Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬಾಲ್ಯದಲ್ಲಿ ಪ್ರಪಂಚ ಆಕರ್ಷಣಿಯವಾಗಿ ಕಾಣುತ್ತದೆ. ಅದರ ನಡುವೆ ಸವಾಲುಗಳನ್ನು ಎದುರಿಸಲು ಅಣಿಯಾಗದೇ ಕುಳಿತರೆ ಭವಿಷ್ಯ ಕಠಿಣವಾಗುತ್ತದೆ. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಬೇಕು. ಆತ್ಮವಿಶ್ವಾಸ ಅಚಲವಾಗಿರಬೇಕು. ಹಾಗಿದ್ದಾಗಲೇ ಬದುಕು ಹಸನಾಗಲು ಸಾಧ್ಯ ಎಂದು ನಿಟ್ಟೂರಿನ ನಿವೃತ್ತ ಉಪನ್ಯಾಸಕ ಡಾ. ಶಾಂತಾರಾಮ ಪ್ರಭು ಹೇಳಿದರು. ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಶ್ರೀ ಮುಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇದರ 2019-20ನೇ ಸಾಲಿನ ವಿವಿಧ ಸಂಘಗಳ ಚಟುವಟಿಕೆಗಳ ಉದ್ಘಾಟನಾ ಹಾಗೂ ವಿದ್ಯಾರ್ಥಿಗಳ ಸಂಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಸಂಘವನ್ನು ಉದ್ಘಾಟಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಮಾತನಾಡಿ ಮನುಷ್ಯ ವಿದ್ಯಾವಂತನಾದರೆ ಸಾಲದು. ವಿನಯ ಸಂಪನ್ನನೂ ಆಗಿರಬೇಕು. ವಿದ್ಯಾವಂತ ದುರಹಂಕಾರಿಯಾದರೆ ಕಲಿತ ವಿದ್ಯೆಗೂ ಬೆಲೆ ಸಿಗಲಾರದು ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಕೊಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದೇವಳದ ಕಾರ್ಯನಿರ್ವಹಣಾಧಿಕಾರಿ ಎಚ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯವು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸುತ್ತಿರುವ 2019-20ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ವರ್ಧೆಗಳ ಭಾಗವಾಗಿ ಕುಂದಾಪುರದ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ರಂಗಭೂಮಿ ಆಗಸ್ಟ್ 19 ಮತ್ತು 20 ರಂದು ಜರುಗಲಿದೆ. ಈ ಬಗ್ಗೆ ಭಂಡಾರ್‌ಕಾರ‍್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ಅವರು ಮಾಹಿತಿ ನೀಡಿ, ಎರಡು ದಿನದ ಕಾರ್ಯಕ್ರಮದ ಆಯೋಜನೆ ಹಾಗೂ ಆತಿಥ್ಯವನ್ನು ಭಂಡಾರ್‌ಕಾರ‍್ಸ್ ಕಾಲೇಜು ವಹಿಸಲಿದ್ದು ರಂಗಭೂಮಿ ಕಲಾ ಸ್ವರ್ಧೆಯಲ್ಲಿ ಏಕಾಂಕ ನಾಟಕ, ಮೂಕಾಭಿನಯ, ಪ್ರಹಸನ ಹಾಗೂ ಅನುಕರಣೆ ಎಂಬ ನಾಲ್ಕು ವಿಭಾಗಗಳಿರಲಿದ್ದು ಎರಡು ದಿನವೂ ಬೆಳಿಗ್ಗೆ 9:30ರಿಂದ ಸಂಜೆ 6ರ ತನಕ ಪ್ರತ್ಯೇಕ ವೇದಿಕೆಗಳಲ್ಲಿ ಸ್ವರ್ಧೆಗಳು ಜರುಗಲಿದೆ ಎಂದರು. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಿಗೆ ಸ್ವರ್ಧೆಯ ಬಗ್ಗೆ ಆಮಂತ್ರಣ ಕಳುಹಿಸಲಾಗುತ್ತಿದ್ದು, ಸುಮಾರು ೪೦ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ವಿಶ್ವವಿದ್ಯಾನಿಲಯ ಮಟ್ಟದ ಈ ಸ್ವರ್ಧೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 8ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸಿ.ಎಸ್.ಇ ವಿಭಾಗದಲ್ಲಿ ಶೇ. 99 ಫಲಿತಾಂಶ ದಾಖಲಾಗಿದೆ. 90 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಜಸ್ಮಿನೆ ಪ್ರಿನ್ಸಿ ಲೋಬೊ ಶೇ.88.71 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಐ.ಎಸ್.ಸಿ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. 29 ವಿಶಿಷ್ಟ ಶ್ರೇಣಿ ಪಡೆದುಕೊಂಡಿದ್ದಾರೆ. ಹರ್ಷಿತಾ ಶೇ.88.57 ಅಂಕ ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ಇ.ಸಿ.ಇ ವಿಭಾಗದಲ್ಲಿ ಶೇ.100 ಫಲಿತಾಂಶದೊಂದಿಗೆ 87 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಿಯಾ ಸುರೇಶ್ ನಾೈಕ್ ಶೇ.90.43 ಪ್ರಥಮ ಸ್ಥಾನಿಯಾಗಿದ್ದರು. ಸಿ.ವಿ.ಎಲ್ ವಿಭಾಗದಲ್ಲಿ 98 ಪ್ರತಿಶತ ಫಲಿತಾಂಶದೊಂದಿಗೆ 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮಂಜುಳಾ ಪರಪ್ಪ ಶೇ.89.29 ಪಡೆಯುವುದರೊಂದಿಗೆ ಮುಂಚೂಣಿಯಲ್ಲಿದೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಶೇ.98 ಫಲಿತಾಂಶ ದಾಖಲಾಗಿದೆ. 130 ವಿದ್ಯಾರ್ಥಿಗಳು ಫಸ್ಟ್ ವಿಶಿಷ್ಟ ಶ್ರೇಣಿ ಪಡೆದಿದ್ದಾರೆ. ಅನಂದ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಸವರಾಜ ಕಟ್ಟಿಮನಿಯವರು ೨೦ನೇ ಶತಮಾನದ ಪ್ರಗತಿಶೀಲ ಸಾಹಿತ್ಯಗಳ ರಚನಕಾರರಲ್ಲಿಒಬ್ಬರಾಗಿದ್ದರು. ಅವರ ಸಾಹಿತ್ಯವು ಸಮಾಜದಲ್ಲಿನ ನೈಜ ಪರಿಸ್ಥಿತಿಯನ್ನು ತಿಳಿಸುವ ಕಾದಂಬರಿಗಳಾಗಿ, ಸಮಾಜವನ್ನು ತಿಳಿಯಲು ಅವಕಾಶ ಮಾಡಿಕೊಟ್ಟವು ಎಂದು ಅಕಾಡೆಮಿ ಆಫ್ ಜನರಲ್‌ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ‍್ಸ್‌ಕಾಲೇಜು ಮತ್ತುಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಬೆಳಗಾವಿ ಸಹಯೋಗದಲ್ಲಿಬಸವರಾಜ ಕಟ್ಟೀಮನಿ ಜನ್ಮದಿನದ ಶತಮಾನೋತ್ಸವ -೨೦೧೯ರ ಪ್ರಯುಕ್ತ ನಡೆದ ಬಸವರಾಜ ಕಟ್ಟಿಮನಿ ಕಾದಂಬರಿಗಳು; ಮರುಚಿಂತನೆಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಕಡುಬಡತನದಅವರಜೀವನ ಸಾಗಿಸಿದ ವ್ಯಕ್ತಿಯಿಂದಅದ್ಭುತ ಕಾದಂಬರಿಗಳು ಹೊರಹೊಮ್ಮಿವೆ. ಇಂತಹಉತ್ಕೃಷ್ಟ ಸಾಹಿತ್ಯ ನೀಡಿದ ವ್ಯಕ್ತಿಯಘನತೆ ಮೆಚ್ಚುವಂತಹದ್ದು. ಅವರ ಮಾಡಿ ಮಡಿದವರುಕಾದಂಬರಿಯು ಸ್ವಾತಂತ್ರ್ಯ ಹೋರಾಟದ ಮಗ್ಗುಲುಗಳನ್ನು ಹೇಳತ್ತವೆ. ಅವರಜರತಾರಿ ಜಗದ್ಗುರುಗಳು ಕಾದಂಬರಿಯ ಮೂಲಕ ಅಂದಿನ ಕಾಲದಲ್ಲಿ ಮಠಾಧಿಪತಿಗಳನ್ನು ಎದುರು ಹಾಕಿಕೊಳ್ಳುವ ಅವರಗಟ್ಟಿತನಅವರಲ್ಲಿನ ವಿಭಿನ್ನ ನೆಲೆಯನ್ನು ತಿಳಿಸುತ್ತವೆ. ಜ್ವಾಲಾಮುಖಿಕಾದಂಬರಿಯುಜನಸಾಮಾನ್ಯರ ನೋವು ನಲಿವುಗಳನ್ನು ಕಾಣಬಹುದು. ಇಂತಹ ಶ್ರೇಷ್ಠ ಕಾದಂಬರಿಕಾರನ ಕಾದಂಬರಿಗಳ ಮರುಚಿಂತನೆ ಮಾಡಿ ಕೃತಿಗಳನ್ನು ವಿಚಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ’ಆಯುರ್ವೇದದಲ್ಲಿ ಸಂಶೋಧನೆಯ ಕಲ್ಪನೆಯೇ ಒಂದು ಸಂತಸದ ವಿಷಯ. ಆಧುನಿಕ ವಿಜ್ಞಾನಕ್ಕೆ ಹೋಲಿಸಿದಾಗ, ಆಯುರ್ವೇದದಲ್ಲಿನ ಸಂಶೋಧನೆ ಬಹಳ ಕಷ್ಟದ ಸಂಗತಿ. ಆದರೂ ಈ ವಿಷಯದಲ್ಲಿ ಹೆಚ್ಚಿನ ಸಂಶೋಧನೆಗಳು ಏರ್ಪಟ್ಟು ಮನುಕುಲಕ್ಕೆ ಅನುಕೂಲವಾಗುವಂತಾಗಬೇಕು ಎಂದು ಕರ್ನಾಟಕ ಸರ್ಕಾರದ ಆಯುಷ್ ವೈದ್ಯಕೀಯ ವಿಜ್ಞಾನದ ಸಹ ನಿರ್ದೇಶಕರಾದ ಡಾ. ಬಿ ಎಸ್ ಶ್ರೀಧರ ತಿಳಿಸಿದರು. ಅವರು ಗುರುವಾರ ವಿದ್ಯಾಗಿರಿಯ ಡಾ ವಿ.ಎಸ್ ಆಚಾರ‍್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ವತಿಯಿಂದ ನಡೆದ ’ಅಡ್ವಾನ್ಸ್‌ಸ್ ಇನ್ ರಿಸರ್ಚ ಆಂಡ್ ಡೆವಲಪ್ಮೆಂಟ್-೨೦೧೯’ ಒಂದು ದಿನದ ವಿಚಾರ ಸಂಕಿರಣ ಹಾಗೂ ’ಆತ್ಮ’ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕೇರಳ ರಾಜ್ಯವು ಆಯುರ್ವೇದದ ಔಷಧಕ್ಕೆ ದೇಶದಲ್ಲಿ ಪ್ರಸಿದ್ಧಿಯನ್ನು ಪಡೆದಿದೆ. ಅದಕ್ಕೆ ಕಾರಣ ಇಲ್ಲಿನ ಜನರಲ್ಲಿ ಆಯುರ್ವೇದದ ಬಗೆಗಿನ ಜಾಗೃತಿ ಹಾಗೂ ಏಕರೀತಿಯ ಚಿಕಿತ್ಸಾ ವ್ಯವಸ್ಥೆ. ಆದರೆ ಬೇರೆ ರಾಜ್ಯಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ವಿಭಿನ್ನವಾದ್ದರಿಂದ ಅಷ್ಟೊಂದು ಸಾಫಲ್ಯತೆಯನ್ನು ಪಡೆದಿಲ್ಲ ಎಂದರು. ಪ್ರಪಂಚದ ಪ್ರತಿಷ್ಟಿತ ನೊಬೆಲ್ ಪ್ರಶಸ್ತಿಯು ಕಳೆದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ಪತ್ರಿಕಾ ದಿನಾಚರಣೆ ಮತ್ತು ವೆಬ್ ಮೀಡಿಯಾ ಡಿಸೈನ್ ಕುರಿತು ಕಾರ್ಯಾಗಾರ ನಡೆಯಿತು. ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರಾದ ಅಮರ್ ಸಿಕ್ವೆರಾ ಅವರು ವೆಬ್ ಮೀಡಿಯಾ ಡಿಸೈನ್ ಕುರಿತು ಮಾತನಾಡಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವೆಬ್ ಮೀಡಿಯಾದಲ್ಲಿ ತಮ್ಮ ಕೌಶಲ್ಯವನ್ನು ತೋರಿಸಲು ಮತ್ತು ತಮ್ಮ ಪತ್ರಿಕೋದ್ಯಮದ ಪ್ರತಿಭೆಯನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಲು ಹಲವು ಅವಕಾಶಗಳಿವೆ. ಸಾಕಷ್ಟು ಉಚಿತವಾಗಿ ದೊರಕುವ ವೆಬ್ ಸಾಪ್ಟವೇರ್‌ಗಳು ಲಭ್ಯವಿದೆ. ಅದರ ಕುರಿತು ಮಾಹಿತಿಯ ಜೊತೆಗೆ ಉಪಯೋಗಿಸುವುದನ್ನು ತಿಳಿದುಕೊಳ್ಳಬೇಕು. ಆಗ ನಿಮ್ಮ ಉತ್ತಮ ಪ್ರತಿಭೆಗೆ ವೇದಿಕೆ ಸಿಕ್ಕಂತಾಗುತ್ತದೆ ಎಂದು ಹೇಳಿದರು. ಅಲ್ಲದೇ ಕಾರ್ಯಾಗಾರದಲ್ಲಿ ವೆಬ್ ಮೀಡಿಯಾ ಡಿಸೈನ್ ಮಾಡುವಲ್ಲಿನ ಸುಲಭದ ಅವಕಾಶಗಳು ಮತ್ತು ಹೇಗೆ ಮಾಡಬಹುದು ಎಂಬುದನ್ನು ಕಾರ್ಯಾಗಾರದ ಮೂಲಕ ತಿಳಿಸಿಕೊಟ್ಟರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುಮಲತಾ ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಸಂಯೋಜಕಿ ವಿದ್ಯಾರ್ಥಿನಿ ಪ್ರಿಯಾ ಎಂ.ಡಿ ಕಾರ್ಯಾಗಾರದ ಕುರಿತು ಅಭಿಪ್ರಾಯ ತಿಳಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಕ್ರಮ ಗೋಸಾಗಾಟದ ಅಪರಾಧಿಗಳಿಗೆ ಸಿಂಹಸ್ವಪ್ನವಾಗಬೇಕಿದ್ದ ಪೊಲೀಸರೇ ಮಾಹಿತಿದಾರರಾಗಿರುವ ಕಳವಳಕಾರಿ ಅಂಶ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂಧಿಗಳನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ ಬಲೆ ಬೀಸಲಾಗಿದೆ. ಮಲ್ಪೆ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಹಾಗೂ ಮಂಕಿ ಪೊಲೀಸ್ ಠಾಣೆಯ ಸಿಬ್ಬಂದಿ ವಿನೋದ್ ಗೌಡ ಬಂಧಿತರು. ಘಟನೆಯ ಹಿನ್ನೆಲೆ: ಜು12 ರಂದು ಬೆಳಗ್ಗಿನ ಜಾವ ಉತ್ತರ ಕರ್ನಾಟಕ ಭಾಗದಿಂದ ಕಾಸರಗೋಡು ಕಸಾಯಿಖಾನೆಗೆ ಲೈಲ್ಯಾಂಡ್ ಲಾರಿಯಲ್ಲಿ ೧೩ ಕೋಣ ಹಾಗೂ 7 ಎಮ್ಮೆ ಸೇರಿ ಒಟ್ಟು 20 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವರನ್ನು ಸಾಸ್ತಾನ ಟೋಲ್‌ಗೇಟ್ ಬಳಿ ಕಾರ್ಯಾಚರಣೆ ನಡೆಸಿದ್ದ ಕೋಟ ಠಾಣಾ ಪಿಎಸ್‌ಐ ನಿತ್ಯಾನಂದ ಗೌಡ ಹಾಗೂ ಸಿಬ್ಬಂಧಿಗಳು ಬಂಧಿಸಿದ್ದರು. ಕಾರ್ಯಾಚರಣೆಯಲ್ಲಿ ಲಾರಿ ಚಾಲಕ ಸೈನುದ್ದಿನ್ ಹಾಗೂ ಜೊತೆಗಿದ್ದ ಹಮೀದ್, ಗಣೇಶನ್, ಸಮೀರ್ ಮತ್ತು ಕಾರಿನ ಚಾಲಕ ಶಿವಾನಂದ್, ಮಾರುತಿ ನಾರಾಯಣ ನಾಯ್ಕ್ ಎಂಬುವವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು ವಿಚಾರಣೆ ನಡೆಸುವಾಗ ಜಾನುವಾರುಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ೨೦೧೯-೨೦ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಯುವಸ್ಪಂದನ ಮತ್ತು ರೋಟರಿ ಕ್ಲಬ್ ಕುಂದಾಪುರ ಇವರ ಸಹಯೋಗದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಮಾತನಾಡಿ ರಾಷ್ಟೀಯ ಸೇವಾ ಯೋಜನೆ ಧ್ಯೇಯ ಉದ್ದೇಶ ಹಾಗೂ ಸರ್ವತೋಮುಖ ಬೆಳವಣಿಗೆಯಲ್ಲಿ ಇದರ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ರೋಟರಿ ಕ್ಲಬ್ ಅಧ್ಯಕ್ಷರಾದ ಡಾ.ರಾಜಾರಾಮ ಶೆಟ್ಟಿ ಅವರು ಹಲ್ಲುಗಳ ಆರೋಗ್ಯದ ಕುರಿತು ಮಾಹಿತಿನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಪ್ರೊ.ರಾಮಚಂದ್ರ ಯುವಸ್ಪಂದನ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ಗಾಣಿಗ , ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ರಾಮಚಂದ್ರ ಆಚಾರ‍್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉದ್ಯಮದಲ್ಲಿ ಪ್ರತಿದಿನವೂ ಹೊಸ ಸವಾಲುಗಳು ಎದುರಾಗುತ್ತಿರುತ್ತವೆ. ಸವಾಲು ಹಾಗೂ ಗೆಲುವನ್ನು ಸಮಚಿತ್ತದಿಂದ ನಿಭಾಯಿಸಿ ಮುಂದುವರಿದವರು ಯಶಸ್ವಿ ಉದ್ಯಮಿಯಾಗಿ ಹೊರಹೊಮ್ಮುತ್ತಾರೆ ಎಂದು ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಭಾನುವಾರ ಯಡ್ತರೆ ರಾಹುತನಕಟ್ಟೆ ಶ್ರೀ ಗುರುರಾಘವೇಂದ್ರ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ದುರ್ಗಾಂಬಾ ಪ್ರಿಂಟರ‍್ಸ್‌ನ ನೂತನ ಕಛೇರಿ ಉದ್ಘಾಟಿಸಿ ಮಾತನಾಡಿ ದಿನಗಳದಂತೆ ವ್ಯವಹಾರದ ಸ್ವರೂಪ ಬದಲಾಗುತ್ತಿದ್ದು, ನವ ತಂತ್ರಜ್ಞಾನ ಹಾಗೂ ವೇಗಕ್ಕೆ ಹೊಂದಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರಿಂಟಿಂಗ್ ಪ್ರೆಸ್ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಉದ್ಯಮವನ್ನು ಲಾಭದ ದೃಷ್ಟಿಯಿಂದ ಕಂಡವರು ಹಣವನ್ನಷ್ಟೇ ಗಳಿಸುತ್ತಾರೆ. ಲಾಭದ ಜೊತೆಗೆ ಜನರ ವಿಶ್ವಾಸ ಗಳಿಸಿದವರು ಸ್ವರ್ಧೆಯ ನಡುವೆಯೂ ಬಹುಕಾಲ ಚಲಾವಣೆಯಲ್ಲಿರುತ್ತಾರೆ. ೨೨ ವರ್ಷಗಳ ಹಿಂದೆ ಮುದ್ರಣ ಕ್ಷೇತ್ರದಲ್ಲಿ ಸ್ವರ್ಧೆ ಇದ್ದ ಸಂದರ್ಭದಲ್ಲಿಯೂ ತಿಮ್ಮಪ್ಪ ಪೂಜಾರಿ ಅವರು ಆರಂಭಿಸಿದ ದುರ್ಗಾಂಬ ಪ್ರಿಂಟರ‍್ಸ್ ಇಂದು ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭ ಮಾಡುತ್ತಿರುವುದರ ಹಿಂದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುವೈತ್/ಕುಂದಾಪುರ: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೆಡೆದ 44ನೆಯ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಅವರಿಗೆ ಈ ಸಾಲಿನ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಸುರೇಶ್ ಅವರು ಕಳೆದ 17 ವರ್ಷಗಳಿಂದ ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಕುವೈತ್‌ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ವಿಶೇಷವಾಗಿ ಸಾಮಾಜಿಕ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವುದಕ್ಕಾಗಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್, ಡಾ|ಮಹೇಶ್ ಜೋಷಿ, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್. ಎ. ಚನ್ನೇಗೌಡ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಸ್ಥಾಪಕಾಧ್ಯಕ್ಷ ಡಾ|ಎಚ್.ಎಲ್.ಎನ್. ರಾವ್…

Read More