Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೋಪಮಾಡಿಕೊಂಡ ಯುವಕನೋರ್ವ ಬಳ್ಳೂರು ಕಳುವಿನಬಾಗಿಲು ವಾರಾಹಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಬಳ್ಳೂರು ಗ್ರಾಮದ ಸ್ವಸ್ತಿಕ್ (21) ಆತ್ಮಹತ್ಯೆಗೆ ಶರಣಾದ ಯುವಕ. ಸ್ವಸ್ತಿಕ್ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳುವ ಸ್ವಭಾವದವರಾಗಿದ್ದರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಆತನ ಅಜ್ಜಿ ತಾಯಿಗೆ ಬೊಂಡ ಕೊಟ್ಟು ಬರುವಂತೆ ಹೇಳಿದ್ದಕ್ಕೆ ಕೋಪಗೊಂಡು ಸೈಕಲ್ ತೆಗೆದುಕೊಂಡು ಹೋಗಿದ್ದು ವಾಪಾಸ್ಸು ಮನೆಗೆ ಬಂದಿರುವುದಿಲ್ಲ. ಸ್ವಸ್ತಿಕ್ ಎಲ್ಲಿಯಾದರೂ ಹೋಗಿರಬಹುದು ವಾಪಾಸ್ಸು ಬರಬಹುದು ಎಂದು ಮನೆಯವರು ಸುಮ್ಮನಿದ್ದರು. ಸ್ವಸ್ತಿಕ್ ನ ಮೃತದೇಹ ಬಳ್ಳೂರು ಕಳುವಿನಬಾಗಿಲು ವಾರಾಹಿ ಹೊಳೆಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮನೆಯವರು ಹಾಗೂ ಇತರರು ಬಂದು ನೋಡಿ ಗುರುತಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಆಸಕ್ತ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ  ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ  ಸ್ಫರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಮಹಿಳಾ ತಂಡವು ಸೆಮಿಫೈನಲ್‌ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಬ್ರಹ್ಮಾವರದ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವ, 19 ವರ್ಷ ವಯಸ್ಸು ಮೀರದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ. ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಮಾಡಲಾಗುವುದು ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆಯ ಹಳಗೇರಿ ಗ್ರಾಮದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಸ್ಥಾನದ 4ನೇ ವರ್ಷದ ವರ್ಧಂತ್ಯೋತ್ಸವ ಮೇ.14 ಬುಧವಾರದಂದು ನಡೆಯಲಿದೆ. ಅಂದು ಬೆಳಿಗ್ಗೆ ಗಂಟೆ 8.00ರಿಂದ ನಾಗದೇವರಿಗೆ ಶುದ್ಧಕಲಶಾಭಿಷೇಕ, ಸಂಜೆ ಗಂಟೆ 4.00ರಿಂದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಗಳ ಕಲಾಭಿವೃದ್ಧಿಹೋಮ ನಡೆಯಲಿರುವುದು ಹಾಗೂ ರಾತ್ರಿ ಗಂಟೆ 8.00 ರಿಂದ ಅನ್ನಸಂತರ್ಪಣೆ ಜರುಗಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಾತ್ರಿ ಗಂಟೆ 8.00 ರಿಂದ 9.30 ರವರೆಗೆ ಮನು ಹಂದಾಡಿ ಮತ್ತು ಬಳಗದವರಿಂದ ಹಾಸ್ಯ ನಗೆಸಂಜೆ ಕಾರ್ಯಕ್ರಮ ಜರುಗಲಿರುವುದು. ಬಳಿಕ 9.30ರಿಂದ 10.30ರವರೆಗೆ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗಲಿರುವುದು. ರಾತ್ರಿ ಗಂಟೆ 10.30ರಿಂದ 12.00ರ ವರೆಗೆ ಸ್ಥಳೀಯ ನೃತ್ಯ ವೈಭವ ಕಾರ್ಯಕ್ರಮ ಜರುಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಯೋಧರ ಯಶಸ್ವಿಯ ಕಾರ್ಯಾಚರಣೆಗಾಗಿ ಹಾಗೂ ಸೇನೆಯ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಸಮಸ್ತ ವೀರ ಯೋಧರಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಇಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಪೆಹೆಲ್ಗಾಂ ಅಮಾಯಕರ ಹತ್ಯೆಮಾಡಿದ ಪಾಕಿಸ್ಥಾನದ ಪಾಪಿಗಳ ಮೇಲೆ ಪ್ರತಿಕಾರ ಮಾಡಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಕಾರ್ಯದ ಅಂಗವಾಗಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಬಾಶಿಯಲ್ಲಿ ಭಾರತೀಯ ಯೋಧರ ಯಶಸ್ವಿಗಾಗಿ ಪೂಜಾಕಾರ್ಯ ನೆರವೇರಿತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ,, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್., ಮಂಡಲ ಉಪಾಧ್ಯಕ್ಷರಾದ ಪ್ರಕಾಶ್ ಜಿ. ಪೂಜಾರಿ, ಸುನಿಲ್ ಶೆಟ್ಟಿ ಹೇರಿಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್, ಅನಿತಾ ಶ್ರೀಧರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ನೇತ್ರಾವತಿ ಮಡಿವಾಳ,, ಮನೀಶ್ ಬೀಜಾಡಿ,, ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಗುರು ಮುಖೇನ ಸರಿಯಾದ ಜ್ಞಾನಾರ್ಜನೆಯೊಂದಿಗೆ ಲಭ್ಯ ಅವಕಾಶಗಳ ಸದ್ಬಳಕೆಯಿಂದ ತಮ್ಮ ಕೌಶಲ್ಯ, ಪ್ರತಿಭೆಯನ್ನು ಪರಿಶ್ರಮ, ನಿಷ್ಠೆಯಿಂದ ಉದ್ದೀಪನಗೊಳಿಸಿಕೊಂಡರೆ ತಾವುಗಳಿಸಿದ ವಿದ್ಯೆಯ ವರ್ಚಸ್ಸು ಅಧಿಕವಾಗುತ್ತದೆ ಎಂದು ಉಡುಪಿ ಆಕಾಶ್ ಇನ್‌ಸ್ಟಿಟ್ಯೂಟ್ ಹಿರಿಯ ಉಪನ್ಯಾಸಕ ಹಾಗೂ ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಪ್ರದೀಪ ವಿ. ಸಾಮಗ ನುಡಿದರು ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಪ್ರತಿಭಾ ದಿನಾಚರಣೆ ಸಿಂಚನ ಅಂತರ್ ತರಗತಿ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು ಬದ್ಧರಾಗಿ ಉತ್ಸಾಹದಿಂದ ಆಲಿಸುವ ಮನೋಭಾವ ಹಾಗೂ ಸುಸಂಸ್ಕೃತ ನಡವಳಿಕೆ ಹೊಂದುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕು. ಪಠ್ಯದೊಂದಿಗೆ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ಕೃಷ್ಠ ಜೀವನ ಮೌಲ್ಯಗಳನ್ನು ರೂಢಿಸಿಕೊಂಡರೆ ಉಜ್ವಲ ಭವಿಷ್ಯ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಕರಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವ ವಿಕಸನಗೊಂಡು ವಿದ್ಯಾರ್ಥಿಗಳಿಗೂ ನೀವು ಮಾದರಿಯಾಗಬಲ್ಲಿರಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟೀ ವಿವೇಕ್ ಆಳ್ವ ಹೇಳಿದರು. ಅವರು ಕುವೆಂಪು ಸಭಾಂಗಣದಲ್ಲಿ ನಡೆದ ರಾಜ್ಯದ ಮೊದಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭದ ಉದ್ಘಾಟಕರಾಗಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಅನುಕರಿಸುವುದು ಸರ್ವೇ ಸಾಮಾನ್ಯ. ಹಾಗಾಗಿ ರೇಂಜರ್ಸ್ ಘಟಕದಲ್ಲಿ ಸೇವಾ ಮನೋಭಾವವದಿಂದ ತೊಡಗಿಸಿಕೊಂಡು, ಮುಂದಿನ ಪೀಳಿಗೆಗೂ ಕೂಡಾ ಪ್ರೇರಣೆಯಾಗಿ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಸಿಗುವ ಹತ್ತು ಹಲವು ಚಟುವಟಿಕೆಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಪ್ರತಿ ಶಾಲಾ ಕಾಲೇಜುಗಳಲ್ಲಿ ಕೂಡಾ ಸ್ಕೌಟ್ಸ್ ಮತ್ತು ಗೈಡ್ಸ್, ರೇಂಜರ್ಸ್ ರೋವರ್ಸ್, ಕಬ್ಸ್- ಬುಲ್‌ಬುಲ್ಸ್ ಘಟಕಗಳನ್ನು ಪ್ರಾರಂಭಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ…

Read More