Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನಾ ಕ್ರಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಳೆದ ಬಾರಿ ವಿವಿಧ ಸಮುದಾಯಗಳ ಸಹಯೋಗದಲ್ಲಿ 9 ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗಿತ್ತು. ಇದರಲ್ಲಿ 1478 ಜನರು ಪಾಲ್ಗೊಂಡು, 784 ಜನರಿಗೆ ಉಚಿತ ಕನ್ನಡಕ ಹಾಗೂ 109 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಲಾಗಿದೆ ಎಂದರು. ಜೂನ್ 12 ಕ್ಕೆ ಮುಂದಿನ ಹಂತದ ಉಚಿತ ನೇತ್ರ ತಪಾಸಣಾ ಶಿಬಿರವು ನಡೆಯಲಿದೆ ಎಂದು ತಿಳಿಸಿದರು. ಈ ಬಾರಿಯ ಒಟ್ಟು ಮೂರು ಹಂತದ ಶಿಬಿರಗಳಲ್ಲಿ 348 ಮಂದಿ ಭಾಗಿಯಾಗಿ 178 ಜನರು ಉಚಿತ ಕನ್ನಡಕ ಪಡೆಯಲು ಹಾಗೂ 39 ಜನರು ಶಸ್ತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ನಲ್ಲಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕ.ರಾ.ರ.ಸಾ.ನಿಗಮದ ವೆಬ್‌ಸೈಟ್ https://ksrtc.karnataka.gov.in/studentpass ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿ ಮಾಡಿ ಶಾಲಾ ಅಥವಾ ಕಾಲೇಜು ಮುಖೋಪಾಧ್ಯಾಯರ ಅಥವಾ ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕು. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ Iಊಒ ಹಾಗೂ ಈಅI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನದೊಂದಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿವಿವರ:ಫುಡ್ ಮತ್ತು ಬೆವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಕನಿಷ್ಟ ಐದನೇ ತರಗತಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ಮಲ್ಟಿ ಕ್ಯೂಸೈನ್ ಕುಕ್ ತರಬೇತಿಗೆ ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್‌ವೊಂದರಲ್ಲಿ ಖರೀದಿಸಿದ ವಸ್ತುಗಳಿಗೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಕಾರಣಕ್ಕೆ ‌ಮಹಿಳೆಯೊಬ್ಬರು ಮೆಡಿಕಲ್ ಶಾಪಿನ ಯುವತಿ ಮೇಲೆ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಯಾಸ್ಮಿನ್ ಹಲ್ಲೆಗೈದ ಆರೋಪಿ. ಮೆಡಿಕಲ್ ಶಾಪಿಗೆ ತೆರಳಿದ್ದ ಯಾಸ್ಮಿನ್ ಔಷಧಿ ಖರೀದಿಸಿ, 500 ರೂ. ಕೊಟ್ಟಿದ್ದರು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಅಂದಿದ್ದಕ್ಕೆ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಯುವತಿಯನ್ನು ಕುಂದಾಪುರದ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ಎಸ್ಪಿ ಭೇಟಿ: ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ, ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮಕೈಗೊಳ್ಳಾಗುವುದು ಎಂದು ಅವರು ಭೇಟಿಯ ವೇಳೆ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೆಶ್ವರ ದೇಗುಲದ ಪ್ರಧಾನ ಅರ್ಚಕರಾದ ಚಂದ್ರಶೇಖರ ಮಂಜ (78) ಅವರು ಇತ್ತೀಚಿಗೆ ನಿಧನ ಹೊಂದಿದರು. ಹಿರಿಯ ಅರ್ಚಕರಾಗಿ ಹಲವು ವರ್ಷ ಕಾಲ ಸೇವೆ ಸಲ್ಲಿಸಿದ್ದ ಅವರು ಕ್ಷೇತ್ರದ ಭಕ್ತರ ಗೌರವಕ್ಕೆ ಪಾತ್ರರಾಗಿದ್ದರು. ದೇಗುಲದ ಆನುವಂಶೀಯ ಮೊಕೇಸರ ಸಿ. ಸದಾಶಿವ ಶೆಟ್ಟಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ವಿಠಲವಾಡಿ ಮೂಲದ ಹೀನಾ ಕೌಷರ್ (33) ನಾಪತ್ತೆಯಾದ ಮಹಿಳೆ. ಹೀನಾ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 04-00 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರಸ್ತೆಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಮಹಿಳೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದು ಎಲ್ಲಿಯೂ ಪತ್ತೆ ಆಗಿರುವುದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ. ಕುಂದಾಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರ  ಮಕ್ಕಳಿಗೆ 10ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವು ಪಾಂಡೇಶ್ವರ ಶಾಲೆಯಲ್ಲಿ ಜರುಗಿತು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅನ್ನಪೂರ್ಣ ಹಾಗೂ ಪೂರ್ವಿ ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತು. 205 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ. ಸಿ. ಚಂದ್ರಶೇಖರ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಉದ್ಯಮಿಗಳಾದ ದಯಾನಂದ ಪೂಜಾರಿ ಮೂಡಹಡು ಹಾಗೂ ಗೋಪಾಲ ಪೂಜಾರಿ ಮಠತೋಟ, ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತಾ ವೆಂಕಟೇಶ್ ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಒಂದು ಸಂಘಟನೆ ಹೇಗಿರಬೇಕೆಂಬುವದನ್ನು ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿ ತೋರಿಸಿಕೊಟ್ಟಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಡಾ. ಪುನೀತ್‌ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಧಿಗಳಿಗೆ  6ನೇ ವರ್ಷದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘಟನೆಗಳು ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಕಾಣುತ್ತೇವೆ. ಆದರೆ ಪಂಚವರ್ಣ ಸಂಘಟನೆ ಅತ್ಯದ್ಭುತವಾಗಿ ಇಡೀ ರಾಜ್ಯಕ್ಕೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ಮಾತಲ್ಲ, ಬದಲಾಗಿ ಅದನ್ನು ನಿರಂತವಾಗಿ ಕೊಂಡ್ಯೋಯುವುದು ಸವಾಲಿನ ಕಾರ್ಯ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿಯಲ್ಲಿ ನಿಲ್ಲಬೇಕು ಹಾಗೂ ಇನೊರ್ವರಿಗೂ ಸಹಾಯಹಸ್ತ ಚಾಚುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಎಂದು ಕರೆ ನೀಡಿದರು. ಇದೇ ವೇಳೆ ಸುಮಾರು 60 ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಸದರಿ ತರಬೇತಿಗಳು ಜೂನ್ 30 ರಿಂದ ಪ್ರಾರಂಭವಾಗಲಿದ್ದು, ತರಬೇತಿಗೆ ಸಂಬಂಧಿಸಿದಂತೆ ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್‌ಗಳಲ್ಲಿ ಕೆಲಸ ಖಾತರಿಯಾಗಿರುವುದು. ತರಬೇತಿ ಪಡೆಯುವ ವೇಳೆ ಮಾಸಿಕ 2,000 ರೂ. ಗಳ ಸ್ಟೈಫಂಡ್ ನೀಡಲಾಗುವುದು. ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಯೂನಿಫಾರ್ಮ್ ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ…

Read More