ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಮಹಾವಿಷ್ಣುಭಜನಾ ಸಂಘ ಶ್ರೀ ವಿಷ್ಣುಮೂರ್ತಿ ದೇವಸ್ಥಾಪಾರಂಪಳ್ಳಿ ಸಾಲಿಗ್ರಾಮ ಇದರ ಗೌರವಾರ್ಪಣಂ ಅಭಿವರ್ಷ ಕಾರ್ಯಕ್ರಮ ಮಹಾವಿಷ್ಣು ಸಭಾಂಗಣದಲ್ಲಿ ಜರಗಿತು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್ ಕಾರಂತ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಮಹಾವಿಷ್ಣುಭಜನಾ ಸಂಘ ಪಾರಂಪಳ್ಳಿ ಇದರ ಗೌರವಾಧ್ಯಕ್ಷ ಡಾ.ಪಿ ವಿಷ್ಣುಮೂರ್ತಿ ಐತಾಳ್ ಅವರು ಅಧ್ಯಕ್ಷತೆ ವಹಿಸಿದ್ದರು. ಆನೆಗುಡ್ಡೆ ಶ್ರೀ ವಿನಾಯಕ ದೇಗುಲದ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಾರಂಪಳ್ಳಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ. ರಾಮಚಂದ್ರ ಉಪಾಧ್ಯ, ಜಯ ವೈ.ಎನ್. ಹೇರ್ಳೆ ಸುಮತಿ, ರಾಘವೇಂದ್ರ ಮಧ್ಯಸ್ಥ (ರಘು), ಶ್ರೀಪತಿ ಹೇರ್ಳೆ, ನಾರಾಯಣ ಪೂಜಾರಿ, ವಾರಿಜಾಕ್ಷಿ, ಸರದಿ ಅರ್ಚಕ ಪ್ರತಿನಿಧಿಗಳಾದ ಚಂದ್ರಶೇಖರ ಅಡಿಗ, ರಾಧಾಕೃಷ್ಣ ಅಡಿಗ ಗೌರವ ಅಭಿನಂದನೆ ನೀಡಲಾಯಿತು. ಗೌರವಾರ್ಪಣಂ ಇದರ ಭಾಗವಾಗಿ ಸಂಘದ ಹಿರಿಯ ಸದಸ್ಯರಾದ ಪಿ. ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಹೇರ್ಳೆ, ಶ್ರೀನಿವಾಸ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನಾ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾದ ಹರ್ ಘರ್ ತಿರಂಗಾ ಕಾರ್ಯಕ್ರಮದ ಆ.13ರಿಂದ 15ರವೆರೆಗೆ ಪ್ರತಿ ಮನೆಯಲ್ಲೂ ತಿರಂಗಾ ಹಾರಾಡಬೇಕು. ಆ.15ರಂದು ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಮನೆ ಮನೆಯಲ್ಲೂ ಹಾಕಿಕೊಳ್ಳಬೇಕು. ನಮ್ಮ ವಾರ್ಡ್, ನಮ್ಮ ಬೂತ್ ಮತ್ತು ನಮ್ಮ ಮನೆಯ ಸುತ್ತಮುತ್ತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವುದರ ಮೂಲಕ ಈ ದೇಶಭಕ್ತಿ ಕಾರ್ಯಕ್ರಮವನ್ನು ಇನ್ನೂ ಚೆನ್ನಾಗಿ ನಡೆಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೈಂದೂರು ಮಂಡಲ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ತಿರಂಗಾ ಯಾತ್ರೆಯ ಬೃಹತ್ ಬೈಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರೀಯ ಕಾರ್ಯಕ್ರಮ, ರಾಷ್ಟ್ರೀಯ ವಿಚಾರಧಾರೆಯುಳ್ಳ ಬಿಜೆಪಿ ಕಾರ್ಯಕರ್ತರು ರಾಷ್ಟ್ರ ಮುಖ್ಯ ಎನ್ನುವ ಎಲ್ಲಾ ಕಾರ್ಯಕ್ರಮಗಳನ್ನು ಪ್ರೀತಿಯಿಂದ ಮತ್ತು ಜಾಗೃತೆಯಿಂದ ಎಲ್ಲರೂ ಸೇರಿ ಆಚರಿಸುವಂತಹ ಈ ಸಂದರ್ಭವನ್ನು ನೋಡಲು ಹೆಮ್ಮೆ. ಬಿಜೆಪಿ ಕಾರ್ಯಕರ್ತರು ಕಾನೂನನ್ನೂ ಗೌರವಿಸುತ್ತೇವೆ, ಸಂವಿಧಾನವನ್ನೂ ಗೌರವಿಸುತ್ತೇವೆ ಎಂದು ಹೇಳುದನ್ನು ಆಚರಿಸುತ್ತಾ ಬರಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿಬಿಎಸ್ಇ ಸ್ಕೂಲ್ನಲ್ಲಿ ಫ್ಲೇ ಸ್ಕೂಲ್, ಎಲ್.ಕೆಜಿ ಹಾಗೂ ಯು.ಕೆ.ಜಿ. ಮಕ್ಕಳಿಗೆ ಮಾನ್ಸೂನ್ ಫೆಸ್ಟ್ ಹಾಗೂ ಬ್ಲೂ ಕಲರ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಮಳೆಗಾಲಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳನ್ನು ಮಾಡಿ ಆನಂದಿಸಿದರು. ಪೇಪರ್ ಬೋಟ್ ಹಾಗೂ ನೃತ್ಯಗಳನ್ನು ಮಾಡಿ ಮಳೆಗಾಲದ ಆಟಗಳ ಮಹತ್ವವನ್ನು ಅರಿತುಕೊಂಡರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೀಲಿ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ತರಗತಿ ಕೋಣೆಗಳನ್ನು ನೀಲಿ ಬಣ್ಣದ ಅಲಂಕಾರಿಕ ವಸ್ತುಗಳಿಂದ ಅಲಂಕರಿಸಲಾಯಿತು. ಮಕ್ಕಳಿಗೆ ವಿವಿಧ ಬಣ್ಣಗಳ ಅರಿವು ಮೂಡಿಸುವ ಉದ್ದೇಶದಿಂದ ಪ್ರತೀ ತಿಂಗಳಿಗೊಮ್ಮೆ ವಿವಿಧ ಬಣ್ಣಗಳಿಗೆ ಸಂಬಂಧಿಸಿದ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳಲ್ಲಿ ಸೃಜನಾತಮಕ ಕಲಿಕೆಗೆ ಒತ್ತು ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು ಹಾಗೂ ಶಾಲಾ ಸಿಬ್ಬಂಧಿಯವರು ಉಪಸ್ಥಿತರಿದ್ದರು. ಎಲ್. ಕೆ.ಜಿ ವಿಭಾಗದ ಸಂಯೋಜಕಿ ವಿಲಾಸಿನಿ ಶೆಟ್ಟಿ ಕಾರ್ಯಕ್ರಮ ಸಂಘಟಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಸಿ.ಎ. ಸಿ.ಎಸ್. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಾಲೇಜಿನ ಟ್ರಸ್ಟಿಗಳಾದ ಅನುಪಮಾ ಎಸ್. ಶೆಟ್ಟಿ, ಉದ್ಘಾಟಿಸಿ ಮಾತನಾಡಿ, ಸಿ.ಎ. ಮತ್ತು ಸಿ.ಎಸ್. ನಂತರ ವೃತ್ತಿಪರ ಕೋರ್ಸ್ಗಳನ್ನು ಪದವಿಯ ಜೊತೆಗೆ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳು ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಉದ್ಯೋಗ ಪಡೆಯಲು ಸಾಧ್ಯ ಮತ್ತು ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಕಾಲೇಜಿನಲ್ಲಿ ನೀಡಲಾಗುತ್ತಿರುವ ತರಬೇತಿಯನ್ನು ಪಡೆಯುವುದರ ಮುಖಾಂತರ ಹೆಚ್ಚು ಜ್ಞಾನಾರ್ಜನೆಯನ್ನು ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರದ ಕೆರಿಯ್ ಕೋಚಿಂಗ್ ಸಂಸ್ಥೆಯ ಸ್ಥಾಪಕ ಸಿ.ಎ. ರಾಜೇಶ ಶೆಟ್ಟಿ ಮತ್ತು ಸಿ.ಎ. ನಾಗೇಶ ಆರ್ ನಾಯ್ಕ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಿ.ಎ. ಎಸ್. ಕೋರ್ಸ್ನ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ವಾಣಿಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಹಂಗಳೂರು ಇವರು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಸಲುವಾಗಿ ಆದಿತ್ಯವಾರ ದೇಶಭಕ್ತಿಗೀತೆ ಸ್ಪರ್ಧೆಯನ್ನು ಆಯೋಜಿಸಿದರು. ಕುಂದಾಪುರ ತಾಲೂಕಿನ ಅನೇಕ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪೂರ್ವೀ ಜಗನ್ನಾಥ್ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಹಾಗೆಯೇ ಹತ್ತನೇ ತರಗತಿಯ ದಾಕ್ಷಾಯಣಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳನ್ನು ಹರಸಿ, ಅಭಿನಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ತನ್ನದೆ ಆದ ಪರಂಪರೆಯನ್ನು ವಿಶ್ವದೆಲ್ಲೆಡೆ ಪಸರಿಸಿಕೊಂಡಿದೆ, ಇಲ್ಲಿನ ಭಾಷೆಯ ಜತೆಗೆ ಸಾಂಪ್ರಾದಾಯಿಕ ಬದುಕು ಕಟ್ಟಿಕೊಟ್ಟಿದೆ ಎಂದು ಸಾಹಿತಿ ಕುಂದಗನ್ನಡದ ಪೂರ್ಣಿಮಾ ಕಮಲಶಿಲೆ ಹೇಳಿದರು. ಅವರು ಭಾನುವಾರ ಕೋಟದ ಹಂದಟ್ಟು ಗೆಳೆಯರ ಬಳಗ ಗೀತಾನಂದ ವೇದಿಕೆಯಲ್ಲಿ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಕೋಟ ಇದರ ಮಾರ್ಗದರ್ಶನದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್-2025 ಊರ್ ಕೇರಿ ಬದ್ಕಿನ್ ಹಬ್ಬು ಕುಂದಾಪ್ರ ಭಾಷಿಯ ಗಮ್ಜಲ್ ಮಾಡಿ ಮಾತನಾಡಿದರು. ಇಂದಿನ ಮಕ್ಕಳು ಬರೇ ಮೊಬೈಲ್ ಗೀಳಿನಲ್ಲಿ ಕುಂದಾಪ್ರ ಭಾಷೆ ಬದುಕಿನ ವಿಚಾರಧಾರೆಯನ್ನು ಮೆರೆತಿರುವುದು ಬೇಸರದ ಸಂಗತಿ. ಮನೆಯ ಹಿರಿಯರು ಮಕ್ಕಳಿಗೆ ಇದರ ಉಳಿವಿನ ಬಗ್ಗೆ ಆಗಾಗ ತಿಳಿಹೇಳುವ ಕಾರ್ಯಮಾಡಬೇಕು. ಪಂಚವರ್ಣ ಮಹಿಳಾ ಮಂಡಲ ಈ ಕುಂದಗನ್ನಡ ಸಂಸ್ಕತಿ ಉಳಿಸುವ ಕಾರ್ಯ ಪ್ರಶಂಸನೀಯ. ಇಂತಹ ಕಾರ್ಯಕ್ರಮ ಎಲ್ಲೆಡೆ ಪಸರಿಸಿಕೊಳ್ಳಲಿ ಭಾಷಾಭಿಮಾನ, ಬದುಕಿನ ಸಂಸ್ಕಾರದ ಬೀಜ ಬಿತ್ತೋಣ ಎಂದರು. ಕಾರ್ಯಕ್ರಮವನ್ನು ಸಮಾಜಸೇವಕಿ ಡಾ. ವಾಣಿಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ ಕೌಶಲ್ಯಗಳ ಅಭಿವೃಕ್ತಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ” ಟ್ಯಾಲೆಂಟ್ ಡೇ ” ಹಾಗೂ “ಫ್ರೆಶರ್ಸ್ ಡೇ ” ಅನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಲ್ಲಿರುವ ಕಲಾತ್ಮಕ ಸಾಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಸಾಮರ್ಥ್ಯವನ್ನು ಹೊರ ತರಲು ಅವಕಾಶ ಕಲ್ಪಿಸುವುದಾಗಿತ್ತು. ಈ ವಿಶೇಷ ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕರು ಉದ್ಘಾಟಿಸಿದರು. ‘ರೆಟ್ರೋಥೀಮ್ ‘ಅಡಿಯಲ್ಲಿ ಆರಂಭವಾದ ಕಾರ್ಯಕ್ರಮ 70- 80ರ ದಶಕದ ಶೈಲಿಯ ಪೋಷಾಕಿನೊಂದಿಗೆ ವಿದ್ಯಾರ್ಥಿಗಳು ನೃತ್ಯ, ಗೀತ ಗಾಯನ , ನಾಟಕ, ಇನ್ಸ್ಟ್ರುಮೆಂಟಲ್ ಸಂಗೀತ ಹೀಗೆ ಅನೇಕ ವಿಭಿನ್ನ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ತೋರಿ ಕಾರ್ಯಕ್ರಮವನ್ನು ಸಕಾಲಿಕವಾಗಿ ಸಮೃದ್ಧಗೊಳಿಸಿದರು. ಇದರಲ್ಲಿ ಪದವಿಪೂರ್ವ ವಿಭಾಗದ ಹದಿನೈದಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ವಿಶೇಷವಾಗಿತ್ತು. ಇದಕ್ಕೆ ಜೊತೆಯಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ‘ಫ್ರೆಷರ್ಸ್ ಡೇ’ ಕಾರ್ಯಕ್ರಮವನ್ನು ಕೂಡ ಆಚರಿಸಲಾಯಿತು. ಈ ಕಾರ್ಯಕ್ರಮದ ಪ್ರಮುಖ ಆಶಯವೆಂದರೆ ಹೊಸದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ಕೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’ಬೆಳಕು – ಆಪ್ತ ಸಮಾಲೋಚನಾ ಕೇಂದ್ರ’ವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟಿಸಲಾಯಿತು. ಪ್ರತಿಷಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಭೂಮಿಯಲ್ಲಿರುವ ಎಲ್ಲಾ ಜೀವಿಗಳ ಪೈಕಿ ಮನುಷ್ಯ ಅತ್ಯಂತ ವಿಶೇಷ. ತನ್ನ ಬುದ್ಧಿಶಕ್ತಿ, ಕಲ್ಪನೆ, ನೈತಿಕ ಮೌಲ್ಯಗಳು ಹಾಗೂ ಸಮಾಜವನ್ನು ರೂಪಿಸುವ ಸಾಮರ್ಥ್ಯವು ಮನುಷ್ಯನನ್ನು ಇತರ ಜೀವರಾಶಿಗಳಿಗಿಂತ ಭಿನ್ನಗೊಳಿಸಿದೆ. ಆದರೆ, ಈ ಅಸಾಧಾರಣ ಸಾಮರ್ಥ್ಯಗಳ ಜೊತೆಗೆ ಮನುಷ್ಯ ತನ್ನ ಭಾವನಾತ್ಮಕ ಅಸ್ಥಿರತೆಯ ಬಲೆಗೆ ಸುಲಭವಾಗಿ ಸಿಲುಕ ಬಲ್ಲ ಎಂದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯತ್ನ ಮಾಡುವ ಸಂದರ್ಭಗಳಲ್ಲಿ, ಸ್ಪರ್ಧೆ, ಅತಿಯಾದ ಆಕಾಂಕ್ಷೆ ಹಾಗೂ ಪೋಷಕರ ಒತ್ತಡದಿಂದಾಗಿ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭಗಳು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಸಮಯದಲ್ಲಿ ಆಪ್ತ ಸಮಾಲೋಚನೆಯ ಅಗತ್ಯತೆಯಿದೆ ಎಂದರು. ಸಮಸ್ಯೆಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶಿವಕುಮಾರ್ ಅವರು ಮಾತನಾಡಿ, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ…
