ಕುಂದಾಪ್ರ ಡಾಟ್ ಕಾಂ’ ಸುದ್ದಿ ಬೈಂದೂರು: ಕತಾರ್ ಇಂಡಿಯನ್ ಕಮ್ಯುನಿಟಿ ಬೆನ್ವೆಲೆಂಟ್ (ಐ.ಸಿ.ಬಿ.ಎಫ್)ಸದಸ್ಯರಾಗಿ ಬೈಂದೂರಿನ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ. ಬೈಂದೂರು ತಗ್ಗರ್ಸೆಯ ಗುರುದತ್ತ ಶೇರುಗಾರ್ ಹಾಗೂ ಮೂಕಾಂಬು ದಂಪತಿಗಳ ಪುತ್ರರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರದ್ದು ಬಹಮುಖ ವ್ಯಕ್ತಿತ್ವ. ಮಯ್ಯಾಡಿ ಧ.ಮ.ಹಿ.ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ದಾವಣಗೆರೆ ಬಾಪೂಜಿ ಫ್ರೌಢಶಾಲೆಯಲ್ಲಿ ಫ್ರೌಢಶಿಕ್ಷಣ ಬಳಿಕ ಸಿವಿಲ್ ಇಂಜಿನಿಯರಿಂಗ್ ಪದವಿ ಮುಗಿಸಿ ರಾಷ್ಟ್ರೀಯ ಹೆದ್ದಾರಿ ೮ರಲ್ಲಿ ಮೇಲುಸ್ತುವಾರಿ ಅಭಿಯಂತರಾಗಿ ಸೇವೆ ಸಲ್ಲಿಸಿ ಬಳಿಕ ಕತಾರ್ನ ಗಲ್ಪಾರ್ ಆಲ್ ಮಿಸ್ನಾದ್ ಕಂಪೆನಿಯಲ್ಲಿ ಅಭಿಯಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತಾರ್ ಸೇರಿದಂತೆ ಜಾಗತಿಕ ಮಟ್ಟದ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರು ಕರ್ನಾಟಕ ಸಂಘ ಕತಾರ್ ಉಪಾಧ್ಯಕ್ಷರಾಗಿ ಹಾಗೂ ಖಜಾಂಚಿಯಾಗಿ,ತುಳುಕೂಟ,ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಕತಾರ್ ಕರ್ನಾಟಕ ಪ್ರೆಂಡ್ಸ್ನ ಸದಸ್ಯರಾಗಿದ್ದಾರೆ. ನಾಟಕ, ಸಾಂಸ್ಕ್ರತಿಕ ಕಾರ್ಯಕ್ರಮ, ಶೈಕ್ಷಣಿಕ ಹಾಗೂ ಮನೋರಂಜನಾ ಕಾರ್ಯಕ್ರಮದ ಆಯೋಜನೆ ವಿವಿಧ ಸಂಘ ಸಂಸ್ಥೆಗಳ ಸಮನ್ವಯತೆಯೊಂದಿಗೆ ಕಾರ್ಯಕ್ರಮ ಪ್ರಸ್ತುತಿ, ಕತಾರ್ ಚಲನಚಿತ್ರೋತ್ಸವ ಸೇರಿದಂತೆ ವಿವಿಧ ಗಣ್ಯರ ಕಾರ್ಯಕ್ರಮದ ಪ್ರಮುಖ ಉಸ್ತುವಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ , ಮಂಗಳೂರು ಸ್ಮಾಟ್ ಸಿಟಿ ಲಿ.. ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ 2019 ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೋಭಾವನಕ್ಕೆ ಆಳ್ವಾಸ್ಗೆ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಆವರಣದಲ್ಲಿ ಉತ್ತಮ ಹಸಿರು ವಲಯ ನಿರ್ವಹಣೆಗಾಗಿ ಸ್ವಚ್ಛ ಭಾರತ ಅಭಿಯಾನಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಪರಿಸರ ಸಂರಕ್ಷಣ ಜಾಗೃತಿಗಾಗಿ ಶಿಕ್ಷಣ ಸಂಸ್ಥೆಗಳ ವಿಭಾಗದಲ್ಲಿ ಗ್ರೀನ್ ಕ್ಯಾಂಪಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶೋಭಾವನ ವಿಶೇಷತೆ: ಮಿಜಾರು ಶೋಭಾವನ ಕ್ಯಾಂಪಸ್ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆಳ್ವಾಸ್ ನ್ಯಾಚುರೋಪತಿ ಎಂಡ್ ಯೋಗಿಕ್ ಸೈನ್ಸ್ ಕಾಲೇಜು ಮತ್ತು ಆಳ್ವಾಸ್ ಹೋಮಿಯೊಪತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥ ಮಹಿಳೆಯರು ವಿವಿಧ ಪಿಜಿಗಳಲ್ಲಿ ಆಶ್ರಯ ಪಡೆದಿದ್ದು, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪಿ.ಜಿ.ಗಳನ್ನು ಆಗಸ್ಟ್ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ. ಅವರು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹವೊಂದರ ಕಟ್ಟಡ ದುರಸ್ಥಿ ನಡೆಯುತ್ತಿದ್ದು, ಮಹಿಳೆಯರ ಸುರಕ್ಷತೆಗೆ ಸಿಸಿ ಟಿವಿ ಅಳವಡಿಕೆಗೆ ಸೂಚಿಸಿದ್ದರೂ ಈವರೆಗೆ ಸಿಸಿಟಿವಿ ಅಳವಡಿಸದಿರುವ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ತಕ್ಷಣದಲ್ಲಿ ಸಿಸಿಟಿವಿ ಅಳವಡಿಸುವಂತೆ ಹಾಸ್ಟೆಲ್ ವಾರ್ಡನ್ಗೆ ಸೂಚನೆ ನೀಡಿ, ಆಗಸ್ಟ್ ೧೫ ರ ಒಳಗೆ ಹಾಸ್ಟೆಲ್ನಲ್ಲಿರುವ ಇತರ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ಯೂತ್ ರೆಡ್ಕ್ರಾಸ್ ಘಟಕದ ಆಶ್ರಯದಲ್ಲಿ ’ಆರೋಗ್ಯ ಮತ್ತು ನೈರ್ಮಲ್ಯ’ ಎಂಬ ವಿಷಯದ ಕುರಿತಂತೆ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿಆಯೋಜಿಸಲಾಗಿತ್ತು. ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯಾರಾಣಿಯವರಿಂದ ’ಅಭಿವಿನ್ಯಾಸ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮದಲ್ಲಿ ಕುಂದಾಪುರದ ಪ್ರತಿಷ್ಠಿತ ಆಸ್ಪತ್ರೆಯ ನಿರ್ದೇಶಕಿಯಾದ ಡಾ. ಪ್ರಮೀಳಾ ನಾಯಕ್ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ನೈರ್ಮಲ್ಯದಿಂದ ಆರೋಗ್ಯ ಎನ್ನುವ ಮಾತನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು. ಕಾರ್ಯಕ್ರಮವನ್ನು ಪ್ರೊ. ಸತ್ಯನಾರಾಯಣ ಸಂಯೋಜಿಸಿದರು. ಸ್ವಾತಿ ಸ್ವಾಗತಿಸಿ, ಅನುಷಾ ನಿರೂಪಿಸಿ, ಅಮೃತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಮಾನವ ಹಕ್ಕು ಘಟಕ, ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಉಡುಪಿ ಜಿಲ್ಲೆ ಹಾಗೂ ಯುವ ಸ್ಪಂದನ ಕೇಂದ್ರ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ’ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಯುವ ಜನತೆಯ ಪಾತ್ರ’ದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಭ್ರಷ್ಟಾಚಾರ ನಿಗ್ರಹ ದಳದ ನಿರೀಕ್ಷಕ ಶ್ರೀ ಜಯರಾಮ ಡಿ. ಗೌಡ ಮಾತನಾಡಿ, ಭ್ರಷ್ಟಾಚಾರದ ಪರಿಕಲ್ಪನೆ ಕೇವಲ ಲಂಚಕ್ಕೆ ಸೀಮಿತವಾಗಿರದೆ, ಬದುಕಿನ ಪ್ರತಿ ಮಜಲುಗಳಲ್ಲೂ ಪ್ರಚುರಗೊಳ್ಳುವುದು. ಯುವ ಸಮುದಾಯ ಸಾಮಾಜಿಕ ತತ್ವ – ಮೌಲ್ಯಗಳಿಗನುಗುಣವಾಗಿ ಬದುಕನ್ನು ರೂಪಿಸಿಕೊಂಡು, ಅನ್ಯಾಯದ ವಿರುದ್ಧ ದನಿಯೆತ್ತ ಬೇಕಿದೆ ಎಂದರು. ಸತೀಶ್ ಬಿ. ಭ್ರಷ್ಟಾಚಾರ ನಿಗ್ರಹ ದಳದ ನಿರೀಕ್ಷಕ, ಮಾತನಾಡಿ, ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣವು ಶಿಕ್ಷಿತ, ನೈತಿಕ ಬಲ ಹಾಗೂ ಸಾಮಾಜಿಕ ಜವಾಬ್ದಾರಿಯುಳ್ಳ ಯುವ ಶಕ್ತಿಯನ್ನು ಆಧರಿಸಿದೆ ಎಂದರು. ಬಳಿಕ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬಾಲ್ಯದಲ್ಲಿ ಪ್ರಪಂಚ ಆಕರ್ಷಣಿಯವಾಗಿ ಕಾಣುತ್ತದೆ. ಅದರ ನಡುವೆ ಸವಾಲುಗಳನ್ನು ಎದುರಿಸಲು ಅಣಿಯಾಗದೇ ಕುಳಿತರೆ ಭವಿಷ್ಯ ಕಠಿಣವಾಗುತ್ತದೆ. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಬೇಕು. ಆತ್ಮವಿಶ್ವಾಸ ಅಚಲವಾಗಿರಬೇಕು. ಹಾಗಿದ್ದಾಗಲೇ ಬದುಕು ಹಸನಾಗಲು ಸಾಧ್ಯ ಎಂದು ನಿಟ್ಟೂರಿನ ನಿವೃತ್ತ ಉಪನ್ಯಾಸಕ ಡಾ. ಶಾಂತಾರಾಮ ಪ್ರಭು ಹೇಳಿದರು. ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಶ್ರೀ ಮುಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇದರ 2019-20ನೇ ಸಾಲಿನ ವಿವಿಧ ಸಂಘಗಳ ಚಟುವಟಿಕೆಗಳ ಉದ್ಘಾಟನಾ ಹಾಗೂ ವಿದ್ಯಾರ್ಥಿಗಳ ಸಂಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಸಂಘವನ್ನು ಉದ್ಘಾಟಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಮಾತನಾಡಿ ಮನುಷ್ಯ ವಿದ್ಯಾವಂತನಾದರೆ ಸಾಲದು. ವಿನಯ ಸಂಪನ್ನನೂ ಆಗಿರಬೇಕು. ವಿದ್ಯಾವಂತ ದುರಹಂಕಾರಿಯಾದರೆ ಕಲಿತ ವಿದ್ಯೆಗೂ ಬೆಲೆ ಸಿಗಲಾರದು ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಕೊಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದೇವಳದ ಕಾರ್ಯನಿರ್ವಹಣಾಧಿಕಾರಿ ಎಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯವು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸುತ್ತಿರುವ 2019-20ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ವರ್ಧೆಗಳ ಭಾಗವಾಗಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ರಂಗಭೂಮಿ ಆಗಸ್ಟ್ 19 ಮತ್ತು 20 ರಂದು ಜರುಗಲಿದೆ. ಈ ಬಗ್ಗೆ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ಅವರು ಮಾಹಿತಿ ನೀಡಿ, ಎರಡು ದಿನದ ಕಾರ್ಯಕ್ರಮದ ಆಯೋಜನೆ ಹಾಗೂ ಆತಿಥ್ಯವನ್ನು ಭಂಡಾರ್ಕಾರ್ಸ್ ಕಾಲೇಜು ವಹಿಸಲಿದ್ದು ರಂಗಭೂಮಿ ಕಲಾ ಸ್ವರ್ಧೆಯಲ್ಲಿ ಏಕಾಂಕ ನಾಟಕ, ಮೂಕಾಭಿನಯ, ಪ್ರಹಸನ ಹಾಗೂ ಅನುಕರಣೆ ಎಂಬ ನಾಲ್ಕು ವಿಭಾಗಗಳಿರಲಿದ್ದು ಎರಡು ದಿನವೂ ಬೆಳಿಗ್ಗೆ 9:30ರಿಂದ ಸಂಜೆ 6ರ ತನಕ ಪ್ರತ್ಯೇಕ ವೇದಿಕೆಗಳಲ್ಲಿ ಸ್ವರ್ಧೆಗಳು ಜರುಗಲಿದೆ ಎಂದರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಿಗೆ ಸ್ವರ್ಧೆಯ ಬಗ್ಗೆ ಆಮಂತ್ರಣ ಕಳುಹಿಸಲಾಗುತ್ತಿದ್ದು, ಸುಮಾರು ೪೦ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ವಿಶ್ವವಿದ್ಯಾನಿಲಯ ಮಟ್ಟದ ಈ ಸ್ವರ್ಧೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 8ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸಿ.ಎಸ್.ಇ ವಿಭಾಗದಲ್ಲಿ ಶೇ. 99 ಫಲಿತಾಂಶ ದಾಖಲಾಗಿದೆ. 90 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜಸ್ಮಿನೆ ಪ್ರಿನ್ಸಿ ಲೋಬೊ ಶೇ.88.71 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಐ.ಎಸ್.ಸಿ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. 29 ವಿಶಿಷ್ಟ ಶ್ರೇಣಿ ಪಡೆದುಕೊಂಡಿದ್ದಾರೆ. ಹರ್ಷಿತಾ ಶೇ.88.57 ಅಂಕ ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ಇ.ಸಿ.ಇ ವಿಭಾಗದಲ್ಲಿ ಶೇ.100 ಫಲಿತಾಂಶದೊಂದಿಗೆ 87 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಿಯಾ ಸುರೇಶ್ ನಾೈಕ್ ಶೇ.90.43 ಪ್ರಥಮ ಸ್ಥಾನಿಯಾಗಿದ್ದರು. ಸಿ.ವಿ.ಎಲ್ ವಿಭಾಗದಲ್ಲಿ 98 ಪ್ರತಿಶತ ಫಲಿತಾಂಶದೊಂದಿಗೆ 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಜುಳಾ ಪರಪ್ಪ ಶೇ.89.29 ಪಡೆಯುವುದರೊಂದಿಗೆ ಮುಂಚೂಣಿಯಲ್ಲಿದೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಶೇ.98 ಫಲಿತಾಂಶ ದಾಖಲಾಗಿದೆ. 130 ವಿದ್ಯಾರ್ಥಿಗಳು ಫಸ್ಟ್ ವಿಶಿಷ್ಟ ಶ್ರೇಣಿ ಪಡೆದಿದ್ದಾರೆ. ಅನಂದ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಸವರಾಜ ಕಟ್ಟಿಮನಿಯವರು ೨೦ನೇ ಶತಮಾನದ ಪ್ರಗತಿಶೀಲ ಸಾಹಿತ್ಯಗಳ ರಚನಕಾರರಲ್ಲಿಒಬ್ಬರಾಗಿದ್ದರು. ಅವರ ಸಾಹಿತ್ಯವು ಸಮಾಜದಲ್ಲಿನ ನೈಜ ಪರಿಸ್ಥಿತಿಯನ್ನು ತಿಳಿಸುವ ಕಾದಂಬರಿಗಳಾಗಿ, ಸಮಾಜವನ್ನು ತಿಳಿಯಲು ಅವಕಾಶ ಮಾಡಿಕೊಟ್ಟವು ಎಂದು ಅಕಾಡೆಮಿ ಆಫ್ ಜನರಲ್ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ಕಾಲೇಜು ಮತ್ತುಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಬೆಳಗಾವಿ ಸಹಯೋಗದಲ್ಲಿಬಸವರಾಜ ಕಟ್ಟೀಮನಿ ಜನ್ಮದಿನದ ಶತಮಾನೋತ್ಸವ -೨೦೧೯ರ ಪ್ರಯುಕ್ತ ನಡೆದ ಬಸವರಾಜ ಕಟ್ಟಿಮನಿ ಕಾದಂಬರಿಗಳು; ಮರುಚಿಂತನೆಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಕಡುಬಡತನದಅವರಜೀವನ ಸಾಗಿಸಿದ ವ್ಯಕ್ತಿಯಿಂದಅದ್ಭುತ ಕಾದಂಬರಿಗಳು ಹೊರಹೊಮ್ಮಿವೆ. ಇಂತಹಉತ್ಕೃಷ್ಟ ಸಾಹಿತ್ಯ ನೀಡಿದ ವ್ಯಕ್ತಿಯಘನತೆ ಮೆಚ್ಚುವಂತಹದ್ದು. ಅವರ ಮಾಡಿ ಮಡಿದವರುಕಾದಂಬರಿಯು ಸ್ವಾತಂತ್ರ್ಯ ಹೋರಾಟದ ಮಗ್ಗುಲುಗಳನ್ನು ಹೇಳತ್ತವೆ. ಅವರಜರತಾರಿ ಜಗದ್ಗುರುಗಳು ಕಾದಂಬರಿಯ ಮೂಲಕ ಅಂದಿನ ಕಾಲದಲ್ಲಿ ಮಠಾಧಿಪತಿಗಳನ್ನು ಎದುರು ಹಾಕಿಕೊಳ್ಳುವ ಅವರಗಟ್ಟಿತನಅವರಲ್ಲಿನ ವಿಭಿನ್ನ ನೆಲೆಯನ್ನು ತಿಳಿಸುತ್ತವೆ. ಜ್ವಾಲಾಮುಖಿಕಾದಂಬರಿಯುಜನಸಾಮಾನ್ಯರ ನೋವು ನಲಿವುಗಳನ್ನು ಕಾಣಬಹುದು. ಇಂತಹ ಶ್ರೇಷ್ಠ ಕಾದಂಬರಿಕಾರನ ಕಾದಂಬರಿಗಳ ಮರುಚಿಂತನೆ ಮಾಡಿ ಕೃತಿಗಳನ್ನು ವಿಚಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ’ಆಯುರ್ವೇದದಲ್ಲಿ ಸಂಶೋಧನೆಯ ಕಲ್ಪನೆಯೇ ಒಂದು ಸಂತಸದ ವಿಷಯ. ಆಧುನಿಕ ವಿಜ್ಞಾನಕ್ಕೆ ಹೋಲಿಸಿದಾಗ, ಆಯುರ್ವೇದದಲ್ಲಿನ ಸಂಶೋಧನೆ ಬಹಳ ಕಷ್ಟದ ಸಂಗತಿ. ಆದರೂ ಈ ವಿಷಯದಲ್ಲಿ ಹೆಚ್ಚಿನ ಸಂಶೋಧನೆಗಳು ಏರ್ಪಟ್ಟು ಮನುಕುಲಕ್ಕೆ ಅನುಕೂಲವಾಗುವಂತಾಗಬೇಕು ಎಂದು ಕರ್ನಾಟಕ ಸರ್ಕಾರದ ಆಯುಷ್ ವೈದ್ಯಕೀಯ ವಿಜ್ಞಾನದ ಸಹ ನಿರ್ದೇಶಕರಾದ ಡಾ. ಬಿ ಎಸ್ ಶ್ರೀಧರ ತಿಳಿಸಿದರು. ಅವರು ಗುರುವಾರ ವಿದ್ಯಾಗಿರಿಯ ಡಾ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ವತಿಯಿಂದ ನಡೆದ ’ಅಡ್ವಾನ್ಸ್ಸ್ ಇನ್ ರಿಸರ್ಚ ಆಂಡ್ ಡೆವಲಪ್ಮೆಂಟ್-೨೦೧೯’ ಒಂದು ದಿನದ ವಿಚಾರ ಸಂಕಿರಣ ಹಾಗೂ ’ಆತ್ಮ’ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕೇರಳ ರಾಜ್ಯವು ಆಯುರ್ವೇದದ ಔಷಧಕ್ಕೆ ದೇಶದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಅದಕ್ಕೆ ಕಾರಣ ಇಲ್ಲಿನ ಜನರಲ್ಲಿ ಆಯುರ್ವೇದದ ಬಗೆಗಿನ ಜಾಗೃತಿ ಹಾಗೂ ಏಕರೀತಿಯ ಚಿಕಿತ್ಸಾ ವ್ಯವಸ್ಥೆ. ಆದರೆ ಬೇರೆ ರಾಜ್ಯಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ವಿಭಿನ್ನವಾದ್ದರಿಂದ ಅಷ್ಟೊಂದು ಸಾಫಲ್ಯತೆಯನ್ನು ಪಡೆದಿಲ್ಲ ಎಂದರು. ಪ್ರಪಂಚದ ಪ್ರತಿಷ್ಟಿತ ನೊಬೆಲ್ ಪ್ರಶಸ್ತಿಯು ಕಳೆದ…
