Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪೊಲೀಸ್ ಠಾಣೆಯ ಸಮೀಪದಲ್ಲೇ ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಅಮಾಸೆಬೈಲಿನಲ್ಲಿ ನಡೆದಿದೆ. ಅಮಾಸೆಬೈಲು ಪೊಲೀಸ್ ಠಾಣೆಯ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಮಲ್ಲಿಕಾರ್ಜುನ್ ಗುಬ್ಬಿ (56) ಇಂದು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಕಲಬುರಗಿಯ ನೌರುಗಂಜ್ ನಿವಾಸಿಯಾಗಿದ್ದು, ಮೇ 16 ರಂದು ನಕ್ಸಲ್ ಪೀಡಿತ ಅಮಾಸೆಬೈಲು ಪೊಲೀಸ್ ಠಾಣೆಗೆ ಭದ್ರತೆಗಾಗಿ ನಿಯೋಜನೆಗೊಂಡಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್‌ಆರ್‌ಪಿ) ಪಡೆಯ ಆರ್‌ಎಸ್‌ಐ ಸಿಬ್ಬಂದಿಯಾಗಿದ್ದ ಮಲ್ಲಿಕರ್ಜುನ್ ಮೇ 15 ರಂದು ನಕ್ಸಲ್ ಚಟುವಟಿಕೆ ಇರುವ ಅಮಾಸೆಬೈಲು ಪೊಲೀಸ್ ಠಾಣೆಗೆ ಆಗಮಿಸಿದ್ದರು. ಗುರುವಾರ ರಾತ್ರಿ ಅವರು ಕ್ವಾರ್ಟರ್ಸ್ನಲ್ಲಿ ಮಲಗಲು ಹೋಗಿದ್ದು ಬೆಳಿಗ್ಗೆ ಅಲ್ಲಿ ಇರಲಿಲ್ಲ. ಶೋಧ ನಡೆಸಿದ ಅವರ ಪೊಲೀಸ್ ಠಾಣೆಯ ಸಮೀಪ ಮರಕ್ಕೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಲ್ಲಿಕಾರ್ಜುನ್ ಕಳೆದ 29 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮಲ್ಲಿಕಾರ್ಜುನ್‌ ಮುನಿರಾಬಾದ್ ಗೆ ತೆರಳುವವರಿದ್ದರು. ಇವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.29ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 15 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಸೋಂಕಿತರು ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 164 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 160 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 . ► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 . ► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಬೈಂದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕೋವಿಡ್ ಪರೀಕ್ಷೆಗಾಗಿ ತೆರಳಿದ್ದ ತಾಲೂಕಿನ ಬಿಜೂರು ಗ್ರಾಮ ಲೆಕ್ಕಾಧಿಕಾರಿ ಅಂಜನಪ್ಪ ಸೋಗಿ ಎಂಬುವವರ ಮೇಲೆ ಆಸ್ಪತ್ರೆಯ ವೈದ್ಯ ಡಾ| ಮಹೇಂದ್ರ ಶೆಟ್ಟಿ ಎನ್ನುವವರು ನಿಂದಿಸಿ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪವಿದ್ದು, ಅಂತಿಮವಾಗಿ ವೈದ್ಯ ಡಾ| ಮಹೇಂದ್ರ ಶೆಟ್ಟಿ ಅವರು ಕ್ಷಮೆ ಕೇಳುವುದರೊಂದಿಗೆ ಪ್ರಕರಣ ಇತ್ಯರ್ಥಗೊಂಡಿದೆ. ಆಗಿದ್ದೇನು? ಬಿಜೂರು ಗ್ರಾಮ ಲೆಕ್ಕಾಧಿಕಾರಿ (ವಿಎ) ಅಂಜನಪ್ಪ ಸೋಗಿ ಕೋವಿಡ್ ಪರೀಕ್ಷೆಗಾಗಿ ಬುಧವಾರ ಮಧ್ಯಾಹ್ನ ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾಗ ಹೊರಗಡೆ ಇದ್ದ ಆಸ್ಪತ್ರೆ ಸಿಬ್ಬಂದಿಗಳು ಮಾಹಿತಿ ನೀಡದ ಕಾರಣ, ನೇರವಾಗಿ ವೈದ್ಯ ಡಾ. ಮಹೇಂದ್ರ ಶೆಟ್ಟಿಯವರನ್ನು ಭೇಟಿಯಾಗಿ ಕೋವಿಡ್ ಪರೀಕ್ಷೆ ನಡೆಸಲು ಮನವಿ ಮಾಡಿಕೊಂಡಿದ್ದರು. ಈ ವೇಳೆಯಲ್ಲಿ ಡಾ. ಮಹೇಂದ್ರ ಶೆಟ್ಟಿ ಅವರು ಅವಾಚ್ಯವಾಗಿ ನಿಂದಿಸಿ ಒಳಗೆ ಬರಲು ಅನುಮತಿ ನೀಡಿದವರ್ಯಾರು ಎಂದು ಪ್ರಶ್ನಿಸಿ ಹಲ್ಲೆಗೆ ಮುಂದಾಗಿದ್ದರು ಎಂದು ಗ್ರಾಮಲೆಕ್ಕಾಧಿಕಾರಿ ಅಂಜನಪ್ಪ ಸೋಗಿ ಆರೋಪಿಸಿದ್ದಾರೆ. ವೈದ್ಯರ ಈ ನಡೆಯನ್ನು ತಾಲೂಕು ಗ್ರಾಮಲೆಕ್ಕಾಧಿಕಾರಿಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ಸರಕಾರಿ ಪ್ರೌಢ ಶಾಲೆಯಲ್ಲಿ ಕ್ವಾರಂಟೈನ್  ಮಾಡಲಾಗಿದ್ದ ಮುಂಬೈ ಸೇರಿದಂತೆ ಇತರ ರಾಜ್ಯಗಳಿಂದ ಆಗಮಿಸಿದ್ದ ಜನರನ್ನು ಸ್ಥಳೀಯಾಡಳಿತದೊಂದಿಗೆ ಬಿಜೂರು ನಂದಿಕೇಶ್ವರ ಫ್ರೆಂಡ್ಸ್ ಸದಸ್ಯರು ವಿಶೇಷ ಮುತುವರ್ಜಿಯಿಂದ ಸಕಲ ವ್ಯವಸ್ಥೆ ಕಲ್ಪಿಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. 72ಮಂದಿ ಕ್ವಾರಂಟೈನ್ ವಾಸಿಗಳಿಗೆ ಪ್ರತಿದಿನ ಕುಡಿಯಲು ಬಿಸಿ ನೀರು, ಮಕ್ಕಳಿಗೆ ಹಾಲು, ಸಂಜೆ ಉಪಾಹಾರ, ಒಂದು ದಿನ ಮೊಟ್ಟೆ, ಪಾಯಸವನ್ನು ವಿತರಿಸಲಾಗಿತ್ತು. ಸಂಘದ ವತಿಯಿಂದ ಪ್ರತಿಯೊಬ್ಬರ ಅಗತ್ಯಕ್ಕೂ ಸ್ಪಂದನೆ ನೀಡಲಾಗಿಗಿತ್ತು. ಈ ಕಾರ್ಯಕ್ಕೆ ಪ್ರಿಯದರ್ಶಿನಿ ಬೆಸ್ಕೂರು, ಸಂತೋಷ ಶ್ಯಾನುಭಾಗ್, ಕುರುಣಾಕರ ಗಾಣಿಗ ಬಿಜೂರು, ಸಚಿನ್ ದೇವಾಡಿಗ ಬಿಜೂರು ಮೊದಲಾದವರು ಸಹಕರಿಸಿದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಕ್ವಾರಂಟೈನ್ ನಿವಾಸಿಗಳಿಗೆ ಬಿಸ್ಕಟ್, ಕೇಕ್, ಮಾಸ್ಕ್, ಸ್ಯಾನಿಟೈಸರ್ ಒದಗಿಸಿದರು. ಬಿಜೂರು ನಂದಿಕೇಶ್ವರ ಫ್ರೆಂಡ್ಸ್‌ನ ಅಧ್ಯಕ್ಷರು, ಗ್ರಾ.ಪಂ. ಸದಸ್ಯರಾದ ರಮೇಶ ದೇವಾಡಿಗ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ರಾಜೇಂದ್ರ ಬಿಜೂರು ಹಾಗೂ ಸದಸ್ಯರು ಸರಕಾರದ ಆದೇಶದಂತೆ ಮೇ.28ರಂದು ಎಲ್ಲರನ್ನೂ ಬೀಳ್ಕೊಟ್ಟರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 7 ದಿನದ ಕ್ವಾರಂಟೈನ್ ಪೂರ್ಣಗೊಳಿಸಿದ ಬಳಿಕ ಯಾವುದೇ ರೋಗದ ಲಕ್ಷಣಗಳು ಕಂಡುಬಾರದೇ ಇದ್ದಲ್ಲಿ ಅವರನ್ನು ಮನೆಗೆ ಕಳುಹಿಸಬಹುದು ಎಂಬ ರಾಜ್ಯ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ 7 ದಿನ ಸರಕಾರಿ ಕ್ವಾರಂಟೈನ್ ಪೂರೈಸಿದವರಿಗೆ 7 ದಿನ ಹೋಮ್ ಕ್ವಾರಂಟೈನ್ ಮಾಡಿ, ಸರಕಾರಿ ಕ್ವಾರಂಟೈನ್ ಕೇಂದ್ರಗಳಿಂದ ಬಿಡುಗಡೆಗೊಳಿಸಲಾಗುತ್ತಿದೆ. 14 ದಿನ ಸರಕಾರಿ ಕ್ವಾರಂಟೈನ್ ಮುಗಿಸಿದವರನ್ನು ನೇರವಾಗಿ ಮನೆಗೆ ಕಳುಹಿಸಲಾಗುತ್ತಿದ್ದು, ಇನ್ನು 14 ದಿನವೂ ಎಚ್ಚರಿಕೆಯಿಂದ ಇವವಂತೆ ಸೂಚಿಸಲಾಗಿದೆ. ರೋಗದ ಲಕ್ಷಣಗಳು ಕಂಡುಬಂದರೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಪರೀಕ್ಷೆಗೆ ಒಳಪಡುವುದು ಕಡ್ಡಾಯ. ಕುಂದಾಪ್ರ ಡಾಟ್ ಕಾಂ ಸುದ್ದಿ. ಹೋಮ್ ಕ್ವಾರಂಟೈನಿನಲ್ಲಿ ಇರುವವರು ಕ್ವಾರಂಟೈನ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಮತ್ತು ಹೋಮ್ ಕ್ವಾರಂಟೈನಿನ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಹೋಮ್ ಕ್ವಾರಂಟೈನ್ ಇರುವರರು ಮನೆಯಿಂದ ಹೊರಬಂದರೆ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಎಚ್ಚರಿಸಿದ್ದಾರೆ. ಜಿಲ್ಲೆಯ ಸರಕಾರಿ ಕ್ವಾರಂಟೈನಿನಲ್ಲಿ ಒಟ್ಟು 8,168 ಮಂದಿ ಇದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.28ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 27 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 18 ಪುರುಷರು, 8 ಮಹಿಳೆಯರು ಹಾಗೂ ಓರ್ವ ಬಾಲಕಿಗೆ ಪಾಸಿಟಿವ್ ದೃಢವಾಗಿದ್ದು, ಈ ಪೈಕಿ ಮಹಾರಾಷ್ಟ್ರ, 24, ತೆಲಂಗಾಣ 2 ಹಾಗೂ ಕೇರಳದಿಂದ ಓರ್ವರು ಬಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 147 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 143 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ: 7 ದಿನ ಸರ್ಕಾರಿ ಕ್ವಾರಂಟೈನ್ ಪೂರೈಸಿದವರಿಗೆ ಹೋಂ ಕ್ವಾರಂಟೈನ್‌ಗೆ ಅನುಮತಿ – https://kundapraa.com/?p=37978 . ► ದ.ಕನ್ನಡ ಹಾಲು ಒಕ್ಕೂಟದಿಂದ ಜಾನುವಾರುಗಳಿಗೆ ವಿಮಾ ಸೌಲಭ್ಯ – https://kundapraa.com/?p=37935 . ► ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ – https://kundapraa.com/?p=37963 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2020-21 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ..ಎಂ.ಇ.ಜಿ.ಪಿ)ಯಡಿ ಉಡುಪಿ ಜಿಲ್ಲೆಯಲ್ಲಿ ಸ್ವ ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ ರೂ.25 ಲಕ್ಷ ಉತ್ಪಾದನೆ ಚಟುವಟಿಕೆ ಮತ್ತು ರೂ.10ಲಕ್ಷ ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ, ಹೊಸ ಕೈಗಾರಿಕೆ , ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇಕಡಾ 25ರಿಂದ 35ರ ವರೆಗೆ ಸಹಾಯಧನ ನೀಡಲಾಗುವುದು. ಉತ್ಪಾದನಾ ಘಟಕವಾಗಿದ್ದಲ್ಲಿ ರೂ.10ಲಕ್ಷ ಮತ್ತು ಸೇವಾ ಘಟಕವಾಗಿದ್ದಲ್ಲಿ ರೂ.5 ಲಕ್ಷ ಗಳಿಗಿಂತ ಮೇಲ್ಪಟ್ಟ ಯೋಜನಾ ವೆಚ್ಚಗಳನ್ನೊಳಗೊಂಡ ಘಟಕಗಳನ್ನು ಸ್ಥಾಪಿಸುವವರು ಕನಿಷ್ಟ 8ನೇ ತರಗತಿ ಉತ್ತಿರ್ಣವಾಗಿರಬೇಕು. ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು . ನಿರುದ್ಯೋಗಿ ಯುವಕ ಯುವತಿಯರು http://www.kviconline.gov.in/pmegpeportal/jsp/pmegponline.jsp ವೆಬ್ ಸೈಟ್ ಮೂಲಕ…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಈ ಭಾರಿ ದಾಖಲೆ ಪ್ರಮಾಣದಲ್ಲಿ ಭತ್ತ ಹಾಗೂ ರಸಗೊಬ್ಬರಗಳು ಮಾರಾಟವಾಗುತ್ತಿದ್ದು, ಕೊರೋನಾ ಹೊಡೆತದಿಂದಾಗಿ ಭತ್ತದ ಕೃಷಿಯಲ್ಲಿ ಯುವಕರ ಒಲವು ಹೆಚ್ಚಿದೆ. ಹಡಿಲು ಬಿದ್ದ ಗದ್ದೆಗಳು ಹಸಿರಾಗುವ ಸೂಚನೆ ದೊರೆಯುತ್ತಿದೆ. ಲಾಕ್‌ಡೌನ್‌ನಿಂದಾಗಿ ನಗರಗಳಲ್ಲಿ ಈವರೆಗೂ ವ್ಯಾಪಾರ-ವ್ಯವಹಾರ ಸಸೂತ್ರವಾಗಿ ಆರಂಭವಾಗಿಲ್ಲ. ಮುಂಬೈನಂತಹ ಮಹಾನಗರಿಗಳಲ್ಲಿ ಮತ್ತೆ ವ್ಯವಹಾರ, ಕೆಲಸ ಆರಂಭಿಸಲು ಕೆಲವು ತಿಂಗಳುಗಳೇ ಬೇಕು. ಅಲ್ಲಿಯ ತನಕ ಊರಿನಲ್ಲಿಯೇ ಇರುವುದು ಅನಿವಾರ್ಯ. ಹಾಗಾಗಿ ಸದ್ಯ ಮನೆ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿರುವ ಕೆಲವರು ಕೃಷಿಯತ್ತ ಒಲವು ತೋರುವ ಮಾತುಗಳ ಕೇಳಿಬರುತ್ತಿದ್ದು, ಇನ್ನು ಒಂದಿಷ್ಟು ಮಂದಿ ಮತ್ತೆ ನಗರಗಳಿಗೆ ತೆರಳದೇ ಊರಿನಲ್ಲಿಯೇ ಉಳಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಉಭಯ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದ ಭತ್ತ ಹಾಗೂ ರಸಗೊಬ್ಬರ ಮಾರಾಟವಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ವರದಿ. 2019ರಲ್ಲಿ 13,725 ಹೆಕ್ಟೇರ್ ಭೂಮಿಯಲ್ಲಿ ಭತ್ತದ ಕೃಷಿ ಮಾಡಿದರೆ, ಈ ಬಾರಿ ಸುಮಾರು 15 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭತ್ತದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯಲ್ಲಿ ಆಯಾತಪ್ಪಿ ಬಾವಿಗೆ ಬಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ರಕ್ಷಿಸಲು ಬಾವಿಗೆ ಇಳಿದ ಸಹೋದರನ ಸ್ಥಿತಿಯೂ ಚಿಂತಾಜನಕವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಲ್ಟರ್ ಡಿ’ಆಲ್ಮೇಡಾ(52) ಮೃತ ದುರ್ದೈವಿ. 20 ಅಡಿ ಆಳದ 5 ಅಡಿ ಅಗಲವಿರುವ ಬಾವಿಯ ಆಮ್ಲಜನಕದ ಕೊರತೆ ಇತ್ತು. ವಾಲ್ಟರ್ ಎಂಬುವವರು ಬಾವಿಗೆ ಬಿದ್ದ ತಕ್ಷಣ ಅವರ ರಕ್ಷಣೆಗೆ ಬಾವಿಗೆ ಇಳಿದ ಸಹೋದರ ಅಲ್ಭನ್ ಉಸಿರಾಟದ ಸಮಸ್ಯೆಯಿಂದ ಒದ್ದಾಡಿದ್ದಾರೆ. ಕೂಡಲೇ ಸ್ಥಳೀಯರು ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಅವರು ಈರ್ವರನ್ನೂ ಮೇಲೆತ್ತಿದ್ದಾರೆ. ಅಷ್ಟರಲ್ಲಿಯೇ ವಾಲ್ಟರ್ ಮೃತಪಟ್ಟಿದ್ದು, ಅಲ್ಭನ್ ಸ್ಥೀತಿ ಗಂಭೀವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮೃತರಿಗೆ ಪತ್ನಿ, ಹಾಗೂ ಮಗು ಇದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.27ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ  ಒಟ್ಟು  9 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲರೂ ಮಂಬೈನಿಂದ ಹಿಂದಿರುಗಿದವರಾಗಿದ್ದು, ಈ ಪೈಕಿ ಓರ್ವ ಬಾಲಕ, 6 ಪುರಷರು ಹಾಗೂ 2 ಮಹಿಳೆಯರು ಸೇರಿದ್ದಾರೆ.  ಜಿಲ್ಲೆಯಲ್ಲಿ ಸದ್ಯ ಒಟ್ಟು 120 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 116 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

Read More