Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ರೂಪಿಸಿದ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಪೂರೈಸಲು ಸರಕಾರ ಉದ್ದೇಶಿಸಿದೆ. ಮುಂದಿನ ವರ್ಷಗಳಲ್ಲಿ ಸರಕಾರ ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸುವ ಸಾಧ್ಯತೆ ಇರುವುದರಿಂದ ಮತ್ತು ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮ ಪಂಚಾಯತ್‌ಗಳಿಗೆ ಕುಡಿಯುವ ನೀರು ಪೂರೈಕೆ ಸವಾಲಾಗಲಿದೆ. ಹೀಗಾಗಿ ಈ ಸಮಸ್ಯೆಯಿಂದ ಪಾರಾಗಲು ಪ್ರತಿಯೊಬ್ಬರು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕವನ್ನು ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜ್‌ಕುಮಾರ್ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ನಡೆದ ನೀರು ಮತ್ತು ನೈರ್ಮಲ್ಯ ಸಮಿತಿ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾಹಿತಿ ನೀಡಿ ಮಾತನಾಡಿದರು. ಜಲಜೀವನ ಮಿಷನ್ ಯೋಜನೆಯಲ್ಲಿ ಕೇಂದ್ರ ಸರಕಾರ ಶೇ. 42.5, ರಾಜ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ‌ ಬಿ.ಸಿ ಟ್ರಸ್ಟ್ ರಿ. ಬೈಂದೂರು ವಲಯದ ಶಿರೂರು ಬಿ ಕಾರ್ಯಕ್ಷೇತ್ರದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಗುರುವಾರ ಜರುಗಿತು. ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರು ಶಿವರಾಯ ಪ್ರಭು ಅವರು ಪರಿಸರ ಜಾಗೃತಿ ಕುರಿತು ಮಾಹಿತಿ ನೀಡಿ ಗಿಡ ವಿತರಣೆ ಮಾಡಿದರು. ಸಾಂಕೇತಿಕವಾಗಿ ಗಿಡ ನೆಡಲಾಯಿತು. ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕಿನ ಯೋಜನಾಧಿಕಾರಿಗಳಾದ ವಿನಾಯಕ ಪೈ ಬೈಂದೂರು ತಾಲೂಕಿನ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷರಾದ ರಘುರಾಮ ಕೆ. ಪೂಜಾರಿ, ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಕೃಷ್ಣ ಪೂಜಾರಿ, ಜನಜಾಗೃತಿ ಸದಸ್ಯರಾದ ವಾಸು ಮೇಸ್ತ, ಶಿರೂರು ಬಿ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಹಾಗೂ ವಲಯದ ಮೇಲ್ವಿಚಾರಕರಾದ ರಾಮಚಂದ್ರ ಎಸ್., ಕೃಷಿ ಅಧಿಕಾರಿಗಳಾದ ಮಂಜುನಾಥ ಗೌಡ ಮತ್ತು ರಾಜು ಹಾಗೂ ಸೇವಾಪ್ರತಿನಿಧಿಗಳು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.07: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಪ್ರತಿ ಬುಧವಾರ ನಡೆಯುವ ಲಸಿಕಾ ಮೇಳಕ್ಕೆ ಕಳುಹಿಸಬೇಕು. ಆಸ್ಪತ್ರೆಗೆ ಬರಲು ಸಾಧ್ಯವಾಗದ ಹಾಗೂ ಹಾಸಿಗೆ ಹಿಡಿದಿರುವ 60 ವರ್ಷ ಮೇಲ್ಪಟ್ಟವರಿದ್ದಲ್ಲಿ ಅವರಿಗೆ ಮೊಬೈಲ್ ಲಸಿಕಾ ಶಿಬಿರ ವ್ಯವಸ್ಥೆ ಮಾಡಿ, ಲಸಿಕೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳ ಕಛೇರಿ ಪ್ರಟಣೆ ತಿಳಿಸಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಕಾರ್ಯಪಡೆ ಸದಸ್ಯರ ಸಮಿತಿ ಸಭೆ ನಡೆಸಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ, ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಪಂಚಾಯತ್ನಲ್ಲಿಯೇ ಬುಧವಾರ ಲಸಿಕಾ ಮೇಳ ಶಿಬಿರವನ್ನು ಆಯೋಜಿಸಬೇಕು ಅಥವಾ ಪಂಚಾಯತ್ ಕಾರ್ಯಪಡೆ ಸದಸ್ಯರು, ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯದ ಮುಖಂಡರುಗಳ ಮೂಲಕ ಮನವೊಲಿಸಿ, ಲಸಿಕೆ ನೀಡಬೇಕು. ನಗರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾದಾನವೆಂಬುದು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರಿಯೆ. ಹಾಗಾಗಿ ಅದೊಂದು ಜವಾಬ್ದಾರಿಯುತ ಕೆಲಸವಾಗಿದೆ. ರಾಮಕೃಷ್ಣ ಕುಟೀರದ ಮೂಲಕ ಅದನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ಉದ್ಯಮಿ ಸದಾನಂದ ಪ್ರಭು ಹೇಳಿದರು. ಅವರು ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ಪದವಿ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಇಂದು ಪಡೆದ ಸಹಾಯದಿಂದ ಉತ್ತಮ ಪದವಿ ಗಳಿಸಿ ಮತ್ತಷ್ಟು ಜನರಿಗೆ ಸಹಕಾರ ಮಾಡುವಂತಾದರೆ ವಿದ್ಯಾನಿಧಿ ಯೋಜನೆ ಸಾರ್ಥಕ್ಯ ಪಡೆದುಕೊಳ್ಳುತ್ತದೆ ಎಂದರು. ಈ ವೇಳೆ ಪ್ರಶಾಂತ್ ಶೆಣೈ ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಸ್ವಾಗತಿಸಿ, ಜ್ಯೋತಿ ಎಚ್. ಎಸ್. ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲ್ಲಿನ ಸೆಂಟ್ ಥೋಮಸ್ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮನುಷ್ಯ ತನ್ನ ಅನುಕೂಲಕ್ಕೆ ತಕ್ಕಂತೆ ಪ್ರಕೃತಿಯನ್ನು ಬಳಸಿಕೊಂಡು ಅದನ್ನು ವಿಕೃತಿಗೊಳಿಸುತ್ತಿದ್ದಾನೆ. ವಿದ್ಯಾರ್ಥಿಗಳು ಪರಿಸರದ ರಕ್ಷಣೆಯಲ್ಲಿ ಪಾಲುದಾರಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿನಿ ಮರಿಯಾ ರೆಬೆರೋ ಪರಿಸರದ ದಿನಾಚರಣೆಯ ಕುರಿತು ಮಾಹಿತಿಯನ್ನು ನೀಡಿದಳು. ಸಂಸ್ಥೆಯ ವಿದ್ಯಾರ್ಥಿಗಳು ಪರಿಸರದ ರಕ್ಷಣೆಯ ಕುರಿತು ಕಿರು ಪ್ರಹಸನವನ್ನು ಪ್ರಸ್ತುತ ಪಡಿಸಿದರು.ಈ ಸಂದರ್ಭದಲ್ಲಿ ಪಿಯು ಪ್ರಾಂಶುಪಾಲರಾದ ರೂಬೆಲ್ ಐರಾವೆಲಿ & ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆ ಜನ್ಮಾಷ್ಠಮಿ ಹಾಗೂ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಕೊಲ್ಲೂರು ಗ್ರಾಮ ಪಂಚಾಯತ್, ಮೂಕಾಂಬಿಕಾ ಪರಿಸರ ಅಭಿವೃದ್ಧಿ ಸಮಿತಿ. ಎಸ್‌ಎಲ್‌ಆರ್ ಎಂ ಘಟಕದ ಸಿಬ್ಬಂದಿಗಳು ಹಾಗೂ ಪರಿಸರದ ಪ್ರೇಮಿಗಳು ಕೊಲ್ಲೂರಿನ ಪರಿಸರವನ್ನು ಎರಡು ತಂಡಗಳಾಗಿ ಸ್ವಚ್ಛಗೊಳಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಂಚುಗೋಡು ಶ್ರೀ ರಾಮ ದೇವಸ್ಥಾನದ ನೂತನ ಸಮುದಾಯ ಭವನ ನಿರ್ಮಾಣಕ್ಕೆ 35 ಲಕ್ಷ ರೂ. ಅನುದಾನ ಮಂಜೂರಾಗಿದೆ. ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮತ್ತು ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸರಕಾರದ ವಾರಾಹಿ ನೀರಾವರಿ ನಿಗಮದಿಂದ ಕಂಚುಗೋಡು ಶ್ರೀ ರಾಮ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಿಸಲು 20 ಲಕ್ಷ ರೂ. ಅನುದಾನ ಮತ್ತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ಮೂಲಕ 15 ಲಕ್ಷ ರೂ. ಅನುದಾನ ಮಂಜೂರಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲು ಸಹಕರಿಸಿದ ಸಂಸದ ಬಿ. ವೈ. ರಾಘವೇಂದ್ರ, ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕುಮಾರ್ ಶೆಟ್ಟಿ ಅವರಿಗೆ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂಜೆಪ್ರಭ ಪತ್ರಿಕೆಯು ಹತ್ತನೇ ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಪತ್ರಕರ್ತ, ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥ್ ಅವರಿಗೆ ‘ಸಂಜೆ ಪ್ರಭ ಮಾಧ್ಯಮ ಸೇವಾ ರತ್ನ’ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ವಿದ್ಯಾವಾಚಸ್ಪತಿ ಶ್ರೀ ವಿಶ್ವ ಸಂತೋಷ ಭಾರತೀ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಅತಿಥಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.06: ಕೆಟ್ಟು ನಿಂತಿದ್ದ ಟಿಪ್ಪರ್ ವಾಹನಕ್ಕೆ ಆಕ್ಟಿವ್ ಹೊಂಡಾ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ತಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಹಳಗೇರಿ ತೆಂಕಬೆಟ್ಟಿನ ನಿವಾಸಿ ಸತೀಶ್ ಜೋಗಿ (42) ಮೃತ ದುರ್ದೈವಿ. ಹಿಂಬದಿಯ ಸವಾರ ಕಂಬದಕೋಣೆ ಆಕಾಶ್ ಜೋಗಿ (17) ಗಂಭೀರ ಗಾಯಗೊಂಡಿದ್ದಾನೆ. ತೆಂಕಬೆಟ್ಟು ನಿವಾಸಿ ಸತೀಶ್ ಜೋಗಿಯವರು ಸಂಬಂಧಿ ಆಕಾಶ್ ಎಂಬುವವನನ್ನು ಜೊತೆ ತೆರಳುತ್ತಿದ್ದ ವೇಳೆ ಆರೋಪಿ ಟಿಪ್ಪರ್ ಚಾಲಕ ನಜ್ರುಲ್ ಬಷೀರ್ ಎಂಬಾತ ನಿರ್ಲಕ್ಷತನದಿಂದ ಯಾವುದೇ ಮುನ್ನೆಚರಿಕೆ ಕ್ರಮವಹಿಸದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿಕೊಂಡಿದ್ದು ಟಿಪ್ಪರ್ ಲಾರಿಯ ಹಿಂಬಂದಿಗೆ ಆಕ್ಟಿವ್ ಹೊಂಡಾ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆಕಾಶ ಜೋಗಿಯ ಮುಖ ಹಾಗೂ ತಲೆಗೆ ರಕ್ತಗಾಯ ಹಾಗೂ ಸತೀಶ ಜೋಗಿಯವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆಕಾಶ ಜೋಗಿ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ವತಿಯಿಂದ 2021-2022 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕ ವೃಂದದವರನ್ನು ಸನ್ಮಾನಿಸಲಾಯಿತು. ಉಡುಪಿಯ ಮಣಿಪಾಲ್ ಇನ್ ಹೋಟೆಲಿನಲ್ಲಿ ಶಾಲೆಯ ಗೌರವಿಸಿ ಸನ್ಮಾನಿಸಲಾಯಿತು. ಅಂಜುಮನ್ ನೂರುಲ್ ಇಸ್ಲಾಂನ ಅಧ್ಯಕ್ಷರಾದ ಜನಾಬ್ ಮೌಲಾನಾ ಇಬ್ರಾಹಿಂ ಸಾಹೇಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Read More