಿ ಮಹಿಳೆ ಬಹುಮುಖಿ ನೆಲೆಯಲ್ಲಿ ತನ್ನನ್ನು ಗುರುತಿಸಿಕೊಂಡು ಆದರ್ಶ ನಾರಿಯಾಗಿ ಬಾಳಬೇಕು ಎಂದು ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿ ರೇಣುಕಾ ಆರ್.ನಾಯಕ್ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಜರಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿಯರಾದ ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ಭೂದೇವಿ ಶುಭ ಹಾರೈಸಿದರು. ಸಾರ್ವಜನಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಗಂಗೊಳ್ಳಿ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೇಖಾ ಕೆ.ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ, ಸಹಶಿಕ್ಷಕ ನಾರಾಯಣ ಉಪಾಧ್ಯಾಯ, ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್, , ಜಿ.ಈಶ್ವರ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ದರ್ಶನವನ್ನು ಪಡೆಯುತ್ತಿದ್ದು, ಪ್ರಸ್ತುತ ಕೊರೋನಾ ವೈರಸ್ ಸೋಂಕು ದೇಶ ವಿದೇಶದಲ್ಲಿ ಹರಡುತ್ತಿರುವುದಲ್ಲದೇ ಇದೀಗ ರಾಜ್ಯ ಹಾಗೂ ಜಿಲ್ಲೆಯಲ್ಲಿಯೂ ಸಹ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕ್ಷೇತ್ರಕ್ಕೆ ಭೇಟಿ ನೀಡಲು ಇಚ್ಚಿಸಿರುವ ಭಕ್ತರು ತಮ್ಮ ಪ್ರವಾಸವನ್ನು ಒಂದು ವಾರದ ಕಾಲ ಮುಂದೂಡಿ ಸಹಕರಿಸುವಂತೆ ಕೊಲ್ಲೂರು ದೇವಳದ ಪ್ರಕಟಣೆಯಲ್ಲಿ ಕೋರಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಾರತೀಯ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಘಟಕ, ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ತರಬೇತುದಾರರಾದ ಡಾ| ಸೋನಿ, ಡಾ| ಕೀರ್ತಿಪಾಲನ್ ಹಾಗೂ ಅಲ್ಡ್ರಿನ್ರವರು ಪ್ರಥಮ ಚಿಕಿತ್ಸೆ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು. ಮುಖ್ಯ ಅತಿಥಿ, ಕುಂದಾಪುರ ಭಾರತೀಯ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ್ ಶೆಟ್ಟಿ ಮಾತನಾಡಿ, ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರಥಮ ಚಿಕಿತ್ಸೆಯ ಅಗತ್ಯವಿದೆ ಎನ್ನುವುದರ ಕುರಿತಾದ ತಿಳುವಳಿಕೆ ಅವಶ್ಯಕ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಭಾರತೀಯ ರೆಡ್ಕ್ರಾಸ್ ಘಟಕದ ಖಜಾಂಚಿ ಶಿವರಾಮ್ ಶೆಟ್ಟಿ ಹಾಗೂ ಕಾರ್ಯಕ್ರಮ ಅಧಿಕಾರಿ ಮುತ್ತಯ್ಯ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶಿವರಾಜ್ ಸಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸ್ವಚ್ಛತೆಯನ್ನು ನಮ್ಮದಾಗಿಸಿಕೊಳ್ಳಬೇಕು ಹಾಗೂ ಅದನ್ನು ಕಾಪಾಡಿಕೊಳ್ಳಲು ಸರಿಯಾದ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಅಡಿಶ್ನಲ್ ಪ್ರಾಧ್ಯಾಪಕರಾದ ಡಾ| ಅಶ್ವಿನಿ ಕುಮಾರ್ ಹೇಳಿದರು. ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಧಾಬಾಯಿ ಸಭಾಂಗಣದಲ್ಲಿ ಕಾಲೇಜಿನ ಯುತ್ ರೆಡ್ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಸಾಯನಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಮಾಂಸಹಾರ ತಿನ್ನುವುದರಿಂದ ಯಾವುದೇ ಕಾಯಿಲೆ ಅಥವಾ ಕೊರೊನಾ ವೈರಸ್ ಬರುವ ಸಾಧ್ಯತೆ ಇಲ್ಲ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಲ್ಲದೇ ದೇಶದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರಾದ ನಿಶಾ, ಯುಥ್ ರೆಡ್ಕ್ರಾಸ್ ವಿಂಗ್ ಅಧಿಕಾರಿ ಪ್ರೊ.ಸತ್ಯನಾರಾಯಣ, ಮತ್ತು ಮತ್ತು ಎನ್.ಎಸ್.ಎಸ್ ಅಧಿಕಾರಿ ಅರುಣ ಎ.ಎಸ್.ಉಪಸ್ಥಿತರಿದ್ದರು. ಯುಥ್ ರೆಡ್ಕ್ರಾಸ್ ವಿಂಗ್ ಅಧಿಕಾರಿಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶುಮಂದಿರದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಬೈಂದೂರು ಮತ್ತು ಸೇವಾ ಸಂಗಮ ಶಿಶುಮಂದಿರದ ಮಾತೃ ಮಂಡಳಿಯ ಸಹಯೋಗದಲ್ಲಿ ಇನ್ನರ್ ವ್ಹಿಲ್ ಕ್ಲಬ್ನ ಹಿರಿಯ ಸದಸ್ಯರಾದ ಸೀತಾ ಶ್ರೀನಿವಾಸ್ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನಗೊಂಡ ಸೀತಾ ಶ್ರೀನಿವಾಸ್ ಮಾತನಾಡಿ ಮಹಿಳೆಯರಿಗೆ ವಿದ್ಯಾಭ್ಯಾಸದ ಅಗತ್ಯತೆಯ ಬಗ್ಗೆ ತಿಳಿಸಿದರು. ಇನ್ನರ್ ವ್ಹಿಲ್ ಕ್ಲಬ್ನ ಅಧ್ಯಕ್ಷೆ ನಾಗರತ್ನ ಮಂಜುನಾಥ್ ಶೆಟ್ಟಿ ಸ್ವಾಗತಿಸಿ, ಮಹಿಳೆಯರಿಗೆ ಪ್ರಶಕ್ತ ಸಮಾಜದಲ್ಲಿ ತಮ್ಮ ಹಕ್ಕು ಭಾದ್ಯತೆಗಳನ್ನು ಪಡೆದುಕೊಳ್ಳುವ ಬಗ್ಗೆ ಜಾಗ್ರತೆ ಮೂಡಿಸಿದರು. ಸ್ಥಾಪಕಾಧ್ಯಕ್ಷೆ ಚಂದ್ರಕಲಾ ಶೆಟ್ಟಿಯವರು ನಮ್ಮ ಸಂಸ್ಕ್ರತಿ, ಸಂಸ್ಕಾರವನ್ನು ಉಳಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸೇವಾಸಂಗಮದ ಮಾತಾಜೀ ಸುಮನ, ಆಶಾ ಮತು ಭಾನುಮತಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಲತಿಕಾ ನಂಬಿಯಾರ್ರವರು ಕಾರ್ಯಕ್ರಮ ನಿರೂಪಿಸಿದರು. . I. S. O. ಉಷಾ ಹೆಗ್ಡೆಯವರು ಧನ್ಯವಾದ ಸಮರ್ಪಣೆ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಕೊಂಕಣಿ ಖಾರ್ವಿ ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಹುಟ್ಟಿದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಸುಧೀರ್ಘ ಇತಿಹಾಸ ಹೊಂದಿದೆ. ಸರಕಾರದ ಸೌಲಭ್ಯಗಳನ್ನು ಕಟ್ಟಕಡೆಯ ಮೀನುಗಾರ ಕುಟುಂಬಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಉತ್ತಮ ದಕ್ಷ, ಪಾರದಕ್ಷಕ ಆಡಳಿತದ ಮೂಲಕ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲಾಗುವುದು. ಮೀನುಗಾರರ ಏಳಿಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷ ಸದಾಶಿವ ಖಾರ್ವಿ ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಕಛೇರಿಯಲ್ಲಿ ಬುಧವಾರ ಜರಗಿದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು. ಸಂಘದ ಸದಸ್ಯರಿಗೆ ಚಿನ್ನಾಭರಣ ಸಾಲ ಹಾಗೂ ಮುಚ್ಚಿರುವ ಡೀಸೆಲ್ ಬಂಕ್ ಪುನರಾರಂಭಕ್ಕೆ ಆದ್ಯತೆ ನೀಡಲಾಗುವುದು. ಇತರ ಆರ್ಥಿಕ ಸಂಸ್ಥೆಗಳ ಪೈಪೋಟಿ ನಡುವೆಯೂ ಸಂಘದ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ, ಸಂಘದ ಸದಸ್ಯರ ನಂಬಿಕೆ, ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ಎಲ್ಲಾ ಹಿರಿಯ ಸಹಕಾರಿಗಳ ಮಾರ್ಗದರ್ಶ ಪಡೆದು ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿದ್ಯಾರ್ಥಿಗಳಿಗೆ ತಮ್ಮ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಉಪಯೋಗವಾಗುವಂತಹ ವೇದ ಗಣಿತದ ಸೂತ್ರಗಳಾದ ಎಕಾಧಿಕೇನ, ಪೂರ್ವೇಣ, ಏಕನ್ಯೂನೇನ ಪೂರ್ವೇಣ, ಯುವಧನಂ, ನಿಖಿಲಂ, ನವತಾಶ್ಚರ್ಮಾಮ್ ದಶತಾಹ್ವನ್ನು ಹಾಗೂ ವೇದಗಣಿತದ ಮಹತ್ವದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಟೇಶ್ವರದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಮತಿ ಅಡಿಗರವರು ವಿವರಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರಿನ ಗಣಿತಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಮತ್ತು ಭರವಶಾ ಕೋಶ ಏರ್ಪಡಿಸಿದ ವೇದಗಣಿತ ತರಬೇತಿ ಕಾರ್ಯಗಾರ ಉದ್ದೇಶಿಸಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಅಶ್ವತ್ಥ ದೇವರಾಯ ನಾಯ್ಕ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಕು. ಪ್ರೀಯಾ ಜೋಸೆಫ್ರವರು ಸ್ವಾಗತಿಸಿದರು. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿಯಾದ ಮೈತ್ರಿಯವರು ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕು. ಸಂಗೀತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಉತ್ತಮ ಬರಹಗಾರನಾಗಲು ತಾಳ್ಮೆ ಅತೀ ಅಗತ್ಯ. ಪ್ರತಿಯೊಂದು ವಿಷಯದ ಕುರಿತು ಕೂಲಂಕುಷವಾಗಿ ಚಿಂತನೆ ನಡೆಸಿ, ತದನಂತರದಲ್ಲಿ ಆ ವಿಚಾರವನ್ನು ಬರಹದ ರೂಪದಲ್ಲಿ ಮಂಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಎ.ಎಂ. ಖಾನ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ( ಮಾಮ್) ವತಿಯಿಂದ ನಡೆದ ೨೦೧೮-೧೯ನೇ ಸಾಲಿನ ಮಾಮ್ ಇನ್ಸ್ಪೈರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ರಚನಾತ್ಮಕ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಕೊಡುಗೆ ಅತ್ಯಗತ್ಯ. ಆದರೆ ಆಧುನಿಕತೆಯ ಭರದಲ್ಲಿ ಸಾಗುತ್ತಿರುವ ಇಂದಿನ ಜಗತ್ತಿನಲ್ಲಿ ಯುವಜನಾಂಗ ಎಲ್ಲೋ ಹಳಿ ತಪ್ಪಿ ನಡೆಯುತ್ತಿದೆ. ಇಂತಹವರನ್ನು ಸರಿಯಾದ ದಾರಿಯಲ್ಲಿ ನಡೆಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದು ಮಾಧ್ಯಮದ ಜವಬ್ದಾರಿ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆಯಿಂದ ದೂರವಿರಬೇಕು. ಆಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಯಶಸ್ಸು…
