Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಮಲ್ಪೆ ಸೇರಿದಂತೆ ವಿವಿಧ ಮೀನುಗಾರಿಕಾ ಬಂದರುಗಳ ಒಳಗೆ ಬಾಲ ಕಾರ್ಮಿಕರ ಪ್ರಕರಣಗಳು ಕಂಡುಬಂದ ನಿಟ್ಟಿನಲ್ಲಿ ಬಂದರಿನ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಬೇಕು. ಒಂದು ವೇಳೆ ಮಕ್ಕಳು ಬಂದರಿನ ಒಳಗೆ ಕಂಡು ಬಂದಲ್ಲಿ ಸಂಬಂಧಪಟ್ಟ ಬಂದರಿನ ಪ್ರವೇಶ ದ್ವಾರದವರಿಗೆ ನೋಟೀಸ್ ನೀಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಲಹಾ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೀನುಗಾರಿಕಾ ಬಂದರಲ್ಲಿ ಪದೇ ಪದೇ ಬಾಲ ಕಾರ್ಮಿಕರು ಪತ್ತೆಯಾಗುವುದು, ಮೀನು ಹೆಕ್ಕುವುದು ಮುಂತಾದ ಘಟನೆಗಳು ನಡೆಯುತ್ತಿದ್ದು, ಇದನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊರ ರಾಜ್ಯ, ಜಿಲ್ಲೆಗಳಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕರು ಕೆಲಸ ಮಾಡುವ ಕ್ವಾರಿ, ಕ್ರಷರ್‌ಗಳಲ್ಲಿ ಬಾಲ ಕಾರ್ಮಿಕರು ದುಡಿಯುತ್ತಿರುವ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿ ಆಗಮಿಸಿದ ಎಸ್. ಅಂಗಾರ ಇವರಿಗೆ ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ಇವರ ವತಿಯಿಂದ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಮೀನುಗಾರಿಕೆ ಸಚಿವ ಎಸ್. ಅಂಗಾರ,ನಾನು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಷ್ಟಗಳನ್ನು ನೋಡಿ ಈ ಸ್ಥಾನಕ್ಕೇರಿದ್ದೇನೆ. ಸಾಮಾನ್ಯ ಜನರ ಕಷ್ಟಗಳು, ನೋವುಗಳ ಅರಿವು ನನಗಿದೆ. ಸಮಾಜ ಋಣ ತೀರಿಸಲು ನನ್ನ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸುತ್ತೇನೆ. ಮೀನುಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎ. ಆನಂದ ಖಾರ್ವಿ ಮಾತನಾಡಿ, ಕಳೆದ ಎರಡು ತಿಂಗಳಿಂದ ಸೀಮೆಎಣ್ಣೆ ಸಿಗುತ್ತಿಲ್ಲ, 300ಲೀ ನೀಡುವಲ್ಲಿ 170ಲೀ ಮಾತ್ರ ಸಿಗುತ್ತಿದೆ, 400ಲೀ ಸೀಮೆಎಣ್ಣೆ ಬೇಡಿಕೆ ಇದೆ. ಸೀಮಿತ ಮೀನುಗಾರರಿಗೆ ಮಾತ್ರ ಇಂಜಿನ್ ಸಬ್ಸಿಡಿ ನೀಡಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಲ್ವಾಡಿಯ ಗುಜರಿ ಅಂಗಡಿಯಲ್ಲಿ ಸೋಮವಾರ ಆ 90 ದಿನಗಳು ಚಿತ್ರದ ಮುಹೂರ್ತ ಸಮಾರಂಭ ಜರುಗಿತು. ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣಕುಮಾರ್ ಶೆಟ್ಟಿ ಕ್ಯಾಮರಾಗೆ ಚಾಲನೆ ನೀಡಿ ಮಾತನಾಡಿ ಸಿನೆಮಾ ನಿರ್ಮಾಣ ಮಾಡುವುದು ಚಿಕ್ಕ ವಿಷಯವಲ್ಲ. ಪ್ರತಿಭಾನ್ವಿತರೊಂದಿಗೆ ಉತ್ತಮ ತಂಡ ಸಿನೆಮಾ ನಿರ್ಮಿಸುತ್ತಿದ್ದು ತಂಡಕ್ಕೆ ಯಶಸ್ಸು ದೊರೆಯಲಿ ಎಂದವರು ಆಶಿಸಿದರು. ಪತ್ರಕರ್ತ ಎಸ್. ಜನಾರ್ದನ ಮರವಂತೆ ಮಾತನಾಡಿ ಯಾಕುಬ್ ಅವರ ಜೀವನದೃಷ್ಟಿ ವಿಶೇಷವಾದುದು. ಅವರ ಹಿಂದಿನ ಎರಡು ಸಿನೆಮಾಗಳಿಗೆ ಅಂತರಾಷ್ಟ್ರೀಯ ಮನ್ನಣೆ ದೊರೆತಾಗ ಹಾಗೂ ಕೊರೋನಾ ಕಾಲದಲ್ಲಿ ಅವರು ತಮ್ಮ ಹಿಂದಿನ ಬದುಕಿಗೆ ಮರಳಿದಾಗಲೂ ಅವರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಎಲ್ಲವನ್ನೂ ಸಕಾರಾತ್ಮಕವಾಗಿ ಗ್ರಹಿಸುವುದರಿಂದಲೇ ಅವರು ಮತ್ತೆ ರೋನಾಲ್ಡ್ ಲೋಬೋ ಅವರೊಂದಿಗೆ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಕುಂದಾಪುರವನ್ನು ಕೇಂದ್ರವಾಗಿರಿಸಿಕೊಂಡು ಅವರ ನಿರ್ಮಿಸುತ್ತಿರುವ ಸಿನೆಮಾಕ್ಕೆ ಶುಭವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಪ್ರಕಾಶ್ ತೋಳಾರ್, ಉದಯಕುಮಾರ್ ಶೆಟ್ಟಿ, ವಿನಯಕುಮಾರ್ ಶೆಟ್ಟಿ, ಸಂಘಟಕ ಸುಬ್ರಹ್ಮಣ್ಯ ಶೆಟ್ಟಿ, ನಟರಾದ ಬಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತರ ಬದುಕಿನಲ್ಲಿ ಅನುಸರಿಸುತ್ತಿದ್ದ ಶಿಸ್ತು, ಸಮಯ ಪ್ರಜ್ಞೆ ನಮಗೆಲ್ಲ ಮಾದರಿಯಾಗಬೇಕು ಜೊತೆಗೆ ಅದನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತ ಪುತ್ಥಳಿ, ರಂಗಮಂದಿರ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮಾತನಾಡಿದರು. ಕಾರಂತರು ಬರೆದಂತೆ ಬದುಕಿ ಮಾದರಿಯಾದವರು, ಅವರ ಬದುಕಿನುದ್ದಕ್ಕೂ ಹೊಸತನದ ಅನ್ವೇಷಣೆ, ಪರಿಸರದ ಕಾಳಜಿ, ಹೋರಾಟದ ಸ್ವರೂಪ ಎಲ್ಲವೂ ಅನುಕರಣೀಯ ಇಂತಹ ಧೀಮಂತ ವ್ಯಕ್ತಿಯ ಬದುಕಿನ ಚಿತ್ರಣ ಮುಂದಿನ ಜನಾಂಗಕ್ಕೆ ರವಾನಿಸುವ ಉದ್ದೇಶದಿಂದ ಸ್ಥಾಪನೆಯಾದ ಈ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಚಟುವಟಿಕೆ, ಅಭಿವೃದ್ಧಿ ನೋಡಿ ಸಂತಸವಾಗುತ್ತದೆ, ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು. ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮ ಥೀಮ್ ಪಾರ್ಕ್‌ನ ವಿಶೇಷತೆ ಮತ್ತು ಚಟುವಟಿಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಎಸ್. ವಿ ಆಂಗ್ಲ ಮಾದ್ಯಮ ಪೌಢಶಾಲೆಯ ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರು ಜೂನ್ 2020ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಉತ್ತಮ ಬೋಧನೆಯನ್ನು ನಡೆಸಿ ಕಾಲೇಜಿಗೆ ಶೇ.100 ಫಲಿತಾಂಶವನ್ನು ನೀಡಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ಸಹ ಶಿಕ್ಷಕ- ಶಿಕ್ಷಕಿಯರಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊರೊನಾ ಭೀತಿಯ ಹಿನ್ನಲೆಯಲ್ಲಿ ವಿವಿಧ ಆಸ್ಪತ್ರೆಗಳ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆಯಲ್ಲೂ ತೀವ್ರ ಇಳಿಮುಖವಾಗುತ್ತಿದೆ. ರಕ್ತದಾನಿಗಳು ಸ್ವಯಂಪ್ರೇರಿತಾಗಿ ರಕ್ತನಿಧಿ ಕೇಂದ್ರಗಳಿಗೆ ಬಂದು ರಕ್ತದಾನ ಮಾಡಿ ರಕ್ತದ ಅಭಾವವನ್ನು ಕಡಿಮೆ ಮಾಡಲು ಸಹಕಾರ ನೀಡುವುದರ ಜೊತೆಗೆ ಒಬ್ಬರ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸಂಸ್ಥೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಖಾರ್ವಿ, ಕಾರ್ಯದರ್ಶಿ ಶ್ರೀನಿವಾಸ ಖಾರ್ವಿ, ಗೌರವಾಧ್ಯಕ್ಷ ರಾಘವೇಂದ್ರ ಖಾರ್ವಿ, ಗಂಗಾಧರ ಖಾರ್ವಿ ಐಪಿಎಲ್, ಗಂಗಾಧರ ಖಾರ್ವಿ, ಪ್ರದೀಪ ಖಾರ್ವಿ, ವಿಜಯ ಖಾರ್ವಿ, ಶ್ರೀಕಾಂತ ಬಿಲ್ಲವ, ಸತೀಶ ಖಾರ್ವಿ, ನಾಗರಾಜ ಖಾರ್ವಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 03, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ 6000 ರೂ. ಗೌರವಧನದ ನೆಲೆಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತ (ಯು.ಆರ್.ಡಬ್ಲೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 6,000 ರೂ. ಗೌರವಧನದ ನೆಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲೂ) ನೇಮಕಾತಿಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು, ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಭೆ/ ಪಟ್ಟಣ ಪಂಚಾಯತ್/ ಗ್ರಾಮ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉದ್ಯೋಗ ಮತ್ತು ಇತರ ಕ್ಷೇತ್ರಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಕಿರುಕುಳಗಳ ಬಗ್ಗೆ ಜಾಗೃತರಾಗುತ್ತಾ ತಮ್ಮ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು, ಹದಿ-ಹರೆಯದ ಯುವ ಜನಾಂಗ ಲೈಂಗಿಕತೆ ಮತ್ತು ತಮ್ಮ ವೇಷ-ಭೂಷಣ, ಭಾಷೆಗಳ ಕುರಿತು ಜಾಗೃತರಾಗಬೇಕು. ಪದವಿ ವ್ಯಾಸಂಗದ ಸಂದರ್ಭದಲ್ಲೇ ಈ ಕುರಿತು ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ಉಡುಪಿ ಡಾ. ಎ. ವಿ. ಬಾಳಿಗಾ ಸಮೂಹ ಸಂಸ್ಥೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಹೇಳಿದರು. ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೈಂಗಿಕ ದೌರ್ಜನ್ಯ ವಿರೋಧಿ ಘಟಕದ ಆಶ್ರಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ವಿರೋಧಿ ಜಾಗೃತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಲೈಂಗಿಕ ದೌರ್ಜನ್ಯ ವಿರೋಧಿ ಘಟಕದ ಸಂಯೋಜಕಿ ಜ್ಯೋತಿ ಮೊಗವೀರ ಸ್ವಾಗತಿಸಿದರು. ರಸಾಯನ ಶಾಸ್ತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಪಿಜಿ ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನದ ಅಂಗವಾಗಿ ನಡೆದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು. ಮುಖ್ಯ ಅತಿಥಿಯಾಗಿ ಖೋ ಖೋ ಆಟಗಾರ ಮಂಜುನಾಥ್ ಮಾತನಾಡಿ, ಸದಾ ಸಕಾರಾತ್ಮಕ ಚಿಂತನೆಯಿಂದ ಯುವಕರನ್ನು ಪ್ರೋತ್ಸಾಹಿಸಬೇಕು. ಹಾಗೆಯೇ, ಮಾನಸಿಕ ಹಾಗೂ ದೈಹಿಕ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶಿಕ್ಷಣದ ಮೂಲಕ ಮಾನವೀಯತೆ ವಿಕಸನವಾಗುವುದಲ್ಲದೆ, ಧರ್ಮ ಮತ್ತು ವಿಜ್ಞಾನವನ್ನು ಶಿಕ್ಷಣದಲ್ಲಿ ಅಳವಡಿಸಿದಾಗ ಲೌಕಿಕ ಸಂಪತ್ತು ವೃದ್ಧಿಗೊಳ್ಳುತ್ತದೆ. ವಿದ್ಯೆಯನ್ನು ಕಲಿತವರು ಬಡವರನ್ನು ನಿರ್ಲಕ್ಷ್ಯ ಮಾಡಿದರೆ ಅವರು ದೇಶ ದ್ರೋಹಿಗಳಿಗೆ ಸಮಾನ. ವ್ಯವಸಾಯವನ್ನು ಉದ್ಯೋಗವನ್ನಾಗಿಸಿ, ಕೃಷಿ ಕಾರ್ಮಿಕರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರು. ಕಾರ್ಯಾಗಾರದ ಮತ್ತೋರ್ವ ಅತಿಥಿಯಾಗಿ ಭಾಗವಹಿಸಿದ ಕ್ರಿಕೆಟ್‌ಪಟು ವಿಷ್ಣುಚೈತನ್ಯ ಮಾತನಾಡಿ, ಉತ್ತಮ ಭವಿಷ್ಯಕ್ಕಾಗಿ ಜಾಗೃತಿ ಮೂಡಿಸಿ, ಯುವಜನತೆಯಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಚಾರಿತ್ರ್ಯ ನಿರ್ಮಾಣದ ಕಡೆಗೆ ಗಮನ ಹರಿಸುವಂತೆ ಮಾಡುವುದು ರಾಷ್ಟೀಯ ಯುವ ದಿನಾಚರಣೆಯ ಮುಖ್ಯ ಉದ್ದೇಶ. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಜನಪದ ಕ್ರೀಡೆ ಕಂಬಳದಲ್ಲಿ ಕೋಣಗಳನ್ನು ಕೇವಲ 9.15 ಸೆಂಕೆಡುಗಳಲ್ಲಿ 100 ಮೀಟರ್ ಓಡಿಸಿರುವ ಬೈಂದೂರು ತಾಲೂಕಿನ ನಾಯ್ಕನಕಟ್ಟೆಯ ಯುವಕ ದಾಖಲೆ ನಿರ್ಮಿಸಿದ್ದಾರೆ. ಐಕಳ ಕಾಂತಾಂಬಾರೆ-ಬೂದಾಬಾರೆಯಲ್ಲಿ ನಡೆದ ಕಂಬಳದಲ್ಲಿ ವಿಶ್ವನಾಥ ದೇವಾಡಿಗ ಈ ದಾಖಲೆ ಮಾಡಿದ್ದಾರೆ. ಈ ಹಿಂದೆ ಸುರೇಶ್ ಶೆಟ್ಟಿ 100 ಮೀಟರ್ ದೂರವನ್ನು 9.37 ಸೆಕೆಂಡ್, ಶ್ರೀನಿವಾಸ ಗೌಡ 9.55 ಸೆಕೆಂಡ್, ಆನಂದ 9.57 ಸೆಂಕೆಡುಗಳಲ್ಲಿ ಕ್ರಮಿಸಿ ದಾಖಲೆ ಮಾಡಿದ್ದರು. ಶನಿವಾರ ನಡೆದ ಕಂಬಳದಲ್ಲಿ ಈ ಹೊಸ ದಾಖಲೆ ನಿರ್ಮಾಣವಾಗಿದೆ. ಕಂಬಳದ ಚಾನ್ಸ್ ಓಟದಲ್ಲಿ ಬೋಳದಗುತ್ತು ಸತೀಶ್ ಶೆಟ್ಟಿ ಅವರ ಬೊಳ್ಳ ಮತ್ತು ದೋನಿ ಕೋಣಗಳನ್ನು ವಿಶ್ವನಾಥ್ ಅವರು ಓಡಿಸಿದ್ದು 125 ಮೀ. ದೂರವನ್ನು 11.44 ಸೆಕೆಂಡುಗಳಲ್ಲಿ ಓಡಿದ್ದಾರೆ. ಈ ಸಮಯವನ್ನು 100 ಮೀ.ಗೆ ಹೋಲಿಕೆ ಮಾಡಿದರೆ 9.15 ಸೆಕೆಂಡ್ ಆಗಲಿದೆ. ಈ ಸುತ್ತು ಆಟೋ ಸ್ಟಾರ್ಟ್ ಮತ್ತು ಸೆನ್ಸಾರ್ ಮೂಲಕವೇ ನಿರ್ಧರಿಸಲಾಗಿದ್ದು, ಇದರಿಂದ ಹೊಸ ದಾಖಲೆದೆ ಸೇರ್ಪಡೆಯಾಗಿದೆ.

Read More